ಲೋಕಸಭಾ ಅಭ್ಯರ್ಥಿಗಳಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಕ್ಯಾಪ್ಟನ್ ಬ್ರಿಜೇಶ್ ಚೌಟರನ್ನು ಆಶೀರ್ವದಿಸಿದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ
ಬೆಂಗಳೂರು: ವಿಜಯನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಕ್ಕೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಭೇಟಿ ನೀಡಿದರು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಆಶೀರ್ವಾದ ನೀಡಿದರು. ಈ ಸಂದರ್ಭದಲ್ಲಿ ವಿಶ್ವೇಶ್ವರ ಹೆಗಡೆ ಆಪ್ತರು ಉಪಸ್ಥಿತರಿದ್ದರು.










