ಮಂಜುನಾಥನಗರದಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ

ಸವಣೂರು : ಪಾಲ್ತಾಡಿ ಬಿಜೆಪಿ ವತಿಯಿಂದ ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಪಾಲ್ತಾಡಿ ಬೂತ್ ಸಂಖ್ಯೆ 70ರ ಅಧ್ಯಕ್ಷ ಅನ್ನಪೂರ್ಣ ಪ್ರಸಾದ್ ರೈ ಅವರ ಮನೆಯಲ್ಲಿ ನಡೆಯಿತು. ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಇಂದಿರಾ ಬಿ.ಕೆ. ಅವರು ಮುಂಬರುವ ಲೋಕಸಭಾ ಚುನಾವಣೆ ಹಾಗೂ ನಾರಿ ಶಕ್ತಿ ಸಂಗಮದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಗಣೇಶ್ ಶೆಟ್ಟಿ ಕುಂಜಾಡಿ, ಬಾಳಪ್ಪ ಪೂಜಾರಿ ಬಂಬಿಲದೋಳ, ವಿಠಲ ಶೆಟ್ಟಿ ಬಂಬಿಲ, ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್.ಬಂಬಿಲ, […]

ಮಂಜುನಾಥನಗರದಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ Read More »

ಗುತ್ತಿಗಾರಿನ ಯುವಕ ರೈಲಿನಡಿಗೆ ಬಿದ್ದು ಮೃತ್ಯು

ಮಂಗಳೂರು: ಸುಳ್ಯ ತಾಲೂಕಿನ ಗುತ್ತಿಗಾರಿನ ಯುವಕನೋರ್ವ ಮಂಗಳೂರಿನಲ್ಲಿ ರೈಲಿನಡಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ಗುತ್ತಿಗಾರು ಗ್ರಾಮದ ಚನಿಲ ನಿವಾಸಿ ಸುಪ್ರೀತ್ ನಾಯ್ಕ ಮೃತ ಪಟ್ಟ ಯುವಕ. ಘಟನೆಗೆ ಕಾರಣಗಳು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಗುತ್ತಿಗಾರಿನ ಯುವಕ ರೈಲಿನಡಿಗೆ ಬಿದ್ದು ಮೃತ್ಯು Read More »

ಏ.14 : ಪ್ರಧಾನಿ ಮೋದಿ ಕರ್ನಾಟಕಕ್ಕೆ | ರೋಡ್ ಶೋ ದಲ್ಲಿ ಪಾಲ್ಗೊಳ್ಳಲಿರುವ ಮೋದಿ

ಬೆಂಗಳೂರು : ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ. ಏ.14ರಂದು ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಒಂದು ದಿನದಲ್ಲಿ ಬೆಂಗಳೂರಿನ ಉತ್ತರ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಬೆಂಗಳೂರಿಗೆ ಆಗಮಿಸಲಿರುವ ನರೇಂದ್ರ ಮೋದಿ ಮಧ್ಯಾಹ್ನ 3 ಗಂಟೆಗೆ ಡಾ ಕೆ ಸುಧಾಕರ್ ಪರ ಕ್ಷೇತ್ರ ಚಿಕ್ಕಬಳ್ಳಾಪುರ ಆಯೋಜಿಸಲಾದ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶ ಮುಗಿದ ನಂತರ ಮೋದಿ

ಏ.14 : ಪ್ರಧಾನಿ ಮೋದಿ ಕರ್ನಾಟಕಕ್ಕೆ | ರೋಡ್ ಶೋ ದಲ್ಲಿ ಪಾಲ್ಗೊಳ್ಳಲಿರುವ ಮೋದಿ Read More »

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ !

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಮಗುಚಿ ಬಿದ್ದ ಘಟನೆ ಜೋಡುಪಾಲ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಗೌರಿಶಂಕರ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದಿದೆ. ಪರಿಣಾಮ ಮೈಸೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ನಾಲ್ಕು ಜನ ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿ ಲಭಿಸಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಷ್ಟೆ.

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ! Read More »

ಮತದಾನ ಬಹಿಷ್ಕರಿಸಿ ಬ್ಯಾನರ್ ಅಳವಡಿಕೆ

ಪುತ್ತೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರಚಾರ ಕಾರ್ಯ ಭರ್ಜರಿಯಿಂದ ನಡೆಯುತ್ತಿದ್ದು,ಈ ನಡುವೆ ತಾಲೂಕಿನ ಚಿಕ್ಕಮುಡ್ನೂರು ಗ್ರಾಮದಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್ ಅಳವಡಿಸಿದ್ದಾರೆ. ಚಿಕ್ಕಮುಡ್ನೂರು ಗ್ರಾಮದ ಏಣಿಮುಗೇರು ಬಡಕಾಯದೇ ಎಂಬಲ್ಲಿ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದೇವೆ ಎಂದು ಗ್ರಾಮಸ್ಥರು ಬ್ಯಾನರ್ ಅಳವಡಿಸಿ ಚುನಾವಣಾ ಬಹಿಷ್ಕಾರ ಮಾಡಿದ್ದಾರೆ. 135 ಮತಗಟ್ಟೆಯಲ್ಲಿಈ ಬ್ಯಾನರ್ ಅಳವಡಿಸಲಾಗಿದೆ.

ಮತದಾನ ಬಹಿಷ್ಕರಿಸಿ ಬ್ಯಾನರ್ ಅಳವಡಿಕೆ Read More »

ಏ.9 : ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ | ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಮಹಿಳಾ ಸಮಾವೇಶ : ಸುಲೋಚನಾ ಜಿ.ಕೆ.ಭಟ್

ಪುತ್ತೂರು: ಹಲವಾರು ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಪುತ್ತೂರಿನ ಜೈನ ಭವನದಲ್ಲಿ ಏ.9 ರಂದು ಬಿಜೆಪಿ ಮಹಿಳಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಸುಲೋಚನಾ ಜಿ.ಕೆ.ಭಟ್‍ ತಿಳಿಸಿದ್ದಾರೆ. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಪ್ರಧಾನಿಯವರ ಯೋಜನೆ ಕುರಿತು ತಿಳಿಸಲು ಮನೆ ಮನೆ ಭೇಟಿ, ಪ್ರತೀ ಬೂತ್‍ಗಳಲ್ಲಿ ಮಹಿಳಾ ಸಭೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತ್ರಿವಳಿ ತಲಾಖ್,

ಏ.9 : ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ | ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಮಹಿಳಾ ಸಮಾವೇಶ : ಸುಲೋಚನಾ ಜಿ.ಕೆ.ಭಟ್ Read More »

ಅನಾರೋಗ್ಯದಿಂದ ವಿದ್ಯಾರ್ಥಿ ಆಕಾಶ್ ನಿಧನ

ಪುತ್ತೂರು: ಶಾಲಾ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಮೃತಪಟ್ಟ ಘಟನೆ ನಡೆದಿದೆ. ಕಡಬ ಗ್ರಾಮದ ಬಟ್ರುಪ್ಪಾಡಿ ನಿವಾಸಿ, ಕೊಡಿಪ್ಪಾಡಿ ಶಾಲಾ 7ನೇ ತರಗತಿ ವಿದ್ಯಾರ್ಥಿ ಆಕಾಶ್ ಮೃತಪಟ್ಟ ಬಾಲಕ ಆಕಾಶ್‍ ತಂದೆ ರಿಕ್ಷಾ ಚಾಲಕ ಅನಿಲ್ ಎಂಬವರು ಕೆಲಸ ಸಮಯಗಳ ಹಿಂದೆ ನಿಧನರಾಗಿದ್ದರು. ಬಳಿಕ ಆಕಾಶ್‍ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅನಾರೋಗ್ಯದಿಂದ ವಿದ್ಯಾರ್ಥಿ ಆಕಾಶ್ ನಿಧನ Read More »

ಅಕ್ರಮ ಮರಳುಗಾರಿಕೆ ಮೇಲೆ ಕಣ್ಗಾವಲು | ದ.ಕ.ಜಿಲ್ಲೆಯ 30 ಕಡೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ

ಬಂಟ್ವಾಳ: ಇತ್ತೀಚಿನ ದಿನಗಳಲ್ಲಿ ಅಕ್ರಮ ಮರಳುಗಾರಿಕೆ ಕುರಿತು ದೂರುಗಳು ಬರುತ್ತಿದ್ದು, ಅತಿ ಹೆಚ್ಚಿನ ದೂರು ಬರುತ್ತಿದ್ದ ಪ್ರದೇಶಗಳಲ್ಲಿ ಸಿಸಿ ಕ್ಯಾಮರ ಮೂಲಕ ಕಣ್ಣಿಡಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮುಂದಾಗಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ 30 ಕಡೆಗಳಲ್ಲಿ ಇಲಾಖೆಯು ಸೋಲಾ‌ರ್ ವಿದ್ಯುತ್ ಆಧಾರಿತ ಸಿಸಿ ಕ್ಯಾಮರಗಳನ್ನು ಅಳವಡಿಸಿದೆ. ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ 4 ಕಡೆ ಹಾಗೂ ಉಳಿದಂತೆ ಮಂಗಳೂರು ಕಮಿಷನರೆಟ್ ವ್ಯಾಪ್ತಿಯ 26 ಕಡೆಗಳಲ್ಲಿ ಅಕ್ರಮ ಮರಳುಗಾರಿಕೆ/ಸಾಗಾಟದ

ಅಕ್ರಮ ಮರಳುಗಾರಿಕೆ ಮೇಲೆ ಕಣ್ಗಾವಲು | ದ.ಕ.ಜಿಲ್ಲೆಯ 30 ಕಡೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಹಾಗೂ ಮೇದಿನಿ ಟೆಕ್ನಾಲಜೀಸ್ ನಡುವೆ ಒಡಂಬಡಿಕೆಗೆ ಸಹಿ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಹಾಗೂ ಬೆಂಗಳೂರು ಮೇದಿನೀ ಟೆಕ್ನಾಲಜೀಸ್ ಸಹಯೋಗದಲ್ಲಿ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನೈಪುಣ್ಯತೆಯ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸಿವಿಲ್ ಮತ್ತು ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ, ಸಂಶೋಧನಾ ನಿರತರಿಗೆ ಹಾಗೂ ವೃತ್ತಿಪರರಿಗೆ ಅನುಕೂಲವಾಗುವ ರೀತಿಯಲ್ಲಿ ತಂತ್ರಜ್ಞಾನಗಳ ಬದಲಾವಣೆ, ನೂತನ ಸಾಫ್ಟ್‌ವೇರ್‌ಗಳ ಬಳಕೆಯ ಬಗ್ಗೆ ಮಾಹಿತಿ, ವೃತ್ತಿಪರರಿಗೆ ಹೊಸ ಸಾಫ್ಟ್‌ವೇರ್‌ಗಳ ಮೂಲಕ ಮಾಡೆಲ್‌ಗಳ ರಚನೆ, ವಿದ್ಯಾರ್ಥಿಗಳಿಗೆ ಪ್ರಾಜೆಕ್ಟ್‌ಗಳನ್ನು ಮಾಡುವುದಕ್ಕೆ ಸೂಕ್ತ ಮಾರ್ಗದರ್ಶನ ಇವೇ ಮುಂತಾದ ವಿಷಯಗಳ ಬಗ್ಗೆ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಹಾಗೂ ಮೇದಿನಿ ಟೆಕ್ನಾಲಜೀಸ್ ನಡುವೆ ಒಡಂಬಡಿಕೆಗೆ ಸಹಿ Read More »

ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿ ಜಿ.ಜಗನ್ನಾಥ ರೈ, ಉಪಾಧ್ಯಕ್ಷರಾಗಿ ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿಯಾಗಿ ಚಿನ್ಮಯ್ ರೈ

ಪುತ್ತೂರು: ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿ ಜಿ.ಜಗನ್ನಾಥ ರೈ ಆಯ್ಕೆಯಾಗಿದ್ದಾರೆ. ಶನಿವಾರ ವಕೀಲರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿಯಾಗಿ ಚಿನ್ಮಯ್ ರೈ (ಅವಿರೋಧ ), ಜೊತೆ ಕಾರ್ಯದರ್ಶಿಯಾಗಿ ಮಮತಾ ಸುವರ್ಣ ಹಾಗೂ ಕೋಶಾಧಿಕಾರಿಯಾಗಿ ಮಹೇಶ್ ಕೆ. ಸವಣೂರು ಚುನಾಯಿತರಾಗಿದ್ದಾರೆ. ಚುನಾವಣೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆದು ಬಳಿಕ ಮತ ಎಣಿಕೆ ನಡೆದಿತ್ತು. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಿ.ಜಗನ್ನಾಥ ರೈ ವಿಜೇತರಾಗಿದ್ದು, ಇನ್ನಿಬ್ಬರು ಸ್ಪರ್ಧಿಗಳು ಪರಾಭವಗೊಂಡಿದ್ದಾರೆ.

ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿ ಜಿ.ಜಗನ್ನಾಥ ರೈ, ಉಪಾಧ್ಯಕ್ಷರಾಗಿ ಮೋನಪ್ಪ ಎಂ.ಅಳಿಕೆ, ಕಾರ್ಯದರ್ಶಿಯಾಗಿ ಚಿನ್ಮಯ್ ರೈ Read More »

error: Content is protected !!
Scroll to Top