ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್‍ ಜಿ.ವಿ. ಜವಾಬ್ದಾರಿ ಬದಲಾವಣೆ

ಉಡುಪಿ : ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ. ಅವರ ಜವಾಬ್ದಾರಿಯನ್ನು ಬದಲಾವಣೆ ಮಾಡಿ ಆರ್‍ ಎಸ್‍ ಎಸ್ ಘೋಷಣೆ ಮಾಡಿದೆ. ಮೂಲತಃ  ದಕ್ಷಿಣ ಕನ್ನಡ ಜಿಲ್ಲೆಯ ಕುಂತೂರಿನವರಾದ ರಾಜೇಶ್ ಬಾಲ್ಯದಲ್ಲೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜವಾಬ್ದಾರಿ ವಹಿಸಿಕೊಂಡು, ತಮ್ಮನ್ನು ತೊಡಗಿಸಿಕೊಂಡವರು ಅನೇಕ ಜಿಲ್ಲೆ, ವಿಭಾಗಗಳಲ್ಲಿ ಹಾಗೂ ಪ್ರಾಂತದ ಪ್ರಚಾರಕರಾಗಿ ಜವಾಬ್ದಾರಿ ನಿರ್ವಹಣೆ ಮಾಡಿದ್ದಾರೆ. ಹೆಬ್ರಿಯಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್. ವರ್ಗದಲ್ಲಿ ಅನೇಕರ ಜವಾಬ್ದಾರಿಗಳು ಬದಲಾವಣೆಯಾಗಿದ್ದು, ಅದರಂತೆ ರಾಜೇಶ್ ಅವರನ್ನು ಬದಲಾವಣೆ ಮಾಡಿದೆ. ಕಳದ ಕೆಲವು ವರ್ಷಗಳಿಂದ […]

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್‍ ಜಿ.ವಿ. ಜವಾಬ್ದಾರಿ ಬದಲಾವಣೆ Read More »

ಇಂದು ಎಸ್‍. ಆರ್.ಕೆ.ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ | ಊರವರು, ವಿವಿಧ ಸಮಿತಿ ಪದಾಧಿಕಾರಿಗಳು, ಸಂಸ್ಥೆಯ ಸಿಬ್ಬಂದಿಗಳ ಪೂರ್ವಸಿದ್ಧತಾ ಸಭೆ

ಪುತ್ತೂರು: ಕೊಯಿಲ ಗ್ರಾಮದ ಕಲಾಯಿಗುತ್ತಿನಲ್ಲಿ ನಡೆಯಲಿರುವ ಖ್ಯಾತ ಕೃಷಿ ಯಂತ್ರೋಪಕರಣಗಳ ಸಂಸ್ಥೆ ಎಸ್‍  ಆರ್ ಕೆ ಲ್ಯಾಡರ್ಸ್ ರಜತ ಸಂಭ್ರಮದ ಸಮಾರೋಪ ಕಾರ್ಯಕ್ರಮದ ಕುರಿತು ಊರವರು, ವಿವಿಧ ಸಮಿತಿ ಪದಧಿಕಾರಿಗಳು ಹಾಗೂ ಸಂಸ್ಥೆಯ ಸಿಬ್ಬಂದಿಗಳ ಪೂರ್ವಸಿದ್ಧತಾ ಸಭೆ ಇಂದು ಬೆಳಿಗ್ಗೆ ನಡೆಯಿತು. ಸಂಸ್ಥೆಯ ಮಾಲಕರಾದ ಕೇಶವ ಅಮೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಧ್ಯಾಹ್ನ ನಂತರ ನಡೆಯುವ ಒಟ್ಟು ಕಾರ್ಯಕ್ರಮದ ಯಾವ ರೀತಿ ಇರಬೇಕು ಎಂಬ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಕಾರ್ಯಕ್ರಮದ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇಂದು ಎಸ್‍. ಆರ್.ಕೆ.ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ | ಊರವರು, ವಿವಿಧ ಸಮಿತಿ ಪದಾಧಿಕಾರಿಗಳು, ಸಂಸ್ಥೆಯ ಸಿಬ್ಬಂದಿಗಳ ಪೂರ್ವಸಿದ್ಧತಾ ಸಭೆ Read More »

ಕಾರು-ಆಕ್ಟಿವಾ ಡಿಕ್ಕಿ | ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕ್ಟಿವಾ ಸವಾರೆ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

ಪುತ್ತೂರು : ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20) ಮೃತ ಯುವತಿ. ಕೆಲ ಸಮಯಗಳ ಹಿಂದೆ ಕಬಕ ಸಮೀಪದ ಕೂವೆತ್ತಿಲದಲ್ಲಿ ಆಲ್ಟೋ ಕಾರು ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ವೇಳೆ

ಕಾರು-ಆಕ್ಟಿವಾ ಡಿಕ್ಕಿ | ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕ್ಟಿವಾ ಸವಾರೆ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು Read More »

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ | ಐದನೇ ಆರೋಪಿ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ಮತ್ತೊಬ್ಬ ಶಂಕಿತನನ್ನು ಬಂಧಿಸಿದೆ.  ಲಷ್ಕರ್-ಎ- ತೊಯ್ಯಾ (ಎಲ್ಇಟಿ) ಪ್ರಕರಣದ ಮಾಜಿ ಅಪರಾಧಿ, ಕರ್ನಾಟಕದ ಹುಬ್ಬಳ್ಳಿ ಮೂಲದ ಶೋಯೆಬ್ ಅಹ್ಮದ್ ಮಿರ್ಜಾ (35) ಬಂಧಿತ ಐದನೇ ವ್ಯಕ್ತಿ. ಈ ಹಿಂದೆ ಎಲ್ಇಟಿ ಬೆಂಗಳೂರು ಪಿತೂರಿ ಪ್ರಕರಣದಲ್ಲಿ ಅಪರಾಧಿಯಾಗಿದ್ದ ಮಿರ್ಜಾ ಜೈಲಿನಿಂದ ಹೊರಬಂದ ನಂತರ ಹೊಸ ಸಂಚಿನಲ್ಲಿ ಭಾಗಿಯಾಗಿದ್ದಾನೆ ಎಂದು ಎನ್ಐಎ ತನಿಖೆಗಳು ಬಹಿರಂಗಪಡಿಸಿವೆ. ಎನ್ಐಎ ಅಧಿಕಾರಿಗಳು ಮೂರು ದಿನಗಳ ಹಿಂದಷ್ಟೇ ರಾಮೇಶ್ವರಂ ಕೆಫೆ ಸ್ಫೋಟ

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ | ಐದನೇ ಆರೋಪಿ ಬಂಧನ Read More »

ಲಾರಿ-ಓಮ್ನಿ ಭೀಕರ ಅಪಘಾತ | ನಾಲ್ವರು ಸ್ಥಳದಲ್ಲೇ ಮೃತ್ಯು | ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಿ ತೆರಳುತ್ತಿರುವಾಗ ದುರ್ಘಟನೆ

ಲಾರಿ ಹಾಗೂ ಓಮ್ನಿ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಚಿಕ್ಕಮಗಳೂರಿನಲ್ಲಿ ಇಂದು ನಡೆದಿದೆ. ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದುಕೊಂಡು ವಾಪಸ್ ಆಗುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಭೀಕರ ಅಪಘಾತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದ್ದು, ಕೂಡಲೇ ಸ್ಥಳಕ್ಕೆ

ಲಾರಿ-ಓಮ್ನಿ ಭೀಕರ ಅಪಘಾತ | ನಾಲ್ವರು ಸ್ಥಳದಲ್ಲೇ ಮೃತ್ಯು | ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಿ ತೆರಳುತ್ತಿರುವಾಗ ದುರ್ಘಟನೆ Read More »

ಬಾಂಗ್ಲಾ ದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ನ ಹತ್ಯೆ ಮಾಡಿ ಚರ್ಮ ಸುಲಿದ ಹಂತಕರು | ಪ್ರಮುಖ ಆರೋಪಿ ಬಂಧನ

ಹೊಸದಿಲ್ಲಿ: ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಅವರನ್ನು ಬಾಂಗ್ಲಾದೇಶದಲ್ಲಿ ಬರ್ಬರವಾಗಿ ಕೊಲೆ ಮಾಡಿದ ವಿಚಾರ ತನಿಖೆಯಿಂದ ಬಯಲಾಗಿದ್ದು, ಹತ್ಯೆಯ ಪ್ರಮುಖ ಆರೋಪಿ ಬಾಂಗ್ಲಾ ದೇಶದ ಅಕ್ರಮ ವಲಸಿಗ ಜಿಹಾದ್ ಹವಾಲ್ದಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಸಂಸದರನ್ನು ಕತ್ತು ಹಿಸುಕಿ, ಚರ್ಮ ಸುಲಿದು ಕತ್ತರಿಸಿ ಹಾಕಲಾಗಿತ್ತು. ಸಿಐಡಿ ಮೂಲಗಳ ಪ್ರಕಾರ, ಕೋಲ್ಕತ್ತಾದ ನ್ಯೂಟೌನ್‌ನಲ್ಲಿರುವ ಫ್ಲಾಟ್‌ನಲ್ಲಿ ಕೊಲೆ ಮಾಡಿ ಸಂಸದರ ದೇಹವನ್ನು ತುಂಡು ತುಂಡಾಗಿಸಿ ವಿಕೃತಿ ಮೆರೆದಿರುವ ಬಗ್ಗೆ ಜಿಹಾದ್ ಹವಾಲ್ದಾ‌ರ್ ಒಪ್ಪಿಕೊಂಡಿದ್ದಾನೆ.

ಬಾಂಗ್ಲಾ ದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ನ ಹತ್ಯೆ ಮಾಡಿ ಚರ್ಮ ಸುಲಿದ ಹಂತಕರು | ಪ್ರಮುಖ ಆರೋಪಿ ಬಂಧನ Read More »

ಮಹಿಳೆಯ ಬ್ಯಾಗ್‍ ನಿಂದ ಲಕ್ಷಾಂತರ ಮೌಲ್ಯದ ಚಿನ್ನ ಕಳವು : ದೂರು ದಾಖಲು | ಕಳ್ಳರ ತಾಣವಾಗುತ್ತಿರುವ ಬಿ.ಸಿ.ರೋಡು ಬಸ್ ನಿಲ್ದಾಣ

ಬಂಟ್ವಾಳ: ಬಿಸಿರೋಡಿನ ಬಸ್ ನಿಲ್ದಾಣ ಪಿಕ್ ಪಾಕೆಟ್ ತಾಣವಾಗಿ, ಕಳ್ಳರ ಕೇಂದ್ರವಾಗಿ ಮಾರ್ಪಾಡು ಹೊಂದಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಬಸ್ ಗೆ ಹತ್ತುವ ಮಹಿಳೆಯರ ನಗನಗದು ಕಳವು ನಡೆಯುತ್ತಿದ್ದು, ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಕಳ್ಳರು ಹಿಡಿಯುವಲ್ಲಿ ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಇದೀಗ ಮತ್ತೆ ನಿನ್ನೆ ಬೆಳಿಗ್ಗೆ ಗಂಡ ಮತ್ತು ಮಗುವಿನ ಜೊತೆ ಬಸ್ ಹತ್ತುವ ವೇಳೆ ಬ್ಯಾಗಿನೊಳಗಿದ್ದ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವಾದ

ಮಹಿಳೆಯ ಬ್ಯಾಗ್‍ ನಿಂದ ಲಕ್ಷಾಂತರ ಮೌಲ್ಯದ ಚಿನ್ನ ಕಳವು : ದೂರು ದಾಖಲು | ಕಳ್ಳರ ತಾಣವಾಗುತ್ತಿರುವ ಬಿ.ಸಿ.ರೋಡು ಬಸ್ ನಿಲ್ದಾಣ Read More »

ಪುತ್ತೂರಿನ ಜೈನಭವನದಲ್ಲಿ ಮೇಳೈಸಿದ ಹಲಸು ಮತ್ತು ಹಣ್ಣುಗಳ ಮೇಳ | ಗಮನ ಸೆಳೆದ ಹಲಸಿನ ಹಣ್ಣಿನ ವಿವಿಧ ಉತ್ಪನ್ನಗಳು

ಪುತ್ತೂರು: ಒಂದು ಕಾಲದಲ್ಲಿ ಕಾಡಿನಲ್ಲಿ ಬೆಳೆದು, ಹೊಟ್ಟೆಗಿಲ್ಲದ ಬಡವರು ಉಪಯೋಗಿಸುತ್ತಿದ್ದ ಹಲಸಿನ ಹಣ್ಣುಗಳಲ್ಲಿ ವಿವಿಧ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಹಾಗೂ ಪ್ರದರ್ಶನ ಮಾಡುತ್ತಿರುವ ನಿಟ್ಟಿನಲ್ಲಿ ಹಲಸು ಮೇಳ ಆಯೋಜಿಸುತ್ತಿರುವುದು ಅಭಿನಂದನೀಯ ಎಂದು ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು. ನವತೇಜ ಪುತ್ತೂರು, ಜೆಸಿಐ, ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ಹಾಗೂ ಅಡಿಕೆ ಪತ್ರಿಕೆ ಸಂಯುಕ್ತ ಆಶ್ರಯದಲ್ಲಿ ಮೂರು ದಿನಗಳ ಕಾಲ ಆಯೋಜನೆಗೊಂಡ ಹಲಸು ಹಾಗೂ ಹಣ್ಣುಗಳ ಮೇಳದಲ್ಲಿ ಮಳಿಗೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಲಸಿನ ಹಣ್ಣಿನ ವಿವಿಧ ಖಾದ್ಯ

ಪುತ್ತೂರಿನ ಜೈನಭವನದಲ್ಲಿ ಮೇಳೈಸಿದ ಹಲಸು ಮತ್ತು ಹಣ್ಣುಗಳ ಮೇಳ | ಗಮನ ಸೆಳೆದ ಹಲಸಿನ ಹಣ್ಣಿನ ವಿವಿಧ ಉತ್ಪನ್ನಗಳು Read More »

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ

ಪುತ್ತೂರು: ಎಳವೆಯಲ್ಲಿಯೇ ವಿದ್ಯಾರ್ಥಿಗಳಲ್ಲಿ ವಿವಿಧ ತಾಂತ್ರಿಕ ಮತ್ತು ವೈಜ್ಞಾನಿಕ ವಿಷಯಗಳಲ್ಲಿ ಆಸಕ್ತಿಯನ್ನು ಮೂಡಿಸಿ ಅವರನ್ನು ಶೈಕ್ಷಣಿಕವಾಗಿ ಮತ್ತು ವೈಯಕ್ತಿಕವಾಗಿ ಆ ಕ್ಷೇತ್ರಗಳಿಗೆ ಆಕರ್ಷಿಸುವಂತೆ ಮಾಡುವ ಉದ್ದೇಶದಿಂದ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿತ್ತು. ಮೈಕ್ರೋಸಾಫ್ಟ್ ಆಫೀಸ್‌ನ ಬಗ್ಗೆ ವಿದ್ಯಾರ್ಥಿಗಳಲ್ಲಿ ಪ್ರಾವೀಣ್ಯತೆಯನ್ನು ಹೆಚ್ಚಿಸುವುದು, ಎಚ್‌ಟಿಎಂಎಲ್ ಬಳಸಿಕೊಂಡು ವೆಬ್ ಪೇಜ್‌ಗಳ ವಿನ್ಯಾಸ, ಗೂಗಲ್ ಸೈಟ್‌ಗಳಲ್ಲಿ ವಿವಿಧ ವೆಬ್‌ಸೈಟ್‌ಗಳನ್ನು ನಿರ್ಮಿಸುವ ಬಗ್ಗೆ ಮಾರ್ಗದರ್ಶನ, ವಿಜ್ಞಾನ, ತಂತಜ್ಞಾನ. ಎಂಜಿನಿಯರಿಂಗ್ ಮತ್ತು ಗಣಿತ ವಿಷಯಗಳಲ್ಲಿನ

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ Read More »

ಸಿಡಿಲು ಬಡಿದು ಯುವಕ ಮೃತ್ಯು

ಉಡುಪಿ: ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಮಾಣಿಬೆಟ್ಟು ಬಳಿ ಗುರುವಾರ ರಾತ್ರಿ ನಡೆದಿದೆ. ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ, ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿಯವರ ಪುತ್ರ ರಕ್ಷಿತ್ ಪೂಜಾರಿ (20) ಮೃತಪಟ್ಟವರು. ಸ್ನಾನ ಮಾಡಲೆಂದು ಬಚ್ಚಲು ಮನೆ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ಅವರನ್ನು ಮನೆ ಮಂದಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಯ ವೇಳೆಗೆ ಕೊನೆಯುಸಿರೆಳೆದಿದ್ದಾರೆ.

ಸಿಡಿಲು ಬಡಿದು ಯುವಕ ಮೃತ್ಯು Read More »

error: Content is protected !!
Scroll to Top