ರಾಜ್ಯದಲ್ಲಿ ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ | ಆಡಳಿತಾರೂಢ ಕಾಂಗ್ರೆಸ್ ಗೆ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಲು ಸಾಧ್ಯವಾಗುತ್ತಿಲ್ಲ : ಬಿಜೆಪಿ ಆರೋಪ

ಬೆಂಗಳೂರು: ದೇಶದ ಬಹುತೇಕ ಭಾಗಗಳಲ್ಲಿ ಮಳೆ ಬೀಳುತ್ತಿರುವುದರಿಂದ, ಕರ್ನಾಟಕ, ಕೇರಳ ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಡೆಂಗ್ಯೂ ರೋಗದ ಹೆಚ್ಚಳಕ್ಕೆ ಸಾಕ್ಷಿಯಾಗುತ್ತಿವೆ. ಇದರ ಪರಿಣಾಮವಾಗಿ, ಕರ್ನಾಟಕದಲ್ಲಿ ಡೆಂಗ್ಯೂ ಆತಂಕವನ್ನು ಹೆಚ್ಚಿಸಿದೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಈ ವರ್ಷ ದಾಖಲಾದ ಪ್ರಕರಣಗಳ ಪ್ರಕಾರ ರಾಜ್ಯದಲ್ಲಿ ಬರೋಬ್ಬರಿ 7,000 ಗಡಿಯನ್ನು ಮೀರಿದೆ. ಜುಲೈ 6 ರ ಹೊತ್ತಿಗೆ, ಕರ್ನಾಟಕದಲ್ಲಿ 7006 ಜನರಿಗೆ ವೈರಲ್ ಸೋಂಕು ಇರುವುದು ಪತ್ತೆಯಾಗಿದೆ. ಈ ಪೈಕಿ ಆರು ಮಂದಿ ಈ ಕಾಯಿಲೆಗೆ […]

ರಾಜ್ಯದಲ್ಲಿ ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ | ಆಡಳಿತಾರೂಢ ಕಾಂಗ್ರೆಸ್ ಗೆ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಲು ಸಾಧ್ಯವಾಗುತ್ತಿಲ್ಲ : ಬಿಜೆಪಿ ಆರೋಪ Read More »

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದಿಂದ ವನಮಹೋತ್ಸವ | ಮನೆಗೊಂದು ಗಿಡ, ಊರಿಗೊಂದು ವನ ಧ್ಯೇಯ ವಾಕ್ಯದೊಂದಿಗೆ ಆಚರಣೆ

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘದ ಸದಸ್ಯರಿಗೆ ಹಣ್ಣಿನ ಗಿಡ ಉಚಿತವಾಗಿ ನೀಡುವ ಮೂಲಕ ವನಮಹೋತ್ಸವವನ್ನು ಇಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಮನೆಗೊಂದು ಗಿಡ, ಊರಿಗೊಂದು ವನ ಧ್ಯೇಯ ವಾಕ್ಯದೊಂದಿಗೆ ನಡೆದ ಕಾರ್ಯಕ್ರಮವನ್ನು ಸಂಘದ ಸಲಹಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಸಂಜೀವ ಮಠಂದೂರು ಸಂಘದ ಪದಾಧಿಕಾರಿಗಳಿಗೆ ಗಿಡ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಸಂಘದ ಗೌರವಾಧ್ಯಕ್ಷ ಚಿ್ದಾನಂದ ಬೈಲಾಡಿ, ಅಧ್ಯಕ್ಷ ರವಿ ಮುಂಗ್ಲಿಮನೆ, ಗೌಡ ಮಹಿಳಾ ಸಂಘದ ಅಧ್ಯಕ್ಷೆ ವಾರಿಜ ಬೆಳ್ಯಪ್ಪ

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದಿಂದ ವನಮಹೋತ್ಸವ | ಮನೆಗೊಂದು ಗಿಡ, ಊರಿಗೊಂದು ವನ ಧ್ಯೇಯ ವಾಕ್ಯದೊಂದಿಗೆ ಆಚರಣೆ Read More »

ಕೃಷಿಕ ಸಿ.ಕೆ.ನವೀನ್ ಚಾತುಬಾಯಿಗೆ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಮತ್ತು ಆಕ್ಸಿಸ್ ಬ್ಯಾಂಕ್‍ನಿಂದ ಕೃಷಿಕರತ್ನ ಪುರಸ್ಕಾರ

ಸುಳ್ಯ: ಐವರ್ನಾಡು ಗ್ರಾಮದ ಕೃಷಿಕರಾದ ಸಿ.ಕೆ.ನವೀನ್ ಚಾತುಬಾಯಿ ಅವರಿಗೆ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಮತ್ತು ಆಕ್ಸಿಸ್ ಬ್ಯಾಂಕ್ ಕೊಡ ಮಾಡುವ ಕೃಷಿಕ ರತ್ನ ಪುರಸ್ಕಾರ ಜುಲೈ 5 ರಂದು ನೀಡಲಾಗಿದೆ. ಮಂಗಳೂರಿನ ರೀಜನಲ್ ಕಚೇರಿಯಲ್ಲಿ ಜು.5 ರಂದು ನಡೆದ ಕಾರ್ಯಕ್ರಮದಲ್ಲಿ ಈ ಪುರಸ್ಕಾರ ಮಾಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗೌರವಿಸಲಾಯಿತು. ಕಾರ್ಯಕ್ರಮವನ್ನು ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಕಂಪನಿಯ ಸೀನಿಯ‌ರ್ ಮ್ಯಾನೇಜರ್ ಸುಧಾಕರ್ ಶೆಟ್ಟಿ, ಮ್ಯಾನೇಜರ್ ಪೂಜಿಕ್, ಜಗದೀಶ್

ಕೃಷಿಕ ಸಿ.ಕೆ.ನವೀನ್ ಚಾತುಬಾಯಿಗೆ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಮತ್ತು ಆಕ್ಸಿಸ್ ಬ್ಯಾಂಕ್‍ನಿಂದ ಕೃಷಿಕರತ್ನ ಪುರಸ್ಕಾರ Read More »

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಗೆ ಚಿತ್ತಾರ ಸ್ಟಾರ್ ಅವಾರ್ಡ್

ಪುತ್ತೂರು: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಗೆ ಚಿತ್ತಾರ ಸ್ಟಾರ್ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಾಯಿತು. ಅಯೋಧ್ಯೆಯ ಶ್ರೀರಾಮ ವಿಗ್ರಹದ ಶಿಲ್ಪಿ ಅರುಣಾ ಯೋಗಿರಾಜ್ ಅವರಿಂದ ಸಂಸ್ಥೆಯ ಅಧ್ಯಕ್ಷ ಕುಸುಮಾಧರ ಎಸ್ ಕೆ., ಉಪಾಧ್ಯಕ್ಷ ಗಿರಿಧರ ಸ್ಕಂದ,, ಮುಖ್ಯ ಸಲಹೆಗಾರ ಯತೀಶ್ ಪ್ರಶಸ್ತಿ ಪಡೆದುಕೊಂಡರು

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಗೆ ಚಿತ್ತಾರ ಸ್ಟಾರ್ ಅವಾರ್ಡ್ Read More »

ಸೂರತ್‍ ನಲ್ಲಿ ಭಾರೀ ಮಳೆಗೆ ಆರು ಅಂತಸ್ತಿನ ಕಟ್ಟಡ ಕುಸಿತ : 7 ಮಂದಿ ಮೃತ್ಯು

ಸೂರತ್: ಭಾರೀ ಮಳೆಯಿಂದಾಗಿ ಸೂರತ್‍ ನಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು 7 ಜನ ಮೃತಪಟ್ಟು, ಹಲವಾರು ಮಂದಿ ಕಟ್ಟಡದ ಅಡಿಯಲ್ಲಿ ಸಿಲಿಕೊಂಡಿರುವ ಘಟನೆ ನಡೆದಿದೆ. ಮಹಿಳೆಯೊಬ್ಬರನ್ನು ಅವಶೇಷಗಳ ಅಡಿಯಿಂದ ರಕ್ಷಿಸಲಾಗಿತ್ತು. ಈ ದುರ್ಘಟನೆಯಲ್ಲಿ ಸುಮಾರು 15 ಮಂದಿ ಗಾಯಗೊಂಡಿದ್ದಾರೆ. ಜನರ ರಕ್ಷಣೆಗಾಗಿ ಎನ್‌ಡಿಆರ್‌ಎಫ್ ಸಿಬ್ಬಂದಿ ರಾತ್ರಿಯಿಡೀ ಕಾರ್ಯ ನಿರ್ವಹಿಸಿದ್ದಾರೆ. ಕುಸಿದು ಬಿದ್ದ ಕಟ್ಟಡದಲ್ಲಿ ಐದು ಕುಟುಂಬಗಳು ವಾಸವಾಗಿದ್ದವು. ಇದನ್ನು 2017 ರಲ್ಲಿ ನಿರ್ಮಿಸಲಾಗಿತ್ತು. ಈ ದುರ್ಘಟನೆ ವೇಳೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಅನೇಕರು

ಸೂರತ್‍ ನಲ್ಲಿ ಭಾರೀ ಮಳೆಗೆ ಆರು ಅಂತಸ್ತಿನ ಕಟ್ಟಡ ಕುಸಿತ : 7 ಮಂದಿ ಮೃತ್ಯು Read More »

ಜು.27 : ತಾಲೂಕು ಒಕ್ಕಲಿಗ ಮಹಿಳಾ ಸಂಘದ ಆಶ್ರಯದಲ್ಲಿ ‘ಆಟಿ ಹಬ್ಬ-2024’, ಜು.16 : ವರಮಹಾಲಕ್ಷ್ಮೀ ಪೂಜೆ | ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ  ಒಕ್ಕಲಿಗ ಗೌಡ ಸೇವಾ ಸಂಘ, ಯುವ ಒಕ್ಕಲಿಗ ಸಂಘ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಸಹಯೋಗದಲ್ಲಿ ಜು.27 ರಂದು ತೆಂಕಿಲ ಒಕ್ಕಲಿಗ ಸಮುದಾಯ ಭವನದಲ್ಲಿ ನಡೆಯುವ ಆಟಿ ಹಬ್ಬ-2024 ಹಾಗೂ ಆ.16 ರಂದು ನಡೆಯುವ ವರಮಹಾಲಕ್ಷ್ಮೀ ವೃತ ಪೂಜೆಯ ಆಮಂತ್ರಣ ಪತ್ರವನ್ನು ಇಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಬಿಡುಗಡೆ ಮಾಡಲಾಯಿತು. ಒಕ್ಕಲಿಗ ಗೌಡ ಸಂಘದ ಸಲಹಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಸಂಜೀವ ಮಠಂದೂರು ಆಮಂತ್ರಣ

ಜು.27 : ತಾಲೂಕು ಒಕ್ಕಲಿಗ ಮಹಿಳಾ ಸಂಘದ ಆಶ್ರಯದಲ್ಲಿ ‘ಆಟಿ ಹಬ್ಬ-2024’, ಜು.16 : ವರಮಹಾಲಕ್ಷ್ಮೀ ಪೂಜೆ | ಆಮಂತ್ರಣ ಪತ್ರ ಬಿಡುಗಡೆ Read More »

ದ.ಕ.ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಮಿತಿಗೆ ಸದಸ್ಯರ ನೇಮಕ

ನೆಲ್ಯಾಡಿ: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ಸದಸ್ಯರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ, ಮಾಜಿ ಸದಸ್ಯರಾದ ಕೃಷ್ಣ ಶೆಟ್ಟಿ ಕಡಬ, ಬಾಲಕೃಷ್ಣ ಬಾಣಜಾಲು, ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಪುಲಸ್ತ್ಯ ರೈ, ಮಲೆನಾಡು ಜನಹಿತ ಸಂಘಟನೆಯ ಕಿಶೋರ್ ಶಿರಾಡಿ ನೇಮಕಗೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು.

ದ.ಕ.ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಮಿತಿಗೆ ಸದಸ್ಯರ ನೇಮಕ Read More »

ವಿದ್ಯಾರ್ಥಿಗಳು ಮನಸ್ಸನ್ನು ನಿಯಂತ್ರಿಸುವ ಕಲೆ ಸಿದ್ಧಿಸಬೇಕು | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಬೋಧನಾ ಸಾಮರ್ಥ್ಯ ಉತ್ತೇಜನ ಕಾರ್ಯಕ್ರಮದಲ್ಲಿ ರಾಮಚಂದ್ರ ಗುರೂಜಿ

ಪುತ್ತೂರು: ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಪಾಠ ಮಾಡಬೇಕಾದರೆ ಮನಸ್ಸಿನ ಸ್ಥಿತಿಗಳನ್ನು ಮೊದಲಿಗೆ ಅರ್ಥಮಾಡಿಕೊಳ್ಳಬೇಕು. ನಮ್ಮೆದುರಿಗಿರುವ ಮಕ್ಕಳ ಮನಸ್ಸನ್ನು ಹತೋಟಿಗೆ ತೆಗೆದುಕೊಂಡರೆ ನಾವು ಬೋಧಿಸಿದ ಸಂಗತಿಗಳು ಸುಲಭ ಸಾಧ್ಯವಾಗಿ ಮಕ್ಕಳ ತಲೆಯೊಳಗೆ ಅಚ್ಚೊತ್ತಿಬಿಡುತ್ತವೆ. ಹಾಗಾಗಿ ಶಿಕ್ಷಕರಾದವರು ಮನಸ್ಸನ್ನು ಅರ್ಥ ಮಾಡಿಕೊಳ್ಳುವ ಶಕ್ತಿ ಬೆಳೆಸಿಕೊಳ್ಳಬೇಕು ಎಂದು ಬೆಂಗಳೂರಿನ ಸಮ್ಮೋಹಿನಿ ತಜ್ಞ, ಕುಂಡಲಿನಿ ಯೋಗಗುರು ಡಾ.ರಾಮಚಂದ್ರ ಗುರೂಜಿ ಹೇಳಿದರು.        ಅವರು ನಗರದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಅಂಬಿಕಾ ಹಾಗೂ ನರಿಮೊಗರಿನ ಸಾಂದೀಪನಿ ಶಿಕ್ಷಣ ಸಂಸ್ಥೆಗಳ ಬೋಧಕರಿಗಾಗಿ ಆಯೋಜಿಸಲಾದ ಎರಡು ದಿನಗಳ

ವಿದ್ಯಾರ್ಥಿಗಳು ಮನಸ್ಸನ್ನು ನಿಯಂತ್ರಿಸುವ ಕಲೆ ಸಿದ್ಧಿಸಬೇಕು | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಬೋಧನಾ ಸಾಮರ್ಥ್ಯ ಉತ್ತೇಜನ ಕಾರ್ಯಕ್ರಮದಲ್ಲಿ ರಾಮಚಂದ್ರ ಗುರೂಜಿ Read More »

ಚಿನ್ನಾಭರಣ ಕಳವು ಪ್ರಕರಣ : ಮೂವರ ಬಂಧನ

ಮಂಗಳೂರು: ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿಯ ಶ್ರೇಯಸ್, ತೌಸಿಫ್, ಉರ್ವದ ಪೃಥ್ವಿರಾಜ್ ಬಂಧಿತ ಆರೋಪಿಗಳು. ಉಳ್ಳಾಲದಲ್ಲಿ ಕಳವು ಪ್ರಕರಣ ನಡೆದಿದ್ದು, ಮಂಗಳೂರಿನ ವಿವಿಧ ಜ್ಯುವೆಲ್ಲರಿಗೆ ಮಾರಾಟ ಮಾಡಿದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಶ್ರೇಯಸ್, ಪೃಥ್ವಿರಾಜ್ ಮತ್ತು ತೌಸಿಫ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜೂನ್ 28 ರಂದು ಉಳ್ಳಾಲ ಧರ್ಮನಗರದ ನಿವಾಸಿ ಶ್ರೀಧರ್ (65) ಎಂಬುವರು ತಮ್ಮ ಬೆಡ್‌ರೂಮ್ ಕಬೋರ್ಡ್‌ನಿಂದ ಸುಮಾರು 15 ಲಕ್ಷ ಮೌಲ್ಯದ ಮೌಲ್ಯದ ಚಿನ್ನಾಭರಣಗಳನ್ನು

ಚಿನ್ನಾಭರಣ ಕಳವು ಪ್ರಕರಣ : ಮೂವರ ಬಂಧನ Read More »

ನಿಷೇಧಿತ ಎಂಡಿಎಂಎ ಮಾರಾಟ : ಆರೋಪಿ ಪುತ್ತೂರಿನ ಮುಹಮ್ಮದ ಸಫ್ವಾನ್ ಬಂಧನ

ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ವೇಳೆ ಆರೋಪಿಯೊಬ್ಬನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ಮುಹಮ್ಮದ್ ಸಫ್ಘಾನ್ (32) ಬಂಧಿತ ಆರೋಪಿ. ಖಚಿತ ವರ್ತಮಾನದ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ನಗರದ ಉಳ್ಳಾಲಬೈಲು ಪರಿಸರದಲ್ಲಿ ಬೈಕನ್ನು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ 90000 ಮೌಲ್ಯದ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕ ಹಾಗೂ ಬೈಕ್ ಸೇರಿ ಸುಮಾರು ಎರಡು ಲಕ್ಷದ ಐದು

ನಿಷೇಧಿತ ಎಂಡಿಎಂಎ ಮಾರಾಟ : ಆರೋಪಿ ಪುತ್ತೂರಿನ ಮುಹಮ್ಮದ ಸಫ್ವಾನ್ ಬಂಧನ Read More »

error: Content is protected !!
Scroll to Top