ಗ್ಯಾರಂಟಿ ಯೋಜನೆಗಳಿಂದ ತತ್ತರಿಸಿದ ರಾಜ್ಯ ಸರಕಾರ | ಸರಿದೂಗಿಸಲು ಏರಿಕೆ ಮಾಡಲಿದೆ ಮದ್ಯದ ದರ

ಬೆಂಗಳೂರು: ಉಚಿತ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ರಾಜ್ಯ ಸರಕಾರಕ್ಕೆ ಸವಾಲಾಗಿದೆ. ಆರ್ಥಿಕ ಸಂಪನ್ಮೂಲಗಳ ಸಂಗ್ರಹಕ್ಕಾಗಿ ಭಾರೀ ಕಸರತ್ತು ನಡೆಸುತ್ತಿರುವ ಸರ್ಕಾರ, ಮತ್ತೆ ದೇಶೀಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾಗಿದೆ. ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಕೇರಳ ಸೇರಿದಂತೆ ಹೊರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಲವು ಸ್ಪ್ಯಾಬ್‌ಗಳ ಅಗ್ಗದ ಮದ್ಯಗಳ ಬೆಲೆ ತುಂಬಾ ಕಡಿಮೆಯಿದೆ. ರಾಜ್ಯದಲ್ಲಿ ಸೆಮಿ ಪ್ರೀಮಿಯಂ ಹಾಗೂ ಪ್ರೀಮಿಯಂ ವಿದೇಶಿ ಮದ್ಯಕ್ಕೆ ಹೋಲಿಸಿದರೆ ಅಗ್ಗದ ಬೆಲೆಯ ಮದ್ಯಗಳ ಮಾರಾಟ ಹೆಚ್ಚಿದೆ. ಹೀಗಾಗಿ ಸರ್ಕಾರ ಮದ್ಯದ […]

ಗ್ಯಾರಂಟಿ ಯೋಜನೆಗಳಿಂದ ತತ್ತರಿಸಿದ ರಾಜ್ಯ ಸರಕಾರ | ಸರಿದೂಗಿಸಲು ಏರಿಕೆ ಮಾಡಲಿದೆ ಮದ್ಯದ ದರ Read More »

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಮೃತ್ಯು

ಕಡಬ : ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕ ಮೃತಪಟ್ಟಿರುವ ಘಟನೆ ಕಡಬ ತಾಲೂಕು ಕುಂತೂರು ಗ್ರಾಮದಲ್ಲಿ ನಡೆದಿದೆ. ಕೃಷ್ಣ ಕುಮಾರ್ ಎಂಬವರ ದೂರಿನಂತೆ, ಕೃಷ್ಣ ಕುಮಾರ್ ರವರ ಪತ್ನಿಯ ತಮ್ಮನಾದ ಕೋಡಿಂಬಾಳ ಗ್ರಾಮ ಕಡಬ ನಿವಾಸಿ ಶರತ್ (29), 6 ತಿಂಗಳಿನಿಂದ ಕಡಬ ತಾಲೂಕು ಕುಂತೂರು ಗ್ರಾಮದ ಉದಯಶಂಕರ್ ಭಟ್ ಎಂಬವರ ಮನೆಗೆ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗುತ್ತಿದ್ದು, ಮೇ 17 ರಂದು ಸಂಜೆ, ಉದಯಶಂಕರ್ ಭಟ್ ರವರ ಜಾಗದಲ್ಲಿರುವ ಶೆಡ್‌ನಲ್ಲಿ ಮೃತಪಟ್ಟಿರುವುದಾಗಿ ಉದಯಶಂಕರ್ ಭಟ್

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಮೃತ್ಯು Read More »

ಉಡುಪಿ ಕಾಲೇಜು ವಿದ್ಯಾರ್ಥಿನಿ‌ ನಾಪತ್ತೆ !

ಉಡುಪಿ : ಮನೆಯಿಂದ ಕಾಲೇಜಿಗೆ ಹೋಗುತ್ತೇನೆ ಎಂದು ಹೋಗಿದ್ದ ವಿಧ್ಯಾರ್ಥಿನಿ ನಾಪತ್ತೆಯಾದ ಘಟನೆ ಹಿರಿಯಡ್ಕದಲ್ಲಿ ನಡೆದಿದ್ದು, ನಾಪತ್ತೆಯಾದ ವಿಧ್ಯಾರ್ಥಿನಿ ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ(20), ಎಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ, 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್‌ ಠಾಣೆ ದೂ.ಸಂಖ್ಯೆ: 0820-2542248, ಮೊ.ನಂ. 9480805452, ಉಡುಪಿ ಕಂಟ್ರೋಲ್ ರೂಂ

ಉಡುಪಿ ಕಾಲೇಜು ವಿದ್ಯಾರ್ಥಿನಿ‌ ನಾಪತ್ತೆ ! Read More »

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ !

ಮಂಗಳೂರು : ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (70) ಅವರು ಮೇ 17ರಂದು ಮುಂಬೈಯಲ್ಲಿ ನಿಧನ ಹೊಂದಿದರು. ರಘುನಂದನ್‌ ಅವರು 1954ರಲ್ಲಿ ಮೂಲ್ಕಿಯಲ್ಲಿ ಬಡ ಕುಟಂಬವೊಂದರಲ್ಲಿ ಜನಿಸಿದ್ದರು. ಕಾಮತ್ ಅವರ ತಂದೆ ಹಣ್ಣಿನ ವ್ಯಾಪಾರಿಯಾಗಿದ್ದರು. ಕಾಮತ್ ಅವರು ತಮ್ಮ 15ನೇ ವಯಸ್ಸಿನಲ್ಲಿ ಅಣ್ಣನ ಹೊಟೇಲ್‌ಗೆ ಕೆಲಸಕ್ಕೆಂದು ಮುಂಬೈಗೆ ತೆರಳಿದ್ದರು. ಅನಂತರ ಹೊಟೇಲ್ ಉದ್ಯಮ ಆರಂಭಿಸಿ ಹಣ್ಣುಗಳಿಂದಲೇ ಐಸ್‌ಕ್ರೀಂ ತಯಾರಿಸಿ ಜನಪ್ರಿಯರಾದರು.ಮುಂಬೈಯಲ್ಲಿ 1984ರಲ್ಲಿ ನ್ಯಾಚುರಲ್ಸ್ ಐಸ್ ಕ್ರೀಂ ಆರಂಭಿಸಿದ್ದರು. ಅದು ದೇಶಾದ್ಯಂತ ಜನಪ್ರಿಯವಾಗಿ ದೊಡ್ಡ ಉದ್ಯಮವಾಗಿ ಬೆಳೆದಿದೆ.

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ ! Read More »

ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಮೃತ್ಯು

ನೆಲ್ಯಾಡಿ : ಕೆಲ ದಿನದ ಹಿಂದೆ ತೆಂಗಿನಮರದಿಂದ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನೆಲ್ಯಾಡಿ ಗ್ರಾಮದ ತೋಟ ನಿವಾಸಿ ಧನಂಜಯ ಗೌಡ (43) ಅವರು ಮೇ 16ರಂದು ಸಂಜೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಧನಂಜಯ ಗೌಡ ಅವರು ಮೇ.11ರಂದು ನೆರೆಮನೆಯ ಚಂದ್ರ ಬಿರುವಳಿಕೆ ಎಂಬವರ ಮನೆಗೆ ಕೃಷಿ ಕೆಲಸಕ್ಕೆ ಹೋಗಿದ್ದು ಅಲ್ಲಿ ಸಂಜೆ 6 ಗಂಟೆ ವೇಳೆಗೆ ತೆಂಗಿನ ಮರದಿಂದ ಕಾಯಿ ಕೀಳುತ್ತಿರುವಾಗ ಆಕಸ್ಮಿಕವಾಗಿ ಕೈ ಜಾರಿ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು. ಅವರನ್ನು

ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಮೃತ್ಯು Read More »

ನಟಿ ಪವಿತ್ರಾ ಜಯರಾಮ್ ಆಪ್ತ, ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆ

ಕೆಲವೇ ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಬೆನ್ನಲ್ಲೇ ಪವಿತ್ರಾ ಜಯರಾಮ್ ಜೊತೆ ಸ್ನೇಹ ಹೊಂದಿದ್ದ ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪವಿತ್ರಾ ಜಯರಾಮ್ ಜೊತೆ ಚಂದು ಆಪ್ತವಾಗಿದ್ದರು. ಪವಿತ್ರಾ ನಿಧನದ ಬಳಿಕ ತೀವ್ರ ದುಃಖಕ್ಕೆ ಒಳಗಾಗಿದ್ದ ಚಂದು ಅವರು ಹೈದರಾಬಾದ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಹೈದರಾಬಾದ್ ನ ಮಣಿಕೊಂಡದಲ್ಲಿರುವ ಮನೆಯಲ್ಲಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು

ನಟಿ ಪವಿತ್ರಾ ಜಯರಾಮ್ ಆಪ್ತ, ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆ Read More »

ಸಂತ ಫಿಲೋಮಿನಾ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

ಪುತ್ತೂರು: ವಿದ್ಯಾರ್ಥಿಗಳು ಉತ್ಸಾಹದ ಚಿಲುಮೆಗಳಾಗಿರಬೇಕು. ದೇಶವನ್ನು ಮುಂದುವರಿಸುವ ಜವಾಬ್ದಾರಿ ವಿದ್ಯಾರ್ಥಿಗಳದ್ದು. ಈ ನಿಟ್ಟಿನಲ್ಲಿ ಕಠಿಣ ಪರಿಶ್ರಮ, ಪ್ರಾಮಾಣಿಕತೆ ಹಾಗೂ ನೈತಿಕತೆ ಇರಬೇಕು. ಯಶಸ್ಸು ಒಂದು ದಿನದಲ್ಲಿ ಬರುವಂತಹದ್ದಲ್ಲ. ಹಂತ ಹಂತವಾಗಿ ತಾಳ್ಮೆಯಿಂದ ಮುನ್ನಡೆದರೆ ಮಾತ್ರ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಸಂತ ಫಿಲೋಮಿನಾ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕೆಥೋಲಿಕ್ ಶಿಕ್ಷಣ ಮಂಡಳಿ ಕಾರ್ಯದರ್ಶಿ ಅತಿ ವಂ. ಆ್ಯಂಟನಿ ಮೈಕೆಲ್ ಶೆರಾ ಅಧ್ಯಕ್ಷತೆ

ಸಂತ ಫಿಲೋಮಿನಾ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ Read More »

ಪತ್ರಿಕಾಗೋಷ್ಠಿ ವಿಚಾರ ಮುಂದಿಟ್ಟು ಮಾಜಿ ಶಾಸಕರಿಗೆ ಜೀವಬೆದರಿಕೆ | ಬಿಜೆಪಿ ವತಿಯಿಂದ ನಾಳೆ ತುರ್ತು ಸಭೆ

ಪುತ್ತೂರು: ಪತ್ರಿಕಾಗೋಷ್ಠಿ ವಿಚಾರವನ್ನು ಮುಂದಿಟ್ಟುಕೊಂಡು ಮಾಜಿ ಶಾಸಕರ ಕುರಿತು ಅವಹೇಳನಕಾರಿಯಾಗಿ ಸಾನಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಹಾಗೂ ಫೋನ್ ಮೂಲಕ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಲು ಮೇ 18 ರಂದು ಸಭೆ ಕರೆಯಲಾಗಿದೆ. ಬೆಳಿಗ್ಗೆ 10 ಗಂಟೆಗೆ ಪಕ್ಷದ ಕಚೇರಿಯಲ್ಲಿ ತುರ್ತು ಸಭೆ ಕರೆಯಲಾಗಿದ್ದು, ಪಕ್ಷದ ಪ್ರಮುಖರು, ಕಾರ್ಯಕರ್ತರು, ಜನಪ್ರತಿನಿಧಿಗಳು ಉಪಸ್ಥಿತರಿರಬೇಕೆಂದು ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲದ ಪ್ರಕಟಣೆಯಲ್ಲಿ ತಿಳಿಸಿದೆ. ಮೇ 17 ಶುಕ್ರವಾರ ಮಾಜಿ ಶಾಸಕ ಸಂಜೀವ ಮಠಂದೂರು

ಪತ್ರಿಕಾಗೋಷ್ಠಿ ವಿಚಾರ ಮುಂದಿಟ್ಟು ಮಾಜಿ ಶಾಸಕರಿಗೆ ಜೀವಬೆದರಿಕೆ | ಬಿಜೆಪಿ ವತಿಯಿಂದ ನಾಳೆ ತುರ್ತು ಸಭೆ Read More »

ಮೇ 19 : ಕಾವುನಲ್ಲಿ ವಿಶ್ವಕರ್ಮ ಪೂಜೆ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ

ಪುತ್ತೂರು: ಕಾವು ಶ್ರೀ ವಿಶ್ವಕರ್ಮ ಪೂಜಾ ಸಮಿತಿ ವತಿಯಿಂದ ಶ್ರೀ ವಿಶ್ವಕರ್ಮ ಪೂಜೆ ಮೇ 19 ಭಾನುವಾರ ಬೆಳಿಗ್ಗೆ 8.30 ರಿಂದ ಕಾವು ನನ್ಯ ಜನಮಂಗಲ ಸಭಾಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 8.30 ರಿಂದ ಭಜನೆ, 9.30 ರಿಂದ ಶ್ರೀ ವಿಶ್ವಕರ್ಮ ಪೂಜೆ ಆರಂಭಗೊಳ್ಳಲಿದೆ. ಬೆಳಿಗ್ಗೆ 11ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ಆನೆಗುಂದಿ ಗುರುಸೇವಾ ಪರಿಷತ್ ಮಹಾಮಂಡಲದ ಅಧ್ಯಕ್ಷ ವಿ.ಪುರುಷೋತ್ತಮ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಪಡುಕುತ್ಯಾರು ಆನೆಗುಂದಿ ಗುರುಸೇವಾ ಪರಿಷತ್ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ವೇ|

ಮೇ 19 : ಕಾವುನಲ್ಲಿ ವಿಶ್ವಕರ್ಮ ಪೂಜೆ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಹೋರಿಗಳ ಕಳವು | ಬಲ್ನಾಡು ಉಳ್ಳಾಲ್ತಿ ಅಮ್ಮನ ಮೊರೆ ಹೋದ ಬಜರಂಗದಳ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ 1 ರಿಂದ ನಾಪತ್ತೆಯಾಗಿರುವ ಹೋರಿಗಳ ಪತ್ತೆಗಾಗಿ ಬಜರಂಗ ದಳದವರು ದೈವದ ಮೊರೆ ಹೋಗಿದ್ದಾರೆ. ದೇವಸ್ಥಾನದ ವಠಾರದಲ್ಲೇ ಸುತ್ತುತ್ತಿದ್ದ ಎರಡು ಹೋರಿಗಳು ಕಳ್ಳತನವಾಗಿರುವ ಶಂಕೆ ವ್ಯಕ್ತಪಡಿಸಿರುವ ಬಜರಂಗದಳ ಪುತ್ತೂರು ಘಟಕ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಹೋರಿ ಅಡ್ಯನಡ್ಕ ಸಮೀಪವಿರುವ ಸಾಧ್ಯತೆ ಕಂಡು ಬಂದಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಹೋರಿ ಬದುಕಿರುವ ಬಗ್ಗೆ ಮಾಹಿತಿ ದೊರಕಿದೆ. ಹೋರಿಯನ್ನು ಮಾಂಸಕ್ಕಾಗಿ ಕೊಂಡು ಹೋಗಿರುವ ಸಾಧ್ಯತೆ ಎಂದು ಪ್ರಶ್ನಾಚಿಂತನೆಯಲ್ಲಿ ಸೂಚನೆ ದೊರಕಿದೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಹೋರಿಗಳ ಕಳವು | ಬಲ್ನಾಡು ಉಳ್ಳಾಲ್ತಿ ಅಮ್ಮನ ಮೊರೆ ಹೋದ ಬಜರಂಗದಳ Read More »

error: Content is protected !!
Scroll to Top