ಸಾವಿರ ಸೀಮೆಯ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶು ಕಣಿ ಪೂಜೆ

ಪಂಜ : ಸಾವಿರ ಸೀಮೆಯ ಒಡೆಯ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೌರಮಾನ ಯುಗಾದಿ ಪ್ರಯುಕ್ತ ವಿಶು ಕಣಿ ಪೂಜೆ ಇಂದು ಜರುಗಿತು. ಸ್ಥಳೀಯ ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್, ವ್ಯವಸ್ಥಾಪನ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಸಾವಿರ ಸೀಮೆಯ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶು ಕಣಿ ಪೂಜೆ Read More »

ರಾಜ್ಯ ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಹ ಸಂಚಾಲಕರಾಗಿ ಹೇಮಂತ್ ರೈ

ಕಡಬ: ರಾಜ್ಯ ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಹ ಸಂಚಾಲಕರಾಗಿ ಆಲಂಕಾರಿನ‌ ಮನವಳಿಕೆಗುತ್ತು ಹೇಮಂತ್ ರೈ ಯವರನ್ನು ಆಯ್ಕೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರು ಆದೇಶ ಹೊರಡಿಸಿದ್ದಾರೆ. ಕಡಬ ತಾಲೂಕು ಆಲಂಕಾರು ಸಮೀಪದ ಮನವಳಿಕೆ ಗುತ್ತುವಿನ ಹೇಮಂತ್ ರವರು ಪ್ರವಾಸೋದ್ಯಮ ಉದ್ಯಮಿಯಾಗಿದ್ದಾರೆ. ಈ ಹಿಂದೆ ಪ್ರತಿಷ್ಠಿತ ಕಂಪೆನಿಗಳಲ್ಲಿ ಉನ್ನತ ಹುದ್ದೆಗಳಲ್ಲಿದ್ದರು. ಎಂಬಿಎ, ಎಲ್.ಎಲ್.ಬಿ ಪದವೀಧರರಾಗಿರುವ ಅವರು ಬೆಂಗಳೂರು ಉತ್ತರ ಜಿಲ್ಲೆಯ ಬಿಜೆಪಿ ವೃತ್ತಿಪರರ ಪ್ರಕೋಷ್ಠದ ಸಂಚಾಲಕರಾಗಿದ್ದರು. ಬಾಲ್ಯದಿಂದಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರೀಯ ಕಾರ್ಯಕರ್ತರಾಗಿದ್ದು

ರಾಜ್ಯ ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಹ ಸಂಚಾಲಕರಾಗಿ ಹೇಮಂತ್ ರೈ Read More »

‘ಸಾಹಿತ್ಯದ ಬಿಲ್ವಾರ್ಚನೆ’ ಕನ್ನಡ ಭಕ್ತಿಗೀತೆ ಆಲ್ಬಂ ಪೋಸ್ಟರ್ ಬಿಡುಗಡೆ

ಪುತ್ತೂರು: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗ್ರಾಮ ಸಾಹಿತ್ಯ ಸಂಭ್ರಮ ಸಂಚಾಲಕ ನಾರಾಯಣ ಕುಂಬ್ರ ಅವರ ‘ಸಾಹಿತ್ಯದ ಬಿಲ್ವಾರ್ಚನೆ’ ಕನ್ನಡ ಭಕ್ತಿ ಪ್ರಧಾನ ಆಲ್ಬಮ್ ಹಾಡಿನ ಪೋಸ್ಟರ್ ವಿವೇಕಾನಂದ ಕಾಲೇಜಿನಲ್ಲಿ ಬಿಡುಗಡೆಗೊಂಡಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ಕೃಷ್ಣ ಕಾರಂತ್, ಗಣಕ ವಿಜ್ಞಾನ ವಿಭಾಗದ ಪ್ರಕಾಶ್ ಕುಮಾರ್.ಪಿ, ಕಛೇರಿ ಅಧೀಕ್ಷಕ ಗುರುರಾಜ್, ಶಿಕ್ಷಕೇತರ ಸಂಘದ ಅಧ್ಯಕ್ಷೆ ಶುಭ ಎಸ್. ರಾವ್, ಶಿಕ್ಷಕೇತರ ಸಿಬ್ಬಂದಿಗಳು

‘ಸಾಹಿತ್ಯದ ಬಿಲ್ವಾರ್ಚನೆ’ ಕನ್ನಡ ಭಕ್ತಿಗೀತೆ ಆಲ್ಬಂ ಪೋಸ್ಟರ್ ಬಿಡುಗಡೆ Read More »

ಏ.15 : ಪುತ್ತೂರಿನಲ್ಲಿ ಮೇಳೈಸಲಿದೆ “ಪುತ್ತೂರ ಹಬ್ಬ” | ಟೈಮ್ & ಟೈಡ್  ಆಯೋಜನೆ, ನ್ಯೂಸ್ ಪುತ್ತೂರು ಮೀಡಿಯಾ ಪಾರ್ಟ್ನ ರ್ ನೊಂದಿಗೆ ಶ್ರೀ ಮಂಜುನಾಥ ಇಲೆಕ್ಟ್ರೋನಿಕ್ಸ್ & ಫರ್ನಿಚರ್ಸ್ ಪ್ರಸ್ತುತಪಡಿಸಲಿದೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಬಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೇಟೆ ಸವಾರಿ ಹಾಗೂ ಕಟ್ಟೆ ಪೂಜೆ ಪ್ರಯುಕ್ತ ದರ್ಬೆ ಶ್ರೀ ಮಂಜುನಾಥೇಶ್ವರ ಇಲೆಕ್ಟ್ರೋನಿಕ್ಸ್‌ & ಫರ್ನೀಚರ್ಸ್ ಪ್ರಸ್ತುತಪಡಿಸುವ “ಪುತ್ತೂರ ಹಬ್ಬ” ಎಂಬ ಬೃಹತ್ ಮನರಂಜನಾ ಕಾರ್ಯಕ್ರಮವನ್ನು ಏ.15 ಸೋಮವಾರ ಸಂಜೆ 6.30ರಿಂದ ಟೈಮ್ & ಟೈಡ್ ಇವೆಂಟ್‌ ಮ್ಯಾನೇಜ್‌ ಮೆಂಟ್‌ ಸಂಸ್ಥೆಆಯೋಜಿಸಲಿದೆ. ಪುತ್ತೂರು ನಗರದ ಇತಿಹಾಸದಲ್ಲಿಯೇ ಬೃಹತ್ ಮಟ್ಟದ ಪ್ರಥಮ ಕಾರ್ಯಕ್ರಮ  ಇದಾಗಿದ್ದು, ಪುತ್ತೂರಿನ ಬನ್ನೂರು ಜೋಡುಕಟ್ಟೆ ಮೈದಾನದಲ್ಲಿ ಜರಗಲಿದೆ.

ಏ.15 : ಪುತ್ತೂರಿನಲ್ಲಿ ಮೇಳೈಸಲಿದೆ “ಪುತ್ತೂರ ಹಬ್ಬ” | ಟೈಮ್ & ಟೈಡ್  ಆಯೋಜನೆ, ನ್ಯೂಸ್ ಪುತ್ತೂರು ಮೀಡಿಯಾ ಪಾರ್ಟ್ನ ರ್ ನೊಂದಿಗೆ ಶ್ರೀ ಮಂಜುನಾಥ ಇಲೆಕ್ಟ್ರೋನಿಕ್ಸ್ & ಫರ್ನಿಚರ್ಸ್ ಪ್ರಸ್ತುತಪಡಿಸಲಿದೆ Read More »

ನಾಳೆ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್‍ ಶೋ | ಪುತ್ತೂರಿನ 5 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಸ್ವ ಇಚ್ಚೆಯಿಂದ ಭಾಗಿ : ಸಂಜೀವ ಮಠಂದೂರು

ಪುತ್ತೂರು: ಮಂಗಳೂರಿನಲ್ಲಿ ನಾಳೆ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋಗೆ ಪುತ್ತೂರಿನಿಂದ 5 ಸಾವಿರಕ್ಕೂ ಮಿಕ್ಕಿ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಪುತ್ತೂರು ವಿಧಾನಸಭೆಯ ಎಲ್ಲಾ ಬೂತ್ ಗಳಿಂದ ಕಾರ್ಯಕರ್ತರು ಸ್ವ ಇಚ್ಛೆಯಿಂದ ತಮ್ಮ ತಮ್ಮ ವಾಹನದಲ್ಲಿ ಮಂಗಳೂರಿಗೆ ತೆರಳಲಿದ್ದಾರೆ ಎಂದು ತಿಳಿಸಿದರು. ಮಂಗಳೂರಿನಲ್ಲಿ ನಡೆಯುವ ಮೋದಿ ರೋಡ್ ಶೋ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 4 ಲಕ್ಷಕ್ಕೂ ಮಿಕ್ಕಿದ ಮತಗಳಲ್ಲಿ ಗೆಲ್ಲಿಸುವ ಕಾರ್ಯಕ್ರಮದ

ನಾಳೆ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್‍ ಶೋ | ಪುತ್ತೂರಿನ 5 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಸ್ವ ಇಚ್ಚೆಯಿಂದ ಭಾಗಿ : ಸಂಜೀವ ಮಠಂದೂರು Read More »

ಸಿಎಂ ಸಿದ್ಧರಾಮಯ್ಯ , ಡಿಕೆ ಶಿವಕುಮಾರ್ ಚುನಾವಣೆ ಪ್ರಚಾರ ಮುಂದೂಡಿಕೆ

ಪುತ್ತೂರು :ಪುತ್ತೂರಿನಲ್ಲಿ ನಡೆಯಬೇಕಿದ್ದ ಸಿಎಂ ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಚುನಾವಣೆ ಪ್ರಚಾರ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಏ.16 ಮಂಗಳವಾರ ಚುನಾವಣಾ ಪ್ರಚಾರ ಸಭೆ ನಿಗದಿಪಡಿಸಲಾಗಿತ್ತು. ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಶಾಸಕ ಅಶೋಕ ರೈ ತಿಳಿಸಿದ್ದಾರೆ.

ಸಿಎಂ ಸಿದ್ಧರಾಮಯ್ಯ , ಡಿಕೆ ಶಿವಕುಮಾರ್ ಚುನಾವಣೆ ಪ್ರಚಾರ ಮುಂದೂಡಿಕೆ Read More »

ಸುಡುಮದ್ದು, ರಥೋತ್ಸವ : ನಿಶ್ಚಿತ ಸಮಯದಲ್ಲಿ ನಡೆಸುವಂತೆ ಭಕ್ತಾದಿಗಳಿಂದ ಸಹಾಯಕ ಆಯುಕ್ತರಿಗೆ ಮನವಿ

ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಸಂಧರ್ಭದಲ್ಲಿ ಸಂತೆ ಇತ್ಯಾದಿಗಳನ್ನು ವ್ಯವಸ್ಥಿತವಾಗಿ ಆಯೋಜಿಸುವುದು, ಸುಡುಮದ್ದು ಪ್ರದರ್ಶನ ಮತ್ತು ರಥೋತ್ಸವವನ್ನು ನಿಶ್ಚಿತ ಸಮಯದಲ್ಲಿ ನಡೆಸುವಂತೆ ಶ್ರೀ ಮಹಾಲಿಂಗೇಶ್ವರ ದೇವರ ಭಕ್ತಾದಿಗಳು ಏ.೧೨ರಂದು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು. ರಥೋತ್ಸವದ ದಿನ ಶ್ರೀ ದೇವರು ರಥಾರೋಹಣದ ವೀಕ್ಷಣೆಗೆ ಭಕ್ತಾದಿಗಳಿಗೆ  ಸಹಕಾರಿವಾಗುವಂತೆ ರಥಬೀದಿಯಿಂದ ಕನಿಷ್ಠ ೭೫-೮೦ಮೀಟರ್ ದೂರದಲ್ಲಿ ವ್ಯಾಪಾರ ಮಳಿಗೆಗಳನ್ನು ಅಳವಡಿಸುವುದು. ಸುಡುಮದ್ದು ಪ್ರದರ್ಶನವನ್ನು ಸಾಕಷ್ಟು ದೂರದ ಸುರಕ್ಷಿತ ಪ್ರದೇಶದಲ್ಲಿ ವ್ಯವಸ್ಥೆಗೊಳಿಸುವುದು, ರಥೋತ್ಸವವನ್ನು ಮುಹೂರ್ತ ಸಮಯ ಮೀರದಂತೆ  ನಿಗಧಿ ಸಮಯ

ಸುಡುಮದ್ದು, ರಥೋತ್ಸವ : ನಿಶ್ಚಿತ ಸಮಯದಲ್ಲಿ ನಡೆಸುವಂತೆ ಭಕ್ತಾದಿಗಳಿಂದ ಸಹಾಯಕ ಆಯುಕ್ತರಿಗೆ ಮನವಿ Read More »

ಏ. 16: ಪುತ್ತೂರಿಗೆ ಸಿಎಂ ಸಿದ್ಧರಾಮಯ್ಯ, ಡಿ.ಕೆ ಶಿವಕುಮಾರ್ ಭೇಟಿ.

ಪುತ್ತೂರು : ಚುನಾವಣಾ ಪ್ರಚಾರ ಸಭೆಗೆ ಭಾಗವಹಿಸಲು ಸಿಎಂ ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಏ. 16 ರಂದು ಪುತ್ತೂರಿಗೆ ಆಗಮಿಸಲಿದ್ದು, ಕಿಲ್ಲೆ ಮೈದಾನದಲ್ಲಿ ಬೃಹತ್‌ ಚುನಾವಣಾ ಪ್ರಚಾರ ಸಭೆ ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದರು. ಮಧ್ಯಾಹ್ನ 3 ಗಂಟೆಗೆ ಮೊಟ್ಟೆತ್ತಡ್ಕ ಹೆಲಿಪ್ಯಾಡ್ ನಲ್ಲಿ ಬಂದಿಳಿಯಲಿದ್ದು, ಆ ಬಳಿಕ ಕಿಲ್ಲೆ ಮೈದಾನದಲ್ಲಿ ಸಮಾವೇಶದಲ್ಲಿ ಭಾಗವಹಿಸಲಿದ್ದು, ಸಂಜೆ 5 ಗಂಟೆಗೆ ನಿರ್ಗಮಿಸಲಿದ್ದಾರೆ.ಕಾರ್ಯಕ್ರಮದಲ್ಲಿ 15 ಸಾವಿರಕ್ಕೂ ಮಿಕ್ಕಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜಿಲ್ಲಾ

ಏ. 16: ಪುತ್ತೂರಿಗೆ ಸಿಎಂ ಸಿದ್ಧರಾಮಯ್ಯ, ಡಿ.ಕೆ ಶಿವಕುಮಾರ್ ಭೇಟಿ. Read More »

ಚುನಾವಣೆ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು : ಬಿ.ಮುರಳಿ ಕುಮಾರ್

ಮಂಗಳೂರು : ಪ್ರತಿಯೊಂದು ಘಟನೆಯನ್ನು ಸೂಕ್ಷ್ಮವಾಗಿ ಗಮನಿಸಿ ಅಭ್ಯರ್ಥಿಗಳ ವೆಚ್ಚದ ಬಗ್ಗೆ ನಿಗಾವಹಿಸಬೇಕು.ಮುಕ್ತ ಹಾಗೂ ಪಾರದರ್ಶಕ ಚುನಾವಣೆಗೆ ಮಾದರಿ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಎಂದು ರಾಜ್ಯಕ್ಕೆ ನಿಯೋಜನೆಗೊಂಡ ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್ ನಿರ್ದೇಶನ ನೀಡಿದರು. ಅವರು ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಕುರಿತಂತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ  ಮಾತನಾಡಿದರು. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ವೆಚ್ಚಗಳ ಬಗ್ಗೆ ವಿಶೇಷ ನಿಗಾವಹಿಸುವಂತೆ  ಮತ್ತು ಕಾಲಕಾಲಕ್ಕೆ ಪರಿಶೀಲಿಸುವಂತೆ ಸೂಚಿಸಿದರು.ಚುನಾವಣಾ ಅವಧಿಯಲ್ಲಿ

ಚುನಾವಣೆ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು : ಬಿ.ಮುರಳಿ ಕುಮಾರ್ Read More »

ನಾವು ಯಾರನ್ನೂ ದ್ವೇಷಿಸಿಲ್ಲ. ಪ್ರೀತಿಯಿಂದಲೇ ಜನರ ಬಳಿಗೆ ಹೋಗಿದ್ದೇವೆ : ಪದ್ಮರಾಜ್ ಆರ್. ಪೂಜಾರಿ

ಬೆಳ್ತಂಗಡಿ : ನಾವು ಯಾರನ್ನೂ ದ್ವೇಷಿಸಿಲ್ಲ. ಪ್ರೀತಿಯಿಂದಲೇ ಜನರ ಬಳಿಗೆ ಹೋಗಿದ್ದೇವೆ. ಹಾಗಾಗಿ ಮುವತ್ತ್ಮೂರು ವರ್ಷಗಳ ಸರಪಳಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮುರಿಯಲಿದೆ. ಕಾಂಗ್ರೆಸ್ ಜಿಲ್ಲೆಯಲ್ಲಿ ಗೆಲುವು ಪಡೆಯುವುದು ನಿಶ್ಚಿತ  ಎಂದು  ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಗರ ಹಾಗೂ ಗ್ರಾಮೀಣ ಘಟಕದ ಮುಖಂಡರು, ಕಾರ್ಯಕರ್ತರ ಸಭೆ ಬೆಳ್ತಂಗಡಿ ಕಾಂಗ್ರೆಸ್ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಹಿಂದುಳಿದ ವರ್ಗದ ಸಮುದಾಯಗಳ ಸಭೆಯನ್ನು ಮಂಗಳೂರಿನಲ್ಲಿ ಕರೆದಿದ್ದೇವು. ಎಲ್ಲಾ

ನಾವು ಯಾರನ್ನೂ ದ್ವೇಷಿಸಿಲ್ಲ. ಪ್ರೀತಿಯಿಂದಲೇ ಜನರ ಬಳಿಗೆ ಹೋಗಿದ್ದೇವೆ : ಪದ್ಮರಾಜ್ ಆರ್. ಪೂಜಾರಿ Read More »

error: Content is protected !!
Scroll to Top