ಅಸ್ಟ್ರೇಲಿಯಾದಲ್ಲಿ ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್‌ಶಿಪ್ | ಪುತ್ತೂರು ಅಕ್ವೆಟಿಕ್ ಕ್ಲಬ್‌ನ ನಾಲ್ವರು ಈಜುಪಟುಗಳು ಆಯ್ಕೆ

ಪುತ್ತೂರು: ಆಸ್ಟ್ರೇಲಿಯಾದ ಕ್ಲೀನ್ ಬ್ಯಾಂಡ್ ನಲ್ಲಿ ಆಗಸ್ಟ್‌ನಲ್ಲಿ ನಡೆಯಲಿರುವ ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್ ಶಿಪ್‌ನಲ್ಲಿ ಪ್ರತ್ತೂರು ಅಕ್ವೆಟಿಕ್ ಕ್ಲಬ್ ನ ಈಜುಪಟುಗಳಾದ ಸ್ವೀಕೃತ್ ಆನಂದ್, ಅನ್ವಿತ್ ರೈ ಬಾರಿಕೆ, ದಿಗಂತ್ ವಿ.ಎಸ್. ಹಾಗೂ ಧನ್ವಿತ್ ರವರು ಭಾರತ ದೇಶದ ತಂಡವನ್ನು ಪ್ರತಿನಿಧಿಸಲಿದ್ದಾರೆ. ವಿಶಾಖಪಟ್ಟಣದಲ್ಲಿ ರಾಷ್ಟ್ರೀಯ ಲೈಫ್ ಸೇವಿಂಗ್ ಸೊಸೈಟಿಯಲ್ಲಿ ನಡೆದ ಭಾರತ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಭಾರತದ ತಂಡಕ್ಕೆ ಆಯ್ಕೆಯಾಗಿದ್ದಾರೆ. ಪುತ್ತೂರಿನ ಈಜು ಪಟುಗಳಾದ – ಸ್ವೀಕೃತ್ ಆನಂದ್ ಬೊಳುವಾರಿನ ಆಸ್ಟರ್ ಆನಂದ್ ಮತ್ತು […]

ಅಸ್ಟ್ರೇಲಿಯಾದಲ್ಲಿ ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್‌ಶಿಪ್ | ಪುತ್ತೂರು ಅಕ್ವೆಟಿಕ್ ಕ್ಲಬ್‌ನ ನಾಲ್ವರು ಈಜುಪಟುಗಳು ಆಯ್ಕೆ Read More »

ಇಂದು ಜಗತ್ತು ನೋಡಲಿದೆ ಸ್ಟ್ರಾಬೆರಿ ಬಣ್ಣದ ಚಂದ್ರನನ್ನು | ಇಂದು ವಿಶ್ವದ ಅತ್ಯಂತ ವಿಶೇಷ ದಿನ

ಜೂನ್ 21 ವಿಶ್ವದ ಅತ್ಯಂತ ವಿಶೇಷ ದಿನವೆಂದು ಈಗಾಗಲೇ ಸಾಬೀತಾಗಿದೆ. ಇದಕ್ಕೆ ರಾತ್ರಿ ವೇಳೆ ಆಕಾಶದಲ್ಲಿ ಅಪರೂಪದ ದೃಶ್ಯ ಗೋಚರಿಸುವುದೇ ಕಾರಣವಾಗಿದೆ. ಅದರಂತೆ ಇಂದು ಚಂದ್ರ ಸ್ಟ್ರಾಬೆರಿ ಬಣ್ಣದಲ್ಲಿ ಕಾಣಿಸಿಕೊಳ್ಳಲಿದ್ದಾನೆ. ಜ್ಯೋತಿಷ್ಯ ಮತ್ತು ಖಗೋಳಶಾಸ್ತ್ರದ ಪ್ರಕಾರ ಈ ದಿನಾಂಕದಂದು ಹಗಲು ದೀರ್ಘವಾಗಿರುತ್ತದೆ. ಈ ದಿನ ಜಗತ್ತು ರಾತ್ರಿ ಆಕಾಶದಲ್ಲಿ ಸ್ಟ್ರಾಬೆರಿ ಚಂದ್ರನನ್ನ ನೋಡುತ್ತದೆ. ಚಂದ್ರನು ತಿಳಿ ಗುಲಾಬಿ ಬಣ್ಣದಲ್ಲಿರುತ್ತಾನೆ ಮತ್ತು ಈ ದಿನದಂದು ಯುರೋಪ್ ಮತ್ತು ಅಮೇರಿಕಾದಲ್ಲಿ ಬೇಸಿಗೆ ಕಾಲ ಪ್ರಾರಂಭವಾಗುತ್ತದೆ. ಯುರೋಪ್ ಖಂಡದ ಉತ್ತರದ ದೇಶಗಳಲ್ಲಿ

ಇಂದು ಜಗತ್ತು ನೋಡಲಿದೆ ಸ್ಟ್ರಾಬೆರಿ ಬಣ್ಣದ ಚಂದ್ರನನ್ನು | ಇಂದು ವಿಶ್ವದ ಅತ್ಯಂತ ವಿಶೇಷ ದಿನ Read More »

ಹೊಟೇಲ್ ಸಪ್ಲಯರ್ ನಾಪತ್ತೆ : ಪ್ರಕರಣ ದಾಖಲು

ಪುತ್ತೂರು: ಇಲ್ಲಿಯ ಹೊಟೇಲ್ ವೊಂದರ ಸಪ್ಲಯರ್ ನಾಪತ್ತೆಯಾದ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತನ ಪತ್ನಿ ಪುತ್ತೂರು ನಗರ ಪೊಲಿಸ್ ಠಾಣೆಗೆ ದೂರು ನೀಡಿದ್ದಾರೆ. ನೆಲ್ಲಿಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡಿರುವ ಬೊಳುವಾರಿನ ಹೊಟೇಲ್ ಒಂದರಲ್ಲಿ ಸಪ್ಲಾಯರ್ ಆಗಿ ಕೆಲಸ ಮಾಡುತ್ತಿದ್ದ ಶಿವಪ್ಪ ಯಾನೆ ಶಿವಣ್ಣ (45) ನಾಪತ್ತೆಯಾದವರು. ಪತ್ನಿ ಗೀತಾ ಎಂಬವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ನನ್ನ ಗಂಡ ಶಿವಪ್ಪ ಯಾನೆ ಶಿವಣ್ಣ ಅವರು ಬೊಳುವಾರಿನ ಹೊಟೇಲ್‌ನಲ್ಲಿ ಸಪ್ಲಯರ್

ಹೊಟೇಲ್ ಸಪ್ಲಯರ್ ನಾಪತ್ತೆ : ಪ್ರಕರಣ ದಾಖಲು Read More »

ಯೋಗ ಮನುಷ್ಯನ ದಿನನಿತ್ಯದ ಭಾಗವಾಗಲಿ | ದರ್ಬೆ ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯಲ್ಲಿ ಭಗಿನಿ ವೆನಿಶಾ ಬಿ.ಎಸ್.

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಏರ್ಪಡಿಸಿದ ಸರಳ ಸಮಾರಂಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ.ಎಸ್. ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತೀಯ ವೈದ್ಯ ಪದ್ಧತಿಯಲ್ಲಿ ಆಯುರ್ವೇದಕ್ಕೆ ಮಹತ್ವದ ಸ್ಥಾನವಿದೆ. ಯೋಗದಿಂದ ದೈಹಿಕ ಮತ್ತು ಮಾನಸಿಕ ಸಮತೋಲನ ಸಾಧ್ಯವಿದ್ದು, ಯೋಗ ಇದ್ದರೆ ರೋಗವಿಲ್ಲ, ಯೋಗ ದಿನ ನಿತ್ಯದ ಭಾಗವಾಗಲಿ ಎಂದರು. ವೇದಿಕೆಯಲ್ಲಿ ಹಿರಿಯ ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್, ಕೋಸ್ಟಲ್ ಹೋಮ್ ಮಾಲಕ ಸಂದೇಶ್ ರೈ,

ಯೋಗ ಮನುಷ್ಯನ ದಿನನಿತ್ಯದ ಭಾಗವಾಗಲಿ | ದರ್ಬೆ ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯಲ್ಲಿ ಭಗಿನಿ ವೆನಿಶಾ ಬಿ.ಎಸ್. Read More »

ಇನ್ನು ಮುಂದೆ ಸಭೆ ಸಮಾರಂಭಗಳಲ್ಲಿ ಡಾ.ಬಿ.ಆರ್‍.ಅಂಬೇಡ್ಕರ್ ಭಾವಚಿತ್ರ ಕಡ್ಡಾಯ : ಸಚಿವ ಎಚ್‍.ಕೆ.ಪಾಟೀಲ್ ಹೇಳಿಕೆ

ಬೆಂಗಳೂರು : ಸ್ವಾತಂತ್ರೋತ್ಸವ ದಿನಾಚರಣೆ ಸಂದರ್ಭದಲ್ಲಿ ಸರಕಾರಿ ಶಾಲಾ-ಕಾಲೇಜು, ಸರಕಾರಿ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಮಹಾತ್ಮಾ ಗಾಂಧಿ ಜತೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಡಬೇಕು. ಹೀಗೆಂದು ಕಾನೂನು ಸಚಿವ ಎಚ್‍.ಕೆ.ಪಾಟೀಲ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ, ನವೆಂಬರ್ 26ರ ಸಂವಿಧಾನದ ದಿನಾಚರಣೆ ವೇಳೆ ರಾಜ್ಯದ ಎಲ್ಲ ಸರಕಾರಿ ಕಚೇರಿ, ಸರಕಾರಿ ಸ್ವಾಮ್ಯದ ಸಂಸ್ಥೆಗಳು ಹಾಗೂ

ಇನ್ನು ಮುಂದೆ ಸಭೆ ಸಮಾರಂಭಗಳಲ್ಲಿ ಡಾ.ಬಿ.ಆರ್‍.ಅಂಬೇಡ್ಕರ್ ಭಾವಚಿತ್ರ ಕಡ್ಡಾಯ : ಸಚಿವ ಎಚ್‍.ಕೆ.ಪಾಟೀಲ್ ಹೇಳಿಕೆ Read More »

ಹಿಜಾಬ್ ನಿಷೇಧಿಸಿದ ಮುಸ್ಲಿಂ ರಾಷ್ಟ್ರ ತಜಕಿಸ್ಥಾನ

ಭಾರತದಲ್ಲಿ ಒಂದು ಸಮುದಾಯದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಹೋರಾಟ ಮಾಡುತ್ತಿದ್ದಾರೆ ಆದರೆ ಪೂರ್ಣ ಮುಸ್ಲಿಂ ರಾಷ್ಟ್ರವಾಗಿರುವ ತಜಕಿಸ್ಥಾನ ಸಾರ್ವಜನಿಕ ಸ್ಥಳಗಳಲ್ಲಿ ಹಿಜಾಬ್ ನಿಷೇಧಿಸಲು ಆದೇಶ ಹೊರಡಿಸಿದೆ. ತಜಕಿಸ್ಥಾನ ಮುಸ್ಲಿಂ ರಾಷ್ಟ್ರವಾಗಿದ್ದರೂ ಸಾಂವಿಧಾನಿಕವಾಗಿ ಜಾತ್ಯಾತೀತ ರಾಷ್ಟ್ರವಾಗಿದೆ. ಇಲ್ಲಿನ ಸಂಸತ್ ಹಿಜಾಬ್ ಅನ್ನು ನಿಷೇಧಿಸುವ ಮಸೂದೆಯನ್ನು ಅನುಮೋದಿಸಿದೆ. ಶಾಲೆಗಳಲ್ಲಿ ಮಾತ್ರವಲ್ಲ ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲೂ ಹಿಜಾಬ್‌ ಧರಿಸುವುದನ್ನು ನಿಷೇಧಿಸಲಾಗಿದೆ. ಗಡ್ಡ ಬೆಳೆಸುವುದನ್ನೂ ಕೂಡ ತಜಿಕಿಸ್ಥಾನದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ದೇಶದಲ್ಲಿ ಶೇ. 95ರಷ್ಟು ಮುಸ್ಲಿಂ ಜನರಿದ್ದಾರೆ, ಆದರೆ

ಹಿಜಾಬ್ ನಿಷೇಧಿಸಿದ ಮುಸ್ಲಿಂ ರಾಷ್ಟ್ರ ತಜಕಿಸ್ಥಾನ Read More »

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ | ಇ ಮೇಲ್ ನಲ್ಲಿ ಬೆದರಿಕೆ ಸಂದೇಶ ರವಾನೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೂನ್18 ರಂದು ಮಧ್ಯಾಹ್ನ 12.43 ಕ್ಕೆ ವಿಮಾನ ನಿಲ್ದಾಣದ ಇಮೇಲ್ ಐಡಿಗಳಿಗೆ ಅಪರಿಚಿತರು, ಏರ್ ಪೋರ್ಟ್ ನಲ್ಲಿ ಬಾಂಬ್ ಇಟ್ಟಿದ್ದು ಕೆಲವೇ ಕ್ಷಣದಲ್ಲಿ ಸ್ಪೋಟಗೊಳ್ಳಲಿದೆ ಎನ್ನುವ ಸಂದೇಶ ಕಳಿಸಿದ್ದಾರೆ. ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಸೆಕ್ಯುರಿಟಿ ಅಧಿಕಾರಿ ಮೋನಿಷ್ ವಿಮಾನ ನಿಲ್ದಾಣದ ಒಳಗಡೆ ಮತ್ತು ಆವರಣದಲ್ಲಿ ತಪಾಸಣೆ ನಡೆಸಿ, ಯಾವುದೇ ತೊಂದರೆ ಇಲ್ಲವೆಂದು ಖಚಿತಪಡಿಸಿದ ಬಳಿಕ ಬಜ್ಪೆ ಠಾಣೆಗೆ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ | ಇ ಮೇಲ್ ನಲ್ಲಿ ಬೆದರಿಕೆ ಸಂದೇಶ ರವಾನೆ Read More »

ಜಮ್ಮು-ಕಾಶ್ಮೀರದ ದಾಲ್ ಸರೋವರದಲ್ಲಿ ಪ್ರಧಾನಿ ಮೋದಿಯಿಂದ ಯೋಗ ಪ್ರದರ್ಶನ | 7 ಸಾವಿರ ಮಂದಿ ಪಾಲ್ಗೊಳ್ಳುವ ಮೂಲಕ ಯೋಗ ಪ್ರದರ್ಶನ

ಜಮ್ಮು-ಕಾಶ್ಮೀರ: 10ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ‌ಜಮ್ಮು ಮತ್ತು ಕಾಶ್ಮೀರದ ದಾಲ್‌ ಸರೋವರ ತೀರದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶಿಸಿದರು. ಈ ಬಾರಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ವಸ್ತು ವಿಷಯದಡಿ ಆಚರಿಸಲಾಗುತ್ತಿದ್ದು, ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಉದ್ದೇಶವಾಗಿದೆ. 3ನೇ ಬಾರಿಗೆ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಜಮ್ಮು

ಜಮ್ಮು-ಕಾಶ್ಮೀರದ ದಾಲ್ ಸರೋವರದಲ್ಲಿ ಪ್ರಧಾನಿ ಮೋದಿಯಿಂದ ಯೋಗ ಪ್ರದರ್ಶನ | 7 ಸಾವಿರ ಮಂದಿ ಪಾಲ್ಗೊಳ್ಳುವ ಮೂಲಕ ಯೋಗ ಪ್ರದರ್ಶನ Read More »

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ನ 2024- 25 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರು- ರಾಜೇಶ್ ಎನ್ ಎಸ್, ಕಾರ್ಯದರ್ಶಿ- ಕೃಷ್ಣ ಕುಮಾರ ಬಾಳುಗೋಡು, ಖಜಾಂಚಿ-ಮೋಹನ್ ದಾಸ್ ರೈ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ನ 2024- 25 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಜೂ.20 ರಂದು ನಡೆಯಿತು. ಅಧ್ಯಕ್ಷರಾಗಿ ರಾಜೇಶ್ ಎನ್ ಎಸ್., ಕಾರ್ಯದರ್ಶಿಯಾಗಿ ಕೃಷ್ಣ ಕುಮಾರ ಬಾಳುಗೋಡು, ಖಜಾಂಚಿಯಾಗಿ ಮೋಹನ್ ದಾಸ್ ರೈ ಆಯ್ಕೆಯಾಗಿದ್ದಾರೆ. ಜೂ.20 ರಂದು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಉಪಾಧ್ಯಕ್ಷರುಗಳಾಗಿ ಸತೀಶ ಕೂಜುಗೋಡು, ವಿಷ್ಣು ಪಾತಿಕಲ್ಲು, ಪಿ ಆರ್ ಓ ಆಗಿ ರೇಗನ್ ಶೆಟ್ಟಿಯಡ್ಕ, ನಿಕಟ ಪೂರ್ವ ಅಧ್ಯಕ್ಷರಾಗಿ ರಾಮಚಂದ್ರ ಪಳಂಗಾಯ, ಮುಖ್ಯ ಆಡಳಿತ ಅಧಿಕಾರಿಯಾಗಿ ರಂಗಯ್ಯ ಶೆಟ್ಟಿಗಾರ್, ಮೆಂಬರ್

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ನ 2024- 25 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರು- ರಾಜೇಶ್ ಎನ್ ಎಸ್, ಕಾರ್ಯದರ್ಶಿ- ಕೃಷ್ಣ ಕುಮಾರ ಬಾಳುಗೋಡು, ಖಜಾಂಚಿ-ಮೋಹನ್ ದಾಸ್ ರೈ Read More »

ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಬಸಂತಿದೇವಿ ಮೃತ್ಯು

ನೆಲ್ಯಾಡಿ: ಆಕಸ್ಮಿಕವಾಗಿ ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ನೇಪಾಳಿ ಮೂಲದ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಗ್ರಾಮದ ಮುಂಡೂರುಪಳಿಕೆ ಶಾಲೆಯ ಬಳಿ ನಿವಾಸಿ ಚಕ್ರ ಬಹಾದ್ದೂರು ಮಲ್ಲ ಎಂಬವರ ಪತ್ನಿ ಬಸಂತಿದೇವಿ (44) ಮೃತಪಟ್ಟವರು. ಜೂ. 11ರಂದು ಸಂಜೆ ಅಡುಗೆಗಾಗಿ ಸೌದೆ ಉರಿಸಲು ಮನೆಯಲ್ಲಿ ತೋಟದ ಕೆಲಸಕ್ಕೆ ತಂದಿಟ್ಟಿದ್ದ ಪೆಟ್ರೋಲ್ ಬಳಸಿದಾಗ ಆಕಸ್ಮಿಕವಾಗಿ ಒಮ್ಮೆಲೇ ಬೆಂಕಿಯು ಬಸಂತಿದೇವಿ ಧರಿಸಿದ್ದ ಬಟ್ಟೆಗೆ ತಗಲಿ ಮೈಯೆಲ್ಲ ತೀವ್ರ ಸುಟ್ಟಗಾಯ ಉಂಟಾಗಿತ್ತು.

ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಬಸಂತಿದೇವಿ ಮೃತ್ಯು Read More »

error: Content is protected !!
Scroll to Top