ಮಣ್ಣು ಕುಸಿತ : ತಡೆಗೋಡೆ ನಿರ್ಮಾಣಕ್ಕೆ ಬೇಡಿಕೆ

ಉಬರಡ್ಕ: ಉಬರಡ್ಕ ಗ್ರಾಮ ಪಂಚಾಯತ್ ಕೋಡಿಯಡ್ಕ ಕಾಲನಿ ಸಮೀಪ ಮಣ್ಣಿನ ಕುಸಿತ ಉಂಟಾಗಿ ಮತ್ತಷ್ಟು ಮಣ್ಣು ಕುಸಿಯುವ ಸಾಧ್ಯತೆ ಇದೆ. ಇದರಿಂದಾಗಿ 4-5 ಮನೆಗಳಿಗೆ ಅಪಾಯದ ಸ್ಥಿತಿ ಉಂಟಾಗಿದೆ. ಇಲ್ಲಿ ತಡೆಗೋಡೆ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಇದ್ದು, ಪಂಚಾಯತ್ ವತಿಯಿಂದ ಪ್ಲಾಸ್ಟಿಕ್ ಹೊದಿಕೆ ಹಾಕಲಾಗಿದೆ. ಹಾಗೆಯೇ ಇನ್ನಷ್ಟು ಕಡೆ ಪ್ಲಾಸ್ಟಿಕ್ ಹೊದಿಕೆ ಹಾಕಬೇಕಾದ ಅಗತ್ಯತೆ ಇದೆ ಎಂದು ಗ್ರಾ.ಪಂ.ಸದಸ್ಯ ಹರೀಶ್ ರೈ ಉಬರಡ್ಕ ಹೇಳಿದ್ದಾರೆ.

ಮಣ್ಣು ಕುಸಿತ : ತಡೆಗೋಡೆ ನಿರ್ಮಾಣಕ್ಕೆ ಬೇಡಿಕೆ Read More »

ಭಾರೀ ಮಳೆಗೆ ಧರೆ ಕುಸಿತ | ಸಿಂಗಾಣಿಯಲ್ಲಿ ಅಪಾಯದಂಚಿನಲ್ಲಿರುವ ಹಲವು ಮನೆಗಳು

ಪುತ್ತೂರು: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಸಿಂಗಾಣಿಯಲ್ಲಿ ಅಪಾಯದಂಚಿನಲ್ಲಿರುವ ಹಲವಾರು ಮನೆಗಳು ಧರೆ ಕುಸಿತ ಭೀತಿಯಿಂದ ದಿನಕಳೆಯುವಂತಾಗಿದೆ. ಅಪಾಯದಂಚಿನಲ್ಲಿ ಗುಡ್ಡ ಪ್ರದೇಶಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ನಗರಸಭಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಳೆದ ಕೆಲವು ವರ್ಷಗಳ ಹಿಂದೆ ಈ ಭಾಗದಲ್ಲಿ ಕುಸಿತ ಉಂಟಾದ ಪರಿಣಾಮ ಹಲವು ಮನೆಯವರನ್ನು ಅಲ್ಲಿಂದ ಬೇರೆಡೆಗೆ ಕಳುಹಿಸಲಾಗಿತ್ತು. ಬಳಿಕ ಕುಸಿತ ನಿಲುಗಡೆಯಾಗಿತ್ತು. ಇದೀಗ ಈ ಮಳೆಗಾಲದಲ್ಲಿ ಮತ್ತೆ ಕುಸಿತದ ಭೀತಿ

ಭಾರೀ ಮಳೆಗೆ ಧರೆ ಕುಸಿತ | ಸಿಂಗಾಣಿಯಲ್ಲಿ ಅಪಾಯದಂಚಿನಲ್ಲಿರುವ ಹಲವು ಮನೆಗಳು Read More »

ಧರೆ ಕುಸಿದು ಮನೆಗೆ ಹಾನಿ : ಅರುಣ್ ಕುಮಾರ್ ಪುತ್ತಿಲ ಭೇಟಿ

ಪುತ್ತೂರು : ಬನ್ನೂರು ಜೈನರ ಗುರಿಯಲ್ಲಿ ಧರೆ ಕುಸಿದು ಮನೆ ಹಾನಿಗೊಂಡು ಘಟನಾ ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು. ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿ, ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ನಗರಸಭಾ ಸದಸ್ಯೆ ಗೌರಿ ಬನ್ನೂರು, ಪ್ರೇಮಾಲತಾ ನಂದಿಲ ಈ ವೇಳೆ  ಜೊತೆಗಿದ್ದರು.

ಧರೆ ಕುಸಿದು ಮನೆಗೆ ಹಾನಿ : ಅರುಣ್ ಕುಮಾರ್ ಪುತ್ತಿಲ ಭೇಟಿ Read More »

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ 5ನೇ ವರ್ಷಕ್ಕೆ ಪಾದಾರ್ಪಣೆ

ಆಲಂಕಾರು: ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ 4ನೇ ವರ್ಷ ಪೂರೈಸಿ 5ನೇ ವರ್ಷಕ್ಕೆ ಗುರುವಾರ ಪಾದಾರ್ಪಣೆ ಮಾಡಿತು. ಈ ಸಂದರ್ಭದಲ್ಲಿ ಬೆಳಿಗ್ಗೆ ಶಾಖೆಯಲ್ಲಿ ಗಣಹೋಮ ಹಾಗೂ ಲಕ್ಷ್ಮೀಪೂಜೆ ಜರಗಿತು. ಈ ಸಂದರ್ಭದಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ ಗೌಡ, ನಿರ್ದೇಶಕರಾದ ರಾಮಕೃಷ್ಣ ಗೌಡ ಕರ್ಮಲ, ಜಿನ್ನಪ್ಪ ಗೌಡ ಮಳುವೇಲು, ಸುದರ್ಶನ ಗೌಡ ಕೆ., ಸತೀಶ್ ಪಾಂಬಾರು, ಪ್ರವೀಣ್ ಕುಂಟ್ಯಾನ, ಸುಪ್ರೀತಾ ರವಿಚಂದ್ರ, ಸಲಹಾ

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ 5ನೇ ವರ್ಷಕ್ಕೆ ಪಾದಾರ್ಪಣೆ Read More »

ಹೃದಯಾಘಾತದಿಂದ ಯುವತಿ ನಿಲಿಕಾ ಪೊನ್ನಪ್ಪ ನಿಧನ

ಮಡಿಕೇರಿ : ಹೃದಯಾಘಾತದಿಂದ ಯುವತಿಯೊಬ್ಬರು ಮೃತಪಟ್ಟ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ. ನೆಲಜಿ ಗ್ರಾಮದ ಕಾಫಿ ಬೆಳೆಗಾರರಾದ ಪೊನ್ನಪ್ಪ ಎಂಬವರ ಪುತ್ರಿ ನಿಲಿಕಾ ಪೊನ್ನಪ್ಪ (24) ಮೃತಪಟ್ಟ ಯುವತಿ. ನಿಲಿಕಾ ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ಕಾಲೇಜು ಮತ್ತು ಬೋಧಕ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಕರ್ತವ್ಯಕ್ಕೆ ಹೊರಟಾಗ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ನಿಲಿಕಾ ವಾಪಸ್ ತನ್ನ ಕೋಣೆಗೆ ಹೋಗಿ ಹಾಸಿಗೆ ಮೇಲೆ ಕುಸಿದು ಬಿದ್ದಿದ್ದಾಳೆ.

ಹೃದಯಾಘಾತದಿಂದ ಯುವತಿ ನಿಲಿಕಾ ಪೊನ್ನಪ್ಪ ನಿಧನ Read More »

ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ | ವ್ಯವಹಾರಿಕವಾಗಿ ಶಿಕ್ಷಣ, ರಾಜಕೀಯ, ಧಾರ್ಮಿಕ, ಸಾಮಾಜಿಕವಾಗಿ ಸಮಾಜಕ್ಕೆ ಒಕ್ಕಲಿಗರ ಕೊಡುಗೆ ಬಹಳಷ್ಟಿದೆ : ತಹಶೀಲ್ದಾರ್ ಪುರಂದರ ಹೆಗ್ಡೆ | ಕೆಂಪೇಗೌಡರ ದೂರದೃಷ್ಟಿತ್ವದಿಂದ ಬೆಂಗಳೂರು ನಗರ ಸುಂದರವಾಗಿ ಬೆಳೆದಿದೆ : ಭಾಸ್ಕರ ಕೋಡಿಂಬಾಳ | ಕೆಂಪೇಗೌಡರ ಆಡಳಿತ ಸದಾ ಕಾಲಕ್ಕೆ ಮಾದರಿಯಾಗಲಿದೆ : ಸೀತಾರಾಮ ಕೇವಳ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಜಂಟಿ ಆಶ್ರಯದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ನಡೆಯಿತು. ಸಮಾಜಕ್ಕೆ ಒಕ್ಕಲಿಗರ ಕೊಡುಗೆ ಬಹಳಷ್ಟಿದೆ : ಪುತ್ತೂರು ತಹಶೀಲ್ದಾರ್ ಪುರಂದರ ಹೆಗ್ಡೆ ಜ್ಯೋತಿ ಪ್ರಜ್ವಲನೆ ಮಾಡಿ ಚಾಲನೆ ನೀಡಿ, ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾರ್ಯಕ್ರಮ ಮೈಲಿಗಲ್ಲಾಗಿದೆ. ಎಲ್ಲರೊಳು ಒಂದಾದಾಗ ಎಲ್ಲವನ್ನು ಸಾಧಿಸಲು ಸಾಧ್ಯ. ರಾಜ್ಯದ ಇತಿಹಾಸದಲ್ಲಿ ಬೆಂಗಳೂರನ್ನು ಕೇಂದ್ರವಾಗಿ

ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ | ವ್ಯವಹಾರಿಕವಾಗಿ ಶಿಕ್ಷಣ, ರಾಜಕೀಯ, ಧಾರ್ಮಿಕ, ಸಾಮಾಜಿಕವಾಗಿ ಸಮಾಜಕ್ಕೆ ಒಕ್ಕಲಿಗರ ಕೊಡುಗೆ ಬಹಳಷ್ಟಿದೆ : ತಹಶೀಲ್ದಾರ್ ಪುರಂದರ ಹೆಗ್ಡೆ | ಕೆಂಪೇಗೌಡರ ದೂರದೃಷ್ಟಿತ್ವದಿಂದ ಬೆಂಗಳೂರು ನಗರ ಸುಂದರವಾಗಿ ಬೆಳೆದಿದೆ : ಭಾಸ್ಕರ ಕೋಡಿಂಬಾಳ | ಕೆಂಪೇಗೌಡರ ಆಡಳಿತ ಸದಾ ಕಾಲಕ್ಕೆ ಮಾದರಿಯಾಗಲಿದೆ : ಸೀತಾರಾಮ ಕೇವಳ Read More »

ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಂಧನ

ಬೆಂಗಳೂರು : ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಕದ್ದ ಚಿನ್ನ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ತುರುವೇಕೆರೆ ಪೊಲೀಸರು ಬುಧವಾರ ಬೊಮ್ಮನಹಳ್ಳಿ ಬಾಬು ಅವರನ್ನು ಪ್ರೇಜರ್ ಟೌನ್ ನಿವಾಸದ ಬಳಿ ಬಂಧಿಸಿದ್ದಾರೆ. ಕಳ್ಳತನ ಮಾಡಿದ ಚಿನ್ನದ ಆಭರಣಗಳನ್ನು ಖರೀದಿ ಮಾಡಿದ ಕುರಿತು ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ, ತುರುವೇಕೆರೆ ಸಿಪಿಐ ಲೋಹಿತ್ ಬಿ.ಎನ್ ಹಾಗೂ ತಂಡದಿಂದ ಬಂಧಿಸಲಾಗಿದೆ.

ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಂಧನ Read More »

ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಆರೋಗ್ಯದಲ್ಲಿ ವ್ಯತ್ಯಯ : ಆಸ್ಪತ್ರೆಗೆ ದಾಖಲು

ನವದೆಹಲಿ: ಬಿಜಿಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರನ್ನು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್ ) ಆಸ್ಪತ್ರೆಗೆ ದಾಖಲಿಸಲಾಗಿದೆ. 96 ವರ್ಷದ ಅಡ್ವಾಣಿ ವಯೋಸಹಜ ಅವರು ಕಾಯಿಲೆಯಿಂದ ಬಳಲುತ್ತಿದ್ದಾರೆ. ಆದರೆ, ಅನಾರೋಗ್ಯದ ನಿಖರ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಜನವರಿಯಲ್ಲಿ ಮಾಜಿ ಉಪ ಪ್ರಧಾನಿಗೆ ದೇಶದ ಅತ್ಯುನ್ನತ ಗೌರವ ಭಾರತ ರತ್ನ ಪ್ರಶಸ್ತಿ ಪ್ರಕಟಿಸಲಾಗಿತ್ತು. ಮಾ.31ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯಲ್ಲಿರುವ ಬಿಜೆಪಿ

ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಆರೋಗ್ಯದಲ್ಲಿ ವ್ಯತ್ಯಯ : ಆಸ್ಪತ್ರೆಗೆ ದಾಖಲು Read More »

ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಮೃತ್ಯು

ಮಂಗಳೂರು : ಮಳೆಗೆ ವಿದ್ಯುತ್ ತಂತಿ ಕಡಿದು ಬಿದ್ದ ಹಿನ್ನಲೆ ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ ಘಟನೆ ಮಂಗಳೂರಿನ ರೊಸಾರಿಯೂ ಶಾಲಾ ಹಿಂಭಾಗದಲ್ಲಿ ನಡೆದಿದೆ. ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ, ಹಾಸನ ಮೂಲದ ರಾಜು ಪಾಲ್ಯ ವಿದ್ಯುತ್ ಶಾಕ್‍ ನಿಂದ ಮೃತಪಟ್ಟವರು. ಮಳೆಗೆ ತುಕ್ಕು ಹಿಡಿದ ವಿದ್ಯುತ್ ತಂತಿ ಹಠಾತ್ತನೆ ತುಂಡಾಗಿ ಆಟೋ ಚಾಲಕನ ಮೇಲೆ ಬಿದ್ದಿದ್ದು, ಆತನನ್ನು ರಕ್ಷಿಸಲು ಹೋದ ಇನ್ನೊಬ್ಬ ಆಟೋ ಚಾಲಕ ಕೂಡ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ

ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಮೃತ್ಯು Read More »

ಭಾರೀ ಮಳೆ | ಚೆಲ್ಯಡ್ಕ ಸೇತುವೆ ಮುಳುಗಡೆ

ಪುತ್ತೂರು: ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಾಲೂಕಿನ ಮುಳುಗು ಸೇತುವೆ ಎಂದು ಕರೆಯಲ್ಪಡುವ ಚೆಲ್ಯಡ್ಕ ಸೇತುವೆ ಮುಳುಗಡೆಯಾಗಿದೆ. ಬೆಟ್ಟಂಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಈ ಸೇತುವೆ ಪುತ್ತೂರು-ಪಾಣಾಜೆ ರಸ್ತೆಯ ದೇವಸ್ಯದಿಂದ ಚೆಲ್ಯಡ್ಕ ಮೂಲಕ ಸಂಪರ್ಕ ಕಲ್ಪಿಸುತ್ತದೆ. ಇದೀಗ ಮುಳುಗಡೆಯಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ಭಾರೀ ಮಳೆ | ಚೆಲ್ಯಡ್ಕ ಸೇತುವೆ ಮುಳುಗಡೆ Read More »

error: Content is protected !!
Scroll to Top