ಮುಳಿಯ ವೃಕ್ಷಾರೋಪಣ : ಸಾರ್ವಜನಿಕರಿಗೆ 3 ಸಾವಿರಕ್ಕೂ ಅಧಿಕ ಗಿಡಗಳ ವಿತರಣೆ | ಮುಳಿಯ ಜ್ಯುವೆಲ್ಸ್ ನಿಂದ ವಿಶ್ವ ಪರಿಸರ ದಿನಾಚರಣೆ

ಪುತ್ತೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮುಳಿಯ ಜ್ಯುವೆಲ್ಸ್ ವತಿಯಿಂದ ಮುಳಿಯ ವೃಕ್ಷಾರೋಪಣ ಕಾರ್ಯಕ್ರಮದ ಅಂಗವಾಗಿ ಪುತ್ತೂರಿನ ಮುಳಿಯ ಜ್ಯುವೆಲ್ಸ್ ಆವರಣದಲ್ಲಿ ಗ್ರಾಹಕರಿಗೆ ಗಿಡ ವಿತರಣೆ ಮಾಡಲಾಯಿತು. ಮುಳಿಯ ಜ್ಯುವೆಲ್ಸ್ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ಕುಮಾರ್ ಹೊಳ್ಳ ಅವರಿಗೆ ಗಿಡಗಳನ್ನು ವಿತರಿಸುವ ಮೂಲಕ ಚಾಲನೆ ನೀಡಿದರು. ಮುಳಿಯ ಜ್ಯುವೆಲ್ಸ್ ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು, ನೆಲ್ಯಾಡಿ, ಸೋಮವಾರಪೇಟೆ ಶಾಖೆಗಳಲ್ಲಿ ವೃಕ್ಷಾರೋಪಣ ಕಾರ್ಯಕ್ರಮ ಏಕಕಾಲಕ್ಕೆ ನಡೆಯಿತು. ಎಲ್ಲಾ ಶೋರೂಮ್ ಗಳಲ್ಲಿ ಸಾರ್ವಜನಿಕರಿಗೆ 3 […]

ಮುಳಿಯ ವೃಕ್ಷಾರೋಪಣ : ಸಾರ್ವಜನಿಕರಿಗೆ 3 ಸಾವಿರಕ್ಕೂ ಅಧಿಕ ಗಿಡಗಳ ವಿತರಣೆ | ಮುಳಿಯ ಜ್ಯುವೆಲ್ಸ್ ನಿಂದ ವಿಶ್ವ ಪರಿಸರ ದಿನಾಚರಣೆ Read More »

ಬೈಕ್ ಕಾರು ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ: ಬೈಕ್‌ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪ ರೆಖ್ಯ ಗ್ರಾಮದ ನೇಲ್ಯಡ್ಕ ಎಂಬಲ್ಲಿ ಜೂ. 5ರಂದು ರಾತ್ರಿ ನಡೆದಿದೆ. ಮೃತಪಟ್ಟವರನ್ನು ಬೆಳ್ತಂಗಡಿ ತಾಲೂಕು ರೆಖ್ಯ ಗ್ರಾಮದ ನಳಾಲು ನಿವಾಸಿ ರವೀಂದ್ರ (48) ಎಂದು ಗುರುತಿಸಲಾಗಿದೆ. ಅವರು ಬೈಕ್‌ನಲ್ಲಿ ಎಂಜಿರದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಮನೆ ಕಡೆಗೆ ಬರುತ್ತಿದ್ದ ವೇಳೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿ ಈ ಅಪಘಾತ

ಬೈಕ್ ಕಾರು ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ಬೊಳುವಾರು ನಿವಾಸಿ ಶಿಲ್ಪಾ ಆರ್. ಪ್ರಭು ನಿಧನ

ಪುತ್ತೂರು: ಬಾರ್ಬಿ ಸಾಫ್ಟ್ ಡ್ರಿಂಕ್ಸ್ ಮಾಲಕರಾಗಿರುವ ಬೊಳುವಾರು ನಿವಾಸಿ ರಾಧೇಶ್ ವಿಠಪ್ಪ ಪ್ರಭು ಪತ್ನಿ ಶಿಲ್ಪಾ ಆರ್. ಪ್ರಭು ನಿಧನರಾದರು. ಶಿಲ್ಪಾ ಅನಾರೋಗ್ಯದಿಂದ ಇದ್ದು, ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಪುತ್ರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಶಿಲ್ಪಾ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಜೂ.7 ರಂದು ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಬೊಳುವಾರು ನಿವಾಸಿ ಶಿಲ್ಪಾ ಆರ್. ಪ್ರಭು ನಿಧನ Read More »

ನೀಟ್‍ ಫಲಿತಾಂಶ : ಅಂಬಿಕಾ ವಿದ್ಯಾಲಯದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ 600ಕ್ಕಿಂತ ಹೆಚ್ಚು ಅಂಕ

ಪುತ್ತೂರು: ವೈದ್ಯಕೀಯ ವೃತ್ತಿ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ್ರಮಟ್ಟದ, ನೀಟ್-2024 ಪರೀಕ್ಷೆಯಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಉತ್ತಮ ಫಲಿತಾಂಶ ಪಡೆದಿದ್ದಾರೆ. 6 ವಿದ್ಯಾರ್ಥಿಗಳು 600 ಕ್ಕಿಂತಲೂ ಅಧಿಕ ಅಂಕ, 16 ವಿದ್ಯಾರ್ಥಿಗಳು 500 ಕ್ಕಿಂತಲೂ ಅಧಿಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ. ಅನುಷಾ ಜೇನ್ ಪಾಯ್ಸ್ (642),  ಅಭಿರಾಮ್ ಕೆ.ಟಿ. (625),ಅಭಿಶ್ರೀ ಎ.ಎಸ್‍. (619), ಭಾಗ್ಯಶ್ರೀ ರೈ (619), ಶೃಂಗಾ ನಾಯಕ್ ಪಿ. 616), ಹರ್ಷಿತಾ ರೈ (615), ಶ್ವೇತಾ ಐ.

ನೀಟ್‍ ಫಲಿತಾಂಶ : ಅಂಬಿಕಾ ವಿದ್ಯಾಲಯದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ 600ಕ್ಕಿಂತ ಹೆಚ್ಚು ಅಂಕ Read More »

ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ | ಪ್ರಕರಣ ದಾಖಲು

ಮಂಗಳೂರು : ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ರಿ (39) ಹಲ್ಲೆಗೊಳಗಾದವರು. ಸ್ಥಳೀಯ ಕೇಸರಿ ಮಿತ್ರ ವೃಂದದ ಗೌತಮ್ ಎಂಬಾತ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಟಾಕಿ ಸಿಡಿಸಿದ ವಿಚಾರದಲ್ಲಿ ಬಜರಂಗದಳ ಹಾಗೂ ಕೇಸರಿ ಮಿತ್ರ ವೃಂದದ ಸದಸ್ಯರ ನಡುವೆ ವಾಗ್ವಾದ ನಡೆದಿತ್ತು. ಈ ಸಂಬಂಧ ನಿನ್ನ ಕೆಲಸದಿಂದ ವಾಪಸ್ಸಾಗುತ್ತಿದ್ದ ಪ್ರವೀಣ್ ಪೂಜಾರಿ ಅವರನ್ನು

ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ | ಪ್ರಕರಣ ದಾಖಲು Read More »

ಬರೆಪ್ಪಾಡಿ ಯಲ್ಲಿ ಹೊಯ್ಸಳ ಕಾಲದ 800 ವರ್ಷ ಹಿಂದಿನ ವಿಗ್ರಹಗಳು ಪತ್ತೆ| 584 ವರ್ಷ ಹಿಂದಿನ ಕನ್ನಡ ಶಾಸನದ ಅಧ್ಯಯನ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಕುದ್ಮಾರ್ ಗ್ರಾಮದ ಬರೆಪ್ಪಾಡಿ ಎಂಬಲ್ಲಿ  ಶ್ರೀ ಪಂಚಲಿಂಗೇಶ್ವರ – ಕೇಪುಳೇಶ್ವರ ದೇವಸ್ಥಾನದಲ್ಲಿ ಇತ್ತೀಚೆಗೆ ಜೀರ್ಣೋದ್ಧಾರದ ಸಂದರ್ಭದಲ್ಲಿ ಹಾಗೂ ದೇವರ ತೀರ್ಥದ ಬಾವಿಯನ್ನು  ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಸುಮಾರು 800 ವರ್ಷ ಹಳೆಯದು ಎನ್ನಲಾದ ಹೊಯ್ಸಳ ಕಾಲದ  ಸುಮಾರು 9 ಲೋಹದ ವಿಗ್ರಹಗಳು ಪತ್ತೆಯಾಗಿದೆ. ಜೊತೆಗೆ ದೇವಸ್ಥಾನದ ಒಳ ಆವರಣದದಲ್ಲಿ ಸುಮಾರು 584 ವರ್ಷ ಹಳೆಯ ವಿಜಯನಗರ ಕಾಲದ 2 ಕನ್ನಡ ಶಿಲಾ ಶಾಸನ ಸ್ಥಾಪಿಸಿದ ಮಹತ್ವ ಮರು ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ

ಬರೆಪ್ಪಾಡಿ ಯಲ್ಲಿ ಹೊಯ್ಸಳ ಕಾಲದ 800 ವರ್ಷ ಹಿಂದಿನ ವಿಗ್ರಹಗಳು ಪತ್ತೆ| 584 ವರ್ಷ ಹಿಂದಿನ ಕನ್ನಡ ಶಾಸನದ ಅಧ್ಯಯನ Read More »

ಅಮ್ಮಾಡಿ ಗ್ರಾ.ಪಂ.ಸದಸ್ಯ ಪ್ರಕಾಶ್ ಆಯ ತಪ್ಪಿ ಬಿದ್ದು ಮೃತ್ಯು

ಬಂಟ್ವಾಳ: ಮನೆಯೊಂದರ ಮಹಡಿಯ ಮೇಲೆ ಕಾಂಕ್ರೀಟ್ ಕೆಲಸ ಮಾಡುತ್ತಿದ್ದಾಗ ಆಯ ತಪ್ಪಿ ಬಿದ್ದು ಗಾಯಗೊಂಡಿದ್ದ ಮೇಸ್ತ್ರಿಯೊಬ್ಬರು ಸಾವನ್ನಪ್ಪಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.  ಅಮ್ಮಾಡಿ ಗ್ರಾ.ಪಂ. ವ್ಯಾಪ್ತಿಯ ತಡ್ಯಾಲು ನಿವಾಸಿ ಪ್ರಕಾಶ್ ( 45) ಮೃತ ವ್ಯಕ್ತಿ. ಬಡಾಜೆ ಎಂಬಲ್ಲಿ ಮನೆಯೊಂದರ ಎರಡನೇ ಮಹಡಿಗೆ ಇವರು ಸೇರಿ ಒಟ್ಟು ಮೂವರು ಕಾಂಕ್ರೀಟ್ ಕೆಲಸ ಮಾಡುತ್ತಿದ್ದರು. ಏಕಾಏಕಿ ಕಾಂಕ್ರೀಟ್ ಹಲಗೆಗಳು ಮತ್ತು ಜಾಕ್ ಗಳು ಮುರಿದು ಬಿದ್ದ ಪರಿಣಾಮ ಇಬ್ಬರು ಕೆಳಗೆ ಹಾರಿದ್ದಾರೆ. ಪ್ರಕಾಶ್ ಮಾತ್ರ ಕೆಳಗೆ ಬಿದ್ದು ಗಂಭೀರವಾಗಿ

ಅಮ್ಮಾಡಿ ಗ್ರಾ.ಪಂ.ಸದಸ್ಯ ಪ್ರಕಾಶ್ ಆಯ ತಪ್ಪಿ ಬಿದ್ದು ಮೃತ್ಯು Read More »

ಮಹಾರಾಷ್ಟ್ರ  ದೇವೇಂದ್ರ ಫಡ್ನವೀಸ್  ಉಪ ಮುಖ್ಯಮಂತ್ರಿ  ಸ್ಥಾನಕ್ಕೆ ರಾಜೀನಾಮೆ

ಲೋಕಸಭಾ ಚುನಾವಣೆ ಮಹಾರಾಷ್ಟ್ರದಲ್ಲಿ ಬಿಜೆಪಿ ತೀವ್ರ ಹಿನ್ನಡೆ ಸಾಧಿಸಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಾರೆ.  ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿಯ ಸಂಖ್ಯೆಯು 2019 ರಲ್ಲಿ 23 ಸ್ಥಾನಗಳಿಂದ ಈ ವರ್ಷ ಕೇವಲ 9ಕ್ಕೆ ಕುಸಿದಿದೆ. ರಾಜ್ಯದ ಬಿಜೆಪಿ ನಾಯಕರ ಪೈಕಿ ಪ್ರಮುಖ ವ್ಯಕ್ತಿಯಾಗಿರುವ ಫಡ್ನವೀಸ್, ಪಕ್ಷದ ಚುನಾವಣಾ ಹಿನ್ನಡೆಯ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತು ರಾಜೀನಾಮೆ ನೀಡಿರುವುದಾಗಿ ತಿಳಿದುಬಂದಿದೆ.

ಮಹಾರಾಷ್ಟ್ರ  ದೇವೇಂದ್ರ ಫಡ್ನವೀಸ್  ಉಪ ಮುಖ್ಯಮಂತ್ರಿ  ಸ್ಥಾನಕ್ಕೆ ರಾಜೀನಾಮೆ Read More »

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

ನವದೆಹಲಿ :  ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿಗಳಿಗೆ ಮೋದಿ ಸಲ್ಲಿಸಿದರು. ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯಲು ಪ್ರಧಾನಿ ಮತ್ತು ಕೇಂದ್ರ ಸಚಿವ ಸಂಪುಟವನ್ನು ವಿನಂತಿಸಿದರು ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ Read More »

 ಬಿಜೆಪಿ ಮುಖಂಡ ರಾಜೇಶ್ ಎಂ.ಕೆ ಮೇಲೆ ಹಲ್ಲೆ |ದ.ಕ. ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಸ್ಪತ್ರೆಗೆ ಭೇಟಿ

ಬೆಳ್ತಂಗಡಿ : ಕಳೆಂಜ ಗ್ರಾಮದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ. ಮೇಲೆ ಜೂ.4ರಂದು ರಾತ್ರಿ ಮಾರಾಕಾಸ್ತ್ರದ ದಾಳಿಯಿಂದ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಆಸ್ಪತ್ರೆಗೆ ದ.ಕ. ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. ಸಂಸದರ ಜೊತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಬಿಜೆಪಿ ಕಾರ್ಯಕರ್ತರು ಜೊತೆಯಲ್ಲಿದ್ದರು.

 ಬಿಜೆಪಿ ಮುಖಂಡ ರಾಜೇಶ್ ಎಂ.ಕೆ ಮೇಲೆ ಹಲ್ಲೆ |ದ.ಕ. ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಸ್ಪತ್ರೆಗೆ ಭೇಟಿ Read More »

error: Content is protected !!
Scroll to Top