ಹಿಂದೂ ಸಂಘಟನೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಪಂಜ : ಪಂಜ ಪೇಟೆ ಹೃದಯ ಭಾಗದಲ್ಲಿ ಕಳೆದ ಅನೇಕ ದಿನಗಳಿಂದ  ಹಿಂದೂ ಸಂಘಟನೆ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಕ್ಷುಲ್ಲಕ ವಿಚಾರ ಮುಂದಿಟ್ಟು ಅಂಗಡಿ ಬಂದ್ ಮಾಡುವಂತೆ ಬೆದರಿಕೆ  ಹಾಕಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಿಂದ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವತಿಯಿಂದ ಭಾಜಪಾ ಹಾಗೂ ಪರಿವಾರ ಸಂಘಟನೆಯ ಕಾರ್ಯಕರ್ತ ರು ಬೃಹತ್ ಪ್ರತಿಭಟನೆ ಪಂಜ ಪೇಟೆಯಲ್ಲಿ ಜೂ 8 ರಂದು ಜರುಗಿತು. ಸುಳ್ಯ ಮಂಡಲ ಅಧ್ಯಕ್ಷ ವೆಂಕಟ ವಳಂಲಬೆ,ಮಾಜಿ ಮಂಡಲ ಸದಸ್ಯ […]

ಹಿಂದೂ ಸಂಘಟನೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ Read More »

ಅವಮಾನಕರವಾಗಿ ಸ್ವಾಮೀಜಿಯ‌ ಫೋಟೋ ಚಿತ್ರಿಸಿ ಸ್ಟೇಟಸ್ ಹಾಕಿದ ಯುವಕ l ಕ್ಷಮೆ ಯಾಚನೆ

ಕಡಬ : ಹಿಂದೂ ಸ್ವಾಮೀಜಿಯ ಭಾವಚಿತ್ರವನ್ನು ಯುವಕನೊಬ್ಬ ಅವಮಾನಕರವಾಗಿ ಚಿತ್ರಿಸಿ ವಾಟ್ಸಾಪ್ ಸ್ಟೇಟಸ್ ಹಾಕಿದ ಘಟನೆ ಕಡಬದಲ್ಲಿ ನಡೆದಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಹಿಂದೂ ಸಮಾಜ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದೀಗ ಹಿಂದೂ ಸಮಾಜದ ಆಕ್ರೋಶಕ್ಕೆ ಮಣಿದು ಅನ್ವರ್ ವೆರೈಟಿ ಎಂಬಾತನು ಕಡಬ ದುರ್ಗಾಂಬಿಕಾ ಅಮ್ಮನವರ ದೇವಾಲಯಕ್ಕೆ ಬಂದು ಸಮಸ್ತ ಹಿಂದೂ ಸಮಾಜಕ್ಕೆ ಕ್ಷಮೆಯಾಚಿಸಿದರು.  ಇನ್ನು ಮುಂದಕ್ಕೆ ಹಿಂದೂ ಸಮಾಜದ ಬಗ್ಗೆ ಅಥವಾ ಹಿಂದೂ ಧಾರ್ಮಿಕ ವಿಷಯಗಳಿಗೆ ಸಂಬಂಧಪಟ್ಟ ವಿಷಯಗಳ ಬಗ್ಗೆ ಅಪ್ಪಿ ತಪ್ಪಿಯು ಅವಹೇಳನವಾಗಿ ಅಥವಾ

ಅವಮಾನಕರವಾಗಿ ಸ್ವಾಮೀಜಿಯ‌ ಫೋಟೋ ಚಿತ್ರಿಸಿ ಸ್ಟೇಟಸ್ ಹಾಕಿದ ಯುವಕ l ಕ್ಷಮೆ ಯಾಚನೆ Read More »

ಕೆದಿಲ ಅನುದಾನಿತ ಹಿ ಪ್ರಾ ಶಾಲಾ ನೂತನ ಕೊಠಡಿಗಳ ಉದ್ಘಾಟನೆ |ದಾನಿಗಳ ಮೂಲಕ ಶಾಲಾ ಕಟ್ಟಡ ನಿರ್ಮಾಣ ಮಾಡಿರುವುದು ಅಭಿನಂದನಾರ್ಹ: ಅಶೋಕ್ ರೈ

ಪುತ್ತೂರು : ಊರಿನ ಹಾಗೂ ಇತರೆ ದಾನಿಗಳ ನೆರವಿನಿಂದ ತಮ್ಮ ಗ್ರಾಮದಲ್ಲಿ ಪಾಳು ಬಿದ್ದ ಶಾಲೆಯನ್ನು ನವೀಕರಣ ಮಾಡಿದ್ದು ಅಭಿನಂದನಾರ್ಹ ಕಾರ್ಯಕವಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಕೆದಿಲ ಅನುದಾನಿತ ಹಿ ಪ್ರಾ ಶಾಲಾ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಇದೇ ಶಾಲೆಯ ಶೌಚಾಲಯಕ್ಕೆ 5ಲಕ್ಷ ಅನುದಾನ ನೀಡುವುದಾಗಿ ಘೋಷಣೆ ಮಾಡಿದರು. ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮದ ಶಿಕ್ಷಣ ಅತೀ ಅಗತ್ಯವಾಗಿದೆ. ಬಡವರ ಮಕ್ಕಳೂ ಇಂಗ್ಲೀಷ್ ಮಾತನಾಡಬೇಕು, ಒಳ್ಳೆಯ ಕೆಲಸವನ್ನು ಪಡೆಯಬೇಕು ಇಲ್ಲಿ ಶಿಕ್ಷಕರ

ಕೆದಿಲ ಅನುದಾನಿತ ಹಿ ಪ್ರಾ ಶಾಲಾ ನೂತನ ಕೊಠಡಿಗಳ ಉದ್ಘಾಟನೆ |ದಾನಿಗಳ ಮೂಲಕ ಶಾಲಾ ಕಟ್ಟಡ ನಿರ್ಮಾಣ ಮಾಡಿರುವುದು ಅಭಿನಂದನಾರ್ಹ: ಅಶೋಕ್ ರೈ Read More »

ಕೊಂಬೆಟ್ಟು ಕಾಲೇಜಿನ ನೂತನ ಸಭಾಂಗಣಕ್ಕೆ ಶಾಸಕ ಅಶೋಕ ರೈ  ಶಿಲಾನ್ಯಾಸ

 ಪುತ್ತೂರು : ಕೊಂಬೆಟ್ಟು ಸರಕಾರಿ ಪ ಪೂ ಕಾಲೇಜಿನಲ್ಲಿ 80 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಭಾಂಗಣಕ್ಕೆ ಶಾಸಕ ಅಶೋಕ ರೈ  ಶಿಲಾನ್ಯಾಸ ಮಾಡಿದರು.  ಇದೇ ಶಾಲೆಯಲ್ಲಿ ಶಾಸಕರು ಹಳೆಯ ವಿದ್ಯಾರ್ಥಿ ಕೂಡ ಆಗಿದ್ದರು. ವೇದಿಕೆಯಲ್ಲಿ ಕಾರ್ಯಾಧ್ಯಕ್ಷರಾದ ಪ್ರಸಾದ್ ಕೌಶಲ್ ಶೆಟ್ಟಿ, ಜೊಕಿಂ ಡಿಸೋಜಾ, ಕೌನ್ಸಿಲರ್ ಜನಗನ್ನಿವಾಸ್ ರಾವ್ ಉಪಸ್ಥಿತರಿದ್ದರು.

ಕೊಂಬೆಟ್ಟು ಕಾಲೇಜಿನ ನೂತನ ಸಭಾಂಗಣಕ್ಕೆ ಶಾಸಕ ಅಶೋಕ ರೈ  ಶಿಲಾನ್ಯಾಸ Read More »

ರಸ್ತೆ ಬದಿ ಮಲಗಿದ್ದ ದನಗಳಿಗೆ ಅಮಲು ಇಂಜೆಕ್ಷನ್ ಕೊಟ್ಟು ವಾಹನದಲ್ಲಿ ಸಾಗಾಟ

ಸಂಪಾಜೆ  : ಸಂಪಾಜೆ ಗ್ರಾಮದ ಗಡಿಕಲ್ಲಿನಲ್ಲಿ ಜೂ.7ರಂದು ರಾತ್ರಿಯ ವೇಳೆಯಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ದನಗಳಿಗೆ ಅಮಲು ಇಂಜೆಕ್ಷನ್ ನೀಡಿದ ಕಿಡಿಗೇಡಿಗಳು ಸ್ಕಾರ್ಫಿಯೋ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡಿದ್ದು, ಈ ದೃಶ್ಯ ಸ್ಥಳೀಯ ವ್ಯಕ್ತಿಯೊಬ್ಬರ ಮನೆಯ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾದ ಘಟನೆ ಸಂಭವಿಸಿದೆ. ಗಡಿಕಲ್ಲು ಮಸೀದಿಯ ಪಕ್ಕದಲ್ಲಿ ಪ್ರತಿನಿತ್ಯ ಹತ್ತಕ್ಕೂ ಹೆಚ್ಚು ದನಗಳು ರಾತ್ರಿ ವೇಳೆ ಮುಖ್ಯರಸ್ತೆ ಪಕ್ಕದಲ್ಲಿ ಮಲುಗುತ್ತಿದ್ದು, ಜೂ.7ರಂದು ಮಧ್ಯರಾತ್ರಿ 1 ಗಂಟೆ ಸಮಯದಲ್ಲಿ ಸುಳ್ಯ ಭಾಗದಿಂದ ಕಪ್ಪು ಬಣ್ಣದ ಸ್ಕಾರ್ಫಿಯೋ ಕಾರಿನಲ್ಲಿ ಬಂದ

ರಸ್ತೆ ಬದಿ ಮಲಗಿದ್ದ ದನಗಳಿಗೆ ಅಮಲು ಇಂಜೆಕ್ಷನ್ ಕೊಟ್ಟು ವಾಹನದಲ್ಲಿ ಸಾಗಾಟ Read More »

ಬ್ರಹ್ಮರಕೋಡಿ ತರವಾಡು ಮನೆಯ ಹಿರಿಯರಾದ ದೇವಪ್ಪ ಗೌಡ ನಿಧನ

ಪುತ್ತೂರು: ಬಲ್ನಾಡು ಗ್ರಾಮದ ಉಜ್ರುಪಾದೆ ಬ್ರಹ್ಮರಕೋಡಿ ತರವಾಡು ಕುಟುಂಬದ ಹಿರಿಯರಾದ ದೇವಪ್ಪ ಗೌಡ ಬ್ರಹ್ಮರಕೋಡಿ ನಿಧನರಾದರು. ಕೆಲವು ಸಮಯದಿಂದ ಅಸೌಖ್ಯದಿಂದ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಜೂನ್ 6 ರಂದು ನಿಧನ ಹೊಂದಿದ್ದರು. ಮೃತರು ಪತ್ನಿ, ಮೂವರು ಮಕ್ಕಳು, ಕುಟುಂಬಸ್ಥರನ್ನು ಹಾಗೂ ಬಂಧುಗಳನ್ನು ಅಗಲಿದ್ದಾರೆ.

ಬ್ರಹ್ಮರಕೋಡಿ ತರವಾಡು ಮನೆಯ ಹಿರಿಯರಾದ ದೇವಪ್ಪ ಗೌಡ ನಿಧನ Read More »

ಕಾಪು ಬೀಚ್ ಬಲಿ  ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಕಾಪು : ಬೀಚ್ ಬಲಿ ಬೈಕ್, ಮೊಬೈಲ್, ಪರ್ಸ್ ಇಟ್ಟು ನಾಪತ್ತೆಯಾದ ಯುವಕನ ಮೃತದೇಹ ಕಡೆಕಾರು-ಪಡುಕೆರೆ ಬಳಿಯ ಸಮುದ್ರದಲ್ಲಿ ಶುಕ್ರವಾರ ಸಂಜೆ ವೇಳೆ ಪತ್ತೆಯಾಗಿದೆ. ಗುರುವಾರ ಸಂಜೆಯಿಂದ ನಾಪತ್ತೆ ಆಗಿದ್ದ ಕರಣ್ ಸಾಲ್ಯಾನ್ (20) ರವರ ಬೈಕು, ಮೊಬೈಲ್ ಹಾಗೂ ಪರ್ಸ್ ಕಾಪು ಲೈಟ್ ಹೌಸ್ ಬಳಿಯ ಶ್ರೀಯಾನ್ ಸದನ ಮನೆಯ ಬಳಿ ಶುಕ್ರವಾರ ಸಂಜೆ ಪತ್ತೆಯಾಗಿದೆ. ಈ ಬಗ್ಗೆ ತಂದೆ ತುಳಸಿ ಸಾಲ್ಯಾನ್ ರವರು ಕಾಪು ಠಾಣೆಗೆ ನಾಪತ್ತೆ ದೂರು ಸಲ್ಲಿಸಿದ್ದರು. ಸ್ಥಳೀಯರು, ಈಜುಗಾರರು ಶುಕ್ರವಾರ

ಕಾಪು ಬೀಚ್ ಬಲಿ  ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ Read More »

ಜೂನ್ 8 : ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಜೂನ್ 8 ಮತ್ತು 9ರಂದು ಆರೆಂಜ್ ಅಲರ್ಟ್ ಘೋಷಿಸಿದೆ. ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ರೀತಿಯ ವಾತಾವರಣ ಉಂಟಾಗಿದ್ದು ಕರಾವಳಿ ಭಾಗದಲ್ಲಿ ಗಾಳಿ ಮಳೆಯ  ಸೂಚನೆ ನೀಡಲಾಗಿದೆ. 4580 65 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ

ಜೂನ್ 8 : ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ.. Read More »

ಮಾಧ್ಯಮ ಲೋಕದ ದಿಗ್ಗಜ, ಉದ್ಯಮಿ ರಾಮೋಜಿ ರಾವ್ ಇನ್ನಿಲ್ಲ

ಹೈದರಾಬಾದ್ ​:ಇತ್ತೀಚೆಗಷ್ಟೇ ಆರೋಗ್ಯ ಸಮಸ್ಯೆಯಿಂದಾಗಿ ಹೈದರಾಬಾದ್‌ನ ಆಸ್ಪತ್ರೆಗೆ ದಾಖಲಾಗಿದ್ದ ,ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ರಾಮೋಜಿ ರಾವ್ (87) ಅವರು ಶನಿವಾರ ಮುಂಜಾನೆ ನಿಧನ ಹೊಂದಿದ್ದಾರೆ. ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಇದೇ 5ರಂದು ಆಸ್ಪತ್ರೆಗೆ ದಾಖಲಾಗಿದ್ದ ಶ್ರೀ ರಾವ್ ಅವರು ಶನಿವಾರ ಬೆಳಗಿನ ಜಾವ 4:50ಕ್ಕೆ ನಿಧನರಾದರು. ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾಹಿತಿ ಪ್ರಕಾರ, ರಾಮೋಜಿ ರಾವ್ ಅವರ ಪಾರ್ಥಿವ ಶರೀರವನ್ನು ರಾಮೋಜಿ ಫಿಲ್ಮ್ ಸಿಟಿಯಲ್ಲಿರುವ ಅವರ ನಿವಾಸಕ್ಕೆ ಕರೆತರಲಾಗುತ್ತಿದೆ. ಅಲ್ಲಿ ಕುಟುಂಬ, ಸ್ನೇಹಿತರು

ಮಾಧ್ಯಮ ಲೋಕದ ದಿಗ್ಗಜ, ಉದ್ಯಮಿ ರಾಮೋಜಿ ರಾವ್ ಇನ್ನಿಲ್ಲ Read More »

ಖಾದ್ಯ ತೈಲ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ : ಖಾದ್ಯ ತೈಲ ಸಾಗಿಸುತ್ತಿದ್ದ ಟ್ಯಾಂಕರ್ ಸಂತೆಕಟ್ಟೆ ನಿರ್ಮಾಣ ಹಂತದ ಕೆಳಸೇತುವೆ ಪ್ರದೇಶವನ್ನು ಹಾದುಹೋದ ನಂತರ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಜೂನ್ 08 ರಂದು ಶನಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಟ್ಯಾಂಕರ್ ಚಾಲಕ ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಮುಚ್ಚಿದ ಸರ್ವಿಸ್ ರಸ್ತೆಯನ್ನು ಮೀರಿದ್ದು, ಕೆಸರು ರಸ್ತೆಯಿಂದಾಗಿ ವಾಹನ ನಿಯಂತ್ರಣ ತಪ್ಪಿ ಘಟನೆ ನಡೆದಿದೆ. ಟ್ಯಾಂಕರ್ ಪಲ್ಟಿಯಾಗಿ ನಿರ್ಮಾಣ ಹಂತದಲ್ಲಿರುವ ಅಂಡರ್‌ಪಾಸ್ ನಿರ್ಮಾಣ ಪ್ರದೇಶಕ್ಕೆ ಬಿದ್ದಿದೆ.ಘಟನೆಯಲ್ಲಿ ಚಾಲಕ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾನೆ ಎನ್ನಲಾಗಿದೆ.

ಖಾದ್ಯ ತೈಲ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ Read More »

error: Content is protected !!
Scroll to Top