ಮಾಜಿ ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ | ಆರೋಪಿ ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲು

ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಪ್ರಜ್ವಲ್ ರೈ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ.17 ರಂದು ವಾಟ್ಸಾಪ್ ಸಾಮಾಜಿಕ ಜಾಲತಾಣದಲ್ಲಿ ಪ್ರಜ್ವಲ್ ರೈ ಎಂಬಾತ ಕೀಳು ಮಟ್ಟದ ಅವಮಾನಕಾರಕ ಪದಗಳನ್ನು ಬಳಸಿ ತೇಜೋವಧೆ ಮಾಡಿದ್ದು, ಸಾಮಾಜಿಕ ಜಾಲತಾಣದ ಮುಖಾಂತರ ರೋಡಿನಲ್ಲಿ “ಕಲ್ಲೇಟು ಬೀಳುವುದು ಖಚಿತ ” ಎಂಬುದಾಗಿ ಜೀವ ಬೆದರಿಕೆ ಹಾಕಿದ್ದ. ಈ ಹಿನ್ನಲೆಯಲ್ಲಿ ಮಾಜಿ ಶಾಸಕರು ಪುತ್ತೂರು ನಗರ ಠಾಣೆಗೆ […]

ಮಾಜಿ ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ | ಆರೋಪಿ ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲು Read More »

ಮೇ 23 : ಕೆಲಿಂಜ-ಪಾಲ್ತಿಮಾರ್ “ಗೋಕುಲ ನಿಲಯ’ದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಕಲ್ಲುರ್ಟಿ ದೈವದ ಕೋಲ

ಪುತ್ತೂರು: ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಕಲ್ಲುರ್ಟಿ ದೈವದ ಕೋಲ ಕೆಲಿಂಜ-ಪಾಲ್ತಿಮಾರ್ ‘ಗೋಕುಲ ನಿಲಯ’ದಲ್ಲಿ ಮೇ 23 ಗುರುವಾರ ಸಂಜೆ ನಡೆಯಲಿದೆ. ಸಂಜೆ 4 ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆ ನಡೆದು ಪ್ರಸಾದ ವಿತರಣೆಯಾಗಲಿದೆ. ಬಳಿಕ ರಾತ್ರಿ 9 ಕ್ಕೆ ಕಲ್ಲುರ್ಟಿ ದೈವದ ಕೋಲ ನಡೆಯಲಿದೆ. ಆ ಪ್ರಯುಕ್ತ ತಾವೆಲ್ಲರೂ ಕುಟುಂಬ ಸಮೇತರಾಗಿ ಆಗಮಿಸಿ ಪ್ರಸಾದ ಸ್ವೀಕರಿಸಿ, ಶ್ರೀ ದೈವ-ದೇವರ ಕೃಪೆಗೆ ಪಾತ್ರರಾಗಬೇಕಾಗಿ ಲಲಿತ ಮತ್ತು ಕೃಷ್ಣಪ್ಪ ಗೌಡ ತಿಳಿಸಿದ್ದಾರೆ.

ಮೇ 23 : ಕೆಲಿಂಜ-ಪಾಲ್ತಿಮಾರ್ “ಗೋಕುಲ ನಿಲಯ’ದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಕಲ್ಲುರ್ಟಿ ದೈವದ ಕೋಲ Read More »

ಬನ್ನೂರು ಮಹಿಳಾ ವಿದ್ಯಾರ್ಥಿ ವಸತಿ ನಿಲಯದಲ್ಲಿ ಡೆಂಗ್ಯೂ ಪ್ರಕರಣ ಪತ್ತೆ | ಮುಂಜಾಗ್ರತಾ ಕ್ರಮ ವಹಿಸುವಂತೆ ನಗರಸಭೆ ಅಧಿಕಾರಿಗಳಿಂದ ಸೂಚನೆ

ಪುತ್ತೂರು: ಬನ್ನೂರು ಮಹಿಳಾ ವಿದ್ಯಾರ್ಥಿ ವಸತಿ ನಿಲಯ ಬಳಿ 3 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, ಈಹಿನ್ನಲೆಯಲ್ಲಿ ನಗರಸಭೆ ಅಧಿಕಾರಿಗಳು ಬುಧವಾರ ಭೇಟಿ ನೀಡಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ನೆಲ್ಲಿಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಿಕ ಯಚ್ಚರೇಶ್ ಅವರೊಂದಿಗೆ ನಗರಸಭಾ ಪೌರಾಯುಕ್ತ ಬದ್ರುದ್ದಿನ್ ಸೌದಗರ್, ನಗರಸಭಾ ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾಪ್ರಸಾದ್, ಹಿರಿಯ ಆರೋಗ್ಯ ನಿರೀಕ್ಷಕ ರಾಮಚಂದ್ರ ಕೆ ಭೇಟಿ ನೀಡಿ ರೋಗ ಹರಡದಂತೆ ಮುನ್ನೇಚ್ಚರಿಕೆ ವಹಿಸಲು ತಿಳಿಸಿದರು. ಬಳಿಕ ವಠಾರದಲ್ಲಿ ನಗರಸಭಾ ವತಿಯಿಂದ

ಬನ್ನೂರು ಮಹಿಳಾ ವಿದ್ಯಾರ್ಥಿ ವಸತಿ ನಿಲಯದಲ್ಲಿ ಡೆಂಗ್ಯೂ ಪ್ರಕರಣ ಪತ್ತೆ | ಮುಂಜಾಗ್ರತಾ ಕ್ರಮ ವಹಿಸುವಂತೆ ನಗರಸಭೆ ಅಧಿಕಾರಿಗಳಿಂದ ಸೂಚನೆ Read More »

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬಂಧನ ನಿರ್ಧಾರ ಕೈ ಬಿಟ್ಟ ಪೊಲೀಸರು | ಸರಕಾರಕ್ಕೆ ನಡುಕ ಹುಟ್ಟಿಸಿದ ಕಾರ್ಯಕರ್ತರ ದಂಡು

ಬೆಳ್ತಂಗಡಿ: ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಪ್ರಕರಣ ದಾಖಲಾಗಿದ್ದು, ಅವರನ್ನು ಬಂಧಿಸುವ ನಿಟ್ಟಿನಲ್ಲಿ ಪೊಲೀಸರು ಇಂದು ಪೂಂಜಾ ಅವರ ಮನೆಗೆ ತೆರಳಿದ್ದು, ಇದೀಗ ಹರೀಶ್ ಪೂಂಜಾ ಅವರ ಬಂಧನದ ನಿರ್ಧಾರವನ್ನು ಕೈಬಿಟ್ಟಿದ್ದಾರೆ. ಹರೀಶ್ ಪೂಂಜ ಬಂಧನ ಸಾಧ್ಯತೆಯ ಹಿನ್ನಲೆಯಲ್ಲಿ ಅವರ ನಿವಾಸಕ್ಕೆ ವಕೀಲರ ತಂಡ ಇಂದು ಭೇಟಿ ನೀಡಿದೆ. ಈ ಸಂದರ್ಭದಲ್ಲಿ ವಕೀಲರ ತಂಡ ಪೊಲೀಸರ ಜೊತೆ ಮಾತುಕತೆ ನೆಡೆಸಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಅವರ ನಿವಾಸ ಎದುರು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬಂಧನ ನಿರ್ಧಾರ ಕೈ ಬಿಟ್ಟ ಪೊಲೀಸರು | ಸರಕಾರಕ್ಕೆ ನಡುಕ ಹುಟ್ಟಿಸಿದ ಕಾರ್ಯಕರ್ತರ ದಂಡು Read More »

ನಾಳೆ (ಮೇ 23):  ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಶಿಲಾನ್ಯಾಸ

ಕಡಬ: ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಶಿಲಾನ್ಯಾಸ ಕಾರ್ಯಕ್ರಮ ಮೇ 23 ಗುರುವಾರ ಬೆಳಿಗ್ಗೆ 10.30 ಕ್ಕೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್‍.ಅಂಗಾರ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಪಾಲ್ಗೊಳ್ಳುವರು. ಅಲ್ಲದೆ ಸೀಮೆಗೆ ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ದೇವಸ್ಥಾನಗಳ ಆಡಳಿತ ಮಂಡಳಿ ಅಧ್ಯಕ್ಷರು, ದೈವಸ್ಥಾನಗಳ ಆಡಳಿತ ಮಂಡಳಿ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹೆಚ್ಚಿನ

ನಾಳೆ (ಮೇ 23):  ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಶಿಲಾನ್ಯಾಸ Read More »

ಕುಂಜಾಡಿ ಸೇತುವೆ ಕೂಡುರಸ್ತೆ ಕಾಮಗಾರಿ : ವಾಹನ ಸಂಚಾರಕ್ಕೆ ನಿರ್ಬಂಧ

ಕಡಬ: ತಾಲೂಕಿನ ಸುಳ್ಯ – ಪೈಚಾರು – ಬೆಳ್ಳಾರೆ – ಸವಣೂರು – ಕುದ್ಮಾರು – ಅಲಂಕಾರು – ಸುರುಳಿ – ಮಾದೇರಿ – ಪಟ್ರಮೆ – ಧಮ೯ಸ್ಥಳ – ಮುಂಡಾಜೆ- ನೆಲ್ಯಾಡಿ ರಸ್ತೆಯ ಕುಂಜಾಡಿ ಎಂಬಲ್ಲಿ ಸೇತುವೆಯ ಕೂಡು ರಸ್ತೆ ನಿಮಾ೯ಣ ಕಾಮಗಾರಿ ನಡೆಯುವುದರಿಂದ ಮೇ23 ರಿಂದ 27 ರ ವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈ ನಿಟ್ಟಿನಲ್ಲಿ ಸಾವ೯ಜನಿಕರು ಕೆಳಗೆ ತಿಳಿಸಿದ ಪರ್ಯಾಯ ರಸ್ತೆಗಳ ಬಳಕೆ ಮಾಡುವಂತೆ ಲೋಕೋಪಯೋಗಿ ಇಲಾಖೆ ವಿನಂತಿಸಿದೆ.

ಕುಂಜಾಡಿ ಸೇತುವೆ ಕೂಡುರಸ್ತೆ ಕಾಮಗಾರಿ : ವಾಹನ ಸಂಚಾರಕ್ಕೆ ನಿರ್ಬಂಧ Read More »

ಮಂಗಳೂರು ವಿಮಾನ ದುರಂತಕ್ಕೆ 14 ವರ್ಷ | ದುರಂತದಲ್ಲಿ ಮಡಿದವರಿಗೆ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ

ಮಂಗಳೂರು : ದೇಶವನ್ನೇ ಬೆಚ್ಚಿ ಬೀಳಿಸಿದ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತ ಘಟನೆ ನಡೆದು ಇಂದಿಗೆ 14 ವರ್ಷ ತುಂಬಿದೆ. ಕಳೆದ 2010ರ ಮೇ 22ರಂದು ಬೆಳಗ್ಗೆ 6:20ಕ್ಕೆ ದುಬೈನಿಂದ ಆಗಮಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಹಂತದಲ್ಲಿ ಅಪಘಾತಕ್ಕೀಡಾಗಿತ್ತು. ಘಟನೆಯಲ್ಲಿ ವಿಮಾನದಲ್ಲಿದ್ದ 166 ಮಂದಿಯ ಪೈಕಿ 158 ಮಂದಿ ಮೃತಪಟ್ಟಿದ್ದರು. 8 ಮಂದಿ ಪಾರಾಗಿದ್ದರು. ವಿಮಾನ ಅಪಘಾತದಲ್ಲಿ ಮೃತಪಟ್ಟವರ ಪೈಕಿ ಗುರುತು ಹಿಡಿಯಲಾಗದ 12

ಮಂಗಳೂರು ವಿಮಾನ ದುರಂತಕ್ಕೆ 14 ವರ್ಷ | ದುರಂತದಲ್ಲಿ ಮಡಿದವರಿಗೆ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ Read More »

ಕಡಬ ಐಐಸಿಟಿ ಮೊಂಟೆಸ್ಸರಿ ಶಿಕ್ಷಣ ಸಂಸ್ಥೆಗೆ ಪ್ರಥಮ ವರ್ಷದಲ್ಲಿ 100% ಫಲಿತಾಂಶ

ಕಡಬ: ಭಾರತ ಸರಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಅಧೀನದಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್  ಆಫ್ ಕ್ಯಾರಿಯರ್ ಟ್ರೈನಿಂಗ್ ನ ಆಶ್ರಯದಲ್ಲಿ ಕಡಬದ ಸೈಂಟ್ ಜೋಕಿಮ್ಸ್  ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಐ ಎಸ್ ಓ 9001: 2015 ಸಂಸ್ಥೆಯಿಂದ ಪ್ರಾಮಾಣಿಕರಿಸಿದ ಐಐಸಿಟಿ  ಶಿಕ್ಷಣ ಸಂಸ್ಥೆಯ ವತಿಯಿಂದ ಮೊಂಟೆಸ್ಸರಿ (ನರ್ಸರಿ ಟೀಚರ್ ಟ್ರೈನಿಂಗ್) ಶಿಕ್ಷಕರ ತರಬೇತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 9 ವಿದ್ಯಾರ್ಥಿನಿಯರಲ್ಲಿ 5 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 4 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವುದರೊಂದಿಗೆ ಸಂಸ್ಥೆಗೆ

ಕಡಬ ಐಐಸಿಟಿ ಮೊಂಟೆಸ್ಸರಿ ಶಿಕ್ಷಣ ಸಂಸ್ಥೆಗೆ ಪ್ರಥಮ ವರ್ಷದಲ್ಲಿ 100% ಫಲಿತಾಂಶ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಬ್ಯಾಂಕಿಂಗ್‌ ಕ್ಷೇತ್ರದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವಾಣಿಜ್ಯ ಮತ್ತು ಆಡಳಿತ ಸಂಘ , ಟ್ರೈನಿಂಗ್‌ ಆ್ಯಂಡ್‌ ಪ್ಲೇಸ್‌ಮೆಂಟ್‌ ಸೆಲ್‌ ಹಾಗೂ ಸೀನಿಯರ್‌ ಚೇಂಬರ್‌ ಇಂಟರ್‌ನ್ಯಾಶನಲ್ ಪುತ್ತೂರು ರೀಜನ್‌ಗಳ ಸಯೋಗದಲ್ಲಿ ಕಾಲೇಜಿನ ಸ್ನಾತಕೋತ್ತರ ಸಭಾಭವನದಲ್ಲಿ “ಅನ್‌ಲಾಕಿಂಗ್‌ ದ ಪಾಥ್‌ : ನ್ಯಾವಿಗೇಟಿಂಗ್‌ ಕರಿಯರ್‌ ಇನ್‌ ಬ್ಯಾಂಕಿಂಗ್‌ ಸೆಕ್ಟರ್‌” ಎಂಬ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊರವರು ಬ್ಯಾಂಕಿಂಗ್‌ ಒಂದು ಬಹಳಷ್ಟು ಉದ್ಯೋಗಾವಕಾಶಗಳಿರುವ ಕ್ಷೇತ್ರ. ಬ್ಯಾಂಕಿಂಗ್ ಕ್ಷೇತ್ರವು ಜಾಗತಿಕ ಆರ್ಥಿಕ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಬ್ಯಾಂಕಿಂಗ್‌ ಕ್ಷೇತ್ರದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ Read More »

800 ವರ್ಷ ಹಿಂದಿನ ಕನ್ನಡ ಶಾಸನ ಪತ್ತೆ : ದ ಕ ಜಿಲ್ಲಾ ಕ.ಸಾ.ಪ  – “ಶಾಸನ -ಶೋಧನ- ಅಧ್ಯಯನ- ಸಂರಕ್ಷಣಾ” ಯೋಜನೆ -2

ಪುತ್ತೂರು: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ದೋಂತಿಲ ಎಂಬಲ್ಲಿ  ಶ್ರೀ ಮಹಾವಿಷ್ಣು ಸುಬ್ರಮಣ್ಯೇಶ್ವರ ದೇವಸ್ಥಾನದಲ್ಲಿ ಸುಮಾರು 800 ವರ್ಷ ಹಳೆಯದಾದ ಕನ್ನಡ ಶಿಲಾ ಶಾಸನವೊಂದು ಇತ್ತೀಚಿಗೆ ಪತ್ತೆಯಾಗಿದೆ. ಈ ಶಿಲಾ ಶಾಸನವು ಸುಮಾರು 30 ಇಂಚು ಎತ್ತರ ಹಾಗೂ 16 ಇಂಚು ಅಗಲ , 4 ಇಂಚು ದಪ್ಪ ಇದೆ. ಶಾಸನದ ಮುಖ್ಯ ಪಠ್ಯವನ್ನು 14 ಇಂಚು ಅಗಲ ಹಾಗೂ 17 ಇಂಚು ಎತ್ತರದ ಅಳತೆಯಲ್ಲಿ  ಶಿಲೆಯನ್ನು ಅರ್ಧ ಇಂಚು ಒಳಭಾಗಕ್ಕೆ ಕೊರೆದು ಹೊರ ಭಾಗದಲ್ಲಿ  ಚೌಕ

800 ವರ್ಷ ಹಿಂದಿನ ಕನ್ನಡ ಶಾಸನ ಪತ್ತೆ : ದ ಕ ಜಿಲ್ಲಾ ಕ.ಸಾ.ಪ  – “ಶಾಸನ -ಶೋಧನ- ಅಧ್ಯಯನ- ಸಂರಕ್ಷಣಾ” ಯೋಜನೆ -2 Read More »

error: Content is protected !!
Scroll to Top