ಕುದ್ದುಪದವು-ತೋರಣಕಟ್ಟೆ-ಸಾಜ-ಬಿಳಿಯೂರುಕಟ್ಟೆ ಕಾಮಗಾರಿಗಳ ಉದ್ಘಾಟನೆ ಹಾಗೂ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ
ಪುತ್ತೂರು: ತಾಲೂಕಿನ ಕುದ್ದುಪದವು-ತೋರಣಕಟ್ಟೆ-ಸಾಜ ಬಿಳಿಯೂರುಕಟ್ಟೆ ರಸ್ತೆ ಅಭಿವೃದ್ಧಿಗೆ 1.80 ಕೋಟಿ ಅನುದಾನ ಒದಗಿಸಲಾಗಿದ್ದು, ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಶುಕ್ರವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಬಲ್ನಾಡು ಗ್ರಾಮಕ್ಕೆ 17.40 ಕೋಟಿ ರೂ. ಅನುದಾನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ನೀಡಲಾಗಿದೆ. ಇದೀಗ ಈ ಸಂಪರ್ಕ ರಸ್ತೆಯ ಅಭಿವೃದ್ಧಿಗೆ ಶಿಲಾನ್ಯಾಸ ಮಾಡಲಾಗಿದ್ದು, ಶೀಘ್ರ ಸಾರ್ವಜನಿಕರಿಗೆ ಲೋಕಾರ್ಪಣೆಯಾಗಲಿ ಎಂದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಮಾತನಾಡಿ, ಪ್ರಸ್ತುತ ಜಗತ್ತು ನಮ್ಮ […]