ಕಾರು ಡಿಕ್ಕಿ ಹೊಡೆದು ಪಾದಾಚಾರಿ ಮೃತ್ಯು

ಸುಳ್ಯ : ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೊಗುತ್ತಿದ್ದ ಸುಳ್ಯ ಜಟ್ಟಿಪಳ್ಳ ನಿವಾಸಿ ಗೋಪಾಲ ಎಂಬವರಿಗೆ ಕಾರೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬುಧವಾರ ಮುಂಜಾನೆ ಬಸ್ ನಿಲ್ದಾಣ ಬಳಿ ನಡೆದುಕೊಂಡು ಹೊಗುತ್ತಿದ್ದ ಸಂದರ್ಭದಲ್ಲಿ ಕಾರು ಗುದ್ದಿದರೆನ್ನಲಾಗಿದೆ.ಸ್ಥಳಕ್ಕೆ ಆಗಮಿಸಿದ ಪ್ರಗತಿ ಅಂಬ್ಯುಲೆನ್ಸ್ ಚಾಲಕ ಅಚ್ಚು ಅವರು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಿದರು. ಗೋಪಾಲ ಅವರು ಜಟ್ಟಿಪಳ್ಳ ನಿವಾಸಿಯಾಗಿದ್ದು ಹಲವಾರು ವರ್ಷಗಳಿಂದ ಮೇಸ್ತ್ರಿ ವೃತಿಯನ್ನು ಮಾಡುತ್ತಿದ್ದರು.

ಕಾರು ಡಿಕ್ಕಿ ಹೊಡೆದು ಪಾದಾಚಾರಿ ಮೃತ್ಯು Read More »

ಕೇಂದ್ರ ಲೋಕಸೇವಾ ಆಯೋಗದ ಫಲಿತಾಂಶ ಪ್ರಕಟ | ಇಂಡಿಯಾ ಫಾರ್ ಐಎಎಸ್ ಅಕಾಡೆಮಿಯಿಂದ ಮಾರ್ಗದರ್ಶನ ಪಡೆದ 12 ಅಭ್ಯರ್ಥಿಗಳು ಆಯ್ಕೆ

ಕೇಂದ್ರ ಲೋಕಸೇವಾ ಆಯೋಗ ಪ್ರಕಟಿಸಿದ 2024 ರ ಫಲಿತಾಂಶ ಇಂದು ಪ್ರಕಟವಾಗಿದ್ದು, ಕರ್ನಾಟಕದಿಂದ 25 ಮಂದಿ ರ್ಯಾಂಕ್ ಗಳಿಸಿದ್ದಾರೆ. ಈ ಪೈಕಿ 12 ಮಂದಿ ಇಂಡಿಯಾ ಫಾರ್ ಐಎಎಸ್ ಅಕಾಡೆಮಿಯಿಂದ ವ್ಯಕ್ತಿತ್ವ ಪರೀಕ್ಷೆ ಹಾಗೂ ವಿವಿಧ ಹಂತಗಳಲ್ಲಿ ಮಾರ್ಗದರ್ಶನ ಪಡೆದ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಪುತ್ತೂರಿನ ಅರುಣಾ ಕಲಾ ಮಂದಿರದ ಎದುರು ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಯು ಇಂಡಿಯಾ ಫಾರ್ ಐಎಎಸ್ ಸಂಸ್ಥೆಯ ಜತೆಗೂಡಿ ಪುತ್ತೂರು ಪರಿಸರದ ವಿದ್ಯಾರ್ಥಿಗಳಿಗೆ ಕೆಪಿಎಸ್‍ಸಿ ಮತ್ತು ಯುಪಿಎಸ್‍ಸಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಬಗ್ಗೆ

ಕೇಂದ್ರ ಲೋಕಸೇವಾ ಆಯೋಗದ ಫಲಿತಾಂಶ ಪ್ರಕಟ | ಇಂಡಿಯಾ ಫಾರ್ ಐಎಎಸ್ ಅಕಾಡೆಮಿಯಿಂದ ಮಾರ್ಗದರ್ಶನ ಪಡೆದ 12 ಅಭ್ಯರ್ಥಿಗಳು ಆಯ್ಕೆ Read More »

ಏ.17 ಮುಂಜಾನೆಯಿಂದ ಪುತ್ತೂರಿನಲ್ಲಿ ಮದ್ಯದಂಗಡಿ ಬಂದ್

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಏ.17 ಬೆಳಿಗ್ಗೆ 6 ರಿಂದ ಏ.18 ರ ಮಧ್ಯರಾತ್ರಿ ವರೆಗೆ ಮದ್ಯದಂಗಡಿ ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್ ಗಳನ್ನು ಬಂದ್ ಮಾಡುವಂತೆ ತಿಳಿಸಿದ್ದಾರೆ. ಪುತ್ತೂರು ಜಾತ್ರೋತ್ಸವ ಹಿನ್ನೆಲೆ ಸಾವಿರಾರು ಜನರು ಸೇರುವ ನಿರೀಕ್ಷೆ ಇದ್ದು, ಈ ಸಮಯದಲ್ಲಿ ಕಿಡಿಗೇಡಿಗಳಿಗೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ, ಸಾರ್ವಜನಿಕ

ಏ.17 ಮುಂಜಾನೆಯಿಂದ ಪುತ್ತೂರಿನಲ್ಲಿ ಮದ್ಯದಂಗಡಿ ಬಂದ್ Read More »

ಪತ್ರಕರ್ತ, ಹಿರಿಯ ಸಾಹಿತಿ ಪ್ರೊ.ಬಿ.ವಿ.ಅರ್ತಿಕಜೆಯವರು ನಿರಂಜನ ಪ್ರಶಸ್ತಿಗೆ ಆಯ್ಕೆ

ಪುತ್ತೂರು: ಅಂಕಣಕಾರ, ಲೇಖಕ, ಪ್ರೊ. ವಿ.ಬಿ. ಅರ್ತಿಕಜೆಯವರನ್ನು 2024ನೇ ಸಾಲಿನ ‘ನಿರಂಜನ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಶಿವರಾಮ ಕಾರಂತ ಅಧ್ಯಯನ ಕೇಂದ್ರ ಕೊಡಮಾಡುವ ಈ ಪ್ರಶಸ್ತಿಯನ್ನು ಸಾಹಿತ್ಯ ಲೋಕಕ್ಕೆ ಉತ್ತಮ ಸೇವೆ ಸಲ್ಲಿಸಿದವರಿಗೆ ಇದನ್ನು ನೀಡಲಾಗುತ್ತಿದೆ. ಪತ್ರಕರ್ತರೂ, ಸಾಹಿತಿಯೂ ಆಗಿರುವ ಅರ್ತಿಕಜೆ ಅವರು ಈಗಾಗಲೇ ಸಾಹಿತ್ಯ ರತ್ನ, ಬಾಳಿಲ ಪ್ರಶಸ್ತಿ, ಬೋಳಂತಕೋಡಿ ಪ್ರಶಸ್ತಿ, ಒಡಿಯೂರು ಶ್ರೀ ಪ್ರಶಸ್ತಿ, ಸತ್ಯಶಾಂತಾ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ಪ್ರಶಸ್ತಿ ಮುಂತಾದ ಗೌರವಗಳಿಗೆ

ಪತ್ರಕರ್ತ, ಹಿರಿಯ ಸಾಹಿತಿ ಪ್ರೊ.ಬಿ.ವಿ.ಅರ್ತಿಕಜೆಯವರು ನಿರಂಜನ ಪ್ರಶಸ್ತಿಗೆ ಆಯ್ಕೆ Read More »

ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳೆಗೆ ಮನೆ ಭೇಟಿ ಸಂದರ್ಭ ಹಲ್ಲೆ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ರೋಟರಿ ಪುರದಲ್ಲಿ ಚುನಾವಣೆ ಕರ್ತವ್ಯ ನಿರತ ಮನೆ ಮನೆಗೆ ಮತ ಚೀಟಿ ವಿತರಣೆಗೆ ತೆರಳಿದ ಅಂಗನವಾಡಿ ಕಾರ್ಯಕರ್ತೆ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ. ಲೋಕಸಭಾ ಚುನಾವಣೆಯ ಸಂಬಂಧ ಮನೆಮನೆಗೆ ಮತ ಚೀಟಿ ವಿತರಣೆಗೆ ಚುನಾವಣಾಧಿಕಾರಿಯವರ ಸೂಚನೆಯಂತೆ ಅಂಗನವಾಡಿ ಕಾರ್ಯಕರ್ತೆಯರು ತೆರಳುವ ಕಾರ್ಯ ಇಂದಿನಿಂದ ಆರಂಭಗೊಂಡಿದ್ದು, ಈ ಸಂದರ್ಭ ರೋಟರಿಪುರ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಮತ ಚೀಟಿ ವಿತರಣೆ ಮತದಾರರ ಮನೆಯೊಂದಕ್ಕೆ ಹೋಗುತ್ತಿದ್ದ ವೇಳೆ ಇನ್ನೊಂದು ಮನೆಯಿಂದ ಹೊರ ಬಂದ ಮಹಿಳೆ ಅಂಗನವಾಡಿ

ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳೆಗೆ ಮನೆ ಭೇಟಿ ಸಂದರ್ಭ ಹಲ್ಲೆ Read More »

ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ : ಇಂದು ಮತ್ತು ನಾಳೆ ವಾಹನ ಸಂಚಾರದಲ್ಲಿ ಬದಲಾವಣೆ | ಪಾರ್ಕಿಂಗ್‍ ಗೆ ಸ್ಥಳ ನಿಗದಿ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಇಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಕಿರುವಾಳು ಬರುವುದು ಹಾಗೂ ನಾಳೆ ನಡೆಯುವ ರಥೋತ್ಸವದ ಅಂಗವಾಗಿ ಪುತ್ತೂರು ಪೇಟೆಯಲ್ಲಿ ವಾಹನ ಸಂಚಾರ ಬದಲಾವಣೆ ಸಹಿತ ಪಾರ್ಕಿಂಗ್ ವ್ಯವಸ್ಥೆಗೂ ಸೂಕ್ತ ಸ್ಥಳ ಗುರುತಿಸುವ ಕುರಿತು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಿಗೆ ಪೊಲೀಸ್ ಇಲಾಖೆ ವರದಿ ನೀಡಿದೆ. ಸಹಾಯಕ ಆಯುಕ್ತರ

ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ : ಇಂದು ಮತ್ತು ನಾಳೆ ವಾಹನ ಸಂಚಾರದಲ್ಲಿ ಬದಲಾವಣೆ | ಪಾರ್ಕಿಂಗ್‍ ಗೆ ಸ್ಥಳ ನಿಗದಿ Read More »

ಕನ್ನಡದ ಹಿರಿಯ ನಟ, ನಿರ್ದೇಶಕ ದ್ವಾರಕೀಶ್ ವಿಧಿವಶ

ಬೆಂಗಳೂರು: ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ದ್ವಾರಕೀಶ್ 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ದ್ವಾರಕೀಶ್ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ ಮತ್ತು ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ್ದ ದ್ವಾರಕೀಶ್, ಪ್ರೌಢಶಿಕ್ಷಣದ ನಂತರ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದರು. ನಂತರ ತಮ್ಮ

ಕನ್ನಡದ ಹಿರಿಯ ನಟ, ನಿರ್ದೇಶಕ ದ್ವಾರಕೀಶ್ ವಿಧಿವಶ Read More »

ಮನೆ ಮನೆಮತದಾನ ಪ್ರಕ್ರಿಯೆಗೆ  ಚಾಲನೆ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡುವ ಪ್ರಕ್ರಿಯೆಗೆ ಚಾಲನೆ ದೊರಕಿದೆ. ಏ. 17ರ ವರೆಗೆ ಅಂಚೆ ಮತಪತ್ರದ ಮೂಲಕ ಮತದಾನ ನಡೆಯಲಿದೆ. ದ.ಕ.ದಲ್ಲಿ 85 ವರ್ಷ ಮೇಲ್ಪಟ್ಟ 6,053 ಮತದಾರರಿಗೆ ಹಾಗೂ ಶೇ. 40ಕ್ಕಿಂತ ಮೇಲ್ಪಟ್ಟು ಅಂಗವೈಕಲ್ಯ ಹೊಂದಿರುವ 1,957 ಮತದಾರರು ಸಹಿತ 8,010 ಮಂದಿಯ ಮನೆಮನೆ ಭೇಟಿ ಮಾಡಿ ಅಂಚೆ ಮತಪತ್ರದ ಮೂಲಕ ಮತದಾನ ಸೌಲಭ್ಯ ಒದಗಿಸಲಾಗಿದೆ. ಈ ಪೈಕಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ

ಮನೆ ಮನೆಮತದಾನ ಪ್ರಕ್ರಿಯೆಗೆ  ಚಾಲನೆ Read More »

ಕಾರಿಗೆ ಕಂಟೈನರ್‌ ಡಿಕ್ಕಿ : ಕಾರು ಜಖಂ

ಸುಳ್ಯ: ಗಾಂಧಿನಗರ ಮಸೀದಿಯ ಮುಂಭಾಗ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡಿರುವುದಾಗಿ ವರದಿಯಾಗಿದೆ. ಏ.16ರಂದು ಮುಂಜಾನೆ ಈ ಘಟನೆ ನಡೆದಿದೆ. ಗಾಂಧಿನಗರ ಪೆಟ್ರೋಲ್ ಬಂಕ್ ಮಾಲಕ ಮುಜೀಬ್‌ ರವರು ಬೆಳಗ್ಗೆ 5ರ ಸುಮಾರಿಗೆ ಮಸೀದಿಗೆ ಕಾರಿನಲ್ಲಿ ಬಂದಿದ್ದರು. ಕಾರನ್ನು ಮಸೀದಿಯ ಎದುರಿನ ರಸ್ತೆಯ ಇನ್ನೊಂದು ಬದಿಯಲ್ಲಿ ಗಾಂಧಿನಗರ ಕಡೆಗೆ ಮುಖ ಮಾಡಿ ನಿಲ್ಲಿಸಿದ್ದರು. ಸುಮಾರು 5.30ರ ವೇಳೆಗೆ ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತಿದ್ದ ಕಂಟೈನರ್ ರಸ್ತೆ ಬದಿ ನಿಲ್ಲಿಸಿದ್ದ ಕಾರಿನ

ಕಾರಿಗೆ ಕಂಟೈನರ್‌ ಡಿಕ್ಕಿ : ಕಾರು ಜಖಂ Read More »

ಬೆಳಂದೂರು ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ಬೆಳಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಎನ್ ಎಸ್ ಎಸ್, ರಾಜ್ಯಶಾಸ್ತ್ರ ವಿಭಾಗ ಹಾಗೂ ಇತಿಹಾಸ ವಿಭಾಗಗಳ ನೇತೃತ್ವದಲ್ಲಿ ಭಾರತರತ್ನ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಪ್ರಾಧ್ಯಾಪಕ ಪ್ರೊ.ಐವನ್ ಫ್ರಾನ್ಸಿಸ್ ಲೋಬೋ ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಾಬಾಸಾಹೇಬ್ ಅಂಬೇಡ್ಕರ್ ರವರ ಹೋರಾಟವನ್ನು ಸತ್ಯ ಮತ್ತು ವಿಧಾನದ ನಿದರ್ಶನವಾಗಿ

ಬೆಳಂದೂರು ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ Read More »

error: Content is protected !!
Scroll to Top