ಧಾರ್ಮಿಕ ಕೇಂದ್ರ ಧರ್ಮ ಶಿಕ್ಷಣ ನೀಡುವ ಕೇಂದ್ರವಾಗಬೇಕು : ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ | ದೇವಸ್ಥಾನ ಆಡಂಬರ ಭಕ್ತಿ ಪ್ರದರ್ಶನ ಕೇಂದ್ರವಾಗಬಾರದು : ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ |ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ
ಪುತ್ತೂರು: ದೇವಸ್ಥಾನದ ಜೀರ್ಣೋದ್ಧಾರದ ಮೂಲಕ ನಮ್ಮ ಆತ್ಮೋದ್ದಾರದ ಕಾರ್ಯವಾಗುತ್ತಿದೆ. ಧಾರ್ಮಿಕ ಕೇಂದ್ರಗಳು ಶಿಕ್ಷಣ ನೀಡುವ ಕೇಂದ್ರವಾಗಬೇಕು. ಜನರಿಗೆ ಧಾರ್ಮಿಕ ಕೇಂದ್ರಗಳಲ್ಲಿ ಧರ್ಮ ಶಿಕ್ಷಣ ನೀಡಬೇಕಾದ ಅವಶ್ಯಕತೆಯಿದೆ ಎಂದು ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮಿಜಿಯವರು ಹೇಳಿದರು. ಆರ್ಯಾಪು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಏ.25 ರಂದು ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ವಿಜ್ಞಾನದಲ್ಲಿ ಆವಿಷ್ಕಾರವಿದೆ. ಪರಿವರ್ತನೆಯೇ ವಿಜ್ಞಾನ. ಆದರೆ ಆಧ್ಯಾತ್ಮಿಕ ಅವಿಷ್ಕಾರ ಇಲ್ಲ. ಯುವಕರ ಶಕ್ತಿಯಿಂದ ಜಗತ್ತು ಬದಲಾಯಿಸಲು ಸಾಧ್ಯ. […]








