ಯುವಕ ಪುಷ್ಪರಾಜ್ ನೇಣು ಬಿಗಿದು ಆತ್ಮಹತ್ಯೆ !

ಪುತ್ತೂರು: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಿಪ್ಪಾಡಿಯಲ್ಲಿ ನಡೆದಿದೆ. ಕೊಡಿಪ್ಪಾಡಿ ಪಲ್ಲತ್ತಾರು ದಿ.ಚಂದ್ರಶೇಖರ್ ಆಚಾರ್ಯ ಅವರ ಮಗ ಪುಷ್ಪರಾಜ್ ಆತ್ಮಹತ್ಯೆ ಮಾಡಿಕೊಂಡವರು. ಪುಷ್ಪರಾಜ್ ಕಬಕ ಗ್ರಾಮದ ಪೋಳ್ಯದಲ್ಲಿರುವ ಬೇಕರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಏ.29ರಂದು ತಾಯಿಗೆ ದೂರವಾಣಿ ಕರೆ ಮಾಡಿ, ನಾನು ಮುಂಬೈಗೆ ಹೋಗುತ್ತೇನೆ ಎಂದು ಹೇಳಿ ಕರೆ ಸ್ಥಗಿತಗೊಳಿಸಿದ್ದ. ಮೇ 1ರಂದು ಮಧ್ಯಾಹ್ನ ನಾನು ಮನೆಗೆ ವಾವಸ್ಸು ಬಂದು ನೋಡಿದಾಗ ಮಗ ಪುಷ್ಪರಾಜ್ ಮನೆಯ ದೇವರ ಕೋಣೆಯಲ್ಲಿ ಮಾಡಿನ ಪಕ್ಕಾಸಿಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು […]

ಯುವಕ ಪುಷ್ಪರಾಜ್ ನೇಣು ಬಿಗಿದು ಆತ್ಮಹತ್ಯೆ ! Read More »

ಅಂಬಿಕಾ ಮಹಾವಿದ್ಯಾಲಯದಲ್ಲಿ ಸಿಎ, ಐಬಿಪಿಎಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ | 9 ಮಂದಿ ವಿದ್ಯಾರ್ಥಿಗಳು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ

ಪುತ್ತೂರು: ಹತ್ತನೆಯ ತರಗತಿ ಮುಕ್ತಾಯವಾಗುತ್ತಿದ್ದಂತೆ ಅನೇಕ ವಿದ್ಯಾರ್ಥಿಗಳು ಸಿಎ ಆಗಬೇಕೆಂಬ ಯೋಚನೆ – ಯೋಜನೆಯೊಂದಿಗೆ ವಾಣಿಜ್ಯ ವಿಭಾಗಕ್ಕೆ ಅಡಿ ಇಡುವುದಿದೆ. ವಿದ್ಯಾರ್ಥಿಗಳ ಈ ಕನಸನ್ನು ನನಸು ಮಾಡುವುದಕ್ಕಾಗಿ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯ ಮಹತ್ವದ ಹೆಜ್ಜೆಯನ್ನಿಟ್ಟು ಯಶಸ್ಸಿನ ಹಾದಿಯಲ್ಲಿ ಮುನ್ನಡೆಯುತ್ತಿದೆ. ಈ ನಡುವೆ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲೂ ವಾಣಿಜ್ಯ ವಿದ್ಯಾರ್ಥಿಗಳಿಗೆ ಸಿಎ ಕೋಚಿಂಗ್ ನಡೆಸುತ್ತಿರುವುದರಿಂದ ಹತ್ತನೆಯ ನಂತರ ಅನೇಕ ವಿದ್ಯಾರ್ಥಿಗಳು ದಾಖಲಾತಿ ಮಾಡಿಸಿಕೊಳ್ಳುತ್ತಿದ್ದಾರೆ. ಒಟ್ಟು 9 ಮಂದಿ ವಿದ್ಯಾರ್ಥಿಗಳು ಸಿಎ ಫೌಂಡೇಶನ್ ಪರೀಕ್ಷೆಯನ್ನು ತೇರ್ಗಡೆ ಹೊಂದಿದ್ದಾರೆ, ಮೂವರು

ಅಂಬಿಕಾ ಮಹಾವಿದ್ಯಾಲಯದಲ್ಲಿ ಸಿಎ, ಐಬಿಪಿಎಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ | 9 ಮಂದಿ ವಿದ್ಯಾರ್ಥಿಗಳು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ Read More »

ಕೋವಿಶೀಲ್ಡ್ ಪಡೆದ ಬಳಿಕ ಇಬ್ಬರು ಹೆಣ್ಣು ಮಕ್ಕಳು ಮೃತ್ಯು | ಕಾನೂನು ಸಮರಕ್ಕೆ ಸಜ್ಜಾದ ಮಕ್ಕಳ ಹೆತ್ತವರು

ಕೊರೊನಾ ಸಮಯದಲ್ಲಿ ಭಾರೀ ಸುದ್ದಿಯಲ್ಲಿದ್ದ ಔಷಧಿಗಳ ತಯಾರಿಕಾ ಸಂಸ್ಥೆ Oxford-AstraZeneca, ಆಘಾತಕಾರಿ ಮಾಹಿತಿ ಒಂದನ್ನು ಕೊನೆಗೂ ಕೋರ್ಟ್ ಮುಂದೆ ಒಪ್ಪಿಕೊಂಡಿರುವ ಬೆನ್ನಲ್ಲೇ ಭಾರತದಲ್ಲಿ ಹೆಣ್ಣು ಮಕ್ಕಳನ್ನು ಕಳೆದುಕೊಂಡ ಪೋಷಕರು ಕಾನೂನು ಸಮರಕ್ಕೆ ಸಜ್ಜಾಗಿದ್ದಾರೆ. ಔಷಧಿ ತಯಾರಿಕಾ ಕಂಪೆನಿಯು ತಾನು ಅಭವೃದ್ಧಿಪಡಿಸಿ ಕೋಟ್ಯಾಂತರ ಜನರಿಗೆ ನೀಡಿರುವ ಕೊರೊನಾ ಲಸಿಕೆಯು ಗಂಭೀರ ಅಡ್ಡಪರಿಣಾಮ ಉಂಟುಮಾಡಬಹುದು ಎಂದು ಲಂಡನ್ ಕೋರ್ಟ್‌ನಲ್ಲಿ ಹೇಳಿದೆ. ಇದೀಗ ಭಾರತದ ಇಬ್ಬರು ಹೆಣ್ಮಕ್ಕಳ ಪೋಷಕರು ಕೋವಿಶೀಲ್ಡ್ ಲಸಿಕೆಯನ್ನು ಒದಗಿಸಿದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ವಿರುದ್ಧ

ಕೋವಿಶೀಲ್ಡ್ ಪಡೆದ ಬಳಿಕ ಇಬ್ಬರು ಹೆಣ್ಣು ಮಕ್ಕಳು ಮೃತ್ಯು | ಕಾನೂನು ಸಮರಕ್ಕೆ ಸಜ್ಜಾದ ಮಕ್ಕಳ ಹೆತ್ತವರು Read More »

ಕೆಡೆಂಜಿಗುತ್ತು ಧರ್ಮಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ | ವೈಭವದಿಂದ ನಡೆಯಿತು ಹೊರೆ ಕಾಣಿಕೆ ಸಮರ್ಪಣೆ, ವಿವಿಧ ವೈದಿಕ ಕಾರ್ಯಕ್ರಮಗಳು | 300 ವರ್ಷಗಳ ಬಳಿಕ ಧರ್ಮಚಾವಡಿಯಲ್ಲಿ ನಡೆಯಿತು ನೇಮೋತ್ಸವ

ಪುತ್ತೂರು: ಕೆಡೆಂಜಿಗುತ್ತು ಧರ್ಮಚಾವಡಿಯಲ್ಲಿ ನಡೆಯುತ್ತಿರುವ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ ಹಾಗೂ ಶ್ರೀ ಮದ್ಭಾಗವತ ಸಪ್ತಾಹದ ಅಂಗವಾಗಿ ಬುಧವಾರ ಸಂಜೆ ಗ್ರಾಮಸ್ಥರಿಂದ ವೈಭವದ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಸಂಜೆ 4 ಗಂಟೆಗೆ ಶಾಂತಿಮೊಗರು ದೇವಸ್ಥಾನದ ದ್ವಾರದ ಬಳಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಯಿತು. ಬಳಿಕ ಶ್ರೀ ದೈವಸ್ಥಾನಕ್ಕೆ ಬಂದು ಸಮರ್ಪಣೆಯಾಯಿತು. ಸಂಜೆ 6.30 ರಿಂದ ದೇವತಾ ಪ್ರಾರ್ಥನೆ, ಆಚಾರ್ಯ ವರಣೆ, ಸ್ವಸ್ತಿ ಪುಣ್ಯಾಹ ವಾಚನ, ಸ್ಥಳ ಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತು ಪೂಜಾ

ಕೆಡೆಂಜಿಗುತ್ತು ಧರ್ಮಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ | ವೈಭವದಿಂದ ನಡೆಯಿತು ಹೊರೆ ಕಾಣಿಕೆ ಸಮರ್ಪಣೆ, ವಿವಿಧ ವೈದಿಕ ಕಾರ್ಯಕ್ರಮಗಳು | 300 ವರ್ಷಗಳ ಬಳಿಕ ಧರ್ಮಚಾವಡಿಯಲ್ಲಿ ನಡೆಯಿತು ನೇಮೋತ್ಸವ Read More »

ಮನೆಗೆ ಕಲ್ಲು ತೂರಾಟ : ಗ್ರಾಮಾಂತರ ಪೊಲೀಸರಿಂದ ತನಿಖೆ

ಪುತ್ತೂರು : ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆ ಎಂಬಲ್ಲಿ ಕಿಡಿಗೇಡಿಗಳು ಮನೆಯೊಂದಕ್ಕೆ ಕಲ್ಲು ತೂರಾಟ ನಡೆಸಿ ಪರಾರಿಯಾದ ಘಟನೆ ನಡೆದಿದೆ. ಗುಮ್ಮಟಗದ್ದೆ ಸೂರಪ್ಪ ಗೌಡ ಎಂಬವರ ಮನೆಗೆ ಕಲ್ಲು ತೂರಾಟ ನಡೆದಿದೆ. ಮೇ.1 ರಂದು ರಾತ್ರಿ 8.30ರ ವೇಳೆಗೆ ಮನೆ ಮಂದಿ ಮನೆಯೊಳಗಡೆ ಇರುವ ಸಂದರ್ಭದಲ್ಲಿ ಕಲ್ಲು ಬಿಸಾಡಿದ್ದಾರೆ. ಕಲ್ಲು ಮನೆ ಸಿಮೆಂಟ್ ಶೀಟ್ ಛಾವಣಿ ಮೇಲೆ ಬಿದ್ದ ಶಬ್ದ ಕೇಳಿ ಹೊರಗಡೆ ಬಂದಾಗ ಕಿಡಿಗೇಡಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಸಂಪ್ಯ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮನೆಗೆ ಕಲ್ಲು ತೂರಾಟ : ಗ್ರಾಮಾಂತರ ಪೊಲೀಸರಿಂದ ತನಿಖೆ Read More »

ಬೈಕ್ ಡಿಕ್ಕಿ : ವೃದ್ಧ ಗಂಭೀರ ಗಾಯ

ಬಂಟ್ವಾಳ : ಬಸ್ಸಿಗಾಗಿ ಕಾಯುತ್ತಿದ್ದ ವೃದ್ಧರೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುದು ಗ್ರಾಮದ ಫರಂಗಿಪೇಟೆ ಎಂಬಲ್ಲಿ ಸಂಭವಿಸಿದೆ. ಫರಂಗಿಪೇಟೆ ನಿವಾಸಿ ಶೇಖಬ್ಬ (71) ಗಾಯಗೊಂಡವರು. ಫರಂಗಿಪೇಟೆ ಜಂಕ್ಷನ್ನಿನಲ್ಲಿ ಬುಧವಾರ ಮಧ್ಯಾಹ್ನ ಬಸ್ಸಿಗಾಗಿ ಕಾಯುತ್ತಿರುವ ಸಂದರ್ಭ ಹೆದ್ದಾರಿಯಲ್ಲಿ ಅಕ್ಷಯ್ ನಾಯ್ಕ ಎಂಬವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಶೇಖಬ್ಬ ಅವರನ್ನು ತಕ್ಷಣ ಮಂಗಳೂರಿನ ಯುನಿಟಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಡಿಕ್ಕಿ : ವೃದ್ಧ ಗಂಭೀರ ಗಾಯ Read More »

ಮೇ 25 : ಎಸ್ ಆರ್ ಕೆ ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮ | ಮೇ 1 ಕಾರ್ಮಿಕ ದಿನದಂದು ಸಂಸ್ಥೆಯ ಸಿಬ್ಬಂದಿಗಳಿಗೆ ನಡೆಯಿತು ಕ್ರೀಡಾ ಸಂಭ್ರಮ

ಪುತ್ತೂರು: ಪುತ್ತೂರು: ಎಸ್ ಆರ್ ಕೆ ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಅಂಗವಾಗಿ ಮೆ 1 ರಂದು ಸಂಸ್ಥೆಯ ಸಿಬ್ಬಂದಿಗಳಿಗೆ ಕ್ರೀಡಾ ಸಂಭ್ರಮ ಮತ್ತು ಕಾರ್ಮಿಕ ದಿನಾಚರಣೆಯು ಕಡಬ ತಾಲೂಕಿನ ಕೊಯಿಲ ಕಲಾಯಿಗುತ್ತುವಿನಲ್ಲಿ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಕಡಬ ಉಪತಹಸೀಲ್ದಾರ್ ಗೋಪಾಲ್ ಮಾತನಾಡಿ, ಕಾಯಕದಿಂದಲೇ ಯಾರನ್ನೂ ಗುರುತಿಸಲು ಸಾಧ್ಯವಿಲ್ಲ. ಕಾಯಕದ ಮೇಲೆ ಪ್ರೀತಿಯಿದ್ದಾಗ ಉತ್ತಮ ಬಾಂಧವ್ಯ ಬೆಳೆಯುತ್ತದೆ. ಸಜ್ಜನಿಕೆ, ಸರಳತೆ ಜೀವನದಲ್ಲಿ ಸ್ಥಾನಮಾನ ಸಿಗುತ್ತದೆ. ಇಂತಹ ಸ್ಥಾನಮಾನ ಎಸ್.ಆರ್.ಕೆ ಲ್ಯಾಡರ್ಸ್ ನ ಮಾಲಕ ಕೇಶವ ಅಮೈ ಅವರಿಗೆ ಸಿಗಬೇಕು.

ಮೇ 25 : ಎಸ್ ಆರ್ ಕೆ ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮ | ಮೇ 1 ಕಾರ್ಮಿಕ ದಿನದಂದು ಸಂಸ್ಥೆಯ ಸಿಬ್ಬಂದಿಗಳಿಗೆ ನಡೆಯಿತು ಕ್ರೀಡಾ ಸಂಭ್ರಮ Read More »

ಪ್ರೊ.ವಿ.ಬಿ.ಅರ್ತಿಕಜೆ ಯವರಿಗೆ ನಿರಂಜನ ಪ್ರಶಸ್ತಿ | ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ ಸಂಪ್ರತಿಷ್ಠಾನಕ್ಕೆ ಶಂಕರ ಸಾಹಿತ್ಯ ಪ್ರಶಸ್ತಿ |ಮೇ 9 ರಂದು ಪ್ರಶಸ್ತಿ ಪ್ರದಾನ

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಶಿವರಾಮ ಕಾರಂತ ಅಧ್ಯಯನ ಕೇಂದ್ರದಿಂದ ನೀಡುವ ನಿರಂಜನ ಪ್ರಶಸ್ತಿಯನ್ನು ಈ ವರ್ಷ ನಿವೃತ್ತ ಪ್ರಾಧ್ಯಾಪಕ, ಸಾಹಿತಿ ಪ್ರೊ. ವಿ. ಬಿ. ಅರ್ತಿಕಜೆ ಅವರಿಗೆ ಹಾಗೂ ಶಂಕರ ಸಾಹಿತ್ಯ ಪ್ರಶಸ್ತಿಯನ್ನು ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ ಸಂಪ್ರತಿಷ್ಠಾನಕ್ಕೆ ಶಂಕರ ಸಾಹಿತ್ಯ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭ ಮೇ.9 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ. ನಿರಂಜನ ಸಾಹಿತ್ಯ ಪ್ರಶಸ್ತಿ: ಪ್ರೊ. ವಿ. ಬಿ.

ಪ್ರೊ.ವಿ.ಬಿ.ಅರ್ತಿಕಜೆ ಯವರಿಗೆ ನಿರಂಜನ ಪ್ರಶಸ್ತಿ | ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ ಸಂಪ್ರತಿಷ್ಠಾನಕ್ಕೆ ಶಂಕರ ಸಾಹಿತ್ಯ ಪ್ರಶಸ್ತಿ |ಮೇ 9 ರಂದು ಪ್ರಶಸ್ತಿ ಪ್ರದಾನ Read More »

ನರಿಮೊಗರು ಗ್ರಾಮ ಪಂಚಾಯಿತಿಯಿಂದ ಗ್ರಾಮೀಣ ಬೇಸಿಗೆ ಶಿಬಿರಕ್ಕೆ ಚಾಲನೆ

ಪುತ್ತೂರು: ನರಿಮೊಗರು ಗ್ರಾಮ ಪಂಚಾಯಿತಿ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ – 2024 ಕ್ಕೆ ಇಂದು ಚಾಲನೆ ನೀಡಲಾಯಿತು. ನರಿಮೊಗರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರಿಣಿ ದೀಪ ಬೆಳಗಿಸಿ ಉದ್ಘಾಟಿಸಿದರು. ಶಿಬಿರದಲ್ಲಿ ಪಂಚಾಯಿತಿ ಉಪಾಧ್ಯಕ್ಷ ಉಮೇಶ್, ಮಾಜಿ ಉಪಾಧ್ಯಕ್ಷ ಸುಧಾಕರ ಕುಲಾಲ್, ಅಭಿವೃದ್ಧಿ ಅಧಿಕಾರಿ ರವಿಚಂದ್ರ ಯು. ಪಾಲ್ಗೊಂಡು ಶುಭ ಹಾರೈಸಿದರು. ಗ್ರಂಥಾಲಯ ಮೇಲ್ವಿಚಾರಕ ವರುಣ್ ಕುಮಾರ್ ಎಸ್. ಕಾರ್ಯಕ್ರಮ ನಿರ್ವಹಿಸಿದರು. ಶಿಬಿರದಲ್ಲಿ ಇಂದು ಮಕ್ಕಳಿಗೆ ಹಲವು ಚಟುವಟಿಕೆಗಳನ್ನು

ನರಿಮೊಗರು ಗ್ರಾಮ ಪಂಚಾಯಿತಿಯಿಂದ ಗ್ರಾಮೀಣ ಬೇಸಿಗೆ ಶಿಬಿರಕ್ಕೆ ಚಾಲನೆ Read More »

ಧರ್ಮಸ್ಥಳ ದಲ್ಲಿ 52ನೇ ವರ್ಷದ ಸಾಮೂಹಿಕ ವಿವಾಹ |  ದಾಂಪತ್ಯ ಜೀವನ ಪ್ರವೇಶಿಸಿದ 117 ಜೋಡಿಗಳು

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಜರಗಿದ 52ನೇ ವರ್ಷದ ಸಾಮೂಹಿಕ ವಿವಾಹ ದಲ್ಲಿ ಒಟ್ಟು 117 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದವು. 12,900ನೇ ಜೋಡಿಯಾದ ಗದಗದ ಪ್ರವೀಣ್ ಬನ್ನೂರು ಹಾಗೂ ಕವಿತಾ ಗಿಡ ಕೆಂಚಣ್ಣನವರ್ ವಧು- ವರ ಜೋಡಿಯನ್ನು ವಿಶಿಷ್ಟ ಜೋಡಿಯನ್ನಾಗಿ ಗುರುತಿಸಲಾಯಿತು. ಅಪಘಾತವೊಂದರಲ್ಲಿ ಕಾಲು ಕಳೆದುಕೊಂಡಿರುವ ವರ ಪ್ರವೀಣ್ ಟ್ರಾವೆಲ್ ಏಜೆನ್ಸಿ ನಡೆಸುತ್ತಿದ್ದು, ತನ್ನ ಮಾವನ ಮಗಳನ್ನು ವರಿಸಿದರು. ಮದುವೆ ದಿಬ್ಬಣದ ಮೆರವಣಿಗೆ ದೇವಸ್ಥಾನದ ಮುಂಭಾಗದಿಂದ ಅಮೃತ ವರ್ಷಿಣಿ ಸಭಾಭವನದವರೆಗೆ ಜರಗಿತು. ಮೆರವಣಿಗೆಯು

ಧರ್ಮಸ್ಥಳ ದಲ್ಲಿ 52ನೇ ವರ್ಷದ ಸಾಮೂಹಿಕ ವಿವಾಹ |  ದಾಂಪತ್ಯ ಜೀವನ ಪ್ರವೇಶಿಸಿದ 117 ಜೋಡಿಗಳು Read More »

error: Content is protected !!
Scroll to Top