ರಾಜ್ಯ ಸರಕಾರದಿಂದ ಹಾಲು ಸಹಿತ ಅಗತ್ಯ ವಸ್ತುಗಳ ಬೆಲೆ ಏರಿಕೆ | ಪುತ್ತೂರು ಬಿಜೆಪಿ ಮಹಿಳಾ ಮೋರ್ಚಾದಿಂದ ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ

ಪುತ್ತೂರು: ರಾಜ್ಯ ಸರಕಾರದ ಹಾಲಿನ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪುತ್ತೂರು ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾದಿಂದ ರಾಜ್ಯಪಾಲರಿಗೆ ಸಹಾಯಕ ಆಯುಕ್ತರ ಕಚೇರಿ ಮೂಲಕ ಮನವಿ ಇಂದು ನೀಡಲಾಯಿತು. ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಜಯಶ್ರೀ, ಬಿಜೆಪಿ ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರಿ ನೇತೃತ್ವದಲ್ಲಿ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿದ್ಯಾಗೌರಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ, ನಗರಮಂಡಲ ಪ್ರಧಾನ ಕಾರ್ಯದರ್ಶಿ […]

ರಾಜ್ಯ ಸರಕಾರದಿಂದ ಹಾಲು ಸಹಿತ ಅಗತ್ಯ ವಸ್ತುಗಳ ಬೆಲೆ ಏರಿಕೆ | ಪುತ್ತೂರು ಬಿಜೆಪಿ ಮಹಿಳಾ ಮೋರ್ಚಾದಿಂದ ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ Read More »

ಮೆದುಳಿಗೆ ಸಂಬಂಧಿಸಿದ ಕಾಯಿಲೆಗೆ ತುತ್ತಾದ ಭವಿತ್ ಪಕಳ | ಚಿಕಿತ್ಸೆಗೆ  ಧನ ಸಹಾಯದ ಕೋರಿಕೆ

ಪುತ್ತೂರು : ತಿಂಗಳಾಡಿನ 18 ವರ್ಷದ ಭವಿತ್ ಪಕಳಮಾರಣಾಂತಿಕ ಮೆದುಳಿಗೆ ಸಂಬಂಧಿಸಿದ ಕಾಯಿಲೆಗೆ ತುತ್ತಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಮನೆಯ ಆಧಾರ ಸ್ತಂಭವಾಗಿರುವ ಈತನ ತಂದೆ ಕೆಲವು ತಿಂಗಳುಗಳ ಹಿಂದೆ  ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿ 25 ಲಕ್ಷಕ್ಕೂ ಮೀರಿ ಚಿಕಿತ್ಸೆಗೆ ಖರ್ಚಾಗಿತ್ತು. ಈಗ ಮಗನೂ ಮೆದುಳು  ಸಂಬಂಧಿಸಿದ ಕಾಯಿಲೆಗೆ ತುತ್ತಾಗಿ  15 ಲಕ್ಷಕ್ಕೂ ಮೀರಿ ಖರ್ಚು ಬೇಕಾಗುವುದೆಂದು ವೈದ್ಯರು ತಿಳಿಸಿದ್ದಾರೆ. ಅವನ ಆಸ್ಪತ್ರೆ ಖರ್ಚು ಕಟ್ಟೊಕೆ ಕೂಡ ಬಿಡಿಗಾಸು ಇಲ್ಲದೆ ಇದ್ದ ಪರಿಸ್ಥಿತಿಯಲ್ಲಿರುವ ಕುಟುಂಬದ ಕಣ‍್ಣಿರಿರೊರೆಸಲು ಧನಿಗಳಿಂದ

ಮೆದುಳಿಗೆ ಸಂಬಂಧಿಸಿದ ಕಾಯಿಲೆಗೆ ತುತ್ತಾದ ಭವಿತ್ ಪಕಳ | ಚಿಕಿತ್ಸೆಗೆ  ಧನ ಸಹಾಯದ ಕೋರಿಕೆ Read More »

ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಬೆಂಗಳೂರು: ಕೇಂದ್ರ ಬಂದರು, ಶಿಪ್ಪಿಂಗ್‌ ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್‌ ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿ ಮಾತುಕತೆ ನಡೆಸಿದರು. ಎನ್‌.ಎಮ್‌‌.ಪಿ‌.ಎ ಯ ಅಭಿವೃದ್ಧಿಯ ದೃಷ್ಟಿಯಿಂದ ಇರುವ ಸಾಧ್ಯತೆಗಳು ಮತ್ತು ಸಾಗರ್‌ ಮಾಲಾ ಯೋಜನೆಯಡಿ ಲಕ್ಷದ್ವೀಪಕ್ಕೆ ತೆರಳುವ ಹಡಗುಗಳಿಗೆ ಮೀಸಲಾದ ಜೆಟ್ಟಿ ಮತ್ತು ಕ್ರೂಸ್ ಟರ್ಮಿನಲ್ ನಿರ್ಮಾಣದ ಕುರಿತು ಬಂದರು ಸಚಿವರ ಜೊತೆ ಚರ್ಚಿಸಿದರು. ದಕ್ಷಿಣ

ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ Read More »

ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ | ಮಣ್ಣಿನಡಿ ಸಿಲುಕಿದ ಕಾರ್ಮಿಕರು

ಮಂಗಳೂರು :ಬಲ್ಮಠದಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ನಡೆದಿದೆ. ಮಂಗಳೂರಿನ ಬಲ್ಮಠ ರೋಡ್ ಸಮೀಪ ಖಾಸಗಿ ಸಂಸ್ಥೆಗೆ ಸೇರಿದ ಕಟ್ಟಡ ನಿರ್ಮಾಣ ವೇಳೆ ಘಟನೆ ನಡೆದಿದೆ. ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದು, ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ | ಮಣ್ಣಿನಡಿ ಸಿಲುಕಿದ ಕಾರ್ಮಿಕರು Read More »

ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ | ರಾಜ್ಯ ಸರಕಾರದಿಂದ ಸುತ್ತೋಲೆ

ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್ ಬಳಕೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಶಾಲಾ ಕಾಲೇಜುಗಳಲ್ಲಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದು ಶೈಕ್ಷಣಿಕ ವಾತಾವರಣವನ್ನು ಹದಗೆಡಿಸುತ್ತಿದೆ. ಇದರ ದುಷ್ಪರಿಣಾಮ ಮಕ್ಕಳ ಮೇಲೆ ಬೀರುತ್ತಿದೆಯಲ್ಲದೇ, ಇದರಿಂದ ಕಲಿಕೆಯ ಅಮೂಲ್ಯ ಸಮಯವನ್ನು ಮೊಬೈಲ್ ಮಾತುಗಾರಿಕೆಯಲ್ಲಿ ವ್ಯಯವಾಗುತ್ತಿದೆಯೆಂಬ ಅಂಶ ಇಲಾಖೆಯ ಗಮನಕ್ಕೆ ಬಂದಿದೆ. ಅಲ್ಲದೇ ವಿದ್ಯಾರ್ಥಿಗಳು ತರಗತಿಗಳಲ್ಲಿ ಮೊಬೈಲ್ ಬಳಸಿ ಸಂಗೀತ ಕೇಳುವುದು ಆಟವಾಡುವು ಹಾಗೂ ಎಸ್‌ಎಂಎಸ್ ಕಳುಹಿಸುವುದು ಮಾಡುತ್ತಿದ್ದು ಇದರಿಂದ ತರಗತಿಗಳಲ್ಲಿ ಅಹಿತಕರ ವಾತಾವರಣ ಉಂಟಾಗಿ

ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ | ರಾಜ್ಯ ಸರಕಾರದಿಂದ ಸುತ್ತೋಲೆ Read More »

ಇಡ್ಕಿದು ಸೇವಾ ಸಹಕಾರಿ ಸಂಘಕ್ಕೆ 2.06 ಕೋಟಿ ಲಾಭ | ನಿರ್ದೇಶಕರ ಸಭೆಯಲ್ಲಿ ಮಾಹಿತಿ ನೀಡಿದ ಅಧ್ಯಕ್ಷರು

ವಿಟ್ಲ : ಕುಳ ಮತ್ತು ಇಡ್ಕಿದು 2 ಗ್ರಾಮಗಳ ವ್ಯಾಪ್ತಿಯಲ್ಲಿರುವ ಸದಸ್ಯ ಗ್ರಾಹಕರ ಆಶೋತ್ತರಗಳನ್ನು ಈಡೇರಿಸುತ್ತ ಬಂದಿರುವ ಇದು ಸೇವಾ ಸಹಕಾರಿ ಸಂಘವು 2023-24ನೇ ಸಾಲಿನಲ್ಲಿಒಟ್ಟು ರೂ 441 ಕೋಟಿ ವ್ಯವಹಾರ ನಡೆಸಿ ಸುಮಾರು ರೂ.2.06ಕೋಟಿ ಲಾಭಗಳಿಸಿ 94% ವಸೂಲಾತಿಯನ್ನು ಮಾಡಿದೆ ಎಂದು ಸಂಘದ ಅಧ್ಯಕ್ಷರಾದ ಬಿ. ಸುಧಾಕರ್ ಶೆಟ್ಟಿರವರು ಹೇಳಿದರು. ಅವರು ಇಡ್ಕಿದು ಸೇವಾ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ಸಂಘದ ವ್ಯವಹಾರಗಳನ್ನು ಗ್ರಾಹಕರಿಗೆ ತಿಳಿಸುವ ಉದ್ದೇಶದಿಂದ ನಡೆಸಿದ ನಿರ್ದೇಶಕರ ಸಭೆಯಲ್ಲಿ ಮಾಹಿತಿ ಬಿಡುಗಡೆ ಮಾಡಿ

ಇಡ್ಕಿದು ಸೇವಾ ಸಹಕಾರಿ ಸಂಘಕ್ಕೆ 2.06 ಕೋಟಿ ಲಾಭ | ನಿರ್ದೇಶಕರ ಸಭೆಯಲ್ಲಿ ಮಾಹಿತಿ ನೀಡಿದ ಅಧ್ಯಕ್ಷರು Read More »

ಜುಲೈ 25 ರಿಂದ 27 ರವರೆಗೆ NEET-PG ಪರೀಕ್ಷೆ | 2 ಗಂಟೆ ಮುಂಚಿತಾಗಿ ಪ್ರಶ್ನೆ ಪತ್ರಿಕೆ ಸಿದ್ಧ

ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಪ್ರವೇಶ ಪಡೆಯುವುದಕ್ಕೆ ನಡೆಯಲಿರುವ ನೀಟ್ -ಪಿಜಿ ಪರೀಕ್ಷೆ ಜುಲೈ ತಿಂಗಳ 25 ರಿಂದ ಜುಲೈ 27 ರವರೆಗೆ ನಡೆಯಲಿದ್ದು, ಮುಖ್ಯವಾಗಿ ಪ್ರಶ್ನೆ ಪತ್ರಿಕೆಗಳು ಸೋರಿಕೆ ತಡೆಗಟ್ಟುವುದಕ್ಕಾಗಿ ಪರೀಕ್ಷೆ ನಡೆಯುವುದಕ್ಕೂ 2 ಗಂಟೆಗಳ ಮುಂಚಿತಾಗಿ ಪ್ರಶ್ನೆ ಪರೀಕ್ಷೆಯನ್ನು ಸಿದ್ಧಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಜೂನ್ 23 ಕ್ಕೆ ನಿಗದಿಯಾಗಿದ್ದ NEET-PG ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಪರೀಕ್ಷೆ ಆರಂಭದ ಕೆಲವು ಗಂಟೆ ಮುಂಚೆ ಪರೀಕ್ಷೆ ರದ್ದು ಮಾಡಲಾಗಿತ್ತು. ಇದರಿಂದ ಹಲವು ರೀತಿಯ ಪ್ರತಿಭಟನೆ ನಡೆದಿದ್ದು,

ಜುಲೈ 25 ರಿಂದ 27 ರವರೆಗೆ NEET-PG ಪರೀಕ್ಷೆ | 2 ಗಂಟೆ ಮುಂಚಿತಾಗಿ ಪ್ರಶ್ನೆ ಪತ್ರಿಕೆ ಸಿದ್ಧ Read More »

ವಿಶ್ವ ಹಿಂದೂ ಪರಿಷತ್ : ನಗರ ಘಟಕ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ

ಪುತ್ತೂರು: ವಿಶ್ವ ಹಿಂದೂ ಪರಿಷತ್ತಿನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕಗೊಂಡಿದ್ದಾರೆ. ವಿಶ್ವ ಹಿಂದೂ ಪರಿಷತ್ತಿನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು. ಆ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಉಪಾಧ್ಯಕ್ಷ ಸತೀಶ್ ಬಿ. ಎಸ್., ಕಾರ್ಯದರ್ಶಿ ನವೀನ್ ನೆರಿಯ, ಸೇವಾ ಪ್ರಮುಖ್ ಸೀತಾರಾಮ ಭಟ್, ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಮತ್ತಿತರರು ಉಪಸ್ಥಿತರಿದ್ದರು.

ವಿಶ್ವ ಹಿಂದೂ ಪರಿಷತ್ : ನಗರ ಘಟಕ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ Read More »

ವಿಶ್ವಸುಂದರಿ ಪಟ್ಟ ಪಡೆದ ಕನ್ನಡತಿ | ಅಮೇರಿಕಾದಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ಶೃತಿ ಹೆಗಡೆ

ಇತ್ತೀಚಿಗೆ ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಯುವತಿಯೊಬ್ಬಳು ವಿಜೇತರಾಗಿದ್ದಾರೆ. ಮುಂಡಿಗೆಸರ ಅಷ್ಟೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿದ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶೃತಿ ಹೆಗಡೆ, ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ ಚರ್ಮ ರೋಗ ತಜ್ಞೆಯಾಗಿ ಎಂ.ಡಿ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ವೃತ್ತಿಯಲ್ಲಿ ವೈದ್ಯೆಯಾಗಿದ್ದರು ಈಕೆ ಭರತನಾಟ್ಯ ಕಲಾವಿದೆಯಾಗಿ, ದುಬೈ, ಮಾಲ್ಮೀಮ್ಸ್, ಭೂತಾನ್ ಸೇರಿದಂತೆ ಅನೇಕ ದೇಶಗಳಲ್ಲಿ ಪ್ರದರ್ಶನ ನೀಡಿದ್ದಾರೆ. ಈಗಾಗಲೇ ಕೆಲವು ಕನ್ನಡ ಧಾರಾವಾಹಿ, ಕನ್ನಡ

ವಿಶ್ವಸುಂದರಿ ಪಟ್ಟ ಪಡೆದ ಕನ್ನಡತಿ | ಅಮೇರಿಕಾದಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ಶೃತಿ ಹೆಗಡೆ Read More »

ಅಂಬಿಕಾದ ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ

ಪುತ್ತೂರು: ನಗರದ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಇಂಡಸ್ಟ್ರೀಯಲ್ ಭೇಟಿ ಕಾರ್ಯಕ್ರಮ ನಡೆಯಿತು. ವಿಟ್ಲದ ಸಮೀಪದ ಬಲಿಪಗುಳಿಯಲ್ಲಿರುವ ’ಇಕೊ ಬ್ಲಿಸ್ಸ್’ ಅಡಿಕೆ ಹಾಳೆ ತಟ್ಟೆ ತಯಾರಿಕಾ ಕಾರ್ಖಾನೆಗೆ ಭೇಟಿ ನೀಡಿ ಕಾರ್ಯವೈಖರಿ ವೀಕ್ಷಿಸಿದರು. ಈ ಮೂಲಕ ಸಣ್ಣ ಕೈಗಾರಿಕೆಯ ನಿರ್ವಹಣೆಯನ್ನು ವಿದ್ಯಾರ್ಥಿಗಳು ಅರಿತುಕೊಂಡರು. ಉಪನ್ಯಾಸಕಿಯರಾದ ಅಕ್ಷತಾ ಆರ್, ಆಶಾದೇವಿ ಟಿ, ವಿದ್ಯಾ ಸರಸ್ವತಿ, ಉಪನ್ಯಾಸಕರಾದ ವಿಷ್ಣು ಪ್ರದೀಪ್, ಯತೀಶ್ ವಿದ್ಯಾರ್ಥಿಗಳನ್ನು ಮುನ್ನಡೆಸಿದರು.

ಅಂಬಿಕಾದ ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ Read More »

error: Content is protected !!
Scroll to Top