ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತ ನಿಧನ

ಬೆಳ್ತಂಗಡಿ: ವೇಣೂರು ಕರಿಮಣೇಲು ಗುತ್ತು ನಿವಾಸಿ, ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತ (71) ಹೃದಯಾಘಾತದಿಂದ ಜೂ.12 ರಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಅವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಉದಯವಾಣಿ, ವಿಜಯ ಕರ್ನಾಟಕ, ಕನ್ನಡಪ್ರಭ ಪತ್ರಿಕೆಯ ವೇಣೂರು ಭಾಗದ ವರದಿಗಾರರಾಗಿ ಅನೇಕ ವರ್ಷ ಸೇವೆ ಸಲ್ಲಿಸಿದ್ದರು. ಜತೆಗೆ ವೇಣೂರು ಗ್ರಾ.ಪಂ. ಮಾಜಿ ಸದಸ್ಯರಾಗಿ, ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದರು. ಈ ಬಾರಿ 2024 ವೇಣೂರು ಬಾಹುಬಲಿ ಮಹಾಮಸ್ತಕಾಭೀಷಕದ ಮಾಧ್ಯಮ ಸಮಿತಿ ಸಂಚಾಲಕರಾಗಿ, 2012 […]

ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತ ನಿಧನ Read More »

ಕರಾವಳಿ ಜಿಲ್ಲೆಯಾದ್ಯಂತ ಜೂ.14 ರಂದು ತೆರೆ ಕಾಣಲಿದೆ “ತುಡರ್” ತುಳು ಸಿನಿಮಾ | ಪತ್ರಿಕಾಗೋಷ್ಠಿಯಲ್ಲಿ ನಾಯಕ ನಟ ಸಿದ್ಧಾರ್ಥ್

ಪುತ್ತೂರು: ಸುಮುಖ ಪೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾದ “ತುಡರ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಜೂ.14 ರಂದು ತೆರೆ ಕಾಣಲಿದೆ ಎ೦ದು ನಾಯಕ ನಟ ಸಿದ್ಧಾರ್ಥ್ ಎಚ್ ಶೆಟ್ಟಿ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆ‌ರ್, ಸಿನಿಪೊಲಿಸ್, ಸುರತ್ನಲ್ ನಲ್ಲಿ ಸಿನಿಗ್ಯಾಲಕ್ಕಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್. ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ರಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ಬೆಳ್ತಂಗಡಿಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಸಿನಿಮಾ

ಕರಾವಳಿ ಜಿಲ್ಲೆಯಾದ್ಯಂತ ಜೂ.14 ರಂದು ತೆರೆ ಕಾಣಲಿದೆ “ತುಡರ್” ತುಳು ಸಿನಿಮಾ | ಪತ್ರಿಕಾಗೋಷ್ಠಿಯಲ್ಲಿ ನಾಯಕ ನಟ ಸಿದ್ಧಾರ್ಥ್ Read More »

ವಿಶ್ವದ 4ನೇ ಅತೀ ದೊಡ್ಡ ಭಾರತೀಯ ಸೇನೆಯ ಮುಖ್ಯಸ್ಥರಾಗಿ ಲೆ.ಜ.ಉಪೇಂದ್ರ ದ್ವಿವೇದಿ ನೇಮಕ

ದೆಹಲಿ: ವಿಶ್ವದ 4ನೇ ಅತಿ ದೊಡ್ಡ ಸೇನೆಯಾದ ಭಾರತೀಯ ಸೇನೆಯ ಹೊಸ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿಯವರನ್ನು ಸರಕಾರ ನೇಮಕ ಮಾಡಿದೆ. ಹಾಲಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಸಿ ಪಾಂಡೆಯವರ ಅಧಿಕಾರಾವಧಿ ಜೂನ್ 30ಕ್ಕೆ ಮುಕ್ತಾಯವಾಗಲಿರುವ ಹಿನ್ನಲೆಯಲ್ಲಿ ದ್ವಿವೇದಿ ಅವರನ್ನು ನೇಮಕ ಮಾಡಲಾಗಿದೆ. ಪರಮ ವಿಶಿಷ್ಟ ಸೇವಾ ಪದಕ ಪುರಸ್ಕೃತರಾಗಿರುವ ದ್ವಿವೇದಿ, ಪ್ರಸ್ತುತ ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಜೂ.30 ರಂದು ಸಂಜೆ ಜನರಲ್ ಪಾಂಡೆಯವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ. 1964ರಲ್ಲಿ ಜನಿಸಿದ

ವಿಶ್ವದ 4ನೇ ಅತೀ ದೊಡ್ಡ ಭಾರತೀಯ ಸೇನೆಯ ಮುಖ್ಯಸ್ಥರಾಗಿ ಲೆ.ಜ.ಉಪೇಂದ್ರ ದ್ವಿವೇದಿ ನೇಮಕ Read More »

ನಾಳೆ ವಿದ್ಯುತ್ ನಿಲುಗಡೆ| ಎಲ್ಲೆಲ್ಲಿ? : ಇಲ್ಲಿದೆ ಡಿಟೈಲ್ಸ್

ಪುತ್ತೂರು: ತುರ್ತು ನಿರ್ವಹಣಾ ಕಾಮಗಾರಿ ಮತ್ತು ಉಪ್ಪಿನಂಗಡಿ – ಪುತ್ತೂರು ಚತುಷ್ಪಥ  ಮಾರ್ಗ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಾಟರ್‌ಸಪ್ಲ್ಯ, ಕಾಂಚನ ಮತ್ತು ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಫೀಡರ್‌ನಲ್ಲಿ ಜೂ.13ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 5.30 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. 33 ಕೆವಿ ಪುತ್ತೂರು-ಕಡಬ ವಿದ್ಯುತ್ ಮಾರ್ಗದ ಮುಂಗಾರು ಪೂರ್ವ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂ.13ರಂದು ಪೂರ್ವಾಹ್ನ 10 ರಿಂದ ಸಾಯಂಕಾಲ 5 ಗಂಟೆಯವರೆಗೆ 33 ಕೆವಿ ಪುತ್ತೂರು- ಕಡಬ

ನಾಳೆ ವಿದ್ಯುತ್ ನಿಲುಗಡೆ| ಎಲ್ಲೆಲ್ಲಿ? : ಇಲ್ಲಿದೆ ಡಿಟೈಲ್ಸ್ Read More »

ಬೆಳ್ಳಾರೆ ಮಹಿಳೆ ಕೊಲೆ ಆರೋಪಿ ಬಂಧನ

ಬೆಳ್ಳಾರೆ: ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ನಡೆದ ಮಹಿಳೆಯ ಕೊಲೆಗೆ ಸಂಬಂಧಿಸಿ ಕೊಲೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಕಲ್ಮಡ್ಕದ ಜೋಗಿಯಡ್ಕದ ವೆಂಕಪ್ಪ ಎಂಬವರ ಪುತ್ರ ಜಯರಾಮ ನಾಯ್ಕ ಕೊಲೆ ಆರೋಪಿಯಾಗಿದ್ದು, ಆತನನ್ನು ಬಂಧಿಸಲಾಗಿದೆ. ಬೆಳ್ಳಾರೆ ಗ್ರಾಮದ ಪಾಟಾಜೆಯ ನಳಿನಿ (55) ಅವರನ್ನು ಭಾನುವಾರ ರಾತ್ರಿ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2 ವರ್ಷಗಳ ಹಿಂದೆ ಮನೆ ಬಿಟ್ಟಿದ್ದ ನಳಿನಿ ವಾರಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದು, ಬಸ್

ಬೆಳ್ಳಾರೆ ಮಹಿಳೆ ಕೊಲೆ ಆರೋಪಿ ಬಂಧನ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ  ‘ಆದಿಯೋ ಬ್ಲಾಸಮ್ಸ್ ‘ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ವಿದ್ಯಾರ್ಥಿಗಳು ತಮ್ಮ ಸ್ವಾತಂತ್ರ್ಯವನ್ನು ಜವಾಬ್ದಾರಿಯಿಂದ ಉಪಯೋಗಿಸಬೇಕು. ನಮ್ಮ ಸಂತೋಷ, ಇನ್ನೊಬ್ಬರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಈ ಸಂಸ್ಥೆಯಿಂದ ಹೊರಹೋದ ಮೇಲೂ ಹಿರಿಯ ವಿದ್ಯಾರ್ಥಿಗಳಾಗಿ ಕಾಲೇಜಿನ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು ಎಂದು ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊ ಹೇಳಿದರು . ಸಂತ ಫಿಲೋಮಿನಾ ಕಾಲೇಜಿನ ಮಾನವಿಕ ವಿಭಾಗದ ಆಶ್ರಯದಲ್ಲಿ  ಆಯೋಜಿಸಿದ ‘ಆದಿಯೋ ಬ್ಲಾಸಮ್ಸ್’   ಬಿಎ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾನವಿಕ ವಿಭಾಗದ ಮುಖ್ಯಸ್ಥ  ಡಾ. ನಾಬರ್ಟ್  ಮಸ್ಕರೇನ್ಸಸ್ ಮಾತನಾಡಿ, ವಿದ್ಯಾರ್ಥಿಗಳು ಬದುಕಿನಲ್ಲಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ  ‘ಆದಿಯೋ ಬ್ಲಾಸಮ್ಸ್ ‘ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ Read More »

ನರಿಮೊಗರು ವಲಯ ಕಾಂಗ್ರೆಸ್  ಅಧ್ಯಕ್ಷ ಪ್ರಕಾಶ್ ನಿಧನ

ಪುತ್ತೂರು: ಮೊಬೈಲ್ ಮಳಿಗೆ ಹೊಂದಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಇಂದು ನಿಧನರಾದರು. ಪುರುಷರಕಟ್ಟೆ ನಿವಾಸಿ ಪ್ರಕಾಶ್ (45) ಮೃತಪಟ್ಟವರು. ಪ್ರಕಾಶ್ ಅವರು ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಯಂಗ್ ಬ್ರಿಗೆಡ್ ನಲ್ಲಿ ತೊಡಗಿಸಿಕೊಂಡಿದ್ದರು. ಕ್ರಿಕೆಟ್ ಆಟಗಾರರಾಗಿದ್ದ ಅವರು ಕೆಎಸ್‍ ಆರ್‍ ಟಿಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದರು. ಮೃತರು ಪತ್ನಿ, ಮಗಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ನರಿಮೊಗರು ವಲಯ ಕಾಂಗ್ರೆಸ್  ಅಧ್ಯಕ್ಷ ಪ್ರಕಾಶ್ ನಿಧನ Read More »

ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ | ಕಾಣಿಯೂರು ಪೇಟೆಯಲ್ಲಿ ಸಂಭ್ರಮಾಚರಣೆ

ಪುತ್ತೂರು: `ಭಾರತೀಯ ಜನತಾ ಪಾರ್ಟಿ (ಎನ್ ಡಿಎ) ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಮೊದಲ ಬಾರಿ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಕಾಣಿಯೂರು ಪೇಟೆಯಲ್ಲಿ ಸಂಭ್ರಮಾಚರಣೆ ಹಾಗೂ ವಿಜಯೋತ್ಸವವು ನಡೆಯಿತು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಸುಳ್ಯ ಮಂಡಲದ ಕಾರ್ಯದರ್ಶಿ ಗಣೇಶ್ ಕೆ ಎಸ್ ಉದನಡ್ಕ, ರೈತಮೋರ್ಚ ಕಾರ್ಯದರ್ಶಿ ಧರ್ಮೇಂದ್ರ ಕಟ್ಟತ್ತಾರು, ಶಕ್ತಿ ಕೇಂದ್ರದ ಪ್ರಮುಖ್ ಧನಂಜಯ ಕೇನಾಜೆ, ಬೂತ್‌ ಸಮಿತಿಯ ಅಧ್ಯಕ್ಷರುಗಳಾದ

ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ | ಕಾಣಿಯೂರು ಪೇಟೆಯಲ್ಲಿ ಸಂಭ್ರಮಾಚರಣೆ Read More »

ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಆನೆ ಅಶ್ವತ್ಥಾಮ ಇನ್ನಿಲ್ಲ

ಮೈಸೂರು : ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದ ಅಶ್ವತ್ಥಾಮ ಮೃತಪಟ್ಟಿರೋದಾಗಿ ತಿಳಿದು  ಬಂದಿದೆ . ಮೈಸೂರು ದಸರಾದಲ್ಲಿ ಎರಡು ಬಾರಿ ಪಾಲ್ಗೊಂಡು ಅಂಬಾರಿ ಹೊತ್ತ ಆನೆಗೆ ಸಾಥ್ ನೀಡಿದ್ದಂತ ಅಶ್ವತ್ಥಾಮ ಆನೆಯನ್ನು ಹುಣಸೂರು- ಪಿರಿಯಾಪಟ್ಟಣ ತಾಲೂಕಿನ ಗಡಿ ಭಾಗದ ನಾಗರಹೊಳೆಯ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಇರಿಸಲಾಗಿತ್ತು ಎಂದಿದ್ದಾರೆ. ಭೀಮನಕಟ್ಟೆಯ ಆನೆ ಶಿಬಿರದಲ್ಲಿದ್ದಂತ ಮೈಸೂರು ದಸರಾ ಆನೆ ಅಶ್ವತ್ಥಾಮ, ಆಹಾರ ಅರಸಿ ಕಾಡಿಗೆ ತೆರಳಿತ್ತು. ಈ ವೇಳೆಯಲ್ಲಿ ಸೋಲಾರ್

ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಆನೆ ಅಶ್ವತ್ಥಾಮ ಇನ್ನಿಲ್ಲ Read More »

ಪ್ರಾಣಿಗಳ ಹತ್ಯೆ ನಿಷೇಧ | ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ವಿಹಿಂಪ, ಬಜರಂಗದಳ ವತಿಯಿಂದ ನಗರ ಠಾಣೆಗೆ ಮನವಿ

ಪುತ್ತೂರು : ರಾಜ್ಯ ಮತ್ತು ದೇಶದ ಕಾನೂನಿನನ್ವಯ ಹಾಗೂ Animal welfare board of India ಇದರ ಸುತ್ತೋಲೆ ಅನ್ವಯ ಸುಪ್ರೀಂ ಕೋರ್ಟ್ ಆದೇಶದನ್ವಯ ರಾಜ್ಯದಲ್ಲಿ ಕರ್ನಾಟಕ ರಾಜ್ಯ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಕುರ್ಬಾನಿಗೆ ನಿಷೇಧವಿದೆ. ಹಾಗೂ ಕುರ್ಬಾನಿಗೆ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧವಾಗಿದೆ. ಕುರ್ಬಾನಿ ಕೊಟ್ಟ ಸ್ಥಳವನ್ನು ಸರಕಾರ ಮುಟ್ಟುಗೋಲಿಗೆ ಅವಕಾಶವಿದೆ. ರಾಜ್ಯದಲ್ಲಿ ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯಿದೆ 1959 ತಿದ್ದುಪಡಿ 1975 ಇದರ ಪ್ರಕಾರವೂ

ಪ್ರಾಣಿಗಳ ಹತ್ಯೆ ನಿಷೇಧ | ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ವಿಹಿಂಪ, ಬಜರಂಗದಳ ವತಿಯಿಂದ ನಗರ ಠಾಣೆಗೆ ಮನವಿ Read More »

error: Content is protected !!
Scroll to Top