ಪಟ್ಟೆ: ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

ಪುತ್ತೂರು : ಪುತ್ತೂರು ವಾಣಿಯನ್/ಗಾಣಿಗ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ಉಚಿತ ದಂತ ಚಿಕಿತ್ಸಾ ಶಿಬಿರ ಬಡಗನ್ನೂರು ಗ್ರಾಮದ ಪಟ್ಟೆ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆಯಿತು. ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆ, ಈಶ್ವರಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರ, ಸುಳ್ಯ ಕೆ.ವಿ.ಜಿ. ಡೆಂಟಲ್ ಕಾಲೇಜು ಆಸ್ಪತ್ರೆ, ಪುತ್ತೂರು ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ತಜ್ನ ವೈದ್ಯರಿಂದ ಪಟ್ಟೆ ವಿದ್ಯಾಸಂಸ್ಥೆಗಳು, ಶ್ರೀಕೃಷ್ಣ ಯುವಕ ಮಂಡಲ ಪಟ್ಟೆ, ವಾಲಿ ಫ್ರೆಂಡ್ಸ್ ಪಟ್ಟೆ ಹಾಗೂ […]

ಪಟ್ಟೆ: ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ Read More »

ಕಲ್ಲೇಗ ನೇಮೋತ್ಸವದಲ್ಲಿ ಶಾಸಕ ಸಂಜೀವ ಮಠಂದೂರು ಭಾಗಿ

ಪುತ್ತೂರು  : ಪುತ್ತೂರು ನೆಹರು ನಗರದ ಕಲ್ಲೇಗ ಕಲ್ಕುಡ ಕಲ್ಲುರ್ಟಿ ದೈವದ ನೇಮೋತ್ಸವ ಶನಿವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು. ನೇಮೋತ್ಸವದ ಅಂಗವಾಗಿ ರಾತ್ರಿ ಮೂಲನೆಲೆ ಕಾರ್ಜಾಲು ಗುತ್ತಿನಿಂದ ಶ್ರೀ ದೈವಗಳ ಭಂಡಾರ ಹೊರಟು ಕಲ್ಲೇಗ ದೈವಸ್ಥಾನವನ್ನು ತಲುಪಿತು. ಬಳಿಕ ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಆಕರ್ಷಕ ಸುಡ್ಡಮದ್ದು ಪ್ರದರ್ಶನಗೊಂಡಿತು. ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು  ಭಾಗವಹಿಸಿ ಶ್ರೀ ದೈವಗಳ ಗಂಧ ಪ್ರಸಾದ ಸ್ವೀಕರಿಸಿದರು. ದೈವಸ್ಥಾನದ ಅಧ್ಯಕ್ಷ ಅಜಿತ್‍ ಕುಮಾರ್‍

ಕಲ್ಲೇಗ ನೇಮೋತ್ಸವದಲ್ಲಿ ಶಾಸಕ ಸಂಜೀವ ಮಠಂದೂರು ಭಾಗಿ Read More »

ಶಾಂತಿಗೋಡು ಶಿರಾಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ

ಪುತ್ತೂರು : ನರಿಮೊಗರು ಗ್ರಾಮದ ಶಾಂತಿಗೋಡು ಕೈಂದಾಡಿ ಶಿರಾಡಿ ರಾಜನ್ ದೈವಸ್ಥಾನದ ಶಿರಾಡಿ ದೈವ ಹಾಗೂ ಪರಿವಾರ ದೈವಗಳ ವಾರ್ಷಿಕ  ನೆಮೋತ್ಸವ  ಭಾನುವಾರ ನಡೆಯಿತು.

ಶಾಂತಿಗೋಡು ಶಿರಾಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ Read More »

ಎಣ್ಮೂರು ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಸನ್ಮಾನ

ಪುತ್ತೂರು : ಎಣ್ಮೂರು ಶಾಲೆಗೆ ಟೈಲ್ಸ್ ಅಳವಡಿಸಲು  50 ಸಾವಿರವನ್ನು ನೀಡಿದ ಅಬ್ದುಲ್‍ ಸತ್ತರ್‍ ಫ್ಯಾಮಿಲಿ ಉಲ್ಲಲಾಡಿ ಅವರ ತಂದೆಯನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ರಮೇಶ್ ಕೋಟೆ, ಅಧ್ಯಕ್ಷ ಪ್ರಕಾಶ್‍ ರೈ, ಎಸ್‍ಡಿಎಂಸಿ ಅಧ್ಯಕ್ಷ ಅಬ್ದುಲ್‍ ಶರೀಫ್‍ ಜಿ., ಉಪಾಧ್ಯಕ್ಷೆ ಸುನಿತಾ, ಶಾಲಾ ಮುಖ್ಯ ಶಿಕ್ಷಕಿ ಭುವನೇಶ್ವರಿ ಹೇಮಳ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸನ್ಮಾನಿತರನ್ನು ಶಾಲು ಹೊದಿಸಿ, ಫಲಪುಷ್ಪ ನೀಡಿ ಗೌರವಿಸಲಾಯಿತು.

ಎಣ್ಮೂರು ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಸನ್ಮಾನ Read More »

ಫೆ.8 : ಮೆಸ್ಕಾಂ ಜನಸಂಪರ್ಕ ಸಭೆ

ಪುತ್ತೂರು : ಮೆಸ್ಕಾಂ ಪುತ್ತೂರು ನಗರ ಹಾಗೂ ಕುಂಬ್ರ ಗ್ರಾಮಾಂತರ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ಫೆ.8 ಬುಧವಾರ ಬೆಳಿಗ್ಗೆ 11 ರಿಂದ ನಡೆಯಲಿದೆ. ಮಂಗಳೂರು ವೃತ್ತ ಕಚೇರಿ ಅಧೀಕ್ಷಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಗ್ರಾಹಕರು ತಮ್ಮ G-mail account ಮೂಲಕ Oo meet.google.com/vmc-jrey-tqq ಲಿಂಕ್ನಲ್ಲಿ ವೀಡಿಯೋ ಸಂವಾದ ಮತ್ತು ದೂರವಾಣಿ ಮೂಲಕ ತಮ್ಮ ದೂರುಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಫೆ.8 : ಮೆಸ್ಕಾಂ ಜನಸಂಪರ್ಕ ಸಭೆ Read More »

ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೋತ್ಸವ ಸಂಪನ್ನ

ಪುತ್ತೂರು : ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಶುಕ್ರವಾರ ಹಾಗೂ ಶನಿವಾರ ನಡೆಯಿತು. ಜಾತ್ರೋತ್ಸವದ ಅಂಗವಾಗಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶುಕ್ರವಾರ ಬೆಳಿಗ್ಗೆ ಸಾಮೂಹಿಕ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಗ್ರಾಮಸ್ಥರಿಂದ ಹಸಿರು ಹೊರೆಕಾಣಿಕೆ ಸಮರ್ಪಣೆಯಾಯಿತು. ಮಧ್ಯಾಹ್ನ ಮಹಾಪೂಜೆ, ಪ್ರದಾದ ವಿತರಣೆಯಾಗಿ ರಾತ್ರಿ ಶ್ರೀ ದೇವರ ಬಲಿ ಹೊರಟು ಶ್ರೀ ಭೂತಬಲಿ ಉತ್ಸವ, ವಸಂತ ಕಟ್ಟೆಪೂಜೆ, ಭಜನಾ ಕಾರ್ಯಕ್ರಮ ನಡೆಯಿತು. ಶನಿವಾರ ಬೆಳಿಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ

ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೋತ್ಸವ ಸಂಪನ್ನ Read More »

ಫೆ.೬ : ಪುತ್ತೂರು-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ ಕಾರ್ಯಕ್ರಮ

ಪುತ್ತೂರು : ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಪುತ್ತೂರು-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ ಯೋಜನೆಗೆ ಶಿಲಾನ್ಯಾಸ ಕಾರ್ಯಕ್ರಮ ಫೆ.೬ ಸೋಮವಾರ ಬೆಳಿಗ್ಗೆ ೯.೦೦ ಗಂಟೆಗೆ ೩೪ನೇ ನೆಕ್ಕಿಲಾಡಿಯ ಶಕ್ತಿನಗರದಲ್ಲಿ ನಡೆಯಲಿದೆ.ಸುಮಾರು ೧೨.೭೫ ಕೋಟಿ ರೂ. ಅನುದಾನ ಈ ರಸ್ತೆಯ ಅಭಿವೃದ್ಧಿಗೆ ಬಿಡುಗಡೆಗೊಳಿಸಲಾಗಿದ್ದು, ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಫೆ.೬ : ಪುತ್ತೂರು-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ ಕಾರ್ಯಕ್ರಮ Read More »

ಎಸ್‌ಡಿಎಂಸಿ, ಮುಖ್ಯ ಶಿಕ್ಷಕರ ಗಮನಕ್ಕೆ ತಾರದೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕ ; ಅಸಮಾಧಾನ ವ್ಯಕ್ತಪಡಿಸಿದ ಶಾಲಾ ಎಸ್‌ಡಿಎಂಸಿ ಹಾಗೂ ಪೋಷಕರುಎಸ್‌ಡಿಎಂಸಿ, ಮುಖ್ಯ ಶಿಕ್ಷಕರ ಗಮನಕ್ಕೆ ತಾರದೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕ ;

ಪುತ್ತೂರು : ಶಿಕ್ಷಕಿಯೋರ್ವರು ಶಾಲಾ ಮುಖ್ಯ ಶಿಕ್ಷಕರು ಹಾಗೂ ಎಸ್‌ಡಿಎಂಸಿಯವರಿಗೆ ತಿಳಿಸದೆ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಘಟನೆ ಚಿಕ್ಕಮುಡ್ನೂರು ಗ್ರಾಮದ ಬೀರ್ನಹಿತ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.ಚಿಕ್ಕಮುಡ್ನೂರು ಬೀರ್ನಹಿತ್ಲು ಶಾಲೆಯ ಮೂರನೇ ಹಾಗೂ ಒಂದನೇ ತರಗತಿ ಮಕ್ಕಳನ್ನು ಶಿಕ್ಷಕಿಯೋರ್ವರು ಶಾಲಾ ಮುಖ್ಯ ಶಿಕ್ಷಕರು ಹಾಗೂ ಎಸ್‌ಡಿಎಂಸಿಯವರಿಗೆ ತಿಳಿಸಿದೆ ಕರೆದುಕೊಂಡು ಹೋಗಿದ್ದು, ಈ ಕುರಿತು ಪೋಷಕರು ಮತ್ತು ಸಾರ್ವಜನಿಕರು ಆರೋಪಿಸಿದ್ದಾರೆ. ಶಾಲೆಯಲ್ಲಿ ಪತ್ರವೊಂದು ದೊರೆತಿದ್ದು, ಅದರಲ್ಲಿ ಪ್ರವಾಸಕ್ಕೆ ಹೋಗುವ ಸ್ಥಳಗಳನ್ನು ಉಲ್ಲೇಖಿಸಲಾಗಿದೆ. ಈ ಸಂದರ್ಭದಲ್ಲಿ ಶಾಲೆಗೆ

ಎಸ್‌ಡಿಎಂಸಿ, ಮುಖ್ಯ ಶಿಕ್ಷಕರ ಗಮನಕ್ಕೆ ತಾರದೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕ ; ಅಸಮಾಧಾನ ವ್ಯಕ್ತಪಡಿಸಿದ ಶಾಲಾ ಎಸ್‌ಡಿಎಂಸಿ ಹಾಗೂ ಪೋಷಕರುಎಸ್‌ಡಿಎಂಸಿ, ಮುಖ್ಯ ಶಿಕ್ಷಕರ ಗಮನಕ್ಕೆ ತಾರದೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕ ; Read More »

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಭಾರತ ರಶ್ಮಿ ಕಾರ್ಯಕ್ರಮ

ಸವಣೂರು : ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಟ್ಟದ ‘ಭಾರತ ರಶ್ಮಿ’ ಕಾರ್ಯಕ್ರಮ ಶನಿವಾರ ನಡೆಯಿತು. ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರಶ್ಮಿ ಯಾವತ್ತೂ ಹೊಸತನಗಳಿಗೆ ತೆರೆದುಕೊಳ್ಳುವ ಪರಿಪಾಠವನ್ನು ಬೆಳೆಸಿಕೊಂಡಿದೆ. ಹಳ್ಳಿಯ ಮಕ್ಕಳಿಗೆ ಒಳಿತಾದರೆ ಅದುವೇ ನಮಗೆ ಸಂತೋಷ ಎಂದರು. ಪ್ರಾಂಶುಪಾಲ ಸೀತಾರಾಮ ಕೇವಳ ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲೇಜಿನಲ್ಲಿ ಲಭ್ಯವಿರುವ ವಿವಿಧ ಅತ್ಯಾಧುನಿಕ ಸೌಲಭ್ಯಗಳ ವಿವರ ನೀಡಿ, ಒಟ್ಟಾರೆಯಾಗಿ ಸಮಗ್ರ ಮತ್ತು ಸಶಕ್ತ ಭಾರತ ನಿರ್ಮಾಣಕ್ಕೆ ವಿದ್ಯಾರಶ್ಮಿ ಸಣ್ಣದೊಂದು ಕೊಡುಗೆ

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಭಾರತ ರಶ್ಮಿ ಕಾರ್ಯಕ್ರಮ Read More »

ವಿಶ್ವಕರ್ಮರು ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕು ಪುಂಡರೀಕಾಕ್ಷ ಬೆಳ್ಳೂರು :

ಕಾವು: ವಿಶ್ವಕರ್ಮರು ಬ್ರಾಹ್ಮಣರೇ, ಆದರೆ ಬ್ರಾಹ್ಮಣತ್ವದ ಆಚರಣೆಯಲ್ಲಿ ಹಿಂದುಳಿದಿದ್ದಾರೆ. ಯಜ್ಞೋಪವಿತವನ್ನು ಧರಿಸಿದ ವಿಶ್ವಕರ್ಮರು ಅದರ ಪಾವಿತ್ರತೆಯನ್ನು ಕಾಪಾಡಿಕೊಂಡು ಬರಬೇಕು ಅದಕ್ಕಾಗಿ ಸಚ್ಚಾರಿತ್ತ್ಯದ ಜೊತೆಗೆ ಆಚಾರ ವಿಚಾರಗಳನ್ನು ಜೀವನದುದ್ದಕ್ಕೂ ಪಾಲಿಸಿಕೊಂಡು,ಕಿರಿಯರಿಗೂ ಆ ಸಂಸ್ಕಾರವನ್ನು ಕಲಿಸಿಕೊಡಬೇಕು ಆಗ ಮಾತ್ರ ನಿಜವಾದ ಬ್ರಾಹ್ಮಣರಾಗಲು ಸಾಧ್ಯ ಎಂದು  ಯೋಗಾಚಾರ್ಯ ಪುಂಡರೀಕಾಕ್ಷ ಹೇಳಿದರು. ಅವರು ಶನಿವಾರ ಕಾವುನಲ್ಲಿ ನಡೆದ ವಿಶ್ವಕರ್ಮ ಸಮಾವೇಶದಲ್ಲಿ ಧಾರ್ಮಿಕ ಉಪನ್ಯಾಸ ನೀಡಿ, ಜಲಚರ, ಭೂಚರ, ಅಮಲು ಪದಾರ್ಥಗಳ ಸೇವನೆಯುಳ್ಳವ ಬ್ರಾಹ್ಮಣನಾಗಲು ಸಾಧ್ಯವಿಲ್ಲ.ಪ್ರತಿದಿನ ಸಂಧ್ಯಾ ವಂದನೆ ಮತ್ತು ತಂದೆ ತಾಯಿಯ ಸೇವೆ

ವಿಶ್ವಕರ್ಮರು ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕು ಪುಂಡರೀಕಾಕ್ಷ ಬೆಳ್ಳೂರು : Read More »

error: Content is protected !!
Scroll to Top