ಮತದಾನಕ್ಕಾಗಿ ಸರತಿ ಸಾಲಿನಲ್ಲಿ ನಿಂತ ಶಾಸಕಿ ಭಾಗೀರಥಿ ಮುರುಳ್ಯ

ಪುತ್ತೂರು: ಬೂತ್ ನಂ -84 ಶಾಂತಿನಗರ ಮುರುಳ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಸಕರಾದ ಭಾಗೀರಥಿ ಮುರುಳ್ಯ ಮತದಾನ ಮಾಡಿದರು. ಗುತ್ತಿಗಾರಿನ ಮೊಗ್ರದಲ್ಲಿ ಮತಯಂತ್ರ ಕೈಕೊಟ್ಟಿದ್ದು, ಇನ್ನೂ ಮತದಾನ ಆರಂಭವಾಗಿಲ್ಲ ಎಂದು ತಿಳಿದು ಬಂದಿದೆ. ಗುತ್ತಿಗಾರು ಗ್ರಾಮದ ಮೊಗ್ರ ಹಿರಿಯ ಪ್ರಾಥಮಿಕ ಶಾಲೆಯ ಮತದಾನ ಕೇಂದ್ರದಲ್ಲಿ ವೋಟಿಂಗ್ ಮೆಷಿನ್ ಹಾಳಾಗಿರುವುದು.

ಮತದಾನಕ್ಕಾಗಿ ಸರತಿ ಸಾಲಿನಲ್ಲಿ ನಿಂತ ಶಾಸಕಿ ಭಾಗೀರಥಿ ಮುರುಳ್ಯ Read More »

ದೇಶ ಮತ್ತು ಧರ್ಮಕ್ಕಾಗಿ ಜೀವನ ಮುಡಿಪಾಗಿರಲಿ : ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು | ಅಂಬಿಕಾ ವಿದ್ಯಾಲಯದಲ್ಲಿ ದಶಾಂಬಿಕೋತ್ಸವ ಸಮಾರೋಪ, ಗುರುವಂದನಾ ಕಾರ್ಯಕ್ರಮ

ಪುತ್ತೂರು: ದೇಶ ಮತ್ತು ಧರ್ಮಕ್ಕಾಗಿ ನಾವು ನಮ್ಮ ಜೀವನ ನಡೆಸಬೇಕು. ದೇಶವನ್ನು ಬಿಟ್ಟು ಧರ್ಮವಾಗಲೀ, ಧರ್ಮವನ್ನು ಬಿಟ್ಟು ದೇಶವಾಗಲೀ ಇರುವುದಕ್ಕೆ ಸಾಧ್ಯವಿಲ್ಲ. ಅತ್ಯಂತ ಉತ್ಕೃಷ್ಟ ದೇಶ ಹಾಗೂ ಧರ್ಮದಲ್ಲಿ ನಾವು ಜನಿಸಿದ್ದೇವೆ ಎಂಬುದೇ ಹೆಮ್ಮೆ. ಹಾಗಾಗಿ ದೇಶ ಹಾಗೂ ಧರ್ಮ ಎರಡನ್ನೂ ಚೆನ್ನಾಗಿ ಇಟ್ಟುಕೊಂಡಾಗ ಮಾತ್ರ ನಮ್ಮ ಜನ್ಮ ಸಾರ್ಥಕಗೊಳ್ಳುತ್ತದೆ. ಮನುಷ್ಯ ಜನ್ಮ ಎನ್ನುವುದು ನಮಗೆ ದೊರಕುವ ಸುವರ್ಣಾವಕಾಶ. ಇದನ್ನು ವ್ಯರ್ಥ ಮಾಡಬಾರದು ಎಂದು ಶೃಂಗೇರಿಯ ಶ್ರೀ ಶಾರದಾ ಪೀಠಾಧೀಶ್ವರ ಶ್ರೀ ವಿಧುಶೇಖರ ಭಾರತಿ ಸನ್ನಿಧಾನಂಗಳವರು ಹೇಳಿದರು.

ದೇಶ ಮತ್ತು ಧರ್ಮಕ್ಕಾಗಿ ಜೀವನ ಮುಡಿಪಾಗಿರಲಿ : ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು | ಅಂಬಿಕಾ ವಿದ್ಯಾಲಯದಲ್ಲಿ ದಶಾಂಬಿಕೋತ್ಸವ ಸಮಾರೋಪ, ಗುರುವಂದನಾ ಕಾರ್ಯಕ್ರಮ Read More »

ಏ.26 ಮತದಾನದಂದು ಸರಕಾರಿ ಕಚೇರಿಗಳಿಗೆ ಕಡ್ಡಾಯ ರಜೆ | ಚುನಾವಣಾ ಆಯೋಗದಿಂದ ಆದೇಶ

ಬೆಂಗಳೂರು : ಏ. 26ರಂದು 14 ಲೋಕಸಭಾ ವ್ಯಾಪ್ತಿಯಲ್ಲೂ ಸರ್ಕಾರಿ ಕಚೇರಿಗೆ ಕಡ್ಡಾಯ ರಜೆ ಇರಲಿದೆ. ಖಾಸಗಿ ಕಂಪನಿಗಳು ರಜೆ ನೀಡಿ ಮತದಾನದ ಪ್ರಮಾಣ ಹೆಚ್ಚಿಸುವಂತೆ ಚುನಾವಣಾ ಆಯೋಗ ತಿಳಿಸಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿದೆ. ಏಪ್ರಿಲ್ 26ರಂದು ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದೆ. ಚುನಾವಣಾ ಕರ್ತವ್ಯ, ಅಗತ್ಯ ಸೇವೆಯಲ್ಲಿ ಕೆಲಸ ನಿರ್ವಹಿಸುತ್ತಿರೋ ಸಿಬ್ಬಂದಿಗಳಿಗೆ ಅಂಚೆ ಮತದಾನಕ್ಕೆ ಅವಕಾಶ ನೀಡಲಾಗಿತ್ತು. ಅಂಚೆ ಮತದಾನಕ್ಕೆ ವಿವಿಧ ಇಲಾಖೆಯಿಂದ

ಏ.26 ಮತದಾನದಂದು ಸರಕಾರಿ ಕಚೇರಿಗಳಿಗೆ ಕಡ್ಡಾಯ ರಜೆ | ಚುನಾವಣಾ ಆಯೋಗದಿಂದ ಆದೇಶ Read More »

ಏ.29 : ಪಡ್ಡಾಯೂರಿನಲ್ಲಿ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ

ಪುತ್ತೂರು: ವರುಣ್ಸ್  ಬ್ಯಾಡ್ಮಿಂಟನ್ ಅಕಾಡೆಮಿ ವತಿಯಿಂದ ಪಡ್ಡಾಯೂರಿನಲ್ಲಿ ನಿರ್ಮಿಸಲಾದ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆ ಏ.29 ರಂದು ಬೆಳಿಗ್ಗೆ ನಡೆಯಲಿದೆ. ಒಳಾಂಗಣ ಕ್ರೀಡಾಂಗಣವನ್ನು ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಪಿಂಯನ್ ಶಿಪ್ ಕಂಚಿನ ಪದಕ ವಿಜೇತ ಆಯುಷ್ ಶೆಟ್ಟಿ ಉದ್ಘಾಟಿಸಲಿದ್ದು, ಪಡ್ಡಾಯೂರು ರುದ್ರಾಂಡಿ ನೇತ್ರಾಂಡಿ ದೈವಸ್ಥಾನದ ಅಧ್ಯಕ್ಷ, ನಗರಸಭೆ ನಿಕಟಪೂರ್ವ ಅಧ್ಯಕ್ಷ ಜೀವಂಧರ್ ಜೈನ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಶಕುಂತಳಾ ಟಿ. ಶೆಟ್ಟಿ, ಸುದಾನ ಶಾಲಾ

ಏ.29 : ಪಡ್ಡಾಯೂರಿನಲ್ಲಿ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ Read More »

ಧರ್ಮ ಎಂಬುದು ಸೂಕ್ಷ್ಮವಾದುದು | ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆಯಲ್ಲಿ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ

ಪುತ್ತೂರು: ಧರ್ಮ ಎಂಬುದು ಸೂಕ್ಷ್ಮವಾದುದು. ಅದಕ್ಕೆ ಸರಿಯಾದ ಅರ್ಥ ಕಂಡು ಹಿಡಿಯಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಧರ್ಮದ ಅರಿವು ಪಡೆದು ಹಿರಿಯರು ಹಾಕಿಕೊಟ್ಟ ಧರ್ಮ ಮಾರ್ಗದಲ್ಲಿ ಜೀವನ ಸಾಗಿಸಬೇಕಾದ ಅಗತ್ಯತೆಯಿದ್ದು, ಆಗ ನಿಜವಾದ ಧರ್ಮಕ್ಕೆ ಅರ್ಥ ಬರುತ್ತದೆ ಎಂದು ಕಾಣಿಯೂರು ಮಠದ ಶ್ರೀ ವಿದ್ಯಾಬಲ್ಲಭ ತೀರ್ಥ ಸ್ವಾಮಿಜಿ ನುಡಿದರು. ಆರ್ಯಾಪು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಏ.24ರಂದು ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ಬ್ರಹ್ಮಕಲಶ ಎಂದರೆ ಬಿಂಬದಲ್ಲಿ ಸಾನಿಧ್ಯ ಸ್ಥಾಪನೆ ಮಾಡುವುದು.

ಧರ್ಮ ಎಂಬುದು ಸೂಕ್ಷ್ಮವಾದುದು | ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆಯಲ್ಲಿ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ Read More »

ಕುದ್ಮಾರು ಕೆಡೆಂಜಿಗುತ್ತು ಧರ್ಮ ಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ, ಶ್ರೀ ಮದ್ಭಾಗವತ ಸಪ್ತಾಹಕ್ಕೆ ಚಾಲನೆ

ಕಡಬ : ತಾಲೂಕಿನ ಕುದ್ಮಾರು ಗ್ರಾಮದ ಕೆಡೆಂಜಿಗುತ್ತು ಧರ್ಮ ಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ ಹಾಗೂ ಶ್ರೀ ಮದ್ಭಾಗವತ ಸಪ್ತಾಹಕ್ಕೆ ಬುಧವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಂಗವಾಗಿ  ಏ.24 ರಂದು ಬೆಳಿಗ್ಗೆ 6ಕ್ಕೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ವಿಷ್ಣುಸಹಸ್ರನಾಮ ಪಾರಾಯಣ ಆರಂಭ , 6. 30ಕ್ಕೆ ಶ್ರೀ ಮದ್ಭಾಗವತ  ಪಾರಾಯಣ ಆರಂಭ ವೇಧ ಸಂಸ್ಕೃತ ವಿದ್ವಾಂಸ, ಪುರೋಹಿತ, ಪ್ರವಚನಕಾರ ವೇ.ಮೂ.ವಿದ್ವಾನ್ ಕೇಶವ ಭಟ್ ಕೇಕಣಾಜೆ ಅವರಿಂದ ಶ್ರೀಮದ್ಭಾಗವತ

ಕುದ್ಮಾರು ಕೆಡೆಂಜಿಗುತ್ತು ಧರ್ಮ ಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ, ಶ್ರೀ ಮದ್ಭಾಗವತ ಸಪ್ತಾಹಕ್ಕೆ ಚಾಲನೆ Read More »

ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

ಶೃಂಗೇರಿ : ಮಠದ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿದರು. ಶ್ರೀ ದೇವರ ದರ್ಶನ ಪಡೆದ ಬಳಿಕ ಅವರು ದೇವಸ್ಥಾನದ ಗರ್ಭಗುಡಿ ಬಳಿ ಇರುವ ಶಿಲಾ ಶಾಸನವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ನಿಕಟಪೂರ್ವ ಸದಸ್ಯರಾದ  ಬಿ.ಐತ್ತಪ್ಪ ನಾಯ್ಕ್, ರಾಮದಾಸ್ ಗೌಡ, ಅಂಬಿಕಾ ಮಹಾವಿದ್ಯಾಲಯದ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ನ್ಯಾಯವಾದಿ ಮಹೇಶ್ ಕಜೆ, ದಿನೇಶ್ ಜೈನ್

ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ Read More »

ಬಸ್ಸಿನಡಿಗೆ ಸಿಲುಕಿ ಮಹಿಳೆ ಮೃತ್ಯು

ಧರ್ಮಸ್ಥಳ: ಬಸ್ಸಿನಡಿಗೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಕೆ ಎಸ್‌ ಆರ್‌ ಟಿ ಸಿ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಧರ್ಮಸ್ಥಳ ಬಸ್‌ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಕೆ ಎಸ್‌ ಆರ್‌ ಟಿ ಸಿ ಬಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆ ಆಕಸ್ಮಿಕವಾಗಿ ಟಯರ್‌ನಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಸೇರಿ 8 ಜನ ಮಂಡ್ಯ ಜಿಲ್ಲೆಯ ಮೇಲುಕೋಟೆಯಿಂದ ಧರ್ಮಸ್ಥಳಕ್ಕೆ ಬಂದಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿರುವ ಮಹಿಳೆ ಆಕಸ್ಮಿಕವಾಗಿ ಟಯರ್

ಬಸ್ಸಿನಡಿಗೆ ಸಿಲುಕಿ ಮಹಿಳೆ ಮೃತ್ಯು Read More »

ಬಡಗು ತಿಟ್ಟಿನ  ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಉಡುಪಿ: ಬಡಗುತಿಟ್ಟಿನ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ  ಅಲ್ಪಕಾಲದ  ಅಸೌಖ್ಯದಿಂದಾಗಿ ಇಂದು ಮುಂಜಾನೆ ಬೆಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ ನಿಧನರಾಗಿದ್ದಾರೆ. ಕಾಳಿಂಗ ನಾವಡರ  ಬಳಿಕ  ಯಕ್ಷಗಾನ ಭಾಗವತಿಕೆಗೆ ಸ್ಟಾರ್ ವ್ಯಾಲ್ಯೂ ತಂದುಕೊಟ್ಟಿದ್ದ ಧಾರೇಶ್ವರ ತನ್ನ ಮಧುರ ಕಂಠದಿಂದ ವರ್ಷಗಳ ಕಾಲ ಯಕ್ಷಗಾನ ಪ್ರೇಮಿಗಳನ್ನು ರಂಜಿಸಿದ್ದರು. ಅವರಿಗೆ 67 ವರ್ಷ ಪ್ರಾಯವಾಗಿತ್ತು. ಯಕ್ಷಗಾನ ರಂಗ ಕಂಡ ಅತ್ಯಂತ ಪ್ರಯೋಗಶೀಲ ಭಾಗವತರಾಗಿದ್ದ ಅವರು ಪತ್ನಿ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿದ್ದರು. ಪೆರ್ಡೂರು ಮೇಳವೊಂದರಲ್ಲೇ  28

ಬಡಗು ತಿಟ್ಟಿನ  ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ Read More »

ಹಿಂಜಾವೇಯ ಅಕ್ಷಯ್  ರಜಪೂತ್ ಗಡಿಪಾರು !

ವಿಟ್ಲ : ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಜಪೂತ್ ರನ್ನು ಪೊಲೀಸರು ಬಂಧಿಸಿ ಹಾವೇರಿಗೆ ಗಡಿಪಾರು ಮಾಡಿರುವ ಕುರಿತು ತಿಳಿದು ಬಂದಿದೆ. ರಾತ್ರಿ ವೇಳೆ ಪೊಲೀಸರು ಮನೆಯಿಂದ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಿದ್ದಾರೆ. ಅಕ್ಷಯ್ ರಜಪೂತ್ ಗೆ ಗಡಿಪಾರು ಆದೇಶವಿರುವ  ಹಿನ್ನಲೆಯಲ್ಲಿ ವಿಟ್ಲ ಪೊಲೀಸರು ಬಂಧಿಸಿ ಹಾವೇರಿ ಜಿಲ್ಲೆಗೆ ಕೊಂಡೊಯ್ಯುತ್ತಿದ್ದಾರೆ ಎನ್ನಲಾಗಿದೆ.

ಹಿಂಜಾವೇಯ ಅಕ್ಷಯ್  ರಜಪೂತ್ ಗಡಿಪಾರು ! Read More »

error: Content is protected !!
Scroll to Top