ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಚುನಾವಣಾ ನಿವೃತ್ತಿ ಘೋಷಣೆ | ಕಾಂಗ್ರೆಸ್‍ ವಲಯದಲ್ಲಿ ಆತಂಕ

ಚಿಕ್ಕಬಳ್ಳಾಪುರ : ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯಿಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಲೋಕಸಭೆ ಚುನಾವಣೆ ಹೊತ್ತಲ್ಲೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವುದು ಕಾಂಗ್ರೆಸ್‍ ವಲಯದಲ್ಲಿ ಆತಂಕ ಮೂಡಿದೆ. ವೀರಪ್ಪ ಮೊಯಿಲಿ ಅವರು ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಹೈಕಮಾಂಡ್ ಕೊನೆ ಕ್ಷಣದಲ್ಲಿ ವೀರಪ್ಪ ಮೊಯಿಲಿ ಬದಲಿಗೆ ಯುವ ನಾಯಕ ರಕ್ಷಾ ರಾಮಯ್ಯರಿಗೆ ನೀಡಿತ್ತು. ಇದರಿಂದ ನಿರಾಸೆಗೊಂಡಿರುವ ಮೊಯಿಲಿ ಇದೀಗ ಅಂತಿಮವಾಗಿ ರಾಜಕೀಯ ನಿವೃತ್ತಿ ಘೋಷಣೆ […]

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಚುನಾವಣಾ ನಿವೃತ್ತಿ ಘೋಷಣೆ | ಕಾಂಗ್ರೆಸ್‍ ವಲಯದಲ್ಲಿ ಆತಂಕ Read More »

ಗನ್ ಸಹಿತ ವ್ಯಕ್ತಿಯಿಂದ ಸಿಎಂ ಸಿದ್ಧರಾಮಯ್ಯಗೆ ಹಾರ | ಪರಿಶೀಲನೆ ಮಾಡದ ಪೊಲೀಸರು | ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸ

ಬೆಂಗಳೂರು: ಲೋಕಸಭಾ ಚುನಾವಣೆ ಪ್ರಚಾರ ಕಾರ್ಯ ಎಲ್ಲೆಡೆ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ವೇಳೆ ಗನ್ ಸಹಿತ ವ್ಯಕ್ತಿಯೊಬ್ಬ ಬಂದು ಸಿಎಂಗೆ ಹಾರ ಹಾಕಿದ ಘಟನೆ ನಡೆದಿದೆ. ರಿಯಾಜ್ ಎಂಬಾತ ಸೊಂಟದಲ್ಲಿ ಗನ್ ಇಟ್ಟುಕೊಂಡು ಸಿಎಂಗೆ ಹಾರ ಹಾಕಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಹಾಗೂ ಬೆಂಗಳೂರು ಕೇಂದ್ರ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಪರ ಸಿಎಂ ಮತಯಾಚನೆ ಮಾಡುತ್ತಿದ್ದರು. ಈ ವೇಳೆ

ಗನ್ ಸಹಿತ ವ್ಯಕ್ತಿಯಿಂದ ಸಿಎಂ ಸಿದ್ಧರಾಮಯ್ಯಗೆ ಹಾರ | ಪರಿಶೀಲನೆ ಮಾಡದ ಪೊಲೀಸರು | ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸ Read More »

ಏ.26 ರಂದು ಎಲ್ಲರೂ ಮತಚಲಾಯಿಸಿ | ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಸುಕನ್ಯಾ

ಪುತ್ತೂರು: ಭಾರತ ಚುನಾವಣಾ ಆಯೋಗ ಈ ಬಾರಿಯ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭ ಎಲ್ಲಾ ಸಂಸ್ಥೆಗಳ ಸಿಬ್ಬಂದಿಗಳಿಗೆ ವೇತನ ಸಹಿತ ರಜೆಯನ್ನು ನೀಡಿದೆ. ಆ ದಿನದಂದು ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ನಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಸುಕನ್ಯ ಹೇಳಿದರು. ಅವರು ಸೋಮವಾರ ದ.ಕ.ಜಿಲ್ಲಾ ಸ್ವೀಪ್‌ ಸಮಿತಿ, ಪುತ್ತೂರು ತಾಲೂಕು ಸ್ವೀಪ್‌ ಸಮಿತಿ, ಕಾರ್ಮಿಕ ಇಲಾಖೆ ಪುತ್ತೂರು ಹಾಗೂ ಕ್ಯಾಂಪ್ಕೋ ಚಾಕಲೇಟ್‌ ಫ್ಯಾಕ್ಟರಿ ಇದರ ಸಹಯೋಗದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಏ.26 ರಂದು ಎಲ್ಲರೂ ಮತಚಲಾಯಿಸಿ | ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಸುಕನ್ಯಾ Read More »

ಕೆಯ್ಯೂರಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಪುತ್ತೂರು: ರಾಜ್ಯದಲ್ಲಿ‌ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪ್ರತೀ ಕುಟುಂಬಕ್ಕೆ ತಲಾ 30 ಸಾವಿರ ಹಣ ವಿವಿಧ ರೂಪದಲ್ಲಿ ದೊರಕಿದೆ ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಹೇಳಿದರು. ಅವರು ಕೆಯ್ಯೂರು ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಎಂದಿಗೂ ಜನತೆಗೆ ದ್ರೋಹ ಮಾಡಿಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್ ಎಂದಿಗೂ ಬಡವರ ಹಾಗೂ ನೊಂದವರ ಪರವಾಗಿಯೇ ಕೆಲಸ ಮಾಡಲಿದೆ. ಗ್ಯಾರಂಟಿ ಯೋಜನೆಯನ್ನು ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಜಾರಿ

ಕೆಯ್ಯೂರಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ Read More »

ಲೋಕಸಭೆ ರ್ಯಾಲಿ ವೇಳೆ‌‌ ಅಪಘಾತ : ಬಿಜೆಪಿ ಕಾರ್ಯಕರ್ತ ಪ್ರಕಾಶ್ ಮೃತ್ಯು

ಬೆಂಗಳೂರು: ಉತ್ತರ  ಲೋಕಸಭಾ ಕ್ಷೇತ್ರದ  ಅಭ್ಯರ್ಥಿ ಶೋಭಾ ಕರಂದ್ಲಾಜೆ  ಅವರ ರ್ಯಾಲಿ ನಡೆಯುತ್ತಿದ್ದ ವೇಳೆ ನಡೆದ ಅಪಘಾತದಲ್ಲಿ ಓರ್ವರು ಮೃತಪಟ್ಟ ಘಟನೆ ನಡೆದಿದೆ. ಬಿಜೆಪಿ ಕಾರ್ಯಕರ್ತ ಪ್ರಕಾಶ್ ಅಪಘಾತದಿಂದ ಮೃತಪಟ್ಟವರು. ಪ್ರಕಾಶ್ ಇಂದು ಬೆಳಗ್ಗೆ ಹೋಂಡಾ ಆ್ಯಕ್ಟಿವಾ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಬಂದಿದ್ದ ಬಿಜೆಪಿ ಮುಖಂಡರೊಬ್ಬರು ಕಾರು ರಸ್ತೆಯಲ್ಲಿ ಪಾರ್ಕ್‌ ಮಾಡಿ ಹಿಂದೆ ಮುಂದೆ ನೋಡದೇ ಏಕಾಏಕಿ ಬಾಗಿಲು ತೆರೆದಿದ್ದು, ಅದು ಬೈಕ್‌ಗೆ ತಾಗಿದೆ. ಪರಿಣಾಮ ಪ್ರಕಾಶ್ ಕೆಳಗೆ ಬಿದ್ದಿದ್ದಾರೆ.

ಲೋಕಸಭೆ ರ್ಯಾಲಿ ವೇಳೆ‌‌ ಅಪಘಾತ : ಬಿಜೆಪಿ ಕಾರ್ಯಕರ್ತ ಪ್ರಕಾಶ್ ಮೃತ್ಯು Read More »

5,8,9 ಹಾಗೂ 11 ನೇ ತರಗತಿಗಳ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ನಿಂದ ತಡೆ

ನವದೆಹಲಿ: ಕರ್ನಾಟಕ ರಾಜ್ಯ ಶಿಕ್ಷಣ ಮಂಡಳಿ 5,8, 9 ಹಾಗೂ 11 ನೇ ತರಗತಿಗಳಿಗೆ ನಡೆಸಿದ ಬೋರ್ಡ್ ಪರೀಕ್ಷೆಗಳ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.. ಕರ್ನಾಟಕ ರಾಜ್ಯವು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿದ್ದು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು, ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿಗೆ ತೊಂದರೆ ಉಂಟುಮಾಡುವಂತಿದೆ.  ಹೈಕೋರ್ಟ್ ನ ಆದೇಶವು ಆರ್ ಟಿಇ ಕಾಯ್ದೆಗೆ ಅನುಗುಣವಾಗಿದೆ ಎಂದು ಮೇಲ್ನೋಟಕ್ಕೆ ತೋರುತ್ತಿಲ್ಲ. ನೋಟಿಸ್ ನ್ನು ಎರಡು ವಾರಗಳಲ್ಲಿ ಹಿಂದಿರುಗಿಸಲಾಗುವುದು. ಆದೇಶದ ಕಾರ್ಯಾಚರಣೆಯನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲಾಗುವುದು

5,8,9 ಹಾಗೂ 11 ನೇ ತರಗತಿಗಳ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ನಿಂದ ತಡೆ Read More »

ಏ.19 : ಶ್ರೀ ಮಹಾಲಿಂಗೇಶ್ವರ ದೇವರ ಅವಭ್ರತ ಸ್ನಾನದಂದು ವೀರಮಂಗಳ ಕುಮಾರಧಾರ ನದಿ ಬಳಿಯ ಶ್ರೀದೇವರ ಕಟ್ಟೆ ಸಮರ್ಪಣೆ

ಪುತ್ತೂರು : ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭ್ರತ ಸ್ನಾನದ ಸ್ಥಳವಾದ ವೀರಮಂಗಲದ ಕುಮಾರಧಾರ ನದಿ ಬಳಿಯ ಕಟ್ಟೆಯನ್ನು ಏ.19 ರಂದು ಅವಭ್ರತ ಸ್ನಾನದ ಸಂದರ್ಭ ಶ್ರೀ ದೇವರಿಗೆ ಸಮರ್ಪಣೆ ಮಾಡುವ ಕಾರ್ಯಕ್ರಮ ನಡೆಯಲಿದೆ ಎಂದು ದಿನೇಶ್ ಕುಮಾರ್ ಜೈನ್ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಎಂಟುನೂರು ವರ್ಷಗಳಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರು ಜಾತ್ರಾ ಸಂದರ್ಭದಲ್ಲಿ ಅವಭ್ರತ ಸ್ನಾನಕ್ಕಾಗಿ ವೀರಮಂಗಲದ ಕುಮಾರಧಾರ ನದಿಯ ಬಳಿ ಇದ್ದ ದೇವರ ಕಟ್ಟೆಗೆ ತೆರಳುವುದು ನಡೆದುಕೊಂಡು

ಏ.19 : ಶ್ರೀ ಮಹಾಲಿಂಗೇಶ್ವರ ದೇವರ ಅವಭ್ರತ ಸ್ನಾನದಂದು ವೀರಮಂಗಳ ಕುಮಾರಧಾರ ನದಿ ಬಳಿಯ ಶ್ರೀದೇವರ ಕಟ್ಟೆ ಸಮರ್ಪಣೆ Read More »

ಚಲಿಸುತ್ತಿದ್ದ ಕಾರಿಗೆ ಹತ್ತಿಕೊಂಡ ಬೆಂಕಿ | ಅಪಾಯದಿಂದ ಪಾರು

ಬಂಟ್ವಾಳ:  ಕಾರೊಂದಕ್ಕೆ ಏಕಾಏಕಿ ಬೆಂಕಿ ಹತ್ತಿಕೊಂಡ ಘಟನೆ ಇಂದು ಬೆಳಿಗ್ಗೆ ಮೂಡುಬಿದಿಯ ರಾಯಿ ಕಂಗಿತ್ತಿಲು ಎಂಬಲ್ಲಿ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರಿನಲ್ಲಿದ್ದವರು ಇಳಿದಿದ್ದಾರೆ. ಬಳಿಕ ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಏಳಿಂಜೆಗುತ್ತು ಕೊಲ್ಲೆಟ್ಟು ಶರತ್ ಶೆಟ್ಟಿ ಅವರಿಗೆ ಸೇರಿದ ಡಸ್ಟರ್ ಕಾರಿನಲ್ಲಿ ಶಾರ್ಟ್‍ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕಾರಿನಲ್ಲಿ ಮಗು ಸಹಿತ ನಾಲ್ಕು ಮಂದಿ ಇದ್ದು, ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು

ಚಲಿಸುತ್ತಿದ್ದ ಕಾರಿಗೆ ಹತ್ತಿಕೊಂಡ ಬೆಂಕಿ | ಅಪಾಯದಿಂದ ಪಾರು Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರೊ.ರಾಕೇಶ್ ಎಂ.ರಿಗೆ ಡಾಕ್ಟರೇಟ್ ಪದವಿ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಸ್ನಾತಕೋತ್ತರ ಎಂಬಿಎ ವಿಭಾಗದ ಪ್ರೊ.ರಾಕೇಶ್.ಎಂ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಕ್ಯಾಪಿಟಲ್ ಸ್ಟ್ರಕ್ಚರ್ ಡಿಸಿಷನ್ಸ್ ಎ ಸ್ಟಡಿ ಆಫ್ ಇಂಡಿಯನ್ ಕಂಪೆನೀಸ್ ಎನ್ನುವ ವಿಷಯದ ಬಗ್ಗೆ ಬಳ್ಳಾರಿಯ ಬಳ್ಳಾರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್‌ನ  ಡಾ.ಜಾನೆಟ್ ಜ್ಯೋತಿ ಡಿ’ಸೋಜ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಮಾಡಿದ್ದಾರೆ. ಅವರು ಪ್ರಸ್ತುತ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದಲ್ಲಿ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರೊ.ರಾಕೇಶ್ ಎಂ.ರಿಗೆ ಡಾಕ್ಟರೇಟ್ ಪದವಿ Read More »

ಏ.14 : ಚಿಗುರೆಲೆ ಸಾಹಿತ್ಯ ಬಳಗದ ದ್ವಿತೀಯ ವರ್ಷದ ಸಂಭ್ರಮ, ಕೃತಿ ಲೋಕಾರ್ಪಣೆ ಹಾಗೂ ದಿವ್ಯಾಂಗ ಚೇತನ ಕವಿಗೋಷ್ಠಿ

ಪುತ್ತೂರು: ಚಿಗುರೆಲೆ ಸಾಹಿತ್ಯ ಬಳಗದ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಸಹಯೋಗದಲ್ಲಿ ಚಿಗುರೆಲೆ ಸಾಹಿತ್ಯ ಬಳಗದ ದ್ವಿತೀಯ ವರ್ಷದ ಸಂಭ್ರಮ, ಕೃತಿ ಲೋಕಾರ್ಪಣೆ ಹಾಗೂ ದಿವ್ಯಾಂಗ ಚೇತನ ಕವಿಗೋಷ್ಠಿ ಏ.14 ರಂದು ಬೆಳಿಗ್ಗೆ 10 ಗಂಟೆಗೆ ಅನುರಾಗ ವಠಾರದಲ್ಲಿ ನಡೆಯಲಿದೆ. ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ ಬಿ.ಪುರಂದರ ಭಟ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಪುತ್ತೂರು ಉಮೇಶ್‍ ನಾಯಕ್ ಅಧ್ಯಕ್ಷತೆ ವಹಿಸುವರು. ಹಿರಿಯ ಸಾಹಿತಿ ನಾರಾಯಣ ರೈ ಕುಕ್ಕುವಳ್ಳಿ ಆಶಯ

ಏ.14 : ಚಿಗುರೆಲೆ ಸಾಹಿತ್ಯ ಬಳಗದ ದ್ವಿತೀಯ ವರ್ಷದ ಸಂಭ್ರಮ, ಕೃತಿ ಲೋಕಾರ್ಪಣೆ ಹಾಗೂ ದಿವ್ಯಾಂಗ ಚೇತನ ಕವಿಗೋಷ್ಠಿ Read More »

error: Content is protected !!
Scroll to Top