ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಘ ಅಗತ್ಯ | ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಮಾಣವಚನ ಸಮಾರಂಭದಲ್ಲಿ ಚಿದಾನಂದ ಬೈಲಾಡಿ
ಪುತ್ತೂರು: ಕಾಲೇಜಿಗೆ ಸಹಕಾರ ಕೊಡಲು ವಿದ್ಯಾರ್ಥಿ ಸಂಘ ಅತ್ಯಾವಶ್ಯಕ ಎಂಬುದರ ಜತೆಗೆ ಸಂಘಜೀವಿಯಾಗಿ ನಾವು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಸಾಧ್ಯ ಎನ್ನುವುದು ಗಮನಾರ್ಹ ವಿಚಾರ. ಹಾಗಾಗಿಯೇ ಕಾಲೇಜಿನ ಬೆಳವಣಿಗೆಗೆ ವಿದ್ಯಾರ್ಥಿ ಸಂಘ ಪೂರಕ ಎಂದು ನ್ಯಾಯವಾದಿ ಚಿದಾನಂದ ಬೈಲಾಡಿ ಹೇಳಿದರು. ಅವರು ನಗರದ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ, ವಿದ್ಯಾರ್ಥಿ ನಾಯಕರಿಗೆ ಶಾಲಾ ಧ್ವಜವನ್ನು ಹಸ್ತಾಂತರಿಸಿ ಮಾತನಾಡಿದರು. ಮಾನವನಿಗೆ ಸಮಸ್ಯೆಗಳಿರುವುದು ಸಾಮಾನ್ಯ. ಚಿತೆಗೆ […]










