ವಿಷ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ಧನ್ಯಶ್ರೀ ಮೃತ್ಯು

ಕಾಸರಗೋಡು: ವಿಷ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ಪದವಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಕಾಸರಕೋಟಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮಂಗಳೂರಿನ ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿ, ಆಯಾಲಾ ಹಾಗೂ ಆಟೋ ಚಾಲಕ ನುರೇಶ್ ದಂಪತಿ ಪುತ್ರಿ ಯುಡುಪುಲುವಿನ ಧನ್ಯಶ್ರೀ (19) ಮೃತಪಟ್ಟವರು. ಕೆಲ ದಿನಗಳ ಹಿಂದೆ ಧನ್ಯಶ್ರೀ ಅವರು ಹೊಟ್ಟೆ ನೋವಿನಿಂದಾಗಿ ವೈದ್ಯರನ್ನು ನೋಡಿದ್ದರು. ಔಷಧ ಸೇವಿಸಿದ ಬಳಿಕ ನೋವು ಕಡಿಮೆಯಾಗಿ ನಂತರ ನೋವು ಕಾಣಿಸಿಕೊಂಡು ದೇರಳಕಟ್ಟೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಯೇ ಧನ್ಯಶ್ರೀ ಅವರು ವಿಷ ಸೇವಿಸಿರುವುದಾಗಿ […]

ವಿಷ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ಧನ್ಯಶ್ರೀ ಮೃತ್ಯು Read More »

ಮಕ್ಕಳು ಹೆತ್ತವರ ಕಣ್ಣೀರಿಗೆ ಕಾರಣರಾಗಬಾರದು :  ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಪಾರಂಪರಿಕ ದಿನಾಚರಣೆಯಲ್ಲಿ ಸುರೇಶ ಶೆಟ್ಟಿ

ಪುತ್ತೂರು: ಪಾರಂಪರಿಕ ದಿನಾಚರಣೆ ಕೇವಲ ಒಂದು ದಿನದ ಪ್ರೇರಣೆಯಾಗದೆ, ನಿತ್ಯ ಜೀವನದಲ್ಲಿ ನಮ್ಮ ಬದುಕಿನ ಮೇಲೆ ಪ್ರಭಾವ ಬೀರುವ ಆಚರಣೆ ಎನಿಸಬೇಕು. ನಮ್ಮ ಜೀವನಪದ್ಧತಿ, ಆಚಾರ ವಿಚಾರಗಳು ಸಂಸ್ಕಾರದ ನೆಲೆಯಲ್ಲಿ ಬೆಳೆದು ಬಂದಾಗ ನಮ್ಮ ವ್ಯಕ್ತಿತ್ವ ಬೆಳಗುವುದಕ್ಕೆ ಸಾಧ್ಯ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಸರೇಶ ಶೆಟ್ಟಿ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಲಾದ ಪಾರಂಪರಿಕ ದಿನಾಚರಣೆ ಹಾಗೂ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಅಂಬಿಕಾ

ಮಕ್ಕಳು ಹೆತ್ತವರ ಕಣ್ಣೀರಿಗೆ ಕಾರಣರಾಗಬಾರದು :  ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಪಾರಂಪರಿಕ ದಿನಾಚರಣೆಯಲ್ಲಿ ಸುರೇಶ ಶೆಟ್ಟಿ Read More »

ಕರ್ನಾಟಕ ವಕೀಲರ ಮೇಲಿನ ಹಿಂಸಾಚಾರ ಕಾಯ್ದೆ ಅಧಿಕೃತ ಜಾರಿಗೆ | ವಕೀಲರ ಬಹು ದಿನಗಳ ಬೇಡಿಕೆ ನನಸು

ಕರ್ನಾಟಕ ವಕೀಲರ ಮೇಲಿನ ಹಿಂಸಾಚಾರ ನಿಷೇಧ ಕಾಯ್ದೆ ಜಾರಿಗೆ ಬಂದಿದ್ದು,  ರಾಜ್ಯ ಸರ್ಕಾರ ಈ ಬಗ್ಗೆ ಗಜೆಟ್ ನೋಟಿಫಿಕೇಶನ್ ಪ್ರಕಟಿಸಿದ್ದು, ಕಾಯ್ದೆ ಜೂನ್ 10, 2024 ರಿಂದ ಅಧಿಕೃತವಾಗಿ ಜಾರಿಗೆ ಬಂದಿದೆ. ಈ ಮೂಲಕ ವಕೀಲರ ಬಹುದಿನಗಳ ಬೇಡಿಕೆ ನನಸಾಗಿದೆ. “ವಕೀಲರ ಮೇಲಿನ ಹಿಂಸಾಚಾರ ನಿಷೇಧ ಕಾಯ್ದೆ” 2023ರ ಡಿಸೆಂಬರ್ 11ರಂದು ರಾಜ್ಯದ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರು ಈ ಮಸೂದೆಯನ್ನು ಮಂಡಿಸಿದ್ದರು. ಇದು ಅನುಮೋದನೆಗೊಂಡು ಮಾರ್ಚ್ 20 ರಂದು ರಾಜ್ಯಪಾಲರ ಅಂಕಿತಕ್ಕೂ ಒಳಗಾಯಿತು. ಇನ್ನು

ಕರ್ನಾಟಕ ವಕೀಲರ ಮೇಲಿನ ಹಿಂಸಾಚಾರ ಕಾಯ್ದೆ ಅಧಿಕೃತ ಜಾರಿಗೆ | ವಕೀಲರ ಬಹು ದಿನಗಳ ಬೇಡಿಕೆ ನನಸು Read More »

ಅಕ್ರಮ ಗಣಿಗಾರಿಕೆ ಪ್ರಕರಣ | ಬಂಧಿಸಲ್ಪಟ್ಟಿದ್ದ ಶಶಿರಾಜ್ ಶೆಟ್ಟಿಗೆ ಜಾಮೀನು

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟಿದ್ದ ಶಶಿರಾಜ್ ಶೆಟ್ಟಿಗೆ ಜಾಮೀನು ಮಂಜೂರಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದರೆಂದು ತಾಲೂಕು ಬಿಜೆಪಿ ಯುವಮೋರ್ಚ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಬಂಧನವಾಗಿತ್ತು. ಅದೇ ದಿನ ರಾತ್ರಿ ಶಾಸಕ ಹರೀಶ್ ಪೂಂಜ ಠಾಣೆಗೆ ಆಗಮಿಸಿ ಬಿಡುಗಡೆಗೊಳಿಸುವಂತೆ ಬೆಳಿಗ್ಗೆ ತನಕ ಠಾಣೆಯಲ್ಲಿದ್ದರು ಪ್ರಯೋಜನವಾಗದೇ ನಂತರದ ಬೆಳವಣಿಗೆಯಲ್ಲಿ ಪ್ರತಿಭಟನೆಗಳು ನಡೆದರು ಕಸ್ಟಡಿಗೆ ಪಡೆದಿದ್ದರು. ಇಂದು ಜಾಮೀನು ಮಂಜೂರುಗೊಂಡಿದೆ. ಶಶಿರಾಜ್ ಪರ ವಕೀಲರಾದ ಮಹೇಶ್ ಕಜೆ ವಾದಿಸಿದ್ದರು.

ಅಕ್ರಮ ಗಣಿಗಾರಿಕೆ ಪ್ರಕರಣ | ಬಂಧಿಸಲ್ಪಟ್ಟಿದ್ದ ಶಶಿರಾಜ್ ಶೆಟ್ಟಿಗೆ ಜಾಮೀನು Read More »

ತಿರುಮಲ ತಿರುಪತಿಯಲ್ಲಿ ‘ಗೋವಿಂದ ಗೋವಿಂದ’ ಘೋಷ ಮೊಳಗಬೇಕೇ ಹೊರತು ರಾಜಕೀಯ ಹೇಳಿಕೆಗಳಲ್ಲ : ಚಂದ್ರಬಾಬು ನಾಯ್ಡು

ತಿರುಮಲ ದೇವಸ್ಥಾನ ಹಿಂದೂಗಳಿಗೆ ಸೇರಿದ್ದು ಇಲ್ಲಿ ‘ಗೋವಿಂದ ಗೋವಿಂದ’ ಎಂಬ ಘೋಷ ಮೊಳಗಬೇಕೇ ಹೊರತು ರಾಜಕೀಯ ಹೇಳಿಕೆಗಳು ಕೇಳಬಾರದು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ಹೇಳಿದ್ದಾರೆ. ಗುರುವಾರ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದ ಬಳಿಕ ಅವರು ತಿರುಮಲ ಬೆಟ್ಟದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ತಿಳಿಸಿದರು. ತಿರುಮಲ ಒಂದು ಪವಿತ್ರ ಕ್ಷೇತ್ರ, ದೇವಸ್ಥಾನದ ಪಾವಿತ್ರ್ಯತೆಯನ್ನು ರಕ್ಷಿಸಬೇಕು ಹೀಗಾಗಿ ತಿರುಪತಿಯಲ್ಲಿ ಏಡುಕುಂಡಲವಾಡ ಸ್ವಾಮಿ ಗೋವಿಂದ ಗೋವಿಂದ ಎಂಬ ಘೋಷ ಮಾತ್ರ

ತಿರುಮಲ ತಿರುಪತಿಯಲ್ಲಿ ‘ಗೋವಿಂದ ಗೋವಿಂದ’ ಘೋಷ ಮೊಳಗಬೇಕೇ ಹೊರತು ರಾಜಕೀಯ ಹೇಳಿಕೆಗಳಲ್ಲ : ಚಂದ್ರಬಾಬು ನಾಯ್ಡು Read More »

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈಯವರ 77ನೇ ಹುಟ್ಟುಹಬ್ಬ ಆಚರಣೆ | ಅಂತಿಮ ಪದವಿಯ ವಿದ್ಯಾರ್ಥಿಗಳಿಗೆ ವಿದಾಯಕೂಟ ಸಮಾರಂಭ

ಸವಣೂರು: ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಕೆ ಸೀತಾರಾಮ ರೈ ಸವಣೂರು ಅ಻ವರ ಹುಟ್ಟುಹಬ್ಬದ ಆಚರಣೆ ಮತ್ತು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಪದವಿಯ ವಿದ್ಯಾರ್ಥಿಗಳಿಗೆ ವಿದಾಯಕೂಟ ಸಮಾರಂಭ ಕಾಲೇಜಿನಲ್ಲಿ ನಡೆಯಿತು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಕೆ ಸೀತಾರಾಮ ರೈ ಸವಣೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,  ವಿದ್ಯಾರ್ಥಿಗಳು ಒಂದು ಸಂಸ್ಥೆಯ ರಾಯಭಾರಿಗಳಿದ್ದಂತೆ ಎನ್ನುವುದರ ಮೂಲಕ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಇಂಜಿನಿಯರ್ ಅಶ್ವಿನ್

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈಯವರ 77ನೇ ಹುಟ್ಟುಹಬ್ಬ ಆಚರಣೆ | ಅಂತಿಮ ಪದವಿಯ ವಿದ್ಯಾರ್ಥಿಗಳಿಗೆ ವಿದಾಯಕೂಟ ಸಮಾರಂಭ Read More »

ಕ್ಷುಲ್ಲಕ ವಿಚಾರದಲ್ಲಿ ಗಲಾಟೆ : ಚೂರಿ ಇರಿತ

ಪುತ್ತೂರು : ಹಿರಿಯ ನಾಗರಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಓರ್ವರಿಗೆ ಚೂರಿಯಿಂದ ಇರಿದ ಘಟನೆ ಕೋರ್ಟ್ ರಸ್ತೆಯಲ್ಲಿ ಇಂದು ನಡೆದಿದೆ. ಗುಣಶೇಖರ್ ಶೆಟ್ಟಿ ಹಾಗೂ ಸದಾಶಿವ ಪೈ ಎಂಬವರ ಮಧ್ಯೆ ಪಾರ್ಕಿಂಗ್ ವಿಚಾರವಾಗಿ ಈ ಗಲಾಟೆ ನಡೆದಿದ್ದು, ಜಗಳ ತಾರಕಕ್ಕೇರಿ ಚೂರಿ ಇರಿಯಲಾಗಿದೆ ಎಂದು ತಿಳಿದು ಬಂದಿದೆ. ಸದಾಶಿವ ಪೈ ಅವರ ಕೈ ಗೆ ಚೂರಿ ತಾಗಿದ್ದು, ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಕ್ಷುಲ್ಲಕ ವಿಚಾರದಲ್ಲಿ ಗಲಾಟೆ : ಚೂರಿ ಇರಿತ Read More »

ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ | ಕುತೂಹಲ ಕೆರಳಿಸಿದ ಗೃಹಸಚಿವ ಡಾ.ಪರಮೇಶ್ವರ್ ಹೇಳಿಕೆ

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಿಎಂ ಯಡಿಯೂರಪ್ಪ ಭಾರಿ ಸಂಕಷ್ಟಕ್ಕೆ ಸಿಲುಕಿಕೊಳ್ಳುವ ಸಾಧ್ಯತೆ ಕಂಡು ಬಂದಿದೆ. ಈ ವಿಚಾರದಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ನೀಡಿರುವ ಹೇಳಿಕೆ ಈಗ ಕುತೂಹಲ ಕೆರಳಿಸಿದೆ. ಈ ಪ್ರಕರಣದ ಬಗ್ಗೆ ಮಾಧ್ಯಮದೊಂದಿಗೆ ತುಮಕೂರಿನಲ್ಲಿ ಮಾತನಾಡಿರುವ ಡಾ. ಜಿ ಪರಮೇಶ್ವರ್, ಅಗತ್ಯಬಿದ್ದರೆ ಸಿಐಡಿಯವರು ಯಡಿಯೂರಪ್ಪ ಅವರನ್ನು ಬಂಧಿಸಲಿದ್ದಾರೆ. ಯಡಿಯೂರಪ್ಪ ನೋಟಿಸ್ ಗೆ ಬಂದು ಉತ್ತರ ನೀಡಬೇಕಾಗುತ್ತದೆ ಎಂದು ತಿಳಿಸಿದರು. ಈಗಾಗಲೇ ಈ ಪ್ರಕರಣದ ಬಗ್ಗೆ

ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ | ಕುತೂಹಲ ಕೆರಳಿಸಿದ ಗೃಹಸಚಿವ ಡಾ.ಪರಮೇಶ್ವರ್ ಹೇಳಿಕೆ Read More »

ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿಲ್ಲಿ ನಡೆದ ಮೂರು ದಿನಗಳ ರಾಷ್ಟ್ರಮಟ್ಟದ ಕಾರ್ಯಾಗಾರ “ಸೈನ್ಸಿಫಿಕ್ ರೈಟಿಂಗ್, ರಿಸರ್ಚ್ ಇಂಟೆಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್’ ಸಂಪನ್ನ

ಸುಳ್ಯ: ಕೆವಿಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನ್ಯಾಷನಲ್ ಕೌನ್ಸಿಲ್ ಆಫ್ ಇಂಡಿಯನ್ ಸಿಸ್ಟಮ್ ಆಫ್ ಮೆಡಿಸಿನ್ ಸಹಯೋಗದೊಂದಿಗೆ ಮೂರು ದಿನಗಳ ಕಾಲ ನಡೆದ ರಾಷ್ಟ್ರೀಯ ಮಟ್ಟದ “ಸೈನ್ಸಿಫಿಕ್ ರೈಟಿಂಗ್, ರಿಸರ್ಚ್ ಇಂಟೆಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್’ನ ಸ್ನಾತಕೋತ್ತರ ಪದವಿ ಮಾರ್ಗದರ್ಶಕರ ಕಾರ್ಯಾಗಾರ ಕಾಲೇಜು ಸಭಾಂಗಣದಲ್ಲಿ  ಸಮಾರೋಪಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ವಹಿಸಿದ್ದರು. ಅತಿಥಿಗಳಾಗಿ ಕೆವಿಜಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ. ಸಿ. ರಾಮಚಂದ್ರ ಭಟ್,

ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿಲ್ಲಿ ನಡೆದ ಮೂರು ದಿನಗಳ ರಾಷ್ಟ್ರಮಟ್ಟದ ಕಾರ್ಯಾಗಾರ “ಸೈನ್ಸಿಫಿಕ್ ರೈಟಿಂಗ್, ರಿಸರ್ಚ್ ಇಂಟೆಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್’ ಸಂಪನ್ನ Read More »

ಗರಿಗೆದರುತ್ತಿರುವ ಸ್ಯಾಂಡಲ್ ವುಡ್ ತಾರೆಯರ ವಿಚ್ಛೇದನ | ಇದೀಗ ದುನಿಯಾ-ನಾಗರತ್ನ ಸರದಿ

ಬೆಂಗಳೂರು : ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಚೇದನ ವಿಚಾರದ ಬೆನ್ನಲ್ಲೇ ಇದೀಗ ದುನಿಯಾ ವಿಜಯ್ ಹಾಗೂ ನಾಗರತ್ನ ವಿಚ್ಚೇದನ ಚರ್ಚೆಗೆ ಬಂದಿದ್ದು, ಇಂದು ತೀರ್ಪು ಹೊರಬರುವ ಸಾಧ್ಯತೆಯಿದೆ ಎನ್ನಲಾಗಿದೆ. ದುನಿಯಾ ವಿಜಯ್ ಹಾಗೂ ನಾಗರತ್ನ ಮಧ್ಯೆ ವೈಮನಸ್ಸು ಮೂಡಿತ್ತು. ಹೀಗಾಗಿ 2018ರಲ್ಲಿ ವಿಜಯ್ ಅವರು ವಿಚ್ಚೇದನ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳಲು ವಿಜಯ್ ರೆಡಿ ಇದ್ದಾರೆ. ಅಷ್ಟೇ ಅಲ್ಲ ಪತ್ನಿಗೆ ಜೀವನಾಂಶ ಕೂಡ ಕೊಡಲು ರೆಡಿ ಇದ್ದಾರೆ. ಆದರೆ ಕೋರ್ಟ್‌ಗೆ

ಗರಿಗೆದರುತ್ತಿರುವ ಸ್ಯಾಂಡಲ್ ವುಡ್ ತಾರೆಯರ ವಿಚ್ಛೇದನ | ಇದೀಗ ದುನಿಯಾ-ನಾಗರತ್ನ ಸರದಿ Read More »

error: Content is protected !!
Scroll to Top