ಬೀದಿ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ

ಪುತ್ತೂರು: ರೋಟರಿ ಕ್ಲಬ್ ಯುವ ‌ಸಂಸ್ಥೆಯ ವತಿಯಿಂದ ಬೀದಿ ನಾಯಿಗಳು ಹಾಗೂ ಸಾಕು ನಾಯಿಗಳಿಗೆ ಸಂತಾನಹರಣ ಚಿಕಿತ್ಸಾ ಕಾರ್ಯಕ್ರಮ ಮುರದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಸಂತಾನ ಹರಣದಿಂದ ಬೀದಿ ನಾಯಿಗಳ ಸಂಖ್ಯೆ ಕಡಿಮೆಯಾಗುತ್ತದೆ. ಬೀದಿ‌ನಾಯಿಗಳನ್ನು ಕೊಲ್ಲುವುದು ಕಾನೂನಿಗೆ ವಿರುದ್ದವಾಗಿದೆ. ಅವುಗಳ ನಿಯಂತ್ರಣ ಕೆಲಸ ನಡೆಯುತ್ತಿರುವುದು ಉತ್ತಮ ಕೆಲಸವಾಗಿದೆ. ಸಮಾಜದಲ್ಲಿ ಎಲ್ಲಾ ಸ್ಥರದಲ್ಲೂ ಕೆಲಸಗಳು ನಡೆಯಬೇಕು ಎಂದು ಹೇಳಿದರು. ವೇದಿಕೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಣೆ ಅಶ್ಬಿನಿ, ಕೃಷ್ಣನಾರಾಯಣ ಮುಳಿಯ, ಮದ್ವರಾಜ್ […]

ಬೀದಿ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ Read More »

ಹಿಂದೂ ಮಹಿಳೆಯರ ರಕ್ಷಣೆಗಾಗಿ ಆರಂಭಿಸಿದ ಸಹಾಯವಾಣಿ ಪರಿಣಾಮಕಾರಿಯಾಗಿದೆ | ಪತ್ರಿಕಾಗೋಷ್ಠಿಯಲ್ಲಿ ಪ್ರಮೋದ್ ಮುತಾಲಿಕ್

ಹಾವೇರಿ : ಹುಬ್ಬಳ್ಳಿ ಸೇರಿದಂತೆ ರಾಜ್ಯದ ನಾಲ್ಕು ಸ್ಥಳಗಳಲ್ಲಿ ಹಿಂದೂ ಮಹಿಳೆಯರ ರಕ್ಷಣೆಗಾಗಿ ಶ್ರೀರಾಮ ಸೇನೆ ಆರಂಭಿಸಿದ ಸಹಾಯ ವಾಣಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ತಿಳಿಸಿದ್ದಾರೆ.. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೇಹಾ ಹಿರೇಮಠ ಪ್ರಕರಣದ ಬಳಿಕ ಒಂದೇ ವಾರದಲ್ಲಿ ಹುಬ್ಬಳ್ಳಿಯಲ್ಲಿ ಐದು ಪ್ರಕರಣಗಳು ನಡೆದಿವೆ. ತಕ್ಷಣ ಇದನ್ನು ಶ್ರೀರಾಮ ಸೇನೆ ಗಂಭೀರವಾಗಿ ಪರಿಗಣಿಸಿ ಹೆಲ್ಪ್ ಲೈನ್ ಆರಂಭಿಸಿದ ಮೇಲೆ 300 ಕರೆಗಳು ಬಂದಿವೆ. ಕೊಲೆ ಬೆದರಿಕೆ, ಹೆಲ್ಪ್

ಹಿಂದೂ ಮಹಿಳೆಯರ ರಕ್ಷಣೆಗಾಗಿ ಆರಂಭಿಸಿದ ಸಹಾಯವಾಣಿ ಪರಿಣಾಮಕಾರಿಯಾಗಿದೆ | ಪತ್ರಿಕಾಗೋಷ್ಠಿಯಲ್ಲಿ ಪ್ರಮೋದ್ ಮುತಾಲಿಕ್ Read More »

ಕರ್ನಾಟಕ ಎಸ್‌.ಎಸ್‌.ಎಲ್.ಸಿ ಪರೀಕ್ಷೆ-2 ರ ಫಲಿತಾಂಶ

ಬೆಂಗಳೂರು: ಕರ್ನಾಟಕ ಎಸ್‌.ಎಸ್‌.ಎಲ್.ಸಿ ಪರೀಕ್ಷೆ-2ರ ಫಲಿತಾಂಶ ಬುಧವಾರ ಪ್ರಕಟವಾಗಿದೆ. ಎಸ್‌.ಎಸ್‌.ಎಲ್.ಸಿ ಪರೀಕ್ಷೆಯಲ್ಲಿ ತಮ್ಮ ಕಾರ್ಯಕ್ಷಮತೆಯನ್ನು ಸುಧಾರಿಸಲು ಈ ವರ್ಷ 2ನೇ ಬಾರಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್‌ಸೈಟ್ http://kseab.karnataka.gov.in ಮತ್ತು http://karresults.nic.in ನಲ್ಲಿ ತಮ್ಮ ಅಂಕಗಳನ್ನು ಪರಿಶೀಲಿಸಬಹುದಾಗಿದೆ. ವಿದ್ಯಾರ್ಥಿಗಳು ಫಲಿತಾಂಶಗಳನ್ನು ಪರಿಶೀಲಿಸಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಕರ್ನಾಟಕ ಎಸ್‌.ಎಸ್‌.ಎಲ್.ಸಿ ಪೂರಕ ಪರೀಕ್ಷೆಗಳು ಜೂ. 14 ರಿಂದ ಜೂನ್ 21ರ ಅವಧಿಯಲ್ಲಿ ನಡೆದಿದ್ದವು. 1.29 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಕರ್ನಾಟಕ ಎಸ್‌.ಎಸ್‌.ಎಲ್.ಸಿ ಪರೀಕ್ಷೆ-2 ರ ಫಲಿತಾಂಶ Read More »

ಕಾಂಗ್ರೆಸ್ ಕಾರ್ಯಕರ್ತ ಚಂದ್ರಶೇಖರ ಬಪ್ಪಳಿಗೆ ನಿಧನ

ಪುತ್ತೂರು: ಕಾಂಗ್ರೆಸ್ ಕಾರ್ಯಕರ್ತ ಚಂದ್ರಶೇಖರ್ ಬಪ್ಪಳಿಗೆ ಅನಾರೋಗ್ಯಕ್ಕೊಳಗಾಗಿ ನಿಧನ ಹೊಂದಿದ್ದಾರೆ. ಕ್ರಿಕೆಟ್ ಪಟುವಾಗಿ ಗುರಿತಿಸಿಕೊಂಡಿದ್ದ ಅವರು, ನಿನ್ನೆ ಅಸೌಖ್ಯಕ್ಕೊಳಗಾಗಿದ್ದರು. ಬಳಿಕ ಪುತ್ತೂರಿನ ಸರ್ಕಾರಿ ಆಸ್ಪತ್ರೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಗೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ. ಮೃತರು ಪತ್ನಿ, ತಂದೆ ಹಾಗೂ ಇಬ್ಬರು ಸಹೋದರರನ್ನ ಅಗಲಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತ ಚಂದ್ರಶೇಖರ ಬಪ್ಪಳಿಗೆ ನಿಧನ Read More »

ಅನಾರೋಗ್ಯಕ್ಕೀಡಾಗಿ ಬಾಲಕಿ ಮೃತ್ಯು

ಬೆಳ್ತಂಗಡಿ : ಅನಾರೋಗ್ಯದಿಂದಾಗಿ ಬಾಲಕಿ ಸಾವನ್ನಪ್ಪಿದ ಘಟನೆ ಶಿಶಿಲ ಗ್ರಾಮದ ಪೆರಿಕೆ ಎಂಬಲ್ಲಿ ನಡೆದಿದೆ. ಕೃಷ್ಣಪ್ಪ ಮಲೆಕುಡಿಯ ಮತ್ತು ಸುನಂದಾ ದಂಪತಿಯ ಪುತ್ರಿ ಸುಪ್ರೀತಾ (16) ಮೃತ ಬಾಲಕಿ. ಸುಪ್ರೀತಾ ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಳು.  ಜು. 9 ರಂದು ಆಕೆಯ ಆರೋಗ್ಯ ತೀವ್ರ ಹದಗೆಟ್ಟಿದ್ದು, ತಕ್ಷಣವೇ ಆಕೆಯನ್ನು ಚಿಕಿತ್ಸೆಗಾಗಿ ಉಪ್ಪಿನಂಗಡಿ ಆಸ್ಪತ್ರೆಗೆ ಕರೆದೊಯ್ದಿದ್ದರು, ಆದರೆ ಮನೆಗೆ ಹಿಂದಿರುಗುವ ಮಾರ್ಗ ಮಧ್ಯೆ ಆಕೆ ಪ್ರಜ್ಞಾಹೀನಳಾಗಿದ್ದಳು. ಮತ್ತೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತರು

ಅನಾರೋಗ್ಯಕ್ಕೀಡಾಗಿ ಬಾಲಕಿ ಮೃತ್ಯು Read More »

ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಹಣ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಮತ್ತು ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಇಂದು ಬೆಳ್ಳಂಬೆಳಗ್ಗೆ ಇಬ್ಬರೂ ನಾಯಕರ ಮನೆಗಳ ಮೇಲೆ ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್‌ ವರ್ಮಾ ಸೇರಿ ಹಲವರ ಮನೆ ಹಾಗೂ ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರು, ಬಳ್ಳಾರಿಯಲ್ಲಿರುವ ಶಾಸಕ

ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ Read More »

ಬಾಲಕಿಗೆ ಲೈಂಗಿಕ ಕಿರುಕುಳ | ಪೋಕ್ಸೋ ಪ್ರಕರಣ ದಾಖಲು

ಬಂಟ್ವಾಳ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಟ್ವಾಳ ತಾಲೂಕಿನ ಬೀಮುಡ ಗ್ರಾಮ ಟೈಲರ್ ಒಬ್ಬನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಧರ್ಮರಾಜ್ ಎಂಬಾತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂಜೆ ಹೊತ್ತು ಬಾಲಕಿ ಅಂಗಡಿಗೆ ಬಂದ ಸಂದರ್ಭ ಕೈ ಹಿಡಿದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಗೆ ಲೈಂಗಿಕ ಕಿರುಕುಳ | ಪೋಕ್ಸೋ ಪ್ರಕರಣ ದಾಖಲು Read More »

ಎಲ್ ಕೆಜಿ, ಯುಕೆಜಿ, 1ನೇ ತರಗತಿಗೆ ದಾಖಲಿಸಲು ಗರಿಷ್ಠ ವಯೋಮಿತಿ ನಿಗದಿ | ಆದೇಶ ಹೊರಡಿಸಿದ ಸರಕಾರ

ಬೆಂಗಳೂರು: ಮಕ್ಕಳನ್ನು ಎಲ್.ಕೆ.ಜಿ, ಯುಕೆಜಿ ಹಾಗೂ 1ನೇ ತರಗತಿಗೆ ದಾಖಲಿಸಲು ಈಗಾಗಲೇ ಕನಿಷ್ಠ ವಯೋಮಿತಿಯನ್ನು ನಿಗದಿಪಡಿಸಿದ ರಾಜ್ಯ ಸರಕಾರ ಇದೀಗ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿದೆ. ಮಕ್ಕಳ ಎಲ್.ಕೆ.ಜಿ ಪ್ರವೇಶಾತಿಗೆ 4-5 ವರ್ಷ ಕನಿಷ್ಠ ವಯೋಮಿತಿಯಾದರೆ, ಈಗ ಗರಿಷ್ಠ ವಯೋಮಿತಿ 6 ವರ್ಷ ನಿಗದಿಪಡಿಸಲಾಗಿದೆ. ಯುಕೆಜಿ ಪ್ರವೇಶಾತಿಗೆ 4-5 ವರ್ಷ ಕನಿಷ್ಠ ವಯೋಮಿತಿಯಾದರೆ, ಗರಿಷ್ಠ ವಯೋಮಿತಿ 7 ವರ್ಷ ಆಗಿದೆ. ಒಂದನೇ ತರಗತಿ ಪ್ರವೇಶಾತಿಗೆ ಕನಿಷ್ಠ ವಯೋಮಿತಿ 6 ವರ್ಷ ಇದ್ದರೆ, ಗರಿಷ್ಠ ವಯೋಮಿತಿ 8 ವರ್ಷ ನಿಗದಿಪಡಿಸಲಾಗಿದೆ.

ಎಲ್ ಕೆಜಿ, ಯುಕೆಜಿ, 1ನೇ ತರಗತಿಗೆ ದಾಖಲಿಸಲು ಗರಿಷ್ಠ ವಯೋಮಿತಿ ನಿಗದಿ | ಆದೇಶ ಹೊರಡಿಸಿದ ಸರಕಾರ Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ

ಕಡಬ: ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ತೆರಳುತ್ತಿದ್ದ ಕಾರು ನೆಕ್ಕಿತ್ತಡ್ಕ ಎಂಬಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿದ್ದು, ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಹಿಳೆಯೋರ್ವರು ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ Read More »

ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಚಡ್ಡಿ ಗ್ಯಾಂಗ್ | ಪೊಲೀಸರಿಂದ ಆರೋಪಿಗಳ ಕಾಲಿಗೆ ಗುಂಡು

ಮಂಗಳೂರು : ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಚಡ್ಡಿ ಗ್ಯಾಂಗ್ ಸದಸ್ಯರು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಪೊಲೀಸರು ಇಬ್ಬರ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮಧ್ಯಪ್ರದೇಶದ ಗುಣಾ ಜಿಲ್ಲೆಯ ರಾಜು ಸಿಂಗ್ಲಾನಿಯಾ (24), ಭೂಪಾಲ್ ನ ಮಯೂರ್ (30), ಬಾಲಿ (22), ಗುಣಾ ಜಿಲ್ಲೆಯ ವಿಕ್ಕಿ (21) ನಾಲ್ವರು ಬಂಧಿತ ಆರೋಪಿಗಳು. ಕಾರ್ಯಾಚರಣೆ ನಡೆಸಿದ್ದ ಪೊಲೀಸರು ನಿನ್ನೆ ಚಡ್ಡಿ ಗ್ಯಾಂಗ್ ನ ನಾಲ್ವರನ್ನು ಸಕಲೇಶಪುರದಲ್ಲಿ ಬಂಧಿಸಿ ಮಂಗಳೂರಿಗೆ ಕರೆ ತಂದಿದ್ದರು. ದರೋಡೆ ನಡೆಸಿದ

ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಚಡ್ಡಿ ಗ್ಯಾಂಗ್ | ಪೊಲೀಸರಿಂದ ಆರೋಪಿಗಳ ಕಾಲಿಗೆ ಗುಂಡು Read More »

error: Content is protected !!
Scroll to Top