ಕಾರು – ಸ್ಕೂಟರ್ ಡಿಕ್ಕಿ

ಪಂಜ : ಕಾರು ಮತ್ತು ಸ್ಕೂಟರ್ ಡಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ಪಂಜ ಪೇಟೆಯಲ್ಲಿ ನಡೆದಿದೆ. ಸುಬ್ರಹ್ಮಣ್ಯ ಮಂಜೇಶ್ವರ  ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಪಂಜ ಕಡೆಗೆ ಬರುತ್ತಿದ್ದ ಕಾರು ಮತ್ತು ಕಡಬ ಕಡೆಗೆ ಹೋಗುತ್ತಿದ್ದ ಸ್ಕೂಟರ್ ಡಿಕ್ಕಿಯಾಗಿದೆ. ಕಾರಿನ ಮುಂಭಾಗ ಹಾಗೂ ಸ್ಕೂಟರ್ ಜಖಂಗೊಂಡಿದೆ. ಸ್ಕೂಟರ್ ಸವಾರ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಕಾರು – ಸ್ಕೂಟರ್ ಡಿಕ್ಕಿ Read More »

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಪುತ್ತೂರು: ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕ ಭಾಸ್ಕರ್ ಆಚಾರ್ ಹಿಂದಾರ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಜಯಮಾಲಾ ಮಾತನಾಡಿ, ಯೋಗವು ಮನುಷ್ಯನ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಪ್ರತಿನಿತ್ಯ ಯೋಗ ಮಾಡುವ ಮೂಲಕ ಆರೋಗ್ಯ ವೃದ್ಧಿಸಬಹುದು ಎಂದು ಹೇಳಿದರು. ಯೋಗ ಶಿಕ್ಷಕರುಗಳಾದ ನವೀನ್ ಕುಮಾರ್, ವೀಣಾ ವಿದ್ಯಾರ್ಥಿಗಳಿಗೆ ಯೋಗದ ವಿಶೇಷತೆಗಳನ್ನು ತಿಳಿಸಿ ಸಾಮೂಹಿಕ ಯೋಗಾಭ್ಯಾಸಗಳನ್ನು ನಡೆಸಿಕೊಟ್ಟರು.

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ವಿದ್ಯಾರ್ಥಿಗಳು ನೈಜ ನಾಯಕರಂತೆ ಮುನ್ನಡೆಯಬೇಕು | ಅಂಬಿಕಾ ಪ.ಪೂ ವಿದ್ಯಾಲಯದಲ್ಲಿ ವಿದ್ಯಾರ್ಥಿ ನಾಯಕರ ಪ್ರಮಾಣವಚನದಲ್ಲಿ ಸುಬೇದಾರ್ ರಮೇಶ್ ಬಾಬು

ಪುತ್ತೂರು: ವಿದ್ಯಾರ್ಥಿಗಳು ನಾಯಕತ್ವ ಬೆಳೆಸಿಕೊಂಡು ತಮ್ಮಿಂದಾದ ಉತ್ಕ್ರಷ್ಟ ಪ್ರಯತ್ನ ಮಾಡುವುದಲ್ಲದೆ ತಾವು ವಿದ್ಯಾಭ್ಯಾಸಗೈಯುವ ವಿದ್ಯಾದೇಗುಲದ ಒಳಿತಿಗಾಗಿಯೂ ಚಿಂತನೆ ನಡೆಸಬೇಕು ಎಂದು ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಸುಬೇದಾರ್ ರಮೇಶ್ ಬಾಬು ಪಿ. ಹೇಳಿದರು. ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಆಯೋಜಿಸಲಾದ ಕಾಲೇಜು ಸಂಸತ್ತಿನ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಜಾಪ್ರಭುತ್ವದಲ್ಲಿ ಹೇಗೆ ನಾಯಕರು ಮತ್ತು ಪ್ರಜೆಗಳ ಒಡನಾಟ, ಚರ್ಚೆ, ತೀರ್ಮಾನ ಕೈಗೊಳ್ಳುವ ಪರಿ ನಡೆಯುತ್ತದೆಯೋ ಅದೇ ರೀತಿ ವಿದ್ಯಾರ್ಥಿ ನಾಯಕರೂ ಮುನ್ನಡೆಯಬೇಕು ಎಂದು

ವಿದ್ಯಾರ್ಥಿಗಳು ನೈಜ ನಾಯಕರಂತೆ ಮುನ್ನಡೆಯಬೇಕು | ಅಂಬಿಕಾ ಪ.ಪೂ ವಿದ್ಯಾಲಯದಲ್ಲಿ ವಿದ್ಯಾರ್ಥಿ ನಾಯಕರ ಪ್ರಮಾಣವಚನದಲ್ಲಿ ಸುಬೇದಾರ್ ರಮೇಶ್ ಬಾಬು Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆ

ಪುತ್ತೂರು: ಯೋಗಾಭ್ಯಾಸ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಸಾಧನ. ಯೋಗದ ನಿರಂತರ ಅಭ್ಯಾಸದಿಂದ ಮನೋನಿಯಂತ್ರಣ, ಇಂದ್ರಿಯ ನಿಗ್ರಹ, ಅಧಿಕ ಕಾರ್ಯೋತ್ಸಾಹ ಮೊದಲಾದ ಸಾಮರ್ಥ್ಯಗಳನ್ನು ಬೆಳೆಸಿಕೊಳ್ಳಬಹುದು. ಪಾರಮಾರ್ಥಿಕ ಸತ್ಯದೆಡೆಗೆ, ಆತ್ಮದ ಅರಿವನ್ನು ಪಡೆಯುವುದರೆಡೆಗೆ ಸಾಗಲು ಮನುಷ್ಯರಿಗೆ ನೆರವಾಗುವಂತದ್ದೆಲ್ಲವೂ ಯೋಗವೇ ಎಂದು ಪುತ್ತೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಯೋಗಶಿಕ್ಷಕಿ ಶರಾವತಿ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿಶ್ವಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಯೋಗದ ಪ್ರಾಮುಖ್ಯತೆ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಮಾತನಾಡಿ, ,ವಾಸ್ತವವಾಗಿ ಯೋಗ ಎಂಬುದು

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆ Read More »

ಗುತ್ತಿಗೆದಾರರೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡ | ನಗ, ನಗದು ದರೋಡೆ

ಮಂಗಳೂರು: ಪಿಡಬ್ಲ್ಯುಡಿ ಗುತ್ತಿಗೆದಾರರೊಬ್ಬರ ಫಾರ್ಮ್ ಹೌಸ್ ಗೆ 9 ಮಂದಿಯ ದರೋಡೆಕೋರರ ತಂಡ ನುಗ್ಗಿ ದರೋಡೆಗೈದ ಘಟನೆ ಮಂಗಳೂರು ಹೊರವಲಯದ ಉಳಾಯಿಬೆಟ್ಟು ಎಂಬಲ್ಲಿ ನಡೆದಿದೆ. ಪದ್ಮನಾಭ ಕೋಟ್ಯಾನ್ ಎಂಬವರ ಫಾರ್ಮ್ ಹೌಸ್ ಗೆ ದರೋಡೆಕೋರರ ತಂಡ ನುಗ್ಗಿದ್ದು, ಪ್ಯಾಂಟ್ ಮತ್ತು ಶರ್ಟ್ ಧರಿಸಿದ್ದ 8-9 ಮಂದಿಯಿದ್ದ ತಂಡ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ನುಗ್ಗಿದೆ. ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದ ತಂಡದ ಸದಸ್ಯರು ಚೂರಿ ತೋರಿಸಿ ಮನೆಯವರನ್ನು ಹೆದರಿಸಿದ್ದಾರೆ. ಅಲ್ಲದೆ ಪದ್ಮನಾಭ ಕೋಟ್ಯಾನ್ ಮತ್ತವರ ಕುಟುಂಬದ

ಗುತ್ತಿಗೆದಾರರೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡ | ನಗ, ನಗದು ದರೋಡೆ Read More »

ಉಪ್ಪಿನಂಗಡಿಯಲ್ಲಿ ಬೆಂಕಿ ಅವಘಡ

ಉಪ್ಪಿನಂಗಡಿ : ಅಗ್ನಿ ಅವಘಡ ಸಂಭವಿಸಿದ ಘಟನೆ ಉಪ್ಪಿನಂಗಡಿ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಕಾಂಪ್ಲೆಕ್ಸ್ ನಲ್ಲಿರುವ ಮಳಿಗೆಗಳು ಹೊತ್ತಿ ಉರಿದ ಪರಿಣಾಮ ಫ್ಯಾನ್ಸಿಯೊಂದು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಸ್ಥಳದಲ್ಲಿರುವವರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರೂ ವೇಗವಾಗಿ ಹರಡಿ ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿ ಬಳಿಕ ಬೆಂಕಿ ನಂದಿಸಿದ್ದಾರೆ ಎನ್ನಲಾಗಿದೆ. ಸಂತ ಫಿಲೋಮಿನಾ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಪ್ಪಿನಂಗಡಿಯಲ್ಲಿ ಬೆಂಕಿ ಅವಘಡ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಎನ್‌ಸಿಸಿ ಆರ್ಮಿ ಮತ್ತು ನೇವಿ ಘಟಕಗಳು, ಎನ್‌ಎಸ್‌ಎಸ್‌ ಘಟಕಗಳು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಎನ್‌ ಸಿಸಿ ಘಟಕಗಳು ಮತ್ತು ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಎನ್‌ ಸಿ ಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ “ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ” ಎಂಬ ಆಶಯದೊಂದಿಗೆ ಕಾಲೇಜಿನ ಬೆಳ್ಳಿ ಹಬ್ಬ ಸಭಾಭವನದಲ್ಲಿ ಹತ್ತನೇ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಸಂತ ಫಿಲೋಮಿನಾ ಪದವಿ ಕಾಲೇಜಿನ ಎನ್‌ಸಿಸಿ ಆರ್ಮಿ ವಿಂಗ್ಅಧಿಕಾರಿ ಕ್ಯಾಪ್ಟನ್ ಜಾನ್ಸನ್ ಡೇವಿಡ್

ಸಂತ ಫಿಲೋಮಿನಾ ಕಾಲೇಜಿನಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ Read More »

ಜೂ.25 : ವಿದ್ಯುತ್ ನಿಲುಗಡೆ | ಎಲ್ಲೆಲ್ಲಿ ಕರೆಂಟಿಲ್ಲ

ಪುತ್ತೂರು: 110/33/11 ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ 110 ಕೆವಿ ಮತ್ತು 33 ಕೆವಿ ಲೈನ್ ನಲ್ಲಿ ಪಾಲನಾ ಕಾರ್ಯ ನಡೆಯುವುದರಿಂದ ಜೂ.25 ಮಂಗಳವಾರ ಬೆಳಗ್ಗೆ 10 ರಿಂದ ಸಂಜೆ 4 ಗಂಟೆ ತನಕ ವಿದ್ಯುತ್ ನಿಲುಗಡೆ ಮಾಡಲಾಗುವುದು. 33 ಕೆವಿ ಮಾಡಾವು-ಬೆಳ್ಳಾರೆ, ಮಾಡಾವು-ಬೆಳ್ಳಾರೆ-ಗುತ್ತಿಗಾರು ಹಾಗೂ ಮಾಡಾವು-ಕಾವು-ಸುಳ್ಯ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆವಿ ಮಾಡಾವು ಹಾಗೂ 33/11 ಕೆವಿ ಸುಳ್ಯ, ಕಾವು, ಬೆಳ್ಳಾರೆ, ಗುತ್ತಿಗಾರು ಹಾಗೂ ಸುಬ್ರಹ್ಮಣ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ

ಜೂ.25 : ವಿದ್ಯುತ್ ನಿಲುಗಡೆ | ಎಲ್ಲೆಲ್ಲಿ ಕರೆಂಟಿಲ್ಲ Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲಿ‌ ವಿಶ್ವಯೋಗ ದಿನಾಚರಣೆ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗ ದಿನಾಚರಣೆಯ ಕಾರ್ಯಕ್ರಮವನ್ನು 10ನೇ ತರಗತಿಯ ಕುಮಾರಿ ರಶ್ಮಿತಾ ಮತ್ತು ಜೀವಿತಾ ನಿರ್ವಹಿಸಿದರು. ಸುಮಾರು 300 ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ಪಾಲ್ಗೊ೦ಡರು ಹಾಗೂ ಈ ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ, ಪ್ರಾಂಶುಪಾಲರುಗಳು ಹಾಗೂ ಸಂಸ್ಥೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರಶ್ಮಿ ವಿದ್ಯಾಲಯದಲ್ಲಿ‌ ವಿಶ್ವಯೋಗ ದಿನಾಚರಣೆ Read More »

ಗ್ಯಾರಂಟಿ ಯೋಜನೆ ಸರಿದೂಗಿಸಲು ರಾಜ್ಯ ಸರಕಾರದಿಂದ‌ ಕಸರತ್ತು l ಆದಾಯ ಹೆಚ್ಚಿಕೆಗೆ ಸಲಹೆ ನೀಡಲಿದೆ ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳನ್ನು ಪೂರ್ಣ ಅವಧಿ ಮುಂದುವರಿಸಲು ಕಟಿಬದ್ಧವಾಗಿರುವ ಸರ್ಕಾರ, ಹಣ ಹೊಂದಿಸಲು ಬಹಳ ಶ್ರಮ ಪಡುತ್ತಿದೆ. ರಾಜ್ಯದಲ್ಲಿ ಹಣ ಸೋರಿಕೆ ತಡೆಯಲು, ಆದಾಯವನ್ನು ಗರಿಷ್ಠವಾಗಿ ಹೆಚ್ಚಿಸಲು ಇರುವ ಮಾರ್ಗೋಪಾಯಗಳನ್ನು ಅವಲೋಕಿಸುತ್ತಿದೆ. ಅದಕ್ಕಾಗಿ ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್ ಜೊತೆ ಸರ್ಕಾರ ಕೈ ಜೋಡಿಸಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಈಗ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗುವುದು ಸವಾಲಿನ ಕೆಲಸವಾಗಿದೆ. ಐದು ವರ್ಷ ಶತಾಯಗತಾಯ ಗ್ಯಾರಂಟಿ ಸ್ಕೀಮ್‌ಗಳನ್ನು ಮುಂದುವರಿಸಲು ಸಂಕಲ್ಪ ತೊಟ್ಟಿರುವ ಸಿಎಂ ಸಿದ್ದರಾಮಯ್ಯ, ಈ ಯೋಜನೆಗಳಿಗೆ

ಗ್ಯಾರಂಟಿ ಯೋಜನೆ ಸರಿದೂಗಿಸಲು ರಾಜ್ಯ ಸರಕಾರದಿಂದ‌ ಕಸರತ್ತು l ಆದಾಯ ಹೆಚ್ಚಿಕೆಗೆ ಸಲಹೆ ನೀಡಲಿದೆ ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್ Read More »

error: Content is protected !!
Scroll to Top