ಕಣ್ಣು ಗಳ ದಾನ ಘೋಷಣೆ ಮಾಡಿದ ಎಂ . ಬಿ. ಭಾನುಪ್ರಕಾಶ್ | ಸಾವಿನಲ್ಲೂ ಸಾರ್ಥಕತೆ

ಶಿವಮೊಗ್ಗ: ಹೃದಯಾಘಾತದಿಂದ ಹಠಾತ್ ನಿಧನರಾದ ಬಿಜೆಪಿ ಹಿರಿಯ ನಾಯಕ ಎಂ.ಬಿ.ಭಾನುಪ್ರಕಾಶ್ ಅವರ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದರು. ಭಾನುಪ್ರಕಾಶ್ ಅವರ ಸ್ವಗ್ರಾಮ ಮತ್ತೂರಿಗೆ ಆಗಮಿಸಿದ ಶಂಕರ ಕಣ್ಣಿನ ಆಸ್ಪತ್ರೆ ವೈದ್ಯರ ತಂಡ ಕಣ್ಣುಗಳನ್ನು ಪಡೆದುಕೊಂಡರು. ಬಳಿಕ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಇದಕ್ಕೂ ಮೊದಲು ಮತ್ತೂರು ಗ್ರಾಮದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಅನೇಕ ಗಣ್ಯರು, ನಾಗರೀಕರು ಪಾರ್ಥಿವ ಶರೀರದ ಅಂತಿಮ ದರುಶನ ಪಡೆದರು.

ಕಣ್ಣು ಗಳ ದಾನ ಘೋಷಣೆ ಮಾಡಿದ ಎಂ . ಬಿ. ಭಾನುಪ್ರಕಾಶ್ | ಸಾವಿನಲ್ಲೂ ಸಾರ್ಥಕತೆ Read More »

ಕೇಂದ್ರದಿಂದ ರಾಜ್ಯಕ್ಕೆ ಭರ್ಜರಿ ಗಿಫ್ಟ್ : ಸಚಿವ ಸೋಮಣ್ಣ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ದಶಕಗಳಿಂದ ವಿಳಂಬವಾಗಿರುವ ಸುಮಾರು 1264 ಕಿಲೋ ಮೀಟರ್ ಒಳಗೊಂಡ 9 ರೈಲ್ವೆ ಯೋಜನೆ 2025 -26ರ ಅಂತ್ಯದೊಳಗೆ ಪೂರ್ಣಗೊಳಿಸುವುದಾಗಿ ರಾಜ್ಯ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ರೈಲ್ವೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ನೈರುತ್ಯ ರೈಲ್ವೆ ಅಧಿಕಾರಿಗಳೊಂದಿಗೆ ರಾಜ್ಯದ ರೈಲ್ವೆ ಯೋಜನೆಗಳ ಸ್ಥಿತಿ ಗತಿ ಕುರಿತಾಗಿ ಸಭೆ ನಡೆಸಿದ ಸಚಿವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ರಾಜ್ಯದಲ್ಲಿ 30 ವರ್ಷದಿಂದ ಬಾಕಿ ಉಳಿದ 9 ರೈಲ್ವೆ ಯೋಜನೆಗಳನ್ನು

ಕೇಂದ್ರದಿಂದ ರಾಜ್ಯಕ್ಕೆ ಭರ್ಜರಿ ಗಿಫ್ಟ್ : ಸಚಿವ ಸೋಮಣ್ಣ ಘೋಷಣೆ Read More »

ಅಗ್ನಿ ಅವಘಡ : ಫ್ರಿಡ್ಜ್ ಸ್ಪೋಟ

ಪುತ್ತೂರು : ಜಿಡೆಕಲ್ಲು ಕಾಲೇಜು ಬಳಿ ಇರುವ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಎಂಬವರ ಮನೆಯಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಲ್ಲಿ ಮನೆ ಹಾನಿಗೊಂಡಿದೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದು, ಬಳಿಕ ಅಗ್ನಿಶಾಮಕದಳದವರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ.

ಅಗ್ನಿ ಅವಘಡ : ಫ್ರಿಡ್ಜ್ ಸ್ಪೋಟ Read More »

ಮತ್ತೊಂದು ಸಂಕಷ್ಟದಲ್ಲಿ ದರ್ಶನ್ l ಅರಣ್ಯ ಇಲಾಖೆಯಿಂದ‌ ಪ್ರಕರಣ‌ ದಾಖಲು l ದರ್ಶನ್ ಪತ್ನಿಗೂ ಸಂಕಷ್ಟ

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ದರ್ಶನ್ ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ದರ್ಶನ್ ಜತೆಗೆ ಪತ್ನಿ ವಿಜಯಲಕ್ಷ್ಮೀಗೂ ಈ ಕಂಟಕ ಕಾಡಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎ2 ಆರೋಪಿಯಾಗಿದ್ದರೆ, ಗೆಳತಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದಾರೆ. ಆದರೆ, ಈ ಪ್ರಕರಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಎ1 ಆರೋಪಿಯಾಗಿದ್ದು, ದರ್ಶನ್ ಎ3 ಆರೋಪಿಯಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾದ ಬಳಿಕ ದರ್ಶನ್ ಗೆ ಸಂಬಂಧಿಸಿದ ಸಾಕಷ್ಟು ಪ್ರಕರಣಗಳು ಹೊರಬರುತ್ತಿದ್ದು,

ಮತ್ತೊಂದು ಸಂಕಷ್ಟದಲ್ಲಿ ದರ್ಶನ್ l ಅರಣ್ಯ ಇಲಾಖೆಯಿಂದ‌ ಪ್ರಕರಣ‌ ದಾಖಲು l ದರ್ಶನ್ ಪತ್ನಿಗೂ ಸಂಕಷ್ಟ Read More »

ನೀಟ್ ಹಗರಣ ವಿದ್ಯಾರ್ಥಿಗಳ ಪಾಲಿಗೆ ಬಹು ದೊಡ್ಡ ದುರಂತವಾಗಿದೆ : ಅಶೋಕ್ ಕುಮಾರ್ ರೈ | ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕರಿಂದ ಗೌರವ ಸನ್ಮಾನ

ಪುತ್ತೂರು: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಹೆಜ್ಜೆ ಇಡುವಲ್ಲಿ ನಡೆಯುವ ನೀಟ್ ಪರೀಕ್ಷೆಯಲ್ಲೇ ಹಗರಣ ನಡೆದಿದೆ ಎಂದಾದರೆ ಇದು ವಿದ್ಯಾರ್ಥಿ ಹಾಗೂ ಪೋಷಕರ ಪಾಲಿಗೆ ಬಹು ದೊಡ್ಡ ದುರಂತವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ನೀಟ್, ಕೆಸಿಇಟಿ ಮತ್ತು ಜೆಇಇ ಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ತಮ್ಮ ಕಚೇರಿಯಲ್ಲಿ ಸೋಮವಾರ ಗೌರವಿಸಿ,

ನೀಟ್ ಹಗರಣ ವಿದ್ಯಾರ್ಥಿಗಳ ಪಾಲಿಗೆ ಬಹು ದೊಡ್ಡ ದುರಂತವಾಗಿದೆ : ಅಶೋಕ್ ಕುಮಾರ್ ರೈ | ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕರಿಂದ ಗೌರವ ಸನ್ಮಾನ Read More »

ರೆಣುಕಾಸ್ವಾಮಿ ಕ್ಷಮೆ ಕೇಳಿದ ಚಿತ್ರೀಕರಣರದ ಮೊಬೈಲ್ ಗಾಗಿ ಸುಮನಹಳ್ಳಿ ರಾಜಕಾಲುವೆಯಲ್ಲಿ ಶೋಧ

ಬೆಂಗಳೂರು: ಕೊಲೆಯಾದ ರೇಣುಕಸ್ವಾಮಿ ಮೊಬೈಲ್ ಎಸೆದಿದ್ದ ಸುಮನಹಳ್ಳಿ ರಾಜಕಾಲುವೆಯಲ್ಲಿ ಮೊಬೈಲ್‌ಗಾಗಿ ಪೊಲೀಸರು ಸೋಮವಾರ ತೀವ್ರ ಶೋಧ ನಡೆಸಿದರು. ಸ್ಥಳಕ್ಕೆ ಹತ್ತಕ್ಕೂ ಹೆಚ್ಚು ಪೌರ ಕಾರ್ಮಿಕರನ್ನು ಕರೆಸಿ ರಾಜಕಾಲುವೆಯಲ್ಲಿ ಹುಡುಕಾಟ ನಡೆಸಲಾಯಿತು. ರಾಜಕಾಲುವೆಗೆ ಇಳಿದು ಕಾರ್ಮಿಕರು ಎರಡು ತಾಸು, 200 ಮೀಟರ್ ಉದ್ದಕ್ಕೂ ಶೋಧಿಸಿದರು. ಆದರೆ, ಮೊಬೈಲ್ ಪತ್ತೆಯಾಗದ ಕಾರಣ ಶೋಧ ಕಾರ್ಯ ಸ್ಥಗಿತ ಮಾಡಲಾಯಿತು. ಪಟ್ಟಣಗೆರೆಯ ಶೆಡ್‌ನಲ್ಲಿ ಜೂನ್ 9ರ ರಾತ್ರಿ ರೇಣುಕಸ್ವಾಮಿ ಕೊಲೆ ಮಾಡಿದ ಬಳಿಕ ಆರೋಪಿಗಳು ಮುಂಜಾನೆ ಸುಮಾರು 3.30ಕ್ಕೆ ಸ್ಕಾರ್ಪಿಯೋ ಕಾರಿನಲ್ಲಿ ಮೃತದೇಹವನ್ನು

ರೆಣುಕಾಸ್ವಾಮಿ ಕ್ಷಮೆ ಕೇಳಿದ ಚಿತ್ರೀಕರಣರದ ಮೊಬೈಲ್ ಗಾಗಿ ಸುಮನಹಳ್ಳಿ ರಾಜಕಾಲುವೆಯಲ್ಲಿ ಶೋಧ Read More »

ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು | ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

ಬೆಂಗಳೂರು: ಸೆಲೆಬ್ರಿಟಿಗಳು ದೇವರಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು. ಹೀಗೆಂದು ಕಿಚ್ಚ ಸುದೀಪ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಳಿ ಬದುಕ ಬೇಕಿದ್ದ ರೇಣುಕಾಸ್ವಾಮಿ ಕೊಲೆಯಾಗಿದ್ದಾರೆ. ಸತ್ಯ ಹೊರತರಲು ಮಾಧ್ಯಮಗಳು, ಪೊಲೀಸರು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯಸಿಗಬೇಕು. ಅವರ ಪತ್ನಿ, ಹುಟ್ಟಬೇಕಿರುವ ಮಗುವಿಗೆ ನ್ಯಾಯ ಸಿಗಬೇಕು. ಜನರಿಗೆ ಕಾನೂನಿನ ಮೇಲೆ ನಂಬಿಕೆ ಬರುವಂತಹ ಕೆಲಸವಾಗಬೇಕು ಎಂದು ಹೇಳಿದ್ದಾರೆ. ಸೆಲೆಬ್ರಿಟಿಗಳು ತಪ್ಪೇ ಮಾಡೋದಿಲ್ಲ ಎಂಬ ನಂಬಿಕೆ ಬೇಡ. ಅಂಧಭಿಮಾನ

ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು | ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್ Read More »

ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೀಡಾದ ವ್ಯಕ್ತಿಯ ಗುರುತು ಪತ್ತೆ !

ಸುಳ್ಯ: ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೀಡಾದ ವ್ಯಕ್ತಿಯ ಗುರುತು ಪತ್ತೆಯಾಗಿದೆ. ಕೊಡಗು ವಿರಾಜಪೇಟೆ ಮೂಲದ ವಸಂತ ಮೃತಪಟ್ಟವರೆಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಕಾಂತಮಂಗಲ ಶಾಲಾ ಬಳಿಯಲ್ಲಿ ತಲೆಗೆ ಕಲ್ಲು ಹೊತ್ತು ಹಾಕಿ ಕೊಲೆಯಾದ ರೀತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿತ್ತು. ಪೊಲೀಸರು ಸ್ಥಳಕ್ಕೆ ಬಂದು ಮಹಜರು ನಡೆಸಿ ತನಿಖೆ ಆರಂಭಿಸಿದ್ದರು. ಪೊಲೀಸರು ನಡೆಸಿದ ತನಿಖೆಯಿಂದ ಮೃತಪಟ್ಟ ವ್ಯಕ್ತಿ ವಸಂತ ಎಂದು ಗುರುತಿಸಲಾಗಿದ್ದು ಈತ ಕುದ್ರೆಪಾಯದಿಂದ ಮದುವೆಯಾಗಿದ್ದ ಎಂದು ಹೇಳಲಾಗುತ್ತಿದೆ. ಹೆಚ್ಚಿನ ತನಿಖೆ ಮುಂದುವರಿದಿದೆ.

ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೀಡಾದ ವ್ಯಕ್ತಿಯ ಗುರುತು ಪತ್ತೆ ! Read More »

ಅಂಬಿಕಾ ಸಿಬಿಎಸ್‌ಇ ಸಂಸ್ಥೆಯಲ್ಲಿ ವಿದ್ಯಾರ್ಥಿ ನಾಯಕರ ಪ್ರಮಾಣವಚನ

ಪುತ್ತೂರು: ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವದ ಗುಣವಿದ್ದರೆ ಅದು ಅವರ ಮುಂದಿನ ಜೀವನಕ್ಕೆ ಪ್ರೇರಣೆ ನೀಡುತ್ತದೆ. ಹಾಗಾಗಿ ಉತ್ತಮ ನಾಯಕತ್ವದ ಲಕ್ಷಣ ಮಕ್ಕಳಲ್ಲಿ ಮೂಡಿ ಬರಬೇಕು. ಸಂವಿಧಾನದ ಮೌಲ್ಯ ಉಳಿದುಕೊಳ್ಳಬೇಕಾದರೆ ಸರಿಯಾದ ವಿರೋಧ ಪಕ್ಷದ ಅಗತ್ಯವಿದೆ. ಅಂತಹ ಕಲ್ಪನೆ ಎಳೆಯ ವಯಸ್ಸಿನಿಂದಲೇ ಮೂಡಿಬರಬೇಕು ಎಂದು ನ್ಯಾಯವಾದಿ ಮಹೇಶ್ ಕಜೆ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಆಯೋಜಿಸಲಾದ ಶಾಲಾ ಸಂಸತ್ತಿನ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ

ಅಂಬಿಕಾ ಸಿಬಿಎಸ್‌ಇ ಸಂಸ್ಥೆಯಲ್ಲಿ ವಿದ್ಯಾರ್ಥಿ ನಾಯಕರ ಪ್ರಮಾಣವಚನ Read More »

ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದಿಂದ ಸಂಸದ ಕ್ಯಾ.ಬ್ರಿಜೇಶ್ ಚೌಟರಿಗೆ ಗೌರವಾರ್ಪಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಡಿ.ಬಿ. ಹಾಗೂ ಸಂಘದ ಪದಾಧಿಕಾರಿಗಳಿಂದ ದಕ್ಷಿಣ ಕನ್ನಡ ಜಿಲ್ಲಾ ನೂತನ ಸಂಸದ ಕ್ಯಾ. ಬ್ರಿಜೇಶ್ ಚೌಟರನ್ನು ಅಭಿನಂದಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಆದಿಚುಂಚನಗಿರಿ ಕಾವೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರ ಆರ್ಶೀವಾದ ಹಾಗೂ ಮಾರ್ಗದರ್ಶನ ಪಡೆದು ಜಿಲ್ಲೆಯ ಒಕ್ಕಲಿಗ ಸಮುದಾಯದ ಸಮಗ್ರ ಅಭಿವೃಧ್ದಿಗೆ ಸಹಕಾರವಿದೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು,

ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದಿಂದ ಸಂಸದ ಕ್ಯಾ.ಬ್ರಿಜೇಶ್ ಚೌಟರಿಗೆ ಗೌರವಾರ್ಪಣೆ Read More »

error: Content is protected !!
Scroll to Top