ವಿವಾಹಿತ ಮಹಿಳೆ ಆತ್ಮಹತ್ಯೆ !

ಕಾಣಿಯೂರು : ಪತಿಯ ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಣಿಯೂರು ಗ್ರಾಮದ ಪಣ್ಚತ್ತಾರು ಸಮೀಪ ಉಪ್ಪಡ್ಕ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಉಪ್ಪಡ್ಕ ನಿವಾಸಿ ಪೂವಪ್ಪ ನಾಯ್ಕ ಎಂಬವರ ಪತ್ನಿ ಚಂದ್ರಾವತಿ (38) ಮೃತಪಟ್ಟವರು. ಚಂದ್ರಾವತಿ ಅವರನ್ನು 16 ವರ್ಷದ ಹಿಂದೆ ಪೂವಪ್ಪ ನಾಯ್ಕ ಅವರು ಮದುವೆಯಾಗಿದ್ದರು. ದಂಪತಿಗೆ ಪ್ರಖ್ಯಾತ್‌ (15)  ಹಾಗೂ ನಿಶಾಂತ್ (7) ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ. ಪೂವಪ್ಪ ನಾಯ್ಕ ಮದುವೆಯಾದ ಕೆಲವು ವರ್ಷಗಳ ಬಳಿಕ ಮದ್ಯ ವ್ಯಸನಿಯಾಗಿ, ಸರಿಯಾಗಿ […]

ವಿವಾಹಿತ ಮಹಿಳೆ ಆತ್ಮಹತ್ಯೆ ! Read More »

ಪಯತ್ತೂರು ರೋಟರಿ ಕ್ಲಬ್ ನಿಂದ ಹಿಂದೂ ರುದ್ರಭೂಮಿಗೆ  ವಾಟರ್ ಕೂಲರ್ ಹಸ್ತಾಂತರ

ಪುತ್ತೂರು: ಪುತ್ತೂರಿನ ಹಿರಿಯ ಕ್ಲಬ್ ಎನಿಸಿದ ರೋಟರಿ ಕ್ಲಬ್ ಪುತ್ತೂರು ವತಿಯಿಂದ ಮಡಿವಾಳಕಟ್ಟೆಯಲ್ಲಿರುವ ಹಿಂದೂ ರುದ್ರಭೂಮಿಗೆ ವಾಟರ್ ಕೂಲರ್ ಹಸ್ತಾಂತರಿಸುವ ಕಾರ್ಯಕ್ರಮ ಮೇ 3 ರಂದು ಸಂಜೆ ಜರಗಿತು. ಅಂತರರಾಷ್ಟ್ರೀಯ ರೋಟರಿಯ ಮಹಾದಾನಿ ಎನಿಸಿಕೊಂಡು ಬೀಕ್ವೆಸ್ಟ್ ಸೊಸೈಟಿ ಮೆಂಬರ್ ಎಂದು ಗುರುತಿಸಿಕೊಂಡಿರುವ ರಾಮಕೃಷ್ಣ ಕೆ.ರವರು ವಾಟ‌ರ್ ಕೂಲ‌ರ್ ಅನ್ನು ಹಸ್ತಾಂತರಿಸುವ ಮೂಲಕ ಉದ್ಘಾಟಿಸಿದರು. ವಾಟರ್ ಕೂಲರ್ ನ ಪ್ರಾಯೋಜಕತ್ವ ವಹಿಸಿಕೊಂಡಿರುವ ಡಾ.ಹರೀಶ್ ಪಿ.ಶೆಣೈರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಕ್ಲಬ್ ನಿಯೋಜಿತ ಅಧ್ಯಕ್ಷ ಡಾ.ಶ್ರೀಪತಿ ರಾವ್‌, ಕಾರ್ಯದರ್ಶಿ ಸುಜಿತ್ ಡಿ.ರೈ, ಕಮ್ಯೂನಿಟಿ

ಪಯತ್ತೂರು ರೋಟರಿ ಕ್ಲಬ್ ನಿಂದ ಹಿಂದೂ ರುದ್ರಭೂಮಿಗೆ  ವಾಟರ್ ಕೂಲರ್ ಹಸ್ತಾಂತರ Read More »

ವಿವೇಕಾನಂದ ಪದವಿ ಕಾಲೇಜಿನಲ್ಲಿ ಸಪ್ತಪರ್ಣೋತ್ಸವ-ವಿದ್ಯಾರ್ಥಿ ಸಂಘದ ದಿನಾಚರಣೆ

ಪುತ್ತೂರು: ವಿದ್ಯಾರ್ಥಿ ಮತ್ತು ಅಧ್ಯಾಪಕ ಪರಂಪರೆ ಬೆಳೆಯಬೇಕು. ಇಂದಿನ ವಿದ್ಯಾರ್ಥಿ ಸಮೂಹವೇ ನಮ್ಮ ದೇಶದ ಮುಂದಿನ ಭವಿಷ್ಯದ ರೂವಾರಿಗಳು ಆದ್ದರಿಂದ ನಾವೆಲ್ಲರು ಒಗ್ಗಟ್ಟಾಗಿ ಶ್ರಮಿಸಬೇಕು. ಪರಸ್ಪರ ಗೌರವ ಕೊಡುವುದನ್ನು ಬೆಳೆಸಿಕೊಳ್ಳೋಣ, ಎಲ್ಲರಲ್ಲೂ ಸಮಾನತೆ ಕಾಣುವ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್ ಧರ್ಮ ಹೇಳಿದರು. ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ)ದಲ್ಲಿ ನಡೆದ ಸಪ್ತಪರ್ಣೊತ್ಸವ, ವಿದ್ಯಾರ್ಥಿ ಸಂಘದ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.

ವಿವೇಕಾನಂದ ಪದವಿ ಕಾಲೇಜಿನಲ್ಲಿ ಸಪ್ತಪರ್ಣೋತ್ಸವ-ವಿದ್ಯಾರ್ಥಿ ಸಂಘದ ದಿನಾಚರಣೆ Read More »

ಹೃದಯಾಘಾತದಿಂದ ಯುವಕ ಜನಾರ್ದನ ಮೃತ್ಯು

ಉಪ್ಪಿನಂಗಡಿ : ಯುವಕನೋರ್ವ ಮಲಗಿದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ನಿನ್ನಿಕಲ್ಲಿನಲ್ಲಿ ನಡೆದಿದೆ. ನಿನ್ನಿಕಲ್ಲು ನಿವಾಸಿ ದಿ. ಗೋಪಾಲ ಗೌಡರ ಪುತ್ರ ಜನಾರ್ದನ ನಿನ್ನಿಕಲ್ಲು (27) ಮೃತಪಟ್ಟವರು. ಮೇಸ್ತ್ರಿ ಕೆಲಸಕ್ಕೆ ಹೋಗುತ್ತಿದ್ದ ಜನಾರ್ದನ ಕೆಲಸಕ್ಕೆ ರಜೆ ಹಾಕಿ ಮನೆಯಲ್ಲೇ ಇದ್ದರು. ಅವರ ತಾಯಿ ತೋಟದ ಕೆಲಸಕ್ಕೆ ಹೋಗಿದ್ದು, ಸಂಜೆ ಬಂದು ನೋಡಿದಾಗ ಅವರು ಮಲಗಿದ್ದಲ್ಲೇ ಮೃತಪಟ್ಟಿರುವುದು ತಿಳಿದುಬಂದಿದೆ. ಹೃದಯಾಘಾತವಾಗಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಜನಾರ್ದನ ಅವರು ದುರ್ಗಾಗಿರಿ ಶ್ರೀ ದುರ್ಗಾ ಭಜನ ಮಂಡಳಿ ಹಾಗೂ ಶ್ರೀ ದುರ್ಗಾ ಯುವಕ

ಹೃದಯಾಘಾತದಿಂದ ಯುವಕ ಜನಾರ್ದನ ಮೃತ್ಯು Read More »

ನಾಮಪತ್ರ ಸಲ್ಲಿಕೆ ಬೆನ್ನಲ್ಲೇ ರಾಹುಲ್ ವಿರುದ್ಧ ಪ್ರತಿಭಟನೆ

ಉತ್ತರಪ್ರದೇಶ : ರಾಯಬರೇಲಿ ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ ಬೆನ್ನಲ್ಲೇ ರಾಹುಲ್‌ ವಿರುದ್ಧ ಪ್ರತಿಭಟನೆ ಕೂಡ ನಡೆದಿದೆ. ಶುಕ್ರವಾರ ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ ಹಾಗೂ ಪಕ್ಷದ ಮುಖಂಡರ ಜೊತೆ ತೆರಳಿ ರಾಯಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಮೇಥಿ ಬಿಟ್ಟು ರಾಯಬರೇಲಿ ಆಯ್ಕೆ ಮಾಡಿದ್ದಕ್ಕೆ ಪ್ರಧಾನಿ ಮೋದಿ, ಅಮಿತ್‌ ಶಾ ಸೇರಿ ಅನೇಕ ಬಿಜೆಪಿ ನಾಯಕರು ಟೀಕಿಸಿದ್ದು, ಅಮೇಥಿಯಿಂದ ಓಡಿದ ರಾಹುಲ್‌ ಈಗ ರಾಯಬರೇಲಿ ತಲುಪಿದ್ದಾರೆ ಎಂದು ಅಣಕಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಬೆನ್ನಲ್ಲೇ ರಾಹುಲ್ ವಿರುದ್ಧ ಪ್ರತಿಭಟನೆ Read More »

ಸಿಡಿಲು ಬಡಿದು ವ್ಯಕ್ತಿ ಮೃತ್ಯು

ಸುಬ್ರಹ್ಮಣ್ಯ: ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ  ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಸಿಡಿಲು ಬಡಿದು ಮೃತಪಟ್ಟವರು. ಶುಕ್ರವಾರ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಸಂಜೆ ಗಾಳಿ, ಗುಡುಗು ಆರಂಭಗೊಂಡಿದ್ದು ಈ ವೇಳೆ ಮನೆಯಂಗಳದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದರ್ ಅವರು ರಾಶಿ ಮಾಡುವ ವೇಳೆ ಸಿಡಿಲು ಬಡಿದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸೋಮ ಸುಂದರ್ ಅವರು ಸುಬ್ರಹ್ಮಣ್ಯ ಸಮೀಪ

ಸಿಡಿಲು ಬಡಿದು ವ್ಯಕ್ತಿ ಮೃತ್ಯು Read More »

ಶಾಸಕ ಅಶೋಕ್ ರೈಗೆ ಕರೆ ಮಾಡಿದ ಉಡುಪಿಯ ಬಾಲಕ | ಶಿಕ್ಷಣದ ಪೂರ್ತಿ ವೆಚ್ಚ ಭರಿಸುವೆ : ಅಶೋಕ್ ರೈ ಭರವಸೆ

ಪುತ್ತೂರು: ಉಡುಪಿಯ ಖಾಸಗಿ ಕಾರ್ಯಕ್ರಮವೊಂದರಲ್ಲಿ ಎಂಜಲು ಪ್ಲೇಟ್ ಶುಚಿ ಮಾಡುತ್ತಿದ್ದ ಬಾಲಕನೋರ್ವನ ಜೊತೆ ಮಾತುಕತೆ ನಡೆಸಿದ ವಿಚಾರ ಮತ್ತು ಆ ಬಾಲಕನೊಂದಿಗೆ ತೆಗೆದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದ್ದು ಇದೀಗ ಬಾಲಕ ಶಾಸಕರಿಗೆ ಕರೆ ಮಾಡಿ ನಾನು ಕಲಿಯುತ್ತೇನೆ , ಓದು ಮುಂದುವರೆಸುತ್ತೇನೆ ಎಂದು ತಿಳಿಸಿದ್ದು ಶಿಕ್ಷಣದ ಪೂರ್ತಿವೆಚ್ಚವನ್ನು ತಾನು ಭರಿಸುವುದಾಗಿ ಶಾಸಕರು ತಿಳಿಸಿದ್ದಾರೆ. ಖಾಸಗಿ ಕಾರ್ಯಕ್ರಮಕ್ಕೆ ತೆರಳಿದ್ದ ಶಾಸಕರು ಅಲ್ಲಿ ಊಟ ಮಾಡಿ ಪ್ಲೇಟ್ ಇಡಲು ತೆರಳಿದಾಗ ಅಲ್ಲೋರ್ವ ಬಾಲಕ ಎಂಜಲು ಪ್ಲೇಟ್

ಶಾಸಕ ಅಶೋಕ್ ರೈಗೆ ಕರೆ ಮಾಡಿದ ಉಡುಪಿಯ ಬಾಲಕ | ಶಿಕ್ಷಣದ ಪೂರ್ತಿ ವೆಚ್ಚ ಭರಿಸುವೆ : ಅಶೋಕ್ ರೈ ಭರವಸೆ Read More »

ಕಲ್ಯಾಣ ಜ್ಯುವೆಲ್ಲರ್ಸ್ ನಲ್ಲಿ ಎಸಿ ಸ್ಪೋಟ : ಆರು ಮಂದಿಗೆ ಗಾಯ

ಬಳ್ಳಾರಿ : ಬಳ್ಳಾರಿ ನಗರದ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ಎಸಿ ಸ್ಪೋಟಗೊಂಡಿದ್ದು, ಇದನ್ನು ದುರಸ್ತಿಗೊಳಿಸಲು ಬಂದಿದ್ದ ನಿಂಗಪ್ಪ, ಸೈಯದ್ ಝುಬೇರ್ ಎಂಬವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ನಗರದ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 6 ಮಂದಿ ಗಾಯಗೊಂಡು ಓರ್ವ ಸ್ಥಿತಿ ಗಂಭೀರವಾಗಿದೆ. ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ಕಳೆದ ಕೆಲ ದಿನಗಳಿಂದ ಸೆಂಟ್ರಲೈಜ್ ಎಸಿಯಲ್ಲಿ ಗ್ಯಾಸ್ ಖಾಲಿಯಾಗಿತ್ತು. ಗ್ಯಾಸ್ ಭರ್ತಿ ಮಾಡಲು ಇಬ್ಬರು ಕಾರ್ಮಿಕರು ಮಳಿಗೆಗೆ ಬಂದಿದ್ದರು. ಎಸಿಗೆ ಗ್ಯಾಸ್ ತುಂಬಿಸುವಾಗ ಸ್ಪೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲ್ಯಾಣ ಜ್ಯುವೆಲ್ಲರ್ಸ್ ನಲ್ಲಿ ಎಸಿ ಸ್ಪೋಟ : ಆರು ಮಂದಿಗೆ ಗಾಯ Read More »

ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ‘ಜ್ಞಾನ ಸಂಗಮ-2024’ ಉದ್ಘಾಟನೆ

ಪುತ್ತೂರು: ಕೃತಕ ಬುದ್ದಿಮತ್ತೆ ತಂತ್ರಜ್ಞಾನವು ವ್ಯಾಪಕವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಿಲ್ಲದೆ ಭವಿಷ್ಯದ ದಿನಗಳಿಲ್ಲ ಎನ್ನುವವರೆಗೆ ಸರ್ವವ್ಯಾಪಿಯಾಗಿದೆ. ಯಾವುದೇ ತಂತ್ರಜ್ಞಾನವಾದರೂ ಅದರ ಬಳಕೆಯ ವಿಧಾನದ ಮೇಲೆ ಒಳಿತು ಕೆಡುಕುಗಳು ನಿರ್ಧರಿತವಾಗುತ್ತವೆ ಎಂದು ಎಂಐಟಿ ಮಣಿಪಾಲದ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ರಾಘವೇಂದ್ರ ಎಸ್. ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ನವದೆಹಲಿ, ವಿವೇಕಾನಂದ ಸಂಶೋಧನಾ ಕೇಂದ್ರ ಪುತ್ತೂರು ಮತ್ತು ಐಇಇಇ ವಿಸಿಇಟಿ ವಿದ್ಯಾರ್ಥಿ

ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ‘ಜ್ಞಾನ ಸಂಗಮ-2024’ ಉದ್ಘಾಟನೆ Read More »

ಚಾಲಕನ ನಿಯಂತ್ರಣ ತಪ್ಪಿದ ಕಾರು | ಹೋಟೆಲ್‌ ಗೆ  ಡಿಕ್ಕಿ

ಸಂಪಾಜೆ : ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ವೊಂದಕ್ಕೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯಗೊಂಡು, ಸುಳ್ಯದ ಆಸ್ಪತ್ರೆಗೆ ದಾಖಲಾದ ಘಟನೆ ದ.ಕ. ಸಂಪಾಜೆ ಎಂಬಲ್ಲಿ ಮೇ.3ರ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ವಿಟ್ಲದ ಅಡ್ಯನಡ್ಕದ ದಂಪತಿಗಳು ಕಾರಿನಲ್ಲಿ ಮಡಿಕೇರಿ ಕಡೆಗೆ ಹೋಗುತ್ತಿದ್ದ ವೇಳೆ ಸಂಪಾಜೆಯ ಹೈವೆ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೋಟೆಲಿನ ಮುಂಭಾಗದ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಚಾಲಕ ಹಾಗೂ ಮುಂಭಾಗದಲ್ಲಿ ಕುಳಿತಿದ್ದ

ಚಾಲಕನ ನಿಯಂತ್ರಣ ತಪ್ಪಿದ ಕಾರು | ಹೋಟೆಲ್‌ ಗೆ  ಡಿಕ್ಕಿ Read More »

error: Content is protected !!
Scroll to Top