ಸುಳ್ಯ: ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ; ಚಾಲಕನಿಗೆ ಗಾಯ
ಸುಳ್ಯ : ಇಲ್ಲಿನ ಗೂನಡ್ಕ ಬಳಿ ನಿಂತಿದ್ದ ಮಾರುತಿ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಭಾನುವಾರ ನಡೆದಿದೆ. ಪೈಪ್‌ಗಳನ್ನು ಸಾಗಿಸುತ್ತಿದ್ದ ಲಾರಿ ಮಡಿಕೇರಿಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗೂನಡ್ಕ ಬಳಿ ಸುಳ್ಯದಿಂದ ಕಲ್ಲಗುಂಡಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರಿಗೆ ಲಾರಿ ಡಿಕ್ಕಿ ಹೊಡೆದು ಲಾರಿ ಪಲ್ಟಿಯಾಗಿದೆ. ಓಮ್ನಿ ಕಾರು ಲಾರಿ ಅಡಿಯಲ್ಲಿ ಸಿಲುಕಿಕೊಂಡಿತ್ತು. ಆದರೆ, ಅಪಘಾತದ ಸಮಯದಲ್ಲಿ ಕಾರು ಚಾಲಕ ಹತ್ತಿರದ ಅಂಗಡಿಯಲ್ಲಿ ನಿಂತಿದ್ದರಿಂದ ಪಾರಾಗಿದ್ದಾರೆ. […]
ಸುಳ್ಯ: ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ; ಚಾಲಕನಿಗೆ ಗಾಯ Read More »










