ಪುತ್ತೂರಿನಲ್ಲಿ ನೈಜ, ಹಿರಿಯ ಕಾಂಗ್ರೆಸ್ಸಿಗರನ್ನು ಕಡೆಗಣನೆ ಮಾಡಲಾಗುತ್ತಿದೆ | ಕಾಂಗ್ರೆಸ್ ಪುತ್ತೂರಿನಲ್ಲಿ ನೆಲಕಚ್ಚಲಿದೆಯಂತೆ | ಪತ್ರಿಕಾಗೋಷ್ಠಿಯಲ್ಲಿ ಪುರುಷೋತ್ತಮ ಬೂಡಿಯಾರ್
ಪುತ್ತೂರು: ಪುತ್ತೂರಿನ ಕಾಂಗ್ರೆಸ್‍ವಲಯದಲ್ಲಿ ನೈಜ ಕಾಂಗ್ರೆಸ್ಸಿಗರನ್ನು ಕಡೆಗಣನೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಈ ಬಾರಿ ಬ್ಲಾಕ್ ಅಧ್ಯಕ್ಷರನ್ನಾಗಿ ನೈಜ ಕಾಂಗ್ರೆಸ್ಸಿಗರನ್ನು ನೇಮಕ ಮಾಡಬೇಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪುರುಷೋತ್ತಮ ಬೂಡಿಯಾರ್ ಆಗ್ರಹಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪುತ್ತೂರಿನ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಶಾಸಕ ಅಶೋಕ್ ರೈ ಕೋಡಿಂಬಾಡಿ ಅವರನ್ನು ಹೊರತುಪಡಿಸಿ ಉಳಿದ ನಾಯಕರು ಕಾಂಗ್ರೆಸ್ ಪಕ್ಷವನ್ನ ಮೇಲೆತ್ತಲು ಪ್ರಯತ್ನಿಸುತ್ತಿಲ್ಲ. ಇದೇ ರೀತಿ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪುತ್ತೂರಿನಲ್ಲಿ ನೆಲಕಚ್ಚಲಿದೆ ಎಂದರು. ವಿಧಾನಸಭಾ […]










