ನಗರಸಭೆ ಆರೋಗ್ಯ ನಿರೀಕ್ಷಕಿ ವರಲಕ್ಷ್ಮೀ  ಪತಿ ರಘು ಡಿ. ಹೃದಯಾಘಾತದಿಂದ ನಿಧನ

ಪುತ್ತೂರು: ನಗರಸಭೆ ಆರೋಗ್ಯ ನಿರೀಕ್ಷಕಿ ವರಲಕ್ಷ್ಮೀ ಅವರ ಪತಿ ರಘು ಡಿ. (45) ಹೃದಯಾಘಾತದಿಂದ ನಿಧನರಾಗಿದ್ದಾರೆ. ವರಲಕ್ಷ್ಮಿ ಅವರು ಮಂಡ್ಯ ಮೂಲದವರಾಗಿದ್ದು, ಅವರ ಪತಿ ರಘು ಅವರು ಮಂಡ್ಯದಲ್ಲಿ ಫೋಟೋಗ್ರಫಿ ಮಾಡುತ್ತಿದ್ದರು. ಶುಕ್ರವಾರ ಸಂಜೆ ಪುತ್ತೂರಿನ ಬನ್ನೂರಿನಲ್ಲಿರುವ ಮನೆಯಲ್ಲಿ ಎದೆನೋವು ಕಾಣಿಸಿದೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆತಂದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆನ್ನಲಾಗಿದೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ನಗರಸಭೆ ಆರೋಗ್ಯ ನಿರೀಕ್ಷಕಿ ವರಲಕ್ಷ್ಮೀ  ಪತಿ ರಘು ಡಿ. ಹೃದಯಾಘಾತದಿಂದ ನಿಧನ Read More »

ಎರಡನೇ ಹೆರಿಗೆ ವೇಳೆ ಮಹಿಳೆ ಮೃತ್ಯು

ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ರಕ್ತ ಸ್ರಾವದಿಂದ  ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ (26) ಮೃತಪಟ್ಟವರು. ಗಾಯತ್ರಿ ಎರಡನೇ ಹೆರಿಗೆಗಾಗಿ ಏ.3 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಏ.4 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅದರೆ ಹೆರಿಗೆ ನಂತರ ವಿಪರೀತ ರಕ್ತ ಸ್ರಾವ ಉಂಟಾಗಿದ್ದು ರಾತ್ರಿ ಸಾವನ್ನಪ್ಪಿದ್ದಾರೆ . ಮೃತ ಮಹಿಳೆಗೆ  3 ವರ್ಷದ ಹೆಣ್ಣು ಮಗುವೊಂದಿದ್ದು ಇದೀಗ ಇಬ್ಬರು ಪುಟ್ಟ ಮಕ್ಕಳು ತಾಯಿಯನ್ನು ಕಳೆದುಕೊಂಡಂತಾಗಿದೆ.

ಎರಡನೇ ಹೆರಿಗೆ ವೇಳೆ ಮಹಿಳೆ ಮೃತ್ಯು Read More »

ಇಂದು ಸ್ವತಂತ್ರ ತುಳುನಾಡ ಆಳ್ವಿಕೆ ಆರಂಭಿಸಿದ ದಿನ | ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಪುಷ್ಪಾರ್ಚನೆಗೈದ ಪದ್ಮರಾಜ್ ಆರ್.

ಮಂಗಳೂರು: ಇಲ್ಲಿನ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ಪ್ರತಿಮೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಪುಷ್ಪಾರ್ಚನೆ ಮಾಡಿದರು. ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮೊದಲೇ ತುಳುನಾಡಿನಲ್ಲಿ ಸ್ವಾತಂತ್ರ್ಯ ಹೋರಾಟ ನಡೆದಿತ್ತು. ಇದನ್ನು ಅಮರ ಸುಳ್ಯದ ದಂಗೆ ಎಂದು ಕರೆದರೆ, ಇನ್ನೂ ಕೆಲವರು ತುಳುನಾಡ ಸ್ವಾತಂತ್ರ್ಯ ಸಂಗ್ರಾಮ ಎಂದೂ ಕರೆದದ್ದಿದೆ. ಈ ಹೋರಾಟದಲ್ಲಿ ಕೆದಂಬಾಡಿ ರಾಮಯ್ಯ ಗೌಡ ಅವರು ಪ್ರಮುಖ ಪಾತ್ರ ವಹಿಸಿದ್ದರು. ಈ ಹೋರಾಟದಲ್ಲಿ ಬ್ರಿಟಿಷರನ್ನು  ಪರಾಭವಗೊಳಿಸಿದ ತುಳುನಾಡ ಹೋರಾಟಗಾರರು ಮುಂದಿನ 13

ಇಂದು ಸ್ವತಂತ್ರ ತುಳುನಾಡ ಆಳ್ವಿಕೆ ಆರಂಭಿಸಿದ ದಿನ | ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಪುಷ್ಪಾರ್ಚನೆಗೈದ ಪದ್ಮರಾಜ್ ಆರ್. Read More »

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಭೆ

ಪುತ್ತೂರು: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸಭೆ ಶುಕ್ರವಾರ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ  ಪ್ರಾಮಾಣಿಕವಾಗಿ ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು. ಅಲ್ಲದೆ ಅಲ್ಪಸಂಖ್ಯಾತ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರರ ಮತವನ್ನು ಪಡೆದು ನಮ್ಮ ಅಭ್ಯರ್ಥಿ ಬ್ರಿಜೇಶ್ ಚೌಟರನ್ನು ಲಕ್ಷಾಂತರ ಮತಗಳ ಅಂತರದಲ್ಲಿ ಗೆಲ್ಲಿಸಿ ಎಂದು ಕರೆ ನೀಡಿದರು ಸಭೆಯಲ್ಲಿ ಪುತ್ತೂರು ಮಾಜಿ

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಭೆ Read More »

ಲೋಕಸಭಾ ಸಾರ್ವತ್ರಿಕ ಚುನಾವಣೆ | ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಜಾಗೃತಿ ಕಾರ್ಯಕ್ರಮ

ಪುತ್ತೂರು: ಹಿರಿಯ ನಾಗರಿಕರಿಗೆ ಹಾಗೂ ವಿಶೇಷಚೇತನರಿಗೆ ಮನೆಯಿಂದಲೇ ಮತಚಲಾಯಿಸುವ ವ್ಯವಸ್ಥೆಯನ್ನು ಈ ಬಾರಿಯೂ ಚುನಾವಣಾ ಆಯೋಗ ಹಮ್ಮಿಕೊಂಡಿದೆ. ಈ ನಿಟ್ಟಿನಲ್ಲಿ ಶೇ.40 ಕ್ಕಿಂತ ಹೆಚ್ಚಿನ ಅಂಗವೈಕಲ್ಯವಿರುವ ವಿಶೇಷ ಚೇತನರ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು ಮನೆಯಿಂದಲೇ ಮತಚಲಾಯಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಪುತ್ತೂರು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಹನಮ ರೆಡ್ಡಿ ಹೇಳಿದರು. ಅವರು ಶುಕ್ರವಾರ ಪುತ್ತೂರು ತಾ.ಪಂ. ಸಭಾಂಗಣದಲ್ಲಿ ದ.ಕ.ಜಿಲ್ಲಾ ಸ್ವೀಪ್‌ ಸಮಿತಿ, ತಾಲೂಕು ಸ್ವೀಪ್  ಸಮಿತಿ , ಪುತ್ತೂರು ತಾಲೂಕು ಪಂಚಾಯಿತಿ ಹಾಗೂ ವಿಕಲಚೇತನರ ಸೇವಾ ಕೇಂದ್ರದ

ಲೋಕಸಭಾ ಸಾರ್ವತ್ರಿಕ ಚುನಾವಣೆ | ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಜಾಗೃತಿ ಕಾರ್ಯಕ್ರಮ Read More »

ಕೋವಿ ಠೇವಣಾತಿಯಿಂದ ವಿನಾಯಿತಿ ಸಿಗದೇ ಹೋದರೆ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ | ಸುರೇಶ್ ಭಟ್‍ ಕೊಜಂಬೆ

ಪುತ್ತೂರು: ಕೃಷಿಕರಿಗೆ ಠೇವಣಾತಿಯಿಂದ ವಿನಾಯಿತಿ ಸಿಗದೇ ಹೋದರೆ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗುವುದು. ಕೋವಿಯನ್ನು ಮನೆಗೆ ತಂದುಕೊಡಬೇಕೆಂದು ನೋಟೀಸ್ ನೀಡುವ ಜತೆಗೆ ವ್ಯವಸ್ಥೆ ಮಾಡದಿದ್ದರೆ ನ್ಯಾಯಾಂಗ ನಿಧನೆ ಪ್ರಕರಣ ದಾಖಲಿಸಲಾಗುವುದು. ಕೋವಿ ಠೇವಣಿಯ ಸಂದರ್ಭದಲ್ಲಿ ಆಗಿರುವ ನಷ್ಟವನ್ನು ಅಧಿಕಾರಿಗಳ ಕೈಯಿಂದ ವಸೂಲಿಗೂ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕರ್ನಾಟಕ ರೈತ ಸಂಘದ ಉಪಾಧ್ಯಕ್ಷ ಸುರೇಶ್ ಭಟ್ ಕೊಜಂಬೆ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಚುನಾವಣಾ ಸಂದರ್ಭದಲ್ಲಿ ಕೋವಿ ಠೇವಣಾತಿಯ ವಿಚಾರದಲ್ಲಿ ಭಾರತೀಯ ಚುನಾವಣಾ ಆಯೋಗ

ಕೋವಿ ಠೇವಣಾತಿಯಿಂದ ವಿನಾಯಿತಿ ಸಿಗದೇ ಹೋದರೆ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ | ಸುರೇಶ್ ಭಟ್‍ ಕೊಜಂಬೆ Read More »

ಕಲ್ಲಡ್ಕ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿದ ಕ್ಯಾ.ಬ್ರಿಜೇಶ್ ಚೌಟ

ಕಲ್ಲಡ್ಕ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಕಲ್ಲಡ್ಕ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿದರು. ಅಲ್ಲಿ ಶ್ರೀದೇವರ ದರ್ಶನ ಪಡೆದು, ಹಿರಿಯರಾದ ಕಲ್ಲಡ್ಕ ಪ್ರಭಾಕರ ಭಟ್ಟರನ್ನು ಭೇಟಿ ಮಾಡಿದರು. ಬಳಿಕ ಪಕ್ಷದ ಹಿರಿಯ ಮುಖಂಡರು, ಮಾಜಿ ಶಾಸಕ ರುಕ್ಮಯ ಪೂಜಾರಿ ಅವರ ನಿವಾಸಕ್ಕೆ ಭೇಟಿ ನೀಡಿ ಮಾರ್ಗದರ್ಶನ ಪಡೆದರು

ಕಲ್ಲಡ್ಕ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿದ ಕ್ಯಾ.ಬ್ರಿಜೇಶ್ ಚೌಟ Read More »

ಏ.10-17 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಹೊರೆಕಾಣಿಕೆ ಸಂಗ್ರಹಣಾ ಕಚೇರಿ ಉದ್ಘಾಟನೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೊತ್ಸವದ ಅಂಗವಾಗಿ ಹೊರೆಕಾಣಿಕೆ ಸಂಗ್ರಹಣಾ ಕಚೇರಿಯನ್ನು ದೇವಸ್ಥಾನದ ಎದುರಿನ ಗದ್ದೆಯಲ್ಲಿ ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್. ಭಟ್ ದೀಪ ಬೆಳಗಿಸುವ ಮೂಲಕ ಕಚೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ರವಿಪ್ರಸಾದ್ ಶೆಟ್ಟಿ ಬನ್ನೂರು, ಸುದೇಶ್ ಶೆಟ್ಟಿ ಶಾಂತಿನಗರ, ಪಂಜಿಗುಡ್ಡೆ ಈಶ್ವರ ಭಟ್, ದಿನೇಶ್ ಪಿ ವಿ, ಸುಭಾಸ್ ರೈ ಬೆಳ್ಳಿಪ್ಪಾಡಿ, ಉಮೇಶ್ ಆಚಾರ್ಯ ಕರ್ಮಲ, ಗಣೇಶ್ ಶೆಟ್ಟಿ

ಏ.10-17 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಹೊರೆಕಾಣಿಕೆ ಸಂಗ್ರಹಣಾ ಕಚೇರಿ ಉದ್ಘಾಟನೆ Read More »

ಸೌಜನ್ಯ ಪರ ಹೋರಾಟ ಸಮಿತಿಯಿಂದ ನೋಟ ಮತ ಚಲಾಯಿಸಲು ಅಭಿಯಾನ

ಮಂಗಳೂರು : ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ನಮಿತಿ ಮುಖಂಡ ಗಿರೀಶ್ ಮಟ್ಟನ್ನನವರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ನೋಟ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಪ್ರಕರಣ ನಡೆದು 11 ವರ್ಷ ಕಳೆದರೂ ಯಾವುದೇ ರಾಜಕೀಯ ಪಕ್ಷಗಳು ಸ್ಪಂದನೆ ನೀಡಿಲ್ಲ. ಆದ್ದರಿಂದ ಈ ಬಾರಿ

ಸೌಜನ್ಯ ಪರ ಹೋರಾಟ ಸಮಿತಿಯಿಂದ ನೋಟ ಮತ ಚಲಾಯಿಸಲು ಅಭಿಯಾನ Read More »

ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಸುಮಲತಾ ಅಂಬರೀಶ್

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಮಾಜಿ ಮುಖ್ಯಮಂತ್ರಿ ಬಿ.ಎಸ್‍.ಯಡಿಯೂರಪ್ಪ ಅವರು ಕೇಸರಿ ಶಾಲು ಹಾಕಿ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸಮಲತಾ ಅವರ ಜತೆಗೆ ಹಲವಾರು ಮುಖಂಡರು, ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ವಿರೋಧ ಪಕ್ಷದ ನಾಯಕ ಆರ್‍.ಅಶೋಕ್‍, ರಾಜ್ಯ ಬಿಜೆಪಿ ಘಟಕದ

ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಸುಮಲತಾ ಅಂಬರೀಶ್ Read More »

error: Content is protected !!
Scroll to Top