ವೃತ್ತಿಗೆ ಸಂಬಂಧಿಸಿ ಜಗಳ: ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

ಬೆಂಗಳೂರು: ಕೆಲಸದ ವಿಷಯಕ್ಕೆ ದಂಪತಿ ನಡುವೆ ನಡೆದ ಜಗಳ ಪತ್ನಿಯ ಹತ್ಯೆಯಲ್ಲಿ ಅಂತ್ಯವಾದ ಘಟನೆ ಸಂಪಿಗೆಹಳ್ಳಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಆಯೆಷಾ ಸಿದ್ದಿಕಿ ಎಂದು ಗುರುತಿಸಲಾಗಿದೆ. ಆರೋಪಿ ಪತಿ ಸೈಯದ್ ಜಬಿ ಪೊಲೀಸರಿಗೆ ಶರಣಾಗಿದ್ದಾನೆ. ಕಳೆದ ಮೂರು ತಿಂಗಳ ಹಿಂದೆಯಷ್ಟೇ ಇವರಿಬ್ಬರ ವಿವಾಹವಾಗಿತ್ತು. ಆಯೆಷಾಗೆ ಇದು ಮೂರನೇ ಮದುವೆಯಾಗಿದ್ದು, ಆಕೆಯ ವೃತ್ತಿಗೆ ಸಂಬಂಧಿಸಿದಂತೆ ಪತಿ ಅಸಮಾಧಾನ ಹೊಂದಿದ್ದ. ಆಯೆಷಾ ಮಸಾಜ್ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದು, ಇದು ಸೈಯದ್‌ಗೆ ಇಷ್ಟವಿರಲಿಲ್ಲ. ಕೆಲಸ ಬಿಡುವಂತೆ ಆಕೆಗೆ ಒತ್ತಡ ಹೇರುತ್ತಿದ್ದರೂ ಆಕೆ […]

ವೃತ್ತಿಗೆ ಸಂಬಂಧಿಸಿ ಜಗಳ: ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ Read More »

ಖ್ಯಾತ ಸಾಹಿತಿ ಸರಿತಾ ಜ್ಞಾನಾನಂದ ನಿಧನ

50ಕ್ಕೂ ಹೆಚ್ಚು ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದ ಲೇಖಕಿ ಬೆಂಗಳೂರು: ಕನ್ನಡ ಕವಯತ್ರಿ, ಲೇಖಕಿ ಸರಿತಾ ಜ್ಞಾನಾನಂದ (82) ಶುಕ್ರವಾರ ಆರ್‌.ಆರ್‌ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನುವಾದಕಿಯಾಗಿ ಪ್ರಸಿದ್ಧರಾಗಿದ್ದ ಸರಿತಾ ಅವರು ವಿವಿಧ ಭಾಷೆಗಳ ಪ್ರಸಿದ್ಧರ ಕಥೆ, ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದರು. ಸರಿತಾ ಜ್ಞಾನಾನಂದ ಮೂಲತಃ ಬೆಂಗಳೂರಿನವರು. ಜನವರಿ 21, 1943ರಲ್ಲಿ ಜನಿಸಿದ ಅವರು ಮ್ಯೆಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಮತ್ತು ಬಿ.ಎಡ್ ಹಾಗೂ ಅಣ್ಣಾಮಲೈ ವಿಶ್ವವಿದ್ಯಾಲಯದಿಂದ ಎಂ.ಎಡ್. ಪದವಿಗಳನ್ನು ಪಡೆದಿದ್ದರು. ಹಿಂದಿಯಲ್ಲಿ ರಾಷ್ಟ್ರಭಾಷಾ

ಖ್ಯಾತ ಸಾಹಿತಿ ಸರಿತಾ ಜ್ಞಾನಾನಂದ ನಿಧನ Read More »

ಬಿಜೆಪಿ ಜೊತೆ ಮೈತ್ರಿ ಸಾಧ್ಯವಿಲ್ಲ ಎಂದ ಜೆಡಿಎಸ್‌

ಎಲ್ಲ ಚುನಾವಣೆಗಳಲ್ಲಿ ಮೈತ್ರಿ ಮಾಡಿಕೊಂಡು ಸ್ಪರ್ಧಿಸಲು ದೇವೇಗೌಡರ ನಕಾರ ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಮುಂದಿನ ಎಲ್ಲ ಚುನಾವಣೆಗಳಿಗೂ ಮುಂದುವರಿಯುತ್ತದೆ ಎಂದು ಹೇಳಿದ್ದ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ೆಚ್.ಡಿ. ದೇವೇಗೌಡ ಇದೀಗ ಏಕಾಏಕಿ ಯೂಟರ್ನ್ ಹೊಡೆದು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಮೈತ್ರಿ ಮುಂದುವರಿಸುವುದು ಕಷ್ಟ ಎಂದು ಹೇಳಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಿಗೂ ಬಿಜೆಪಿ ಜೊತೆಗಿನ ಮೈತ್ರಿ ಮುಂದುವರಿಯುತ್ತದೆ. ಆದರೆ ಜಿಲ್ಲಾ

ಬಿಜೆಪಿ ಜೊತೆ ಮೈತ್ರಿ ಸಾಧ್ಯವಿಲ್ಲ ಎಂದ ಜೆಡಿಎಸ್‌ Read More »

ಸೋನಿಕಾ ಜನಾರ್ದನ್ ಅವರ ಸಂವಿಧಾನ ಪೀಠಿಕೆ ಗಾಯನ ಅಭಿಯಾನ

ಪುತ್ತೂರು: ಇಲ್ಲಿನ ಪಡ್ಡಾಯೂರಿನಲ್ಲಿರುವ ‘ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆ ಉಪ್ಪಿನಂಗಡಿ’ ಇಲ್ಲಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಸಾಂಸ್ಕೃತಿಕ ಉಪ ಸಮಿತಿಯ ವತಿಯಿಂದ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಡೆಯುತ್ತಿರುವ ಭಾರತೀಯ ಸಂವಿಧಾನ ಪೀಠಿಕೆ ಗಾಯನ ಅಭಿಯಾನದ ಅಂಗವಾಗಿ ಸೋನಿಕಾ ಜನಾರ್ದನ್ ಸಂವಿಧಾನ ಪೀಠಿಕೆಯ ಗಾಯನ ಅಭಿಯಾನದ ಅಂಗವಾಗಿ ಗಾಯನ ಕಾರ್ಯಕ್ರಮ ನಡೆಯಿತು. ಶಾಲಾ ಪ್ರಾಂಶುಪಾಲರಾದ ಸತೀಶ್ ಅವರು ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ವಾಣಿಶ್ರೀ, ನಿಲಯ ಪಾಲಕ ವಸಂತ ಎಂ., ಶಿಕ್ಷಕ ರಕ್ಷಕ

ಸೋನಿಕಾ ಜನಾರ್ದನ್ ಅವರ ಸಂವಿಧಾನ ಪೀಠಿಕೆ ಗಾಯನ ಅಭಿಯಾನ Read More »

ನೇಮೋತ್ಸವದಲ್ಲಿ ಮಹಿಳೆಯ ಸರಕದ್ದ ಮಹಿಳೆಯರ ಬಂಧನ

ಗಂಟೆ ಹೊಡೆಯುವ ನೆಪದಲ್ಲಿ ವೃದ್ಧೆಯ ಸರ ಎಗರಿಸಿದ್ದ ಮಹಿಳೆಯರು ಉಡುಪಿ: ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ವೇಳೆ ವೃದ್ಧೆಯ ಚಿನ್ನದ ಸರವನ್ನು ಕಳ್ಳತನ ಮಾಡಿದ ಮೂವರು ಮಹಿಳೆಯರನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡು ಕೃಷ್ಣಗಿರಿ ನಿವಾಸಿಗಳಾದ ಶೀತಲ್, ಕಾಳಿಯಮ್ಮ ಮತ್ತು ಮಾರಿ ಎಂದು ಗುರುತಿಸಲಾಗಿದೆ. ಹೆಜಮಾಡಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ನಡೆಯುತ್ತಿದ್ದ ವೇಳೆ ಮೂವರು ಮಹಿಳೆಯರು ಹೆಜಮಾಡಿ ನಿವಾಸಿ ಕಮಲ ಎಂಬ ವೃದ್ಧ ಕುತ್ತಿಗೆಯಲ್ಲಿದ್ದ

ನೇಮೋತ್ಸವದಲ್ಲಿ ಮಹಿಳೆಯ ಸರಕದ್ದ ಮಹಿಳೆಯರ ಬಂಧನ Read More »

ಧರ್ಮಸ್ಥಳ ಪ್ರಕರಣ : ವರದಿ ಮೇಲಿನ ತೀರ್ಪು ಮತ್ತೆ ಮುಂದೂಡಿಕೆ

ವರದಿಯ ಕೆಲವು ಭಾಗಗಳನ್ನು ಜಯಂತ್‌ಗೆ ನೀಡಿದ ನ್ಯಾಯಾಲಯ ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್‌ಗೆ ಸಲ್ಲಿಸಿದ್ದ ವರದಿಯ ಬಗ್ಗೆ ಡಿ.26ಕ್ಕೆ ನಿಗದಿಪಡಿಸಲಾಗಿದ್ದ ಆದೇಶವನ್ನು ಡಿ.29ಕ್ಕೆ ಬೆಳ್ತಂಗಡಿ ನ್ಯಾಯಾಲಯ ಮುಂದೂಡಿದೆ ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ನ.20ರಂದು ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ್ ಗೌಡ, ಸುಜಾತ ಭಟ್ ವಿರುದ್ಧ ಸುಳ್ಳು ಸಾಕ್ಷಿ ವರದಿಯನ್ನು ಸೆಕ್ಷನ್‌ 215ರ ಅಡಿಯಲ್ಲಿ ಸಲ್ಲಿಸಿದ್ದರು. ಈ ವರದಿಯ ಬಗ್ಗೆ ಬೆಳ್ತಂಗಡಿ

ಧರ್ಮಸ್ಥಳ ಪ್ರಕರಣ : ವರದಿ ಮೇಲಿನ ತೀರ್ಪು ಮತ್ತೆ ಮುಂದೂಡಿಕೆ Read More »

ಇಂದು ಮಂಗಳೂರು ಕಂಬಳ

9ನೇ ವರ್ಷಕ್ಕೆ 9 ವಿಶಿಷ್ಟ ಕಾರ್ಯಕ್ರಮಗಳ ಆಕರ್ಷಣೆ ಮಂಗಳೂರು: ಸಂಸದ ಕ್ಯಾ.ಬ್ರಿಜೇಶ್ ಶೆಟ್ಟಿಯವರ ಸಾರಥ್ಯದಲ್ಲಿ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆಯುವ 9ನೇ ವರ್ಷದ ಮಂಗಳೂರು ಕಂಬಳ ಇಂದು ವಿಶೇಷ ಆಕರ್ಷಣೆಯೊಂದಿಗೆ ನಡೆಯಲಿದೆ. ಶನಿವಾರ ಆಯೋಜಿಸಲಾಗಿರುವ ಈ ವರ್ಷದ ಕಂಬಳದಲ್ಲಿ ಒಟ್ಟು 9 ವಿಭಿನ್ನ ಚಟುವಟಿಕೆಗಳನ್ನು ರೂಪಿಸಲಾಗಿದೆ. ತುಳು ಸಂಸ್ಕೃತಿ ಹಾಗೂ ಕಂಬಳದ ಮಹತ್ವವನ್ನು ನಗರ ಪ್ರದೇಶದಲ್ಲಿ ಬೆಳೆದ ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ 9 ವರ್ಷಗಳ ಹಿಂದೆ ಸಣ್ಣ ಪ್ರಯತ್ನವಾಗಿ ಆರಂಭಗೊಂಡ ಮಂಗಳೂರು ಕಂಬಳ

ಇಂದು ಮಂಗಳೂರು ಕಂಬಳ Read More »

ಕಡಬ : ಬಾರ್‌ ಮಾಲೀಕನಿಗೆ 6.5 ಲ.ರೂ. ವಂಚಿಸಿ ಮ್ಯಾನೇಜರ್‌ ಪಲಾಯನ

ಕಡಬ : ಬಾರ್ ಸಿಬ್ಬಂದಿಯೋರ್ವ ವ್ಯವಹಾರದಲ್ಲಿ ವಂಚಿಸಿ ಪರಾರಿಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ವಿಶಾಲ್ ಸ್ಟೀಫನ್ (25) ಎಂಬವರು ಠಾಣೆಗೆ ದೂರು ನೀಡಿದ್ದಾರೆ. ಸ್ಟೀಫನ್ ಅವರ ತಾಯಿ ನೆಟ್ಟಣ ಎಂಬಲ್ಲಿ ಬಾರ್ ಹೊಂದಿದ್ದು, ಬಾರ್‌ನಲ್ಲಿ ಕಡಬದ ಹುಂಚಪ್ಪಡಿ ನಿವಾಸಿ ಹರ್ಷಿತ್ ಬಿ.ಕೆ. ಎಂಬಾತ ಸುಮಾರು 7 ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಆತನೇ ನಿತ್ಯದ ಹಣಕಾಸಿನ ವ್ಯವಹಾರ, ಸ್ಟಾಕ್ ನಿರ್ವಹಣೆ ಹಾಗೂ ಮೇಲ್ವಿಚಾರಣೆ ನಿರ್ವಹಿಸುತ್ತಿದ್ದ. ಡಿ.21ರಂದು ಸ್ಟೀಫನ್ ಬಾರಿನ ವಹಿವಾಟು ಬಗ್ಗೆ

ಕಡಬ : ಬಾರ್‌ ಮಾಲೀಕನಿಗೆ 6.5 ಲ.ರೂ. ವಂಚಿಸಿ ಮ್ಯಾನೇಜರ್‌ ಪಲಾಯನ Read More »

ನವವಿವಾಹಿತೆ ಆತ್ಮಹತ್ಯೆ ಪ್ರಕರಣ : ಪತಿಯೂ ಆತ್ಮಹತ್ಯೆ, ಅತ್ತೆ ಆತ್ಮಹತ್ಯೆ ಯತ್ನ

ಹನಿಮೂನ್‌ನಿಂದ ಅರ್ಧಕ್ಕೆ ವಾಪಸು ಬಂದು ಆತ್ಮಹತ್ಯೆ ಮಾಡಿಕೊಂಡಿರುವ ನವವಿವಾಹಿತೆ ಬೆಂಗಳೂರು: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಗಾನವಿ ಪತಿ ಸೂರಜ್ ಆತ್ಮಹತ್ಯೆ ಮಾಡಿಕೊಂಡರೆ ಅತ್ತೆ ಜಯಂತಿ ಆತ್ಮಹತ್ಯೆಗೆ ಯತ್ನಿಸಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಗಾನವಿ ಆತ್ಮಹತ್ಯೆಯ ಬಳಿಕ ಸೂರಜ್‌, ಜಯಂತಿ, ಸೂರಜ್‌ ಸಹೋದರ ಸಂಜಯ್‌ ಮಹಾರಾಷ್ಟ್ರದ ನಾಗ್ಪುರಕ್ಕೆ ತೆರಳಿದ್ದರು. ಖಾಸಗಿ ಹೋಟೆಲಿನಲ್ಲಿ ಸೂರಜ್‌ ಆತ್ಮಹತ್ಯೆ ಮಾಡಿಕೊಂಡರೆ, ಆತ್ಮಹತ್ಯೆಗೆ ಯತ್ನಿಸಿದ ಜಯಂತಿ ಈಗ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಶುಕ್ರವಾರ ಸಂಜೆ ಸೂರಜ್ ಆತ್ಮಹತ್ಯೆ

ನವವಿವಾಹಿತೆ ಆತ್ಮಹತ್ಯೆ ಪ್ರಕರಣ : ಪತಿಯೂ ಆತ್ಮಹತ್ಯೆ, ಅತ್ತೆ ಆತ್ಮಹತ್ಯೆ ಯತ್ನ Read More »

16 ವರ್ಷಕ್ಕಿಂತ ಕೆಳಗಿನವರಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌ : ಹೈಕೋರ್ಟ್‌ ಸಲಹೆ

ಆಸ್ಟ್ರೇಲಿಯಾ ಮಾದರಿ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರುವ ಚಿಂತನೆ ಚೆನ್ನೈ: ಆಸ್ಟ್ರೇಲಿಯಾದ ಮಾದರಿಯಲ್ಲಿ ಭಾರತದಲ್ಲೂ 16 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಕಾನೂನು ಜಾರಿಗೆ ತರುವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂಚಿಸಿದೆ. ಅಪ್ರಾಪ್ತ ವಯಸ್ಕರು ಸೋಷಿಯಲ್ ಮೀಡಿಯಾದಲ್ಲಿ ಸುಲಭವಾಗಿ ಅಶ್ಲೀಲ ವಿಷಯಗಳಿಗೆ ಒಡ್ಡಿಕೊಳ್ಳುತ್ತಿರುವುದನ್ನು ತಡೆಗಟ್ಟಲು ಆಸ್ಟ್ರೇಲಿಯಾ ಮಾದರಿ ಕಾನೂನನ್ನ ಭಾರತದಲ್ಲಿ ಪರಿಗಣಿಸಬೇಕು ಎಂದು ಮದ್ರಾಸ್ ಕೋರ್ಟ್ ಸಲಹೆ ನೀಡಿದೆ. ನ್ಯಾಯಮೂರ್ತಿಗಳಾದ ಜಿ.ಜಯಚಂದ್ರನ್ ಮತ್ತು ಕೆ.ಕೆ.ರಾಮಕೃಷ್ಣನ್ ಅವರಿದ್ದ ವಿಭಾಗೀಯ ಪೀಠ ಪಿಐಎಲ್ ಅರ್ಜಿ

16 ವರ್ಷಕ್ಕಿಂತ ಕೆಳಗಿನವರಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌ : ಹೈಕೋರ್ಟ್‌ ಸಲಹೆ Read More »

error: Content is protected !!
Scroll to Top