ಇಂದು ಸೇವಾ ನಿವೃತ್ತಿಯಾದ ಕೆಎಸ್‍ ಆರ್ ಟಿಸಿ ಪುತ್ತೂರು ವಿಭಾಗದ ಚಾಲಕ ಪಲ್ಲೋಡಿ ನಾರಾಯಣ ಗೌಡ

ಪಂಜ : ಕೆ ಎಸ್ ಆರ್ ಟಿ ಸಿ ಪುತ್ತೂರು ವಿಭಾಗದ ಬಸ್ ಚಾಲಕ ಪಂಜದ ಪಲ್ಲೋಡಿ ನಾರಾಯಣ ಗೌಡ ರವರು ಜೂ.30 ಇಂದು ಸೇವೆಯಿಂದ ನಿವೃತ್ತಿಯಾದರು. ನಾರಾಯಣ ಗೌಡ ಅವರು ಶಿರಸಿ ವಿಭಾಗದಲ್ಲಿ 10 ವರ್ಷ, ಪುತ್ತೂರು ವಿಭಾಗದಲ್ಲಿ 24 ವರ್ಷ ಸೇರಿದಂತೆ ಒಟ್ಟು 34 ವರುಷ ಸೇವೆ ಸಲ್ಲಿಸಿದ್ದಾರೆ. ಅವರ ಪತ್ನಿ ಶೈಲಿಕಾ, ಪುತ್ರ ಪಂಜದ ಪಲ್ಲೋಡಿ ದುರ್ಗಾಪರಮೇಶ್ವರಿ ಫೂಲ್ಸ್ ನ ಮಾಲಕ, ಪಂಜ ಗ್ರಾಮ ಪಂಚಾಯತ್ ಸದಸ್ಯ ಲಿಖಿತ್ ಪಿ.ಎನ್., ಸೊಸೆ ತೃಪ್ತಿ […]

ಇಂದು ಸೇವಾ ನಿವೃತ್ತಿಯಾದ ಕೆಎಸ್‍ ಆರ್ ಟಿಸಿ ಪುತ್ತೂರು ವಿಭಾಗದ ಚಾಲಕ ಪಲ್ಲೋಡಿ ನಾರಾಯಣ ಗೌಡ Read More »

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃವಿಯೋಗ

ಕೋಟ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ,ಮಾಜಿ, ಸಚಿವ  ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಕೋಟತಟ್ಟು ಬಾರಿಕೆರೆ ನಿವಾಸಿ ಲಚ್ಚಿ ಪೂಜಾರಿ (97) ಭಾನುವಾರ ನಿಧನ ಹೊಂದಿದರು. ಇವರು ಉತ್ತಮ ಕೃಷಿಕರಾಗಿದ್ದರು .ಪೂಜಾರಿ ಅವರು ತನ್ನ ರಾಜಕೀಯ ಜೀವನದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸುವ ಪ್ರತಿ ಸಂದರ್ಭ ತಾಯಿ ವಾಸವಿರುವ ಮನೆಗೆ ತೆರಳಿ ಆಶೀರ್ವಾದ ಪಡೆಯುತ್ತಿದ್ದರು. ಚುನಾವಣೆಯಲ್ಲೂ ತಾಯಿಯೊಂದಿಗೆ ಆಗಮಿಸಿ ಮತ ಚಲಾಯಿಸುತ್ತಿದ್ದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಸಹಿತ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕುಂದಾಪುರ ಶಾಸಕ

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃವಿಯೋಗ Read More »

ಮಧುರಾ ಬೀಡಿ ಉದ್ಯಮಿ ಡಿ.ಎ.ಅಬ್ದುಲ್ ಖಾದರ್ ನಿಧನ

ಪುತ್ತೂರು: ಮಧುರಾ ಬೀಡಿ ಉದ್ಯಮಿ, ಮರಿಲ್ ನಿವಾಸಿ ಡಿ.ಎ ಅಬ್ದುಲ್ ಖಾದರ್ (81) ಇಂದು ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕೆಲವು ದಿನಗಳ ಹಿಂದೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರಳದಿದ್ದಾರೆ. ಮಧುರಾ ಗ್ರೂಪ್ ನ ಸ್ಥಾಪಕರಾಗಿರುವ ಡಿ ಎ ಅಬ್ದುಲ್ ಖಾದರ್ ಮಧುರಾ ಎಜ್ಯುಕೇಶನಲ್ ಟ್ರಸ್ಟ್ ನ ಟ್ರಸ್ಟಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಕೂರ್ನಡ್ಕ ಜುಮಾ ಮಸೀದಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ,ಪುತ್ರಿಯರು, ಇಬ್ಬರು ಗಂಡು

ಮಧುರಾ ಬೀಡಿ ಉದ್ಯಮಿ ಡಿ.ಎ.ಅಬ್ದುಲ್ ಖಾದರ್ ನಿಧನ Read More »

ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ನಿಧನ

ಬೆಂಗಳೂರು: ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (48) ಬೆಂಗಳೂರಿನಲ್ಲಿ ಇಂದು ನಿಧನರಾದರು. ಹಂಸ ಮೊಯ್ಲಿ ಅವರು ಭರತನಾಟ್ಯ, ನೃತ್ಯಗಾರ್ತಿ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು. ಅವರು ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಚಲನಚಿತ್ರ ಶೃಂಗಾರಂನಲ್ಲಿ ನಟಿಸಿದ್ದರು. ಪುತ್ರಿಯ ನಿಧನದ ಸುದ್ದಿ ತಿಳಿದಂತ ಮಾಜಿ ಸಿಎಂ ವೀರಪ್ಪ ಮೊಯ್ಲಿ ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕೆಲವು ಸಮಯಗಳಿಂದ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು ಎನ್ನಲಾಗಿದೆ. ಒರ್ವ ಅದ್ಭುತ ಕಲಾವಿದೆಯನ್ನು

ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ನಿಧನ Read More »

ರಾಮಕುಂಜದಲ್ಲಿ ಗೋಮಾಂಸ ಪತ್ತೆ : ಓರ್ವನ ಬಂಧನ

ಕಡಬ : ಗೋ,ಮಾಂಸ ಪತ್ತೆಯಾದ ಘಟನೆ ಕಡಬ ತಾಲೂಕಿನ ರಾಮಕುಂಜ ಆತೂರು ಸಮೀಪದ ಅಮೈ ಎಂಬಲ್ಲಿ ನಡೆದಿದೆ. ಆಟೋ ರಿಕ್ಷಾದಲ್ಲಿ ಸುಮಾರು 50 ಕೆಜಿ ಗೋ ಮಾಂಸ ಸಾಗುಸುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ಕಡಬ ಪೋಲಿಸರು ಬೆನ್ನಟ್ಟಿ ಹಿಡಿಯುವಲ್ಲಿ ಸಫಲರಾಗಿದ್ದಾರೆ. ಈ ಸಂಬಂಧ ಅಬ್ದುಲ್‌ ಎಂಬಾತನನ್ನು ಬಂಧಿಸಿ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಾಗಿದೆ. ಕಡಬ ಎಸ್ ಐ ಅಭಿನಂದನ್ ಎಂ. ಎಸ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ ಎಂದು ತಿಳಿದು ಬಂದಿದೆ.

ರಾಮಕುಂಜದಲ್ಲಿ ಗೋಮಾಂಸ ಪತ್ತೆ : ಓರ್ವನ ಬಂಧನ Read More »

ಉಳ್ಳಾಲ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ | ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ

ಉಳ್ಳಾಲ : ಕಡಲ್ಕೊರೆತ ಪ್ರದೇಶಕ್ಕೆ ಸಂಸದ ಬ್ರಿಜೇಶ್ ಚೌಟ ಭೇಟಿ ನೀಡಿ ,ಪರಿಶೀಲನೆ ಮಾಡಿದರು. ಉಳ್ಳಾಲ ಸೋಮೇಶ್ವರ ಸಮುದ್ರತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಉಚ್ಚಿಲ, ಮೊಗವೀರಪಟ್ನ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಕುರಿತು ಪರಿಶೀಲನೆ ನಡೆಸಲಾಯಿತು. ಸಮುದ್ರತೀರದ ಮನೆಮಂದಿ ಎಚ್ಚರಿಕೆಯಿಂದ ಇರುವಂತೆ ವಿನಂತಿ ಹಾಗೂ ಅಪಾಯದಂಚಿನಲ್ಲಿ ಇರುವ ಮನೆಮಂದಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕರಿಗಳಿಗೆ ಸೂಚಿಸಿದ್ದೇನೆ ಹಾಗೂ ಸಾಧ್ಯವಾಗುವ ಎಲ್ಲಾ‌ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಉಳ್ಳಾಲ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ | ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ Read More »

ಪತ್ನಿಗೆ ಚೂರಿಯಿಂದ ಇರಿದ ಪತಿ : ಪ್ರಕರಣ ದಾಖಲು

ಸುಳ್ಯ: ಪತ್ನಿಗೆ ಪತಿಯೇ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಜಾಲ್ಸೂರಿನಿಂದ ವರದಿಯಾಗಿದೆ. ಅಶ್ವಿನಿ ಕೆ ವಿ (25) ಪತಿಯಿಂದ ಚೂರಿ ಇರಿತಕ್ಕೊಳಗಾದವರು ಎಂದು ಗುರುತಿಸಲಾಗಿದೆ. ಆರೋಪಿ ಪತಿ ನವೀನ್ ಕುಮಾರ್ ಮತ್ತು ಅಶ್ವಿನಿ ಅವರು 6 ವರ್ಷಗಳ ಹಿಂದೆ ವಿವಾಹವಾಗಿದ್ದು, ಆ ಬಳಿಕ ಆತ ವಿನಃ ಕಾರಣ ಕಿರುಕುಳ ನೀಡುತ್ತಾ ಬಂದಿದ್ದು, ಪತ್ನಿ ಅಶ್ವಿನಿ ಕಳೆದ 4 ವರ್ಷಗಳಿಂದ ತನ್ನ ತವರು ಮನೆಯಾದ ಸುಳ್ಯ ತಾಲೂಕು ಜಾಲ್ಸೂರು ಗ್ರಾಮದ ವಿನೋಭನಗರ ಎಂಬಲ್ಲಿ ವಾಸವಾಗಿದ್ದಾರೆ. ಅಲ್ಲಿಗೂ ಬರುತ್ತಿದ್ದ ಪತಿ

ಪತ್ನಿಗೆ ಚೂರಿಯಿಂದ ಇರಿದ ಪತಿ : ಪ್ರಕರಣ ದಾಖಲು Read More »

ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿ ಸಭೆ

ಉಪ್ಪಿನಂಗಡಿ : ಸಮುದಾಯ ಆರೋಗ್ಯ ಕೇಂದ್ರಗಳು ಜನ ಸ್ನೇಹಿಯಾಗುವ ಮೂಲಕ ಜನರಿಗೆ ಹತ್ತಿರವಾಗಬೇಕು, ಚಿಕಿತ್ಸೆಗೆ ಬರುವ ಪ್ರತೀಯೊಬ್ಬ ನಾಗರಿಕನಿಗೂ ಉತ್ತಮ ಸೇವೆ ಸಿಗಬೇಕು. ಯಾವುದೇ ಲೋಪ ದೋಷಗಳು ಬಾರದಂತೆ ಎಚ್ಚರವಹಿಸಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಆರೋಗ್ಯ ಕೇಂದ್ರದಲ್ಲಿನ ಸಿಬಂದಿಗಳಿಗೆ ರಕ್ಷಾ ಸಮಿತಿಗೆ ಮಹತ್ತರವಾದ ಜವಾಬ್ದಾರಿ ಇದೆ. ಕೇಂದ್ರಕ್ಕೆ ಬರುವ ಪ್ರತೀಯೊಬ್ಬ ರೋಗಿಗೂ ಸಾಂತ್ವನ ದೊರೆಯಬೇಕು. ಸೌಲಭ್ಯ ಇಲ್ಲ, ವೈದ್ಯರಿರಲಿಲ್ಲ ಎಂಬ

ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿ ಸಭೆ Read More »

ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ಕೊಡಿಪ್ಪಾಡಿ ಗ್ರಾಮ ಸಾಹಿತ್ಯ ಸಂಭ್ರಮ | ಸಾಹಿತ್ಯ ವೇದಿಕೆಯಿಂದ ಗ್ರಾಮೀಣ ಪ್ರತಿಭೆಗಳಿಗೆ ಸಾಹಿತ್ಯ ಕ್ಷೇತ್ರದಲ್ಲಿ  ಬೆಳೆಯಲು ಗ್ರಾಮ ಸಾಹಿತ್ಯ ಸಂಭ್ರಮ ಪರಿಣಾಮಕಾರಿ- ಸೋಮಪ್ಪ ಪೂಜಾರಿ

ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕೊಡಿಪ್ಪಾಡಿ ಗ್ರಾಮ ಪಂಚಾಯತ್ ಸಹಯೋಗದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುದಾಬಿಯವರ ಪೋಷಕತ್ವದಲ್ಲಿ ಗ್ರಾಮ ಸಾಹಿತ್ಯ ಸಂಭ್ರಮದ 14ನೇ ಸರಣಿ ಕಾರ್ಯಕ್ರಮ ಕೊಡಿಪ್ಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಕೊಡಿಪ್ಪಾಡಿ ಗ್ರಾಪಂ ಅಧ್ಯಕ್ಷ ಸೋಮಪ್ಪ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮ ಮಟ್ಟದ ಸಾಹಿತಿಗಳನ್ನ ಗುರುತಿಸಿ, ಗ್ರಾಮೀಣ ಯುವ ಮತ್ತು ವಿದ್ಯಾರ್ಥಿಗಳಿಗೆ ಸಾಹಿತ್ಯದ

ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ಕೊಡಿಪ್ಪಾಡಿ ಗ್ರಾಮ ಸಾಹಿತ್ಯ ಸಂಭ್ರಮ | ಸಾಹಿತ್ಯ ವೇದಿಕೆಯಿಂದ ಗ್ರಾಮೀಣ ಪ್ರತಿಭೆಗಳಿಗೆ ಸಾಹಿತ್ಯ ಕ್ಷೇತ್ರದಲ್ಲಿ  ಬೆಳೆಯಲು ಗ್ರಾಮ ಸಾಹಿತ್ಯ ಸಂಭ್ರಮ ಪರಿಣಾಮಕಾರಿ- ಸೋಮಪ್ಪ ಪೂಜಾರಿ Read More »

ಸಾಮಾಜಿಕ ಧುರೀಣ, ಮಾಜಿ ಕ್ಯಾಂಪ್ಕೋ ಅಧ್ಯಕ್ಷ ಎಲ್‍.ಎನ್‍.ಕುಡೂರು ನಿಧನ

ವಿಟ್ಲ: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಎಲ್.ಎನ್.ಕೂಡೂರು (67) ಇಂದು ಮುಂಜಾನೆ ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಎಲ್‍.ಎನ್‍.ಕುಡೂರು ಅವರು ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ದೇಗುಲದ ಬ್ರಹ್ಮಕಲಶ ಸಂಭ್ರಮದ ರೂವಾರಿಯಾಗಿ ಜನಪ್ರಿಯ ಪಡೆದಿದ್ದರು. ಕ್ಯಾಂಪೊ ಅಧ್ಯಕ್ಷರಾಗಿ, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ವಿಟ್ಲ ಬಸವನಗುಡಿ ವಿಟ್ಟಲ್ ಜೇಸೀಸ್ ಎಜುಕೇಶನ್ ಸೊಸೈಟಿ ಅಧ್ಯಕ್ಷರಾಗಿ, ವಿಟ್ಟಲ ವಿದ್ಯಾ ಸಂಘದ ಸಂಚಾಲಕರಾಗಿ

ಸಾಮಾಜಿಕ ಧುರೀಣ, ಮಾಜಿ ಕ್ಯಾಂಪ್ಕೋ ಅಧ್ಯಕ್ಷ ಎಲ್‍.ಎನ್‍.ಕುಡೂರು ನಿಧನ Read More »

error: Content is protected !!
Scroll to Top