ಬಿಜೆಪಿ ಮನೆ ಮನೆ ಭೇಟಿ ಮಹಾ ಅಭಿಯಾನಕ್ಕೆ ಚಾಲನೆ | ಬೂತ್ 49 ರಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರುರವರಿಂದ ಮತ ಯಾಚನೆ

ಉಪ್ಪಿನಂಗಡಿ: ಬಿಜೆಪಿ ವತಿಯಿಂದ ಮನೆ ಮನೆ ಭೇಟಿ ಮಹಾ ಅಭಿಯಾನಕ್ಕೆ ಇಂದು ಮುಂಜಾನೆ ಚಾಲನೆ ನೀಡಲಾಗಿದೆ. ಹಿರೇಬಂಡಾಡಿ ಬೂತ್ ಸಂಖ್ಯೆ 49 ರಲ್ಲಿ ಮಾಜಿ ಶಾಸಕರಾದ ಸಂಜೀವ ಮಠಂದೂರು ಮನೆ ಮನೆ ಭೇಟಿ ನೀಡಿ ಮತ ಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಪ್ರಮುಖರಾದ ಜನಾರ್ದನ ಅನಂತಿಮಾರ್, ವಿಶ್ವನಾಥ ಕೆಮ್ಮಟೆ, ನಿತಿನ್ ತಾರಿತ್ತಡಿ, ಲಕ್ಷ್ಮೀಶ ನಿಡ್ಡೆಂಕಿ, ಸುರೇಶ್ ಹಳೆಮನೆ, ಡೀಕಯ್ಯ ಪನ್ನೊಟ್ಟು, ಭರತ್ ಜಾಲು ಉಪಸ್ಥಿತರಿದ್ದರು.

ಬಿಜೆಪಿ ಮನೆ ಮನೆ ಭೇಟಿ ಮಹಾ ಅಭಿಯಾನಕ್ಕೆ ಚಾಲನೆ | ಬೂತ್ 49 ರಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರುರವರಿಂದ ಮತ ಯಾಚನೆ Read More »

ಕಾರಿನಲ್ಲಿ ಸಾಗಿಸುತ್ತಿದ್ದ ಒಂದು ಕೆಜಿ ಚಿನ್ನ ವಶ !

ಕೋಟ: ಕೇರಳದಿಂದ ಕಾರಿನಲ್ಲಿ ಒಂದು ಕೆ.ಜಿ.ಗೂ ಅಧಿಕ ಚಿನ್ನ ಸಾಗಿಸುತ್ತಿದ್ದ ಪ್ರಕರಣ ಪತ್ತೆಹಚ್ಚಿದ ಪೊಲೀಸರು ಚಿನ್ನ ವಶಪಡಿಸಿಕೊಂಡಿದ್ದಾರೆ. ಕೋಟ ಮೂರುಕೈನಲ್ಲಿ ಅನುಮಾಸ್ಪದವಾಗಿ ಕಾರಿನಲ್ಲಿ ಕೇರಳದಿಂದ ಕುಂದಾಪುರದ ಕಡೆ ಸಾಗಿಸುತ್ತಿದ್ದ 1.200 ಕೆಜಿ ಚಿನ್ನವನ್ನು ಕೋಟ ಪೋಲಿಸರು ವಶಪಡಿಸಿಕೊಂಡಿದ್ದಾರೆ.    ಕೇರಳದ ಚಿತ್ರ ನಿರ್ಮಾಪಕರೊಬ್ಬರ ಮನೆಯಿಂದ ಕದ್ದ ಚಿನ್ನ ಎಂದು ಶಂಕಿಸಲಾಗಿದ್ದು, ಇದನ್ನು ಬಿಹಾರಕ್ಕೆ ಸಾಗಿಸುವ ಯತ್ನದಲ್ಲಿದ್ದ ಆರೋಪಿಗಳ ಕುರಿತು ಮಾಹಿತಿ ತಿಳಿದ ಕೋಟ ಪೋಲಿಸ್ ಆರೋಪಿಗಳನ್ನು ಬಂದಿಸಿದ್ದಾರೆ. ಕೋಟ ಠಾಣೆಯಲ್ಲಿ ಉನ್ನತ ಮಟ್ಟದ ಪೋಲಿಸ್ ಅಧಿಕಾರಿಗಳು ಆಗಮಿಸಿ, ಪ್ರಕರಣದ

ಕಾರಿನಲ್ಲಿ ಸಾಗಿಸುತ್ತಿದ್ದ ಒಂದು ಕೆಜಿ ಚಿನ್ನ ವಶ ! Read More »

ನದಿಗೆ ಈಜಲು ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

ಬಂಟ್ವಾಳ : ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ಶನಿವಾರ ಸಂಜೆ ವೇಳೆಗೆ ಸಂಭವಿಸಿದೆ. ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ನೀರುಪಾಲಾದ ಬಾಲಕ. ಕೆಮ್ಮನ್ ಪಳಿಕೆ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, 7 ನೇ ತರಗತಿ ತೇರ್ಗಡೆ ಹೊಂದಿದ್ದ ಸುಹೈಲ್‍ ತನ್ನ ಮನೆ ಸಮೀಪದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಂದ ಸ್ನೇಹಿತರ ಜೊತೆಗೆ ಪಕ್ಕದ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದು ಆ ವೇಳೆ ಈ ಘಟನೆ ನಡೆದಿದೆ

ನದಿಗೆ ಈಜಲು ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು Read More »

ಏ.21-28 : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ | ಇಂದು ಸಾಗಿ ಬಂತು ವೈಭವದ ಹೊರೆಕಾಣಿಕೆ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಹಾಗೂ ಸಪರಿವಾರ ದೇವರ ಪುನರ್ ಪ್ರತಿಷ್ಠಾ ಅವ್ರಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೆಯು ಏ.21 ರಿಂದ 28 ರ ತನಕ ವಿವಿಧ ವೈದಿಕ, ತಾಂತ್ರಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬ್ರಹ್ಮಶ್ರೀ ಕಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಬ್ರಹ್ಮ ಕಲಶೋತ್ಸವದಲ್ಲಿ ಏ.21 ರಂದು ಬೆಳಿಗ್ಗೆ

ಏ.21-28 : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ | ಇಂದು ಸಾಗಿ ಬಂತು ವೈಭವದ ಹೊರೆಕಾಣಿಕೆ Read More »

ಡಾ| ಆದಂ ಉಸ್ಮಾನ್ ನಿಧನ

ಬೆಳ್ತಂಗಡಿ : ತಲಪಾಡಿ ಕೆ.ಸಿ ರೋಡ್ ನಿವಾಸಿ ಡಾ| ಆದಂ ಉಸ್ಮಾನ್ (65) ಅಲ್ಪಕಾಲದ ಅಸೌಖ್ಯದಿಂದ ಇಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಪುತ್ತೂರು, ಕಡಬ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ, ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಸುಮಾರು 14 ವರ್ಷಗಳ ಕಾಲ ಸರಕಾರಿ ಸೇವೆ ಸಲ್ಲಿಸಿ ಕಳೆದ ವರ್ಷ ನಿವೃತ್ತರಾಗಿದ್ದರು. ಮೃತದೇಹ ತಮ್ಮ ಮನೆಯಾದ ಕೆ.ಸಿ.ರೋಡ್ ಮಂಗಳೂರಿನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ.

ಡಾ| ಆದಂ ಉಸ್ಮಾನ್ ನಿಧನ Read More »

ಜಿ.ಎಲ್. ಆಚಾರ್ಯ ಜ್ಯುವೆಲ್ಲ‌ರ್ಸ್‍ ನಲ್ಲಿ ಅಕ್ಷಯ ತೃತೀಯ ಮುಂಗಡ ಬುಕ್ಕಿಂಗ್ ಆಫರ್ | ಏ.20 ರಿಂದ ಮೇ 9 ರ ವರೆಗೆ ಲಭ್ಯ

ಪುತ್ತೂರು: ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಮುಂಗಡ ಬುಕ್ಕಿಂಗ್ ಆಫರ್ ಏ.20 ರಿಂದ ಮೇ 09 ರ ವರೆಗೆ ಲಭ್ಯವಿದೆ. ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿಯೂ ಲಭ್ಯವಿದೆ. ಸಂಸ್ಕೃತದಲ್ಲಿ ಅಕ್ಷಯ ಎಂದರೆ ಶಾಶ್ವತ ಎಂದರ್ಥ ಅಕ್ಷಯ ತೃತೀಯ ಎಂಬುವುದು ಶುಭದ ಸಂಕೇತವಾಗಿದೆ. ಈ ಸಂದರ್ಭದಲ್ಲಿ ಜನರು ಚಿನ್ನ ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಖರೀದಿಸುತ್ತಾರೆ ಏಕೆಂದರೆ ಇದು ಕುಟುಂಬಕ್ಕೆ ಸಮೃದ್ಧಿ

ಜಿ.ಎಲ್. ಆಚಾರ್ಯ ಜ್ಯುವೆಲ್ಲ‌ರ್ಸ್‍ ನಲ್ಲಿ ಅಕ್ಷಯ ತೃತೀಯ ಮುಂಗಡ ಬುಕ್ಕಿಂಗ್ ಆಫರ್ | ಏ.20 ರಿಂದ ಮೇ 9 ರ ವರೆಗೆ ಲಭ್ಯ Read More »

ಮಾಜಿ ಮೇಯರ್ ಕವಿತಾ ಸನಿಲ್‌ ಬಿಜೆಪಿ ಸೇರ್ಪಡೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯ‌ರ್, ಕಾಂಗ್ರೆಸ್‌ ನಾಯಕಿ ಕವಿತಾ ಸನಿಲ್ ಬಿಜೆಪಿ ಗೆ ಸೇರ್ಪಡೆಗೊಂಡರು. ಶನಿವಾರ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಪಕ್ಷದ ಧ್ವಜ ನೀಡಿ ವಿಜಯೇಂದ್ರ ಕವಿತಾ ಸನಿಲ್‌ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಕವಿತಾ ಸನಿಲ್, ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ನಾನು ಪಕ್ಷ ಸೇರ್ಪಡೆಯಾಗಿದ್ದೇನೆ ಎಂದರು.

ಮಾಜಿ ಮೇಯರ್ ಕವಿತಾ ಸನಿಲ್‌ ಬಿಜೆಪಿ ಸೇರ್ಪಡೆ Read More »

ಏ.23 : ಅಣ್ಣಾಮಲೈಯಿಂದ ಸುಳ್ಯ, ಪುತ್ತೂರು, ಉಪ್ಪಿನಂಗಡಿ, ವಿಟ್ಲದಲ್ಲಿ ರೋಡ್ ಶೋ | ನಾಳೆ ಮನೆ ಮನೆ ಭೇಟಿ ಮಹಾ ಅಭಿಯಾನ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ 221 ಬೂತ್‍ಗಳಲ್ಲಿ ಮನೆ ಮನೆ ಭೇಟಿ ಕಾರ್ಯಕ್ರಮದ ಮಹಾ ಅಭಿಯಾನ ಏ.21 ಭಾನುವಾರ ನಡೆಯಲಿದ್ದು, ಇದಕ್ಕಾಗಿ ಎಲ್ಲಾ ಪೂರ್ವ ತಯಾರಿ ನಡೆಸಲಾಗಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಳಿಗ್ಗೆಯಿಂದ ಸಂಜೆ ತನಕ ಮನೆ ಮನೆ ಭೇಟಿ ನಡೆಯಲಿದ್ದು, ಕೇಂದ್ರ ಸರಕಾರದ ಯೋಜನೆ ಹಾಗೂ ಪ್ರಣಾಳಿಕೆ ಕುರಿತು ಮನವರಿಕೆ ಮಾಡಲಾಗುವುದು ಎಂದು ತಿಳಿಸಿದರು. ಈಗಾಗಲೇ ಪ್ರತಾಪಸಿಂಹ ನಾಯಕ್

ಏ.23 : ಅಣ್ಣಾಮಲೈಯಿಂದ ಸುಳ್ಯ, ಪುತ್ತೂರು, ಉಪ್ಪಿನಂಗಡಿ, ವಿಟ್ಲದಲ್ಲಿ ರೋಡ್ ಶೋ | ನಾಳೆ ಮನೆ ಮನೆ ಭೇಟಿ ಮಹಾ ಅಭಿಯಾನ Read More »

ರೋಟರಿ ಯುವ ನೇತೃತ್ವದಲ್ಲಿ ನಿರ್ಗತಿಕ ವ್ಯಕ್ತಿಯ ರಕ್ಷಣೆ : ಪುನರ್ವಸತಿ ಕೇಂದ್ರಕ್ಕೆ ರವಾನೆ

ಪುತ್ತೂರು:  ಅನೇಕ ಸಮಯಗಳಿಂದ ಸಂಪ್ಯ ಬಸ್ಸು ನಿಲ್ದಾಣದ ದಲ್ಲಿ ಅನಾರೋಗ್ಯ ಪೀಡಿತ ಸ್ಥಿತಿಯಲ್ಲಿ ಕಂಡುಬಂದ ತಿಮ್ಮಪ್ಪ ಎಂಬವರನ್ನು ಪುತ್ತೂರು ಉಮೇಶ್ ನಾಯಕ್ ಅವರ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಸಹಕಾರದೊಂದಿಗೆ ನಿರ್ಗತಿಕರ ಪುನರ್ವಸತಿ ಕೇಂದ್ರಕ್ಕೆ ಇಂದು ಸೇರಿಸಲಾಯಿತು. ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಂಗ ಸೋಮಯ್ಯ ಎಂ. ವೈ ಹಾಗೂ ಎಸ್. ಐ ಜಂಬೂರಾಜ್ ಮಹಾಜನ್ ಅವರ ಸೂಚನೆಯ ಮೇರೆಗೆ ನಿರ್ಗತಿಕ ಪುನರ್ವಸತಿ ಕೇಂದ್ರಕ್ಕೆ ಸೇರಿಸಲಾಗಿದೆ.  ಈಗಾಗಲೇ ಪುತ್ತೂರಿನ

ರೋಟರಿ ಯುವ ನೇತೃತ್ವದಲ್ಲಿ ನಿರ್ಗತಿಕ ವ್ಯಕ್ತಿಯ ರಕ್ಷಣೆ : ಪುನರ್ವಸತಿ ಕೇಂದ್ರಕ್ಕೆ ರವಾನೆ Read More »

ಎರಡು ಕಾರುಗಳ ಮುಖಾಮುಖಿ ಡಿಕ್ಕಿ : ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

ಸುಳ್ಯ : ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಪರಿಣಾಮ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡ ಘಟನೆ ಸುಳ್ಯ ಶ್ರೀರಾಮ್ ಪೇಟೆ ಬಳಿ ಇಂದು ನಡೆದಿದೆ. ಓಮ್ನಿ ಕಾರು ಹಾಗೂ ಸೆಲಾರಿಯೋ ಕಾರಿನ ನಡುವೆ ಶ್ರೀರಾಮ್ ಪೇಟೆ ಪೋಸ್ಟ್ ಆಫೀಸ್ ಕಚೇರಿಯ ಬಳಿ ಡಿಕ್ಕಿ ಸಂಭವಿಸಿದೆ. ಘಟನೆಯಿಂದಾಗಿ ಎರಡು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಕಾರುಗಳ ಡಿಕ್ಕಿಯಿಂದ ಸುಳ್ಯ ಮುಖ್ಯ ಬೀದಿಯಲ್ಲಿ ಸ್ವಲ್ಪ ಹೊತ್ತು ಸಂಚಾರಕ್ಕೆ ತಡೆ ಉಂಟಾಯಿತು. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

ಎರಡು ಕಾರುಗಳ ಮುಖಾಮುಖಿ ಡಿಕ್ಕಿ : ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ Read More »

error: Content is protected !!
Scroll to Top