ಅನಾರೋಗ್ಯಕ್ಕೀಡಾಗಿ ರಾದೀಪ್ ಪೂಜಾರಿ ಮೃತ್ಯು

ವಿಟ್ಲ: ಅನಾರೋಗ್ಯಕ್ಕೀಡಾಗಿ ಮೂಡಂಬೈಲು ಬೊಳಂತಿಮೊಗೇರು ನಿವಾಸಿ, ರಾದೀಪ್‌ ಪೂಜಾರಿ (38) ಇಂದು ನಿಧನರಾದರು. ಕೃಷಿ ಮತ್ತು ಕೋಳಿ ಫಾರ್ಮ್ ನಡೆಸುತ್ತಿದ್ದ ರಾದೀಪ್‌ ಪೂಜಾರಿ ಅವರು ಕ್ರೀಡೆಯಲ್ಲಿಯೂ ಗುರುತಿಸಿಕೊಂಡಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು. ಮೃತರು ಪತ್ನಿ, ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಅನಾರೋಗ್ಯಕ್ಕೀಡಾಗಿ ರಾದೀಪ್ ಪೂಜಾರಿ ಮೃತ್ಯು Read More »

ಲೈಸನ್ಸ್ ಪಡೆಯದ ಖಾಸಗಿ ಹಾಸ್ಟೇಲ್ ಗಳಿಗೆ ದಂಡದ ಎಚ್ಚರಿಕೆ

ಮಂಗಳೂರು: ದ.ಕ ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾ ಸಂಸ್ಥೆಗಳು ಮತ್ತು ಉದ್ದಿಮೆಗಳು ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚಿನ ಸಂಖ್ಯೆಯ ಹೊಸ ಖಾಸಗಿ ವಸತಿ ನಿಲಯಗಳು ಪರವಾನಿಗೆ ಪಡೆಯದೇ ಉದ್ದಿಮೆ ನಡೆಸುತ್ತಿರುವುದು ಹಾಗೂ ಕೆಲವು ಖಾಸಗಿ ವಸತಿ ನಿಲಯಗಳಲ್ಲಿ ಮೂಲಭೂತ ಸೌಕರ್ಯಗಳ ಲಭ್ಯತೆ ಹಾಗೂ ಶುಚಿತ್ವ ಇಲ್ಲದಿರುವುದು ಕಂಡು ಬಂದಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಪರವಾನಿಗೆ ಪಡೆಯದೇ ಉದ್ದಿಮೆ ನಡೆಸುತ್ತಿರುವ ಖಾಸಗಿ ವಸತಿ ನಿಲಯಗಳು 15 ದಿನಗಳೊಳಗಾಗಿ ನಗರ ಸ್ಥಳೀಯ ಸಂಸ್ಥೆಗಳಿಂದ ಪರವಾನಿಗೆ ಪಡೆದುಕೊಳ್ಳಬೇಕು.

ಲೈಸನ್ಸ್ ಪಡೆಯದ ಖಾಸಗಿ ಹಾಸ್ಟೇಲ್ ಗಳಿಗೆ ದಂಡದ ಎಚ್ಚರಿಕೆ Read More »

ಮದ್ಯ ಸೇವಿಸಿ ವಾಹನ ಚಲಾಯಿಸದೇ ಹೆದ್ದಾರಿಯಲ್ಲಿ ರಾತ್ರಿ ಕಳೆದ ಚಾಲಕ

ಸುಳ್ಯ: ಮದ್ಯಪಾನ ಸೇವಿಸಿ ವಾಹನ ಚಲಾಯಿಸಲು ಸಾಧ್ಯವಾಗದೆ ಚಾಲಕನೊಬ್ಬ ಮಾಣಿ ಮೈಸೂರ್ ರಾಜ್ಯ ಹೆದ್ದಾರಿಯ ಸುಳ್ಯ ಹಳೆಗೇಟು ನಲ್ಲಿ ನಡೆದಿದೆ. ಆಪೆ ರಿಕ್ಷಾ ಚಾಲಕ ಗುಜಿರಿ ವ್ಯಾಪಾರ ಮಾಡುತ್ತಿದ್ದು ಆರಂಬೂರು ಸಮೀಪದ ಪಾಲಡ್ಕದ ವ್ಯಕ್ತಿ ಎಂದು ತಿಳಿದು ಬಂದಿದೆ. ಈತ ಗಾಂಜಾ ಸೇವಿಸಿದ್ದಾನೆಂದು ಜನ ಶಂಕೆ ವ್ಯಕ್ತಪಡಿಸಿದ್ದಾರೆ.

ಮದ್ಯ ಸೇವಿಸಿ ವಾಹನ ಚಲಾಯಿಸದೇ ಹೆದ್ದಾರಿಯಲ್ಲಿ ರಾತ್ರಿ ಕಳೆದ ಚಾಲಕ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಫ್ಯಾಕಲ್ಟಿ ಡೆವಲಪ್ ಮೆಂಟ್ ಕಾರ್ಯಕ್ರಮ

ಪುತ್ತೂರು: ಬದಲಾವಣೆ ನಮ್ಮ ಕೌಶಲ್ಯಗಳನ್ನು ಹೆಚ್ಚಿಸಲು, ಹೊಸ ಮತ್ತು ನಮ್ಮ ಅಭ್ಯಾಸಗಳನ್ನು ಸುಧಾರಿಸಲು ಅನುವು ಮಾಡಿಕೊಡುತ್ತದೆ.  ಬದಲಾವಣೆಗೆ ಧನಾತ್ಮಕವಾಗಿ ಸ್ಪಂದಿಸುವ ಮೂಲಕ ನಾವು ನಿರಂತರ ಸುಧಾರಣೆಯ ಸಂಸ್ಕೃತಿಯನ್ನು ಬೆಳೆಸಬಹುದು. ವಿಚಾರಗಳನ್ನು ಮುಕ್ತವಾಗಿ ಹಂಚಿಕೊಳ್ಳುವ ಮತ್ತು ಪ್ರತಿಕ್ರಿಯೆಯನ್ನು ರಚನಾತ್ಮಕವಾಗಿ ಸ್ವಾಗತಿಸುವ ವಾತಾವರಣವನ್ನು ನಾವು ಬೆಳೆಸಬೇಕಾಗಿದೆ. ಎಂದು ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಹೇಳಿದರು. ಅವರು “ಅಂಗ ಸಂಸ್ಥೆಯಿಂದ ಸ್ವಾಯತ್ತ ಸಂಸ್ಥೆಯಾಗಿ ಪರಿವರ್ತನೆಗೆ ತಯಾರಿ” ಫ್ಯಾಕಲ್ಟಿ ಡೆವಲಪ್ ಮೆಂಟ್ ಸರಣಿ ಕಾರ್ಯಕ್ರಮದ ದ್ವಿತೀಯ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಫ್ಯಾಕಲ್ಟಿ ಡೆವಲಪ್ ಮೆಂಟ್ ಕಾರ್ಯಕ್ರಮ Read More »

ಕರ್ನಾಟಕ ಪೊಲೀಸ್ ಮೀಸಲು ಪಡೆಯ ಇನ್ಸ್‌ಪೆಕ್ಟರ್ ಮಹಮ್ಮದ್ ಹಾರಿಸ್ ಲೋಕಾಯುಕ್ತ ಬಲೆಗೆ | ಲಂಚ ಸ್ವೀಕಾರ ಆರೋಪ

ಕೊಣಾಜೆ: ಕರ್ನಾಟಕ ಪೊಲೀಸ್ ವಿಶೇಷ ಮೀಸಲು ಪಡೆಯ ಇನ್ಸ್‌ಪೆಕ್ಟರ್ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರಿಂದ ಕೈಯಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಕೋಣಾಜೆಯಲ್ಲಿರುವ ಕರ್ನಾಟಕ ಪೊಲೀಸ್ ವಿಶೇಷ ಮೀಸಲು ಪಡೆಯ 7ನೇ ಬೆಟಾಲಿಯನ್‌ನ ನಿರೀಕ್ಷಕ ಮಹಮ್ಮದ್ ಹಾರಿಸ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದವರು. ಆವರು ಮೀಸಲು ಪೊಲೀಸ್ ಕಾನ್ ಸ್ಟೇಬಲ್ ಅನಿಲ್ ಕುಮಾರ್ ಅವರಿಂದ ಕರ್ತವ್ಯ ನಿಯೋಜನೆಗೆ ಸಂಬಂಧಿಸಿ 18 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ

ಕರ್ನಾಟಕ ಪೊಲೀಸ್ ಮೀಸಲು ಪಡೆಯ ಇನ್ಸ್‌ಪೆಕ್ಟರ್ ಮಹಮ್ಮದ್ ಹಾರಿಸ್ ಲೋಕಾಯುಕ್ತ ಬಲೆಗೆ | ಲಂಚ ಸ್ವೀಕಾರ ಆರೋಪ Read More »

ಇಂದು ಸುಳ್ಯಕ್ಕೆ ಭೇಟಿ ನೀಡಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ | ಕೆಡಿಪಿ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕುರಿತು ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ ಸಂಸದರು.

ಸುಳ್ಯ: ಸುಳ್ಯದ ಆರೋಗ್ಯ ಕೇಂದ್ರಗಳಲ್ಲಿರುವ ವೈದ್ಯರ ಸಮಸ್ಯೆ, ಜಲ್ ಜೀವನ್ ಮಿಷನ್ ಯೋಜನೆಯಡಿ ನಡೆದಿರುವ ಕಾಮಗಾರಿ, ಸುಳ್ಯದ ಅಂಬೇಡ್ಕರ್ ಭವನದ ಕಾಮಗಾರಿಯ ವಿಳಂಬ ಹೀಗೆ ಹಲವು ಬಾಕಿ ಉಳಿದಿರುವ ಕಾಮಗಾರಿ ಹಾಗೂ ಕ್ರಮಗಳನ್ನು ಆದಷ್ಟು ಬೇಗ ನಡೆಸಿಕೊಡಬೇಕೆಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ಅಧಿಕಾರಿಗಳಿಗೆ ತಿಳಿಸಿ ಡೆಡ್ ಲೈನ್ ನೀಡಿದರು. ಸಂಸದರು ಇಂದು ಸುಳ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭ ಸುಳ್ಯದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಈ ಸೂಚನೆ ನೀಡಿದರು. ಕೆಲವು ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ

ಇಂದು ಸುಳ್ಯಕ್ಕೆ ಭೇಟಿ ನೀಡಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ | ಕೆಡಿಪಿ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕುರಿತು ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ ಸಂಸದರು. Read More »

ಗಂಭೀರವಾಗಿ ಪರಿಣಮಿಸಿರುವ ಡೆಂಗ್ಯೂ ಜ್ವರ ಬಾಧೆಗೆ ಮುಂಜಾಗ್ರತೆಯೇ ಪ್ರಮುಖ ಔಷಧ | ಮಲೇರಿಯಾ ಹಾಗೂ ಡೆಂಗ್ಯೂ ರೋಗಗಳ ನಿಯಂತ್ರಣ ಕುರಿತ ಕಾರ್ಯಾಗಾರದಲ್ಲಿ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ

ಪುತ್ತೂರು: ಪ್ರಸ್ತುತ ಗಂಭೀರವಾಗಿ ಪರಿಣಮಿಸಿರುವ ಡೆಂಗ್ಯೂ ಜ್ವರದ ಬಾಧೆಗೆ  ಮುಂಜಾಗ್ರತೆಯೇ ಪ್ರಮುಖ ಔಷಧ. ಮಹಾತ್ಮ ಗಾಂಧೀಜಿಯವ ಆಶಯದಂತೆ ಸ್ವಚ್ಛತೆಯೇ ದೇವರು ಎಂಬ ಮಾತು ಕಡ್ಡಾಯವಾಗಿ ಪಾಲನೆಯಾದರೆ ಮಾತ್ರ ಡೆಂಗ್ಯೂನಂತಹ ಜ್ವರ ಬಾಧೆಯನ್ನು ಶೇ.90 ನಿಯಂತ್ರಣ ಮಾಡಬಹುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಜುಬಿನ್ ಮೊಹಪಾತ್ರ ಹೇಳಿದರು. ಪುತ್ತೂರು ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ನಗರಸಭೆಯ ಸಹಯೋಗದಲ್ಲಿ ಮಲೇರಿಯಾ ಹಾಗೂ ಡೆಂಗ್ಯೂ ರೋಗಗಳ ನಿಯಂತ್ರಣ ಕುರಿತು ಬುಧವಾರ ತಾ.ಪಂ. ಸಭಾಂಗಣದಲ್ಲಿ ಆಯೋಜಿಸಲಾದ ಮುಂಜಾಗ್ರತಾ ಸಭೆ ಹಾಗೂ ಕಾರ್ಯಾಗಾರದ ಅಧ್ಯಕ್ಷತೆ

ಗಂಭೀರವಾಗಿ ಪರಿಣಮಿಸಿರುವ ಡೆಂಗ್ಯೂ ಜ್ವರ ಬಾಧೆಗೆ ಮುಂಜಾಗ್ರತೆಯೇ ಪ್ರಮುಖ ಔಷಧ | ಮಲೇರಿಯಾ ಹಾಗೂ ಡೆಂಗ್ಯೂ ರೋಗಗಳ ನಿಯಂತ್ರಣ ಕುರಿತ ಕಾರ್ಯಾಗಾರದಲ್ಲಿ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ Read More »

ಕರಾವಳಿ ಪ್ರಾಧಿಕಾರದಿಂದ ಅನುದಾನ ನೀಡುವಂತೆ ಸಚಿವರಿಗೆ ಮನವಿ ನೀಡಿದ ಶಾಸಕ ಅಶೋಕ್ ರೈ

ಪುತ್ತೂರು: ಕರಾವಳಿ ಪ್ರಾಧಿಕಾರದಿಂದ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವ ಮೂಲಕ ಅಭಿವೃದ್ದಿಗೆ ಸಹಕಾರ ನೀಡುವಂತೆ ಸಾಂಘಿಕ ಮತ್ತು ಸಂಯೋಜನಾ ಸಚಿವ, ಕರಾವಳಿ ಪ್ರಾಧಿಕಾರದ ಅಧ್ಯಕ್ಷ  ಡಿ ಸುಧಾಕರ್ ಅವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕ ಅಶೋಕ್ ರೈ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಅಭಿವೃದ್ದಿ ಕೆಲಸಗಳು ಆಗಬೇಕಾಗಿದ್ದು, ಕ್ಷೇತ್ರದ ಜನರಿಂದ ಬೇಡಿಕೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹಲವಾರು ವರ್ಷಗಳಿಂದ ಜನರು ಮನವಿ

ಕರಾವಳಿ ಪ್ರಾಧಿಕಾರದಿಂದ ಅನುದಾನ ನೀಡುವಂತೆ ಸಚಿವರಿಗೆ ಮನವಿ ನೀಡಿದ ಶಾಸಕ ಅಶೋಕ್ ರೈ Read More »

ರಾಜ್ಯದಲ್ಲಿ ಅನರ್ಹ ಬಿಪಿಎಲ್‍ ಕಾರ್ಡು ರದ್ದು | ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಿಎಂ

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡು ರದ್ದು ಮಾಡುವಂತೆ ಸಿಎಂ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಬಡ ಕುಟುಂಬದವರಿಗೆ ಸರ್ಕಾರ ಹಲವು ರೀತಿಯಲ್ಲಿ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಅದರಲ್ಲಿ ಪಡಿತರ ಚೀಟಿ ವಿಚಾರಣೆ ಕೂಡ ಒಂದಾಗಿದೆ ಅನ್ನಬಹುದು. ಈಗಾಗಲೇ ರೇಷನ್ ಕಾರ್ಡ್‍ ಗಾಗಿ ಹಲವು ಜನ ಕಾಯುತ್ತಿದ್ದಾರೆ.  ಆದರೆ ಅನರ್ಹ ರೇಷನ್ ಕಾರ್ಡ್ ನ್ನು ರದ್ದುಪಡಿಸುವ ಕುರಿತು ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯದ ಶೇ.80ರಷ್ಟು ಜನರು ಬಳಿ ಬಿಪಿಎಲ್ ಕಾರ್ಡ್ ಇದ್ದು, ಯಾರು

ರಾಜ್ಯದಲ್ಲಿ ಅನರ್ಹ ಬಿಪಿಎಲ್‍ ಕಾರ್ಡು ರದ್ದು | ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಿಎಂ Read More »

ನಾಪತ್ತೆಯಾಗಿದ್ದ ಮಂಗಳೂರಿನ ಹಿಂದೂ ಯುವತಿ ಮುಸ್ಲಿಂ ಯುವಕನ ಜತೆ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಹಿಂದೂ ಯುವತಿ ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ನಟೋರಿಯಸ್ ಮಹಮ್ಮದ್ ಅಶ್ವಕ್ ಎಂಬಾತ ಹುಡುಗಿಯನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ನಾಪತ್ತೆಯಾಗಿದ್ದ ಯುವತಿಯನ್ನು ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಪ್ರಕರಣ ಬೆಳಕಿಗೆ ಬಂದಿದೆ. ನಟೋರಿಯಸ್ ಮಹಮ್ಮದ್ ಅಲ್ಪಕ್ ಈಗಾಗಲೇ ಒಂದು ಮದುವೆಯಾಗಿದ್ದು ಕಾಸರಗೋಡು ವಿದ್ಯಾನಗರ ಠಾಣೆಯಲ್ಲಿ 8 ಕ್ರಿಮಿನಲ್ ಕೇಸು ಇವನ ಮೇಲೆ ಇದೆ ಎಂದು ತಿಳಿದು ಬಂದಿದೆ. ಮಂಗಳೂರಿನ ಕಾಲೇಜಿನಲ್ಲಿ ಕಲಿಯುತ್ತಿದ್ದ ಹಿಂದೂ

ನಾಪತ್ತೆಯಾಗಿದ್ದ ಮಂಗಳೂರಿನ ಹಿಂದೂ ಯುವತಿ ಮುಸ್ಲಿಂ ಯುವಕನ ಜತೆ ಪತ್ತೆ Read More »

error: Content is protected !!
Scroll to Top