ಸವಾಲನ್ನು ಸ್ವೀಕರಿಸಲು ಪೂರಕ ಶಿಕ್ಷಣ ನಮಗೆ ದೊರಕಬೇಕು: ಮುರಳಿ ಕೃಷ್ಣ ಕೆ.ಎನ್. | ವಿವೇಕಾನಂದ ಮಹಾವಿದ್ಯಾಲಯದಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

ಪುತ್ತೂರು: ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅಂಕವನ್ನು ಗಳಿಸುವುದು ಮಾತ್ರವಲ್ಲದೇ ಜೀವನದಲ್ಲಿ ಒಳ್ಳೆಯ ಮೌಲ್ಯಗಳನ್ನು ಕಲಿತು  ಪರಿಪೂರ್ಣರಾಗಿ ಇಲ್ಲಿಂದ ತೆರಳಬೇಕು ಎಂಬುವುದು ವಿವೇಕಾನಂದ ಕಾಲೇಜಿನ  ಮುಖ್ಯ ಉದ್ದೇಶವಾಗಿದೆ. ಈಗಿನ ವಿದ್ಯಾರ್ಥಿಗಳು ಸಂಸ್ಕೃತಿ, ಸಂಸ್ಕಾರವನ್ನು ಕಲಿಯುವುದು ತುಂಬಾ ಮುಖ್ಯ. ಅದನ್ನು ನಾವು ವಿದ್ಯಾರ್ಥಿಗಳಿಗೆ ನಿರಂತರವಾಗಿ ನೀಡುತ್ತಿದ್ದೇವೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿ ಕೃಷ್ಣ ಕೆ.ಎನ್. ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ಶಿಕ್ಷಕ ರಕ್ಷಕ ಸಂಘ ಹಾಗೂ ಐಕ್ಯೂಎಸಿ ಘಟಕದ […]

ಸವಾಲನ್ನು ಸ್ವೀಕರಿಸಲು ಪೂರಕ ಶಿಕ್ಷಣ ನಮಗೆ ದೊರಕಬೇಕು: ಮುರಳಿ ಕೃಷ್ಣ ಕೆ.ಎನ್. | ವಿವೇಕಾನಂದ ಮಹಾವಿದ್ಯಾಲಯದಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ Read More »

ಬಸ್‍ ನಲ್ಲಿ ಅನ್ಯ ಕೋಮಿನ ಯುವಕನಿಂದ ಹಿಂದೂ ಯುವತಿಗೆ ಕಿರುಕುಳ | ಪ್ರಕರಣ ದಾಖಲು

ಉಪ್ಪಿನಂಗಡಿ : ಹಿಂದೂ ಯವತಿಯೊಬ್ಬರಿಗೆ ಅನ್ಯ ಕೋಮಿನ ಯುವಕನೋರ್ವ ಬಸ್ಸಿನಲ್ಲಿ ಕಿರುಕುಳ ನೀಡಿದ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತದಾನಕ್ಕೆಂದು ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಬರುತ್ತಿದ್ದ ಹಿಂದೂ ಯುವತಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅನ್ಯಕೋಮಿನ ಸಹಪ್ರಯಾಣಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಯುವತಿ ರಕ್ಷಣೆಗಾಗಿ ಬಸ್ ಚಾಲಕನ ಮೊರೆ ಹೋದ ವೇಳೆ ಯಾವುದೇ ಸ್ಪಂದನೆ ದೊರೆಯದಿದ್ದು, ಬಳಿಕ ಯುವತಿ ಯುವಕನ ಮೇಲೆ ಪ್ರತಿರೋಧವೊಡ್ಡಿ ಆತನಿಂದ ಆಧಾ‌ರ್ ಕಾರ್ಡ್ ಕಿತ್ತುಕೊಂಡಿದ್ದಾರೆ. ಈ ವೇಳೆ ಬಸ್ ನಿಧಾನವಾಗುತ್ತಿದ್ದಂತೆ

ಬಸ್‍ ನಲ್ಲಿ ಅನ್ಯ ಕೋಮಿನ ಯುವಕನಿಂದ ಹಿಂದೂ ಯುವತಿಗೆ ಕಿರುಕುಳ | ಪ್ರಕರಣ ದಾಖಲು Read More »

ದೇವಸ್ಥಾನಗಳು ಧಾರ್ಮಿಕ, ಸಾಂಸ್ಕೃತಿಕವಾಗಿ ಜನರನ್ನು ಒಟ್ಟುಗೂಡಿಸುತ್ತದೆ |  ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ನನ್ಯ ಅಚ್ಯುತ ಮೂಡೆತ್ತಾಯ

ಪುತ್ತೂರು: ದೇವಸ್ಥಾನಗಳು ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ಜನರನ್ನು ಒಟ್ಟು ಸೇರಿಸುತ್ತದೆ. ಜೀವನಕ್ಕೆ ಪೂರಕವಾದ ಸಂಸ್ಕಾರಗಳ ಸಂದೇಶ‌ ನೀಡಲಿದೆ. ಎಲ್ಲಾ ವರ್ಗದ ಜನರನ್ನು ಒಟ್ಟು ಸೇರಿಸಿ ಊರಿಗೆ ಒಗ್ಗಟ್ಟು ತರುವ ಕೆಲಸ ದೇವಸ್ಥಾನದ ಮೂಲಕ ನಡೆಯುತ್ತಿದೆ ಎಂದು ಶ್ರೀಕ್ಷೇತ್ರ ಹನುಗಿರಿಯ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯ ಹೇಳಿದರು. ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಎ.23ರಂದು ನಡೆದ  ಎರಡನೇ ದಿನದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇವಸ್ಥಾನಗಳಲ್ಲಿ ಯಾವುದೇ ಕಾರ್ಯಗಳು ನಡೆಯಬೇಕಾದರೆ ದೈವ ಸಂಕಲ್ಪಮಯ ದೇವರ ತೀರ್ಮಾನದಂತೆ

ದೇವಸ್ಥಾನಗಳು ಧಾರ್ಮಿಕ, ಸಾಂಸ್ಕೃತಿಕವಾಗಿ ಜನರನ್ನು ಒಟ್ಟುಗೂಡಿಸುತ್ತದೆ |  ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ನನ್ಯ ಅಚ್ಯುತ ಮೂಡೆತ್ತಾಯ Read More »

ನನ್ನ ಬೂತ್ ನಾನು ಅಭ್ಯರ್ಥಿ ಅಭಿಯಾನ | ಸ್ವಗ್ರಾಮದ ಬೂತಲ್ಲಿ ಶಾಸಕರಿಂದ ಪ್ರಚಾರ

ಪುತ್ತೂರು: ನನ್ನ ಬೂತ್ ನಾನು ಅಭ್ಯರ್ಥಿ ಅಭಿಯಾನದ ಅಂಗವಾಗಿ ಶಾಸಕ ಅಶೋಕ್ ರೈ ತನ್ನ ಸ್ವ ಗ್ರಾಮದ ಬೂತ್ ನಂ: 53 ರಲ್ಲಿ ಇಂದು ಚುನಾವಣಾ ಪ್ರಚಾರ ಕಾರ್ಯ ನಡೆಸಿದರು. ಕಾರ್ಯಕರ್ತರ ಜೊತೆ ತೆರಳಿದ ಶಾಸಕರು ಕೆದಿಕಂಡೆ ಗುತ್ತು, ಪಿಲಿಕುಂಡ ಮತ್ತು ಕೊಂಬಕೋಡಿ ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಪರ ಮತ ಯಾಚನೆ ಮಾಡಿದರು.ಮನೆ ಮನೆಗೆ ತೆರಳಿದ ಶಾಸಕರು ರಾಜ್ಯದ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿ ಯೋಜನೆ ಮತ್ತು ಕೇಂದ್ರದ ಕಾಂಗ್ರೆಸ್ ಪ್ರಣಾಳಿಕೆಯನ್ನು ಮನೆ

ನನ್ನ ಬೂತ್ ನಾನು ಅಭ್ಯರ್ಥಿ ಅಭಿಯಾನ | ಸ್ವಗ್ರಾಮದ ಬೂತಲ್ಲಿ ಶಾಸಕರಿಂದ ಪ್ರಚಾರ Read More »

ಗೃಹಲಕ್ಷ್ಮಿ : ಖಾತೆಗೆ ಹಣ ಜಮೆ ಮಾಡುವಂತೆ ಶಾಸಕರಿಂದ ಸರಕಾರಕ್ಕೆ ಮನವಿ

ಪುತ್ತೂರು: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಬಾಕಿ ಇರುವ ಮತ್ತು ಎಪ್ರಿಲ್ ತಿಂಗಳ ಕಂತನ್ನು ತಕ್ಷಣ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಶಾಸಕರಾದ ಅಶೋಕ್ ರೈ ಯವರು ಮನವಿ ಮಾಡಿದ್ದು. ಕಳೆದ ಎರಡು ದಿನಗಳಿಂದ ಫಲಾನುಭವಿ ಮಹಿಳೆಯರ ಖಾತೆಗೆ ಹಣ ಜಮೆಯಾಗುತ್ತಿದೆ. ಹಣಕಾಸು ಇಲಾಖೆಗೆ ನಿರ್ದೇಶನ ನೀಡುವಂತೆ ಸೋಮವಾರದಂದು ಶಾಸಕರಾದ ಅಶೋಕ್ ರೈ ಮನವಿ ಮಾಡಿದ್ದರು. ಮಂಗಳವಾರ ಮತ್ತು ಬುಧವಾರ ಕಂತು ಜಮೆಯಾಗಿದೆ. ಕೆಲವರಿಗೆ ಎರಡರಿಂದ ಮೂರು ಕಂತು ಒಂದೇ ಬಾರಿಗೆ ಜಮೆಯಾಗಿದೆ.ಶಾಸಕರ ಮುತುವರ್ಜಿಗೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.

ಗೃಹಲಕ್ಷ್ಮಿ : ಖಾತೆಗೆ ಹಣ ಜಮೆ ಮಾಡುವಂತೆ ಶಾಸಕರಿಂದ ಸರಕಾರಕ್ಕೆ ಮನವಿ Read More »

ಬೇಸಿಗೆ ರಜೆ ಅಂದು – ಇಂದು

ಮಕ್ಕಳು ಮುಂದಿನ ಭವಿಷ್ಯದ  ಆಸ್ತಿ. ಹಾಗಾಗಿ ಮಕ್ಕಳ ಸಮಗ್ರ ಬೆಳವಣಿಗೆಯನ್ನು ಉತ್ತಮ ರೀತಿಯಲ್ಲಿ ನೋಡಿಕೊಳ್ಳುವುದು ಪೋಷಕರ ಕರ್ತವ್ಯ. ಹಿಂದಿನ ಕಾಲದಲ್ಲಿ ಮಕ್ಕಳಿಗೆ ಬೇಸಿಗೆ ಬಂತೆಂದರೆ ಹಬ್ಬ!ಬಂಧು ಮಿತ್ರರ ಜೊತೆಗೂಡಿಕೊಂಡು ಆಟೋಟಗಳ ಜೊತೆಗೆ ಹರಟೆ, ಪುರಾಣ, ಕಥೆ, ಕವಿತೆ ಮುಂತಾದವುಗಳನ್ನು ಸ್ವಾಭಾವಿಕವಾಗಿ ಕಲಿಯುತ್ತಿದ್ದರು. ಇದ್ದರಿಂದ ಅವರಲ್ಲಿ ದೈಹಿಕ ಮತ್ತು ಭೌದ್ಧಿಕ ಚುರುಕುತನ ಬೆಳೆಯುತ್ತಿತ್ತು. ಆದರೆ ಇತ್ತೀಚಿನ ಮಕ್ಕಳು ಇಂತಹ ಸಂದರ್ಭಗಳಿಂದ ವಂಚಿತರಾಗಿದ್ದಾರೆ. ಇಂದಿನ ಮಕ್ಕಳು ಬೇಸಿಗೆ ರಜೆಯ ಸಮಯದಲ್ಲಿ ಆ ಕ್ಲಾಸ್ ಈ ಕ್ಲಾಸ್ ಎಂದುಕೊಂಡು ಬಂಧು ಮಿತ್ರರಿಂದ

ಬೇಸಿಗೆ ರಜೆ ಅಂದು – ಇಂದು Read More »

ಲೋಕಸಭೆ ಚುನಾವಣೆ : ಕೆ ಎಸ್ ಆರ್ ಟಿ ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

ಸುಳ್ಯ: ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯ ಕರ್ತವ್ಯ ನಿಮಿತ್ತ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ವ್ಯತ್ಯಯವಾಗಲಿದೆ ಎಂದು ಕೆ ಎಸ್ ಆರ್ ಟಿ ಸಿ ಸುಳ್ಯ ಘಟಕ ವ್ಯವಸ್ಥಾಪಕರು ತಿಳಿಸಿದ್ದಾರೆ. ಮತಪೆಟ್ಟಿಗೆ ಮತ್ತು ಸಿಬ್ಬಂದಿಗಳನ್ನು ಮತಕಟ್ಟೆಗಳಿಗೆ ಸಾಗಿಸುವ ಸಲುವಾಗಿ ಕೆ ಎಸ್ ಆರ್ ಟಿ ಸಿ ಬಸ್ ಗಳನ್ನು ನಿಯೋಜಿಸಿರುವುದರಿಂದ ಎ. 25 ,26 ,27ರಂದು ಗ್ರಾಮಾಂತರ ಪ್ರದೇಶಗಳಿಗೆ ಬಸ್ಸು ಸಂಚಾರ ವ್ಯತ್ಯಯವಾಗಲಿದೆ ಎಂದು ತಿಳಿದು ಬಂದಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕಾಗಿದೆ.

ಲೋಕಸಭೆ ಚುನಾವಣೆ : ಕೆ ಎಸ್ ಆರ್ ಟಿ ಸಿ ಬಸ್ ಸಂಚಾರದಲ್ಲಿ ವ್ಯತ್ಯಯ Read More »

ಬಹಿರಂಗ ಪ್ರಚಾರಕ್ಕೆ ಕೊನೆಯ ದಿನ – ದಕ್ಷಿಣಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಜ್ಜು

ಮಂಗಳೂರು : ಲೋಕಸಭೆ ಚುನಾವಣೆಯ ಕೊನೆಯ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ   ಇಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದೆ. ಇನ್ನು ಮತದಾನಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಬುಧವಾರ ಸಂಜೆ 6ರ ಬಳಿಕ ರ‍್ಯಾಲಿ–ಬೀದಿ ಪ್ರಚಾರಕ್ಕೆ ಅವಕಾಶ ಇಲ್ಲ. ಮನೆ ಮನೆಗೆ ಹೋಗಿ ಪ್ರಚಾರ ಮಾಡಬಹುದು. ಈ ಕ್ಷೇತ್ರದ ಮತದಾರರಲ್ಲದ ರಾಜಕೀಯ ಮುಖಂಡರು ಕಡ್ಡಾಯವಾಗಿ ಕ್ಷೇತ್ರವನ್ನು ತೊರೆಯಬೇಕು. ಈ ಅವಧಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಮದ್ಯ

ಬಹಿರಂಗ ಪ್ರಚಾರಕ್ಕೆ ಕೊನೆಯ ದಿನ – ದಕ್ಷಿಣಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಜ್ಜು Read More »

ಬಾರ್ಯ ಗ್ರಾ .ಪಂ ಸಿಬ್ಬಂದಿ ಗಣೇಶ್ ಯಾನೆ ಕುಶಾಲಪ್ಪ ಆತ್ಮಹತ್ಯೆ

ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕು ಬಾರ್ಯ ಗ್ರಾಮದ ಪೆರಿಯೊಟ್ಟು ನಿವಾಸಿ, ಬಾರ್ಯ ಗ್ರಾಮ ಪಂಚಾಯತ್ ಸಿಬ್ಬಂದಿ ಗಣೇಶ್ ಯಾನೆ ಕುಶಾಲಪ್ಪ (38) ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ವರದಿಯಾಗಿದೆ. ಎ.22 ರಂದು ತನ್ನ ಮನೆ ಸಮೀಪದ ಮರದ ಕೆಳಗೆ ವಿಷ ಸೇವಿಸಿ ಅಸ್ವಸ್ಥರಾಗಿದ್ದರು. ಚಿಕಿತ್ಸೆಗಾಗಿ ಇವರನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಎ.23 ರಂದು ನಿಧನರಾದರು. ಗಣೇಶ್ ಯಾನೆ ಕುಶಾಲಪ್ಪ ಅವರು ಕಳೆದ 19 ವರ್ಷಗಳಿಂದ ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಉದ್ಯೋಗಿಯಾಗಿದ್ದರು. ಉಪ್ಪಿನಂಗಡಿ

ಬಾರ್ಯ ಗ್ರಾ .ಪಂ ಸಿಬ್ಬಂದಿ ಗಣೇಶ್ ಯಾನೆ ಕುಶಾಲಪ್ಪ ಆತ್ಮಹತ್ಯೆ Read More »

ಬೆಳ್ಳಾರೆ ಪೊಲೀಸ್ ಠಾಣೆಗೆ ವಿದ್ಯಾರಶ್ಮಿ ವಿದ್ಯಾಲಯದ ವತಿಯಿಂದ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

ಬೆಳ್ಳಾರೆ : ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದ ವತಿಯಿಂದ ಬೆಳ್ಳಾರೆ ಪೊಲೀಸ್ ಠಾಣೆಗೆ ಸುಮಾರು 40,000/- ರೂ. ಮೌಲ್ಯದ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ಕೊಡುಗೆಯಾಗಿ ನೀಡಲಾಯಿತು. ಕಾಲೇಜಿನ ಸಂಚಾಲಕ ಸಹಕಾರಿ ರತ್ನ ಸವಣೂರು ಸೀತಾರಾಮ ರೈಯವರು  ಠಾಣಾಧಿಕಾರಿ ಸಂತೋಷ್ ಬಿ. ಪಿ.ಯವರಿಗೆ ಯಂತ್ರವನ್ನು ಹಸ್ತಾಂತರಿಸಿದರು. ಕಾಲೇಜಿನ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಮತ್ತು ಠಾಣಾ ಸಿಬ್ಬಂದಿಯವರು ಉಪಸ್ಥಿತರಿದ್ದರು.

ಬೆಳ್ಳಾರೆ ಪೊಲೀಸ್ ಠಾಣೆಗೆ ವಿದ್ಯಾರಶ್ಮಿ ವಿದ್ಯಾಲಯದ ವತಿಯಿಂದ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ Read More »

error: Content is protected !!
Scroll to Top