ಬಂಟ್ವಾಳ : ಹಿಟ್‌ & ರನ್‌ ಅಪಘಾತದಲ್ಲಿ ಭಾಗಿಯಾಗಿದ್ದ ರಿಕ್ಷಾ ವಶ

ಸ್ಕೂಟರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ರಿಕ್ಷಾ ಬಂಟ್ವಾಳ : ಹಿಟ್‌ & ರನ್‌ ಅಪಘಾತದಲ್ಲಿ ಭಾಗಿಯಾಗಿದ್ದ ರಿಕ್ಷಾವನ್ನು ಬಂಟ್ವಾಳ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾಮಲ್ ಕಟ್ಟೆ ನಿವಾಸಿ ಉಸ್ಮಾನ್ ಎಂಬವರ ಸ್ಕೂಟರ್‌ಗೆ ಅಪರಿಚಿತ ರಿಕ್ಷಾ ಡಿಕ್ಕಿ ಹೊಡೆದು ಬಳಿಕ ಪರಾರಿಯಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು. ಆದರೆ ಎರಡು ದಿನ ಹಿಟ್ ರನ್ ಆಗಿದ್ದ ರಿಕ್ಷಾ ಪತ್ತೆಯಾಗಿರಲಿಲ್ಲ. ರಿಕ್ಷಾ ಡಿಕ್ಕಿಯಾಗಿ ಪರಾರಿಯಾಗಿರುವುದನ್ನು […]

ಬಂಟ್ವಾಳ : ಹಿಟ್‌ & ರನ್‌ ಅಪಘಾತದಲ್ಲಿ ಭಾಗಿಯಾಗಿದ್ದ ರಿಕ್ಷಾ ವಶ Read More »

ಬಸ್ಸಿನ ಡೀಸೆಲ್‌ ಟ್ಯಾಂಕ್‌ಗೆ ಲಾರಿ ಗುದ್ದಿದ ಪರಿಣಾಮ ಭೀಕರ ಅಪಘಾತ

ಕ್ಷಣಾರ್ಧದಲ್ಲಿ ಬೆಂಕಿ ಇಡೀ ಬಸ್ಸಿಗೆ ವ್ಯಾಪಿಸಿ ಒಳಗಿದ್ದವರು ಜೀವಂತ ದಹನ ಬೆಂಗಳೂರು: ವಿರುದ್ಧ ದಿಕ್ಕಿನಲ್ಲಿ ಬಂದ ಟ್ರಕ್‌ ಬಸ್ಸಿನ ಡೀಸೆಲ್‌ ಟ್ಯಾಂಕ್‌ಗೆ ಗುದ್ದಿದ ಕಾರಣ ಬಸ್ಸಿಗೆ ಕ್ಷಣಾರ್ಧದಲ್ಲಿ ಬೆಂಕಿಹತ್ತಿಕೊಂಡು ಭೀಕರ ದುರಂತ ಸಂಭವಿಸಿದೆ ಎಂದು ಚಿತ್ರದುರ್ಗದಲ್ಲಿ ಸುಟ್ಟು ಕರಕಲಾದ ಸೀಬರ್ಡ್‌ ಬಸ್‌ ಮಾಲೀಕ ನಾಗರಾಜು ಎಂಬವರು ತಿಳಿಸಿದ್ದಾರೆ. ಚಿತ್ರದುರ್ಗದ ಗೊರ್ಲತ್ತು ಗ್ರಾಮದ ಬಳಿ ರಾತ್ರಿ 1.30-2 ಗಂಟೆ ಮಧ್ಯೆ ಈ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸ್ಲೀಪರ್‌ ಬಸ್ಸಿನಲ್ಲಿ 29 ಜನ ಪ್ರಯಾಣಿಸುತ್ತಿದ್ದರು. ಟ್ರಕ್‌

ಬಸ್ಸಿನ ಡೀಸೆಲ್‌ ಟ್ಯಾಂಕ್‌ಗೆ ಲಾರಿ ಗುದ್ದಿದ ಪರಿಣಾಮ ಭೀಕರ ಅಪಘಾತ Read More »

ಕೌಟುಂಬಿಕ ಜಗಳ : ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮೂಡುಬಿದಿರೆ : ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕನ ಮೃತದೇಹ ಬುಧವಾರ ಸಂಜೆ ನೆತ್ತೋಡಿ ಎಂಬಲ್ಲಿ ಪತ್ತೆಯಾಗಿದೆ. ಕಾರ್ಕಳ ತಾಲೂಕು ಮಿಯ್ಯಾರು ಗ್ರಾಮದ ಲತೀಶ ಪೂಜಾರಿ (42) ಆತ್ಮಹತ್ಯೆ ಮಾಡಿಕೊಂಡವರು. ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ವಿದೇಶದಲ್ಲಿದ್ದ ಲತೀಶ ಪೂಜಾರಿ ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಭಾನುವಾರ ಮೂಡುಬಿದಿರೆಯ ಹೊಸಂಗಡಿಯಲ್ಲಿರುವ ಹೆಂಡತಿ ಬಂದಿದ್ದರೆನ್ನಲಾಗಿದೆ. ಯಾವುದೋ ವಿಷಯಕ್ಕೆ ಜಗಳ ನಡೆದಿತ್ತೆನ್ನಲಾಗಿದ್ದು ಮಿಯ್ಯಾರಿನಲ್ಲಿರುವ ತನ್ನ ಅಣ್ಣನ ಮೊಬೈಲ್‌ಗೆ ಮೆಸೇಜ್ ಮಾಡಿ ಈ ಬಗ್ಗೆ ಹೇಳಿಕೊಂಡಿದ್ದರು. ಅಣ್ಣ ಸರಿಮಾಡುವ, ಆತುರದ ನಿರ್ಧಾರ ಬೇಡ ಎಂದು

ಕೌಟುಂಬಿಕ ಜಗಳ : ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ Read More »

ಅಪಘಾತವಾಗಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಬಸ್‌ : 17 ಪ್ರಯಾಣಿಕರು ಸಜೀವ ದಹನ

ಗೋಕರ್ಣಕ್ಕೆ ಬರುತ್ತಿದ್ದ ಬಸ್‌ಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತ ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಡಿ.25ರ ನಸುಕಿನ ಹೊತ್ತು ಸಂಭವಿಸಿದ ಭೀಕರ ಅಪಘಾತದಲ್ಲಿ 17ಕ್ಕೂ ಹೆಚ್ಚು ಜನ ಜೀವಂತ ಸುಟ್ಟು ಕರಕಲಾಗಿದ್ದಾರೆ. ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್‌ ಹೊತ್ತಿ ಉರಿದಿದೆ. ಖಾಸಗಿ ಸ್ಲೀಪರ್ ಕೋಚ್​​ ಬಸ್​ನಲ್ಲಿದ್ದ 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು

ಅಪಘಾತವಾಗಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಬಸ್‌ : 17 ಪ್ರಯಾಣಿಕರು ಸಜೀವ ದಹನ Read More »

ಶಬರಿಮಲೆಯಿಂದ ಚಿನ್ನ ಕಳ್ಳತನ: ಎರಡನೇ ಬಾರಿ ಬಳ್ಳಾರಿಯಲ್ಲಿ ಶೋಧ ನಡೆಸಿದ SIT

ಬಳ್ಳಾರಿ: ಶಬರಿಮಲೆಯ ಅಯ್ಯಪ್ಪ ದೇಗುಲದಿಂದ 4.5 ಕೆ.ಜಿ. ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಕೇರಳದ SIT ತಂಡ ಬಳ್ಳಾರಿಯ ರೊದ್ದಂ ಜ್ಯುವೆಲ್ಲರಿ‌ಯಲ್ಲಿ ತಪಾಸಣೆ ನಡೆಸಿದೆ. ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ರೊದ್ದಂ ಆಭರಣ ಸಂಸ್ಥೆಯ ಮಾಲಕ ಗೋವರ್ಧನ್‌ನನ್ನು ಬಂಧಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಾಕ್ಷ್ಯ, ಮಾಹಿತಿ ಸಂಗ್ರಹದ ದೃಷ್ಟಿಯಿಂದ ಈ ಶೋಧ ಕಾರ್ಯ ನಡೆದಿದೆ ಎಂದು ತಿಳಿದು ಬಂದಿದೆ. ಈ ಹಿಂದೆಯೂ SIT ರೊದ್ದಂ ಸಂಸ್ಥೆಯ ಮೇಲೆ ದಾಳಿ ನಡೆಸಿ ತನಿಖೆ ಮಾಡಿತ್ತು. ಸದ್ಯ ಎರಡನೇ ಬಾರಿಗೆ

ಶಬರಿಮಲೆಯಿಂದ ಚಿನ್ನ ಕಳ್ಳತನ: ಎರಡನೇ ಬಾರಿ ಬಳ್ಳಾರಿಯಲ್ಲಿ ಶೋಧ ನಡೆಸಿದ SIT Read More »

‘ನನಗೆ ಅನುಭವ ಕಡಿಮೆ’ ಎಂದು ಡಿ.ಕೆ. ಶಿವಕುಮಾರ್ ತಿರುಗೇಟು ‌ನೀಡಿದ್ದು ಯಾರಿಗೆ ಗೊತ್ತಾ?

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರ ಕೋಲ್ಡ್ ವಾರ್ ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ಸಿಎಂ ‌ಸಿದ್ದರಾಮಯ್ಯ ಆಪ್ತ, ಸಚಿವ ಕೆ. ಎನ್. ರಾಜಣ್ಣ ಅವರು ರಾಹುಲ್ ಗಾಂಧಿಗೆ ‌ಸಾಲು ಸಾಲು ಪತ್ರಗಳನ್ನು ಬರೆದಿದ್ದು, ಈ ಬೆಳವಣಿಗೆ ಡಿಸಿಎಂ ಡಿ. ಕೆ. ಶಿವಕುಮಾರ್ ಅವರ ಆಕ್ರೋಶಕ್ಕೆ ಕಾರಣವಾಗಿದೆ. ರಾಜಣ್ಣ ತಮ್ಮ ಪತ್ರದಲ್ಲಿ ಕೆ ಪಿ ಸಿ ಸಿ ಅಧ್ಯಕ್ಷರ ಆಯ್ಕೆ ಸರಿಯಾಗಿದ್ದಿದ್ದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತಷ್ಟು ಸ್ಥಾನಗಳನ್ನು ಗೆಲ್ಲುತ್ತಿತ್ತು ಎಂದು ಅವರು ಉಲ್ಲೇಖ ಮಾಡಿದ್ದರು. ಈ ವಿಚಾರ

‘ನನಗೆ ಅನುಭವ ಕಡಿಮೆ’ ಎಂದು ಡಿ.ಕೆ. ಶಿವಕುಮಾರ್ ತಿರುಗೇಟು ‌ನೀಡಿದ್ದು ಯಾರಿಗೆ ಗೊತ್ತಾ? Read More »

ಕೆನಡಾದಲ್ಲಿ ಭಾರತೀಯ ಮಹಿಳೆಯ ಹತ್ಯೆ: ಆರೋಪಿಯ ಪತ್ತೆಗೆ ಬಲೆ ಬೀಸಿರುವ ಪೊಲೀಸರು

ಟೊರೊಂಟೊ: ಕೆನಡಾದಲ್ಲಿ ಭಾರತೀಯ ಮಹಿಳೆಯೊಬ್ಬರ ಹತ್ಯೆಯಾಗಿದ್ದು, ಶಂಕಿತ ಆರೋಪಿಯ ಗುರುತು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ಅಬ್ದುಲ್ ಗಫೂರ್ (32) ಎಂದು ಗುರುತಿಸಲಾಗಿದೆ. ಹತ್ಯೆಯಾದ ‌ಮಹಿಳೆಯನ್ನು ಹಿಮಾಂಶಿ ಖುರಾನಾ (30) ಎಂದು ಗುರುತಿಸಲಾಗಿದೆ. ಆಕೆಯ ಪ್ರಿಯಕರನೇ ಈ ಹತ್ಯೆ ನಡೆಸಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಆರೋಪಿಯ ಪತ್ತೆಗಾಗಿ ಹುಡುಕಾಟ ಆರಂಭಿಸಲಾಗಿದೆ. ಡಿ. 19 ರಂದು ಹಿಮಾಂಶಿ ನಾಪತ್ತೆ ಎಂಬುದಾಗಿ ಪೋಲೀಸ್ ಠಾಣೆಗೆ ಕರೆ ಬಂದಿದ್ದು, ಡಿ. 20 ರಂದು ಆಕೆಯ ಶವವನ್ನು ಅವರು ಕಾಣೆಯಾಗಿದ್ದಾರೆ ಎಂದು

ಕೆನಡಾದಲ್ಲಿ ಭಾರತೀಯ ಮಹಿಳೆಯ ಹತ್ಯೆ: ಆರೋಪಿಯ ಪತ್ತೆಗೆ ಬಲೆ ಬೀಸಿರುವ ಪೊಲೀಸರು Read More »

ಬಜಪೆ ಪಟ್ಟಣ ಪಂಚಾಯತ್ ಚುನಾವಣೆ : ಬಿಜೆಪಿ ಜಯಭೇರಿ

19ರಲ್ಲಿ 11 ಸ್ಥಾನ ಗೆದ್ದು ನಿಚ್ಚಳ ಬಹುಮತ ಪಡೆದ ಬಿಜೆಪಿ ಮಂಗಳೂರು : ತಾಲೂಕಿನ ಬಜಪೆ ಪಟ್ಟಣ ಪಂಚಾಯತ್‌ಗೆ ಡಿ.21ರಂದು ನಡೆದ ಚುನಾವಣೆಯಲ್ಲಿ ಬಿಜೆಪಿಗೆ ನಿಚ್ಚಳ ಬಹುಮತ ಲಭಿಸಿದೆ.ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11 ಸ್ಥಾನಗಳನ್ನು ಗೆದ್ದುಕೊಂಡು ಬೀಗಿದೆ. ಕಾಂಗ್ರೆಸ್-4, ಎಸ್‌ಡಿಪಿಐ-3 ಮತ್ತು ಪಕ್ಷೇತರರು 1 ಸ್ಥಾನಗಳನ್ನು ಪಡೆದಿದ್ದಾರೆ.ಬುಧವಾರ ಮಂಗಳೂರು ಮಿನಿ ವಿಧಾನಸೌಧದಲ್ಲಿ ಮಾತಗಳ ಎಣಿಕೆ ನಡಯಿತು. ಬಜಪೆಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಿದ ಬಳಿಕ ನಡೆದ ಮೊದಲ ಚುನಾವಣೆ ಇದಾಗಿತ್ತು. ವಿಜೇತರ ವಿವರ:ವಾರ್ಡ್ 1.

ಬಜಪೆ ಪಟ್ಟಣ ಪಂಚಾಯತ್ ಚುನಾವಣೆ : ಬಿಜೆಪಿ ಜಯಭೇರಿ Read More »

ಅಮೆರಿಕದ ಬ್ಲೂಬರ್ಡ್‌-6 ಉಪಗ್ರಹವನ್ನು ಕಕ್ಷೆಗೆ ಸೇರಿಸಿದ ಇಸ್ರೊ

6500 ಕೆ.ಜಿ. ತೂಕದ ಉಪಗ್ರಹ ಉಡಾವಣೆ ಯಶಸ್ವಿ ಶ್ರೀಹರಿಕೋಟಾ: ಭಾರತದ ರಾಕೆಟ್ ಮಾರ್ಕ್-3 (LVM3)-M6 ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಅಮೆರಿಕದ ಬ್ಲೂಬರ್ಡ್‌-6 ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ. ಶ್ರೀಹರಿಕೋಟಾ ಉಡ್ಡಯನ ಕೇಂದ್ರದ ಎರಡನೇ ಲಾಂಚ್‌ ಪ್ಯಾಡ್‌ನಿಂದ ಬೆಳಗ್ಗೆ 8.54ಕ್ಕೆ ಮಾರ್ಕ್‌ 3 ರಾಕೆಟ್ 6,500 ಕೆ.ಜಿ ತೂಕದ ಭಾರಿ ಭಾರದ ಉಪಗ್ರಹವನ್ನು ಹೊತ್ತುಕೊಂಡು ನಭಕ್ಕೆ ಚಿಮ್ಮಿತು. ಸುಮಾರು 15 ನಿಮಿಷಗಳ ಹಾರಾಟದ ನಂತರ ರಾಕೆಟ್‌ನಿಂದ ಬ್ಲೂಬರ್ಡ್ ಬ್ಲಾಕ್-2 ಬೇರ್ಪಟ್ಟು ಸುಮಾರು 520 ಕಿ.ಮೀ. ಎತ್ತರದಲ್ಲಿ ಅದರ ಉದ್ದೇಶಿತ ಕಕ್ಷೆಯನ್ನು

ಅಮೆರಿಕದ ಬ್ಲೂಬರ್ಡ್‌-6 ಉಪಗ್ರಹವನ್ನು ಕಕ್ಷೆಗೆ ಸೇರಿಸಿದ ಇಸ್ರೊ Read More »

ಖತರ್‌ನಾಕ್‌ ಹನಿಟ್ರ್ಯಾಪ್‌ ಗ್ಯಾಂಗ್‌ ಬಂಧನ

ಆನ್‌ಲೈನ್‌ನಲ್ಲಿ ಬಲೆಗೆ ಬೀಳಿಸಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್‌ ಬೆಂಗಳೂರು : ಆನ್‌ಲೈನ್‌ನಲ್ಲಿ ಹನಿಟ್ರ್ಯಾಪ್‌ ಮಾಡಿ ಹಣ ಸುಲಿಗೆ ಮಾಡುತ್ತಿದ್ದ ಗಾಂಗನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮೋಹದ ಬಲೆಗೆ ಬೀಳಿಸಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್‌ನ ಇಬ್ಬರು ಯುವತಿಯರು ಸೇರಿ ಐವರನ್ನು ಆರ್‌ ಆರ್‌ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುಮಲತಾ ಅಲಿಯಾಸ್ ಅಂಜಲಿ (28), ಹರ್ಷಿಣಿ ಅಲಿಯಾಸ್ ಸ್ವೀಟಿ (26) ಹಾಗೂ ಅವರ ಸಹಚರರಾದ ಜಗದೀಶ್ (35), ಮಂಜುನಾಥ್ (30) ಮತ್ತು ಲೋಕೇಶ್ (32) ಎಂದು ಗುರುತಿಸಲಾಗಿದೆ. ಸಾಫ್ಟ್‌ವೇರ್

ಖತರ್‌ನಾಕ್‌ ಹನಿಟ್ರ್ಯಾಪ್‌ ಗ್ಯಾಂಗ್‌ ಬಂಧನ Read More »

error: Content is protected !!
Scroll to Top