ಪ್ರೊ.ಶ್ರೀಕಾಂತ್ ರಾವ್ ಎಸ್‍.ಕೆ. ಅವರಿಗೆ ಡಾಕ್ಟರೇಟ್ ಪದವಿ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥ ಪ್ರೊ.ಶ್ರೀಕಾಂತ್ ರಾವ್.ಎಸ್.ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಕಂಪ್ಯೂಟರ್ ಎಯ್ಡೆಡ್ ಡಯಾಗ್ನೋಸಿಸ್ ಆಫ್ ಏಟ್ರಿಯಲ್ ಫೈಬ್ರಿಲ್ಲೇಶನ್ ಯೂಸಿಂಗ್ ಮೆಷಿನ್ ಲರ್ನಿಂಗ್ ಎಪ್ರೋಚ್ ಎಂಬ ವಿಷಯದ ಬಗ್ಗೆ ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯ ಅಸೋಸಿಯೇಟ್ ಪ್ರೊಫೆಸರ್ ಡಾ.ರೋಶನ್ ಜಾಯ್ ಮಾರ್ಟಿಸ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಮಾಡಿದ್ದಾರೆ. ಅವರು ಪ್ರಸ್ತುತ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ […]

ಪ್ರೊ.ಶ್ರೀಕಾಂತ್ ರಾವ್ ಎಸ್‍.ಕೆ. ಅವರಿಗೆ ಡಾಕ್ಟರೇಟ್ ಪದವಿ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ರಂಗಭೂಮಿ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾಕೇಂದ್ರ, ಲಲಿತ ಕಲಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸ್ಪಂದನ ಸಭಾಭವನದಲ್ಲಿ  ವಿಶ್ವ ರಂಗಭೂಮಿ ದಿನಾಚರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಮತ್ತು ರಂಗಗೀತೆ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲ  ಡಾ.ವಿಜಯಕುಮಾರ್ ಎಂ. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ರಂಗಭೂಮಿ  ವಿಕಾಸ,ರಂಗ ಭೂಮಿಯ  ಪ್ರಕಾರಗಳು ಮತ್ತು ರೂಪಗಳು, ರಂಗ ಭೂಮಿಯ ಯಶಸ್ಸಿನಲ್ಲಿ ನಾಟಕಕಾರರು, ನಿರ್ದೇಶಕರು, ನಟರು ಮತ್ತು ವಿನ್ಯಾಸಕರ ಪಾತ್ರ,  ರಂಗಭೂಮಿ ಸಂಸ್ಕೃತಿಯು ತೋರಿಸುವ ಜೀವನ ಮೌಲ್ಯಗಳು, ಸಾಮಾಜಿಕ ಸಮಸ್ಯೆಗಳು,

ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ರಂಗಭೂಮಿ ದಿನಾಚರಣೆ Read More »

ನವೋದಯ ಪ್ರವೇಶ ಪರೀಕ್ಷೆ: ವಿದ್ಯಾಮಾತಾ ಅಕಾಡೆಮಿಯ ತನ್ಮಯ್ ಪಿ.ಎಂ. ಜಿಲ್ಲೆಗೆ ದ್ವಿತೀಯ ಸ್ಥಾನ

ಪುತ್ತೂರು : ದಕ್ಷಿಣ ಕನ್ನಡದ ಪ್ರತಿಷ್ಟಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಜವಾಹರ್ ನವೋದಯ ವಸತಿ ಶಾಲಾ ಪ್ರವೇಶ ಪರೀಕ್ಷೆಗೆ ತರಬೇತಿ ಪಡೆದ ಸುಳ್ಯ ವಲಯ ಅರಣ್ಯಾಧಿಕಾರಿ ಎನ್ ಮಂಜುನಾಥ್ ರವರ ಪುತ್ರ ತನ್ಮಯ್ ಪಿ.ಎಂ. ಅವರು ಅತ್ಯುನ್ನತ ಶ್ರೇಣಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದು ಉತ್ತೀರ್ಣರಾಗಿದ್ದಾರೆ. ತನ್ಮಯ್ ಕಳೆದ ವಾರವಾಷ್ಟೇ ಪ್ರಕಟವಾಗಿದ್ದ ಸೈನಿಕ ಶಾಲಾ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲೇ ತರಬೇತಿ ಪಡೆದು ಉತ್ತೀರ್ಣರಾಗಿದ್ದು ಗಮನಾರ್ಹ ಅಂಶವಾಗಿದೆ. ಅತೀ ಕಡಿಮೆ

ನವೋದಯ ಪ್ರವೇಶ ಪರೀಕ್ಷೆ: ವಿದ್ಯಾಮಾತಾ ಅಕಾಡೆಮಿಯ ತನ್ಮಯ್ ಪಿ.ಎಂ. ಜಿಲ್ಲೆಗೆ ದ್ವಿತೀಯ ಸ್ಥಾನ Read More »

ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ದಕ್ಷಿಣ ಕನ್ನಡದ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಶೋಭಾ ಕರಂದ್ಲಾಜೆ ಇಂದು  ನಾಮಪತ್ರ ಸಲ್ಲಿಸಿದರು. ಅಪಾರ ಸಂಖ್ಯೆಯ ಕಾರ್ಯಕರ್ತರ ಜೊತೆ ಬೃಹತ್ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ತಮ್ಮ ಆಸ್ತಿ ವಿವರ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ Read More »

ಲೋಕಸಭೆ ಚುನಾವಣೆ : ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗುರುವಾರ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಯಲ್ಲಿ ಸಾಗಿಬಂದರು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ ಸಮಾವೇಶ ನಡೆಯಿತು.ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲ್, ಜೆಡಿಎಸ್ ಜಿಲ್ಲಾಧ್ಯಕ್ಷ

ಲೋಕಸಭೆ ಚುನಾವಣೆ : ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ Read More »

ಹಿಂದೂ ಕಾರ್ಯಕರ್ತರ ಮೇಲಿನ ಗೂಂಡಾ ಕಾಯ್ದೆ ಪ್ರಕರಣ, ಗಡಿಪಾರು ಆದೇಶ | ಪ್ರಕ್ರಿಯೆ ನಿಲ್ಲಿಸದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಸರಕಾರ ಜವಾಬ್ದಾರಿಯಾಗಲಿದೆ : ಮುರಳೀಕೃಷ್ಣ ಹಸಂತಡ್ಕ

ಪುತ್ತೂರು: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಸಂದರ್ಭ ರಾಜ್ಯ ಸರಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದು, ಕಳೆದ 2-3 ತಿಂಗಳಿನಿಂದ ಹಿಂದೂ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಪ್ರಕರಣ ಸಹಿತ ಗಡಿಪಾರು ಮಾಡುವ ಕಾರ್ಯಕ್ಕೆ ಕೈ ಹಾಕುತ್ತಿದ್ದು, ಈ ಪ್ರಕ್ರಿಯೆಯನ್ನು ನಿಲ್ಲಿಸದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಸರಕಾರ ಜವಾಬ್ದಾರಿಯಾಗಲಿದೆ ಎಂದು ಗೋರಕ್ಷಾ ಪ್ರಮುಖ್ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಹಿಂದೂ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ನಿಲ್ಲಿಸದಿದ್ದರೆ ಹಿಂದೂ ಸಮಾಜ ತಕ್ಕ ಉತ್ತರ

ಹಿಂದೂ ಕಾರ್ಯಕರ್ತರ ಮೇಲಿನ ಗೂಂಡಾ ಕಾಯ್ದೆ ಪ್ರಕರಣ, ಗಡಿಪಾರು ಆದೇಶ | ಪ್ರಕ್ರಿಯೆ ನಿಲ್ಲಿಸದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಸರಕಾರ ಜವಾಬ್ದಾರಿಯಾಗಲಿದೆ : ಮುರಳೀಕೃಷ್ಣ ಹಸಂತಡ್ಕ Read More »

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೆದಿಲದ ಜಾನಕಿಯವರಿಗೆ ಮಾಸಾಸನದ ಮಂಜೂರಾತಿ ಪತ್ರ ಹಸ್ತಾಂತರ

ಕೆದಿಲ: ಬಡತನದಲ್ಲಿರುವ ಕೆದಿಲ ಗ್ರಾಮದ ವಳಂಗಜೆ ಜಾನಕಿಯವರಿಗೆ ಮಾಸಾಸನದ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಲಾಯಿತು. ಮಾಸಾಸನದ ಕುರಿತು ಪೆರ್ನೆ ಕೆದಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಜಗದೀಶ, ಗಿರೀಶ, ಶೀನಪ್ಪ ಅವರು ಪೆರ್ನೆ ವಲಯ ಮೇಲ್ವಿಚಾರಕಿ ಶಾರದ ಅವರ ಗಮನಕ್ಕೆ ತಂದಿದ್ದರು. ಇದೀಗ ಮಂಜೂರಾತಿ ಪತ್ರ ನೀಡಲಾಗಿದೆ. 75 ವರ್ಷದ ಪ್ರಾಯದ ಜಾನಕಿ ಅವರು ಒಂದು ಹೊತ್ತಿನ ಅನ್ನಕ್ಕೂ ಕಷ್ಟ ಪಡುತ್ತಿದ್ದು, ಗಂಡ ಹಾಗೂ ಐದು ಗಂಡು ಮಕ್ಕಳನ್ನು ಕಳಕೊಂಡಿದ್ದಾರೆ. ವಲಯ ಮೇಲ್ವಿಚಾರಕಿ ಶಾರದಾ ಮತ್ತು ಜ್ಞಾನವಿಕಾಸ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೆದಿಲದ ಜಾನಕಿಯವರಿಗೆ ಮಾಸಾಸನದ ಮಂಜೂರಾತಿ ಪತ್ರ ಹಸ್ತಾಂತರ Read More »

ಘನವಾಹನ ನಿಷೇಧವಿದ್ದರೂ 12 ಚಕ್ರದ ಲಾರಿ ಚಲಾಯಿಸಿ ದಂಡ ವಿಧಿಸಿಕೊಂಡ ಚಾಲಕ

ಚಾರ್ಮಾಡಿ: 12 ಚಕ್ರದ ಲಾರಿಯೊಂದು ತಿರುವಿನಲ್ಲಿ ಚಲಿಸಿ ಟರ್ನ್ ಮಾಡಲಾಗದೇ ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ವಾಹನ ಸವಾರರು ಪರದಾಡಿದ ಘಟನೆ ಚಾರ್ಮಾಡಿ ಘಾಟ್ ನ 10ನೇ ತಿರುವಿನಲ್ಲಿ ನಡೆದಿದೆ. ಬಳ್ಳಾರಿಯಿಂದ ಮಂಗಳೂರಿಗೆ ಕಬ್ಬಿಣ ತುಂಬಿಕೊಂಡು ತೆರಳುತ್ತಿದ್ದ 12 ಚಕ್ರದ ಲಾರಿ ಭಾರಿ ವಾಹನಗಳ ನಿಷೇದವಿದ್ದರೂ ಘಾಟ್ ನಲ್ಲಿ ಸಂಚಾರ ಮಾಡುತ್ತಿದ್ದಾಗ ಚೆಕ್ ಪೋಸ್ಟ್ ಸಿಬ್ಬಂದಿಗಳು ನಿಲ್ಲಿಸಲು  ಸೂಚನೆ ನೀಡಿದರೂ ಚಾಲಕ ಲಾರಿಯನ್ನು ನಿಲ್ಲಿಸದೇ ಚಲಾಯಿಸಿದ್ದ. ತಕ್ಷಣ ವಿಷಯ ತಿಳಿದ ಬಣಕಲ್ ಸಬ್ ಇನ್ಸ್ಪೆಕ್ಟರ್ ಲಾರಿ ಚಾಲಕನನ್ನು

ಘನವಾಹನ ನಿಷೇಧವಿದ್ದರೂ 12 ಚಕ್ರದ ಲಾರಿ ಚಲಾಯಿಸಿ ದಂಡ ವಿಧಿಸಿಕೊಂಡ ಚಾಲಕ Read More »

ಮಹಿಳೆ ನೇಣು ಬಿಗಿದು ಆತ್ಮಹತ್ಯೆ  !

ವಿಟ್ಲ: ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡ್ ಎಂಬಲ್ಲಿ ನಡೆದಿದೆ. ಕುಂಟುಕುಡೇಲು ಕಾಪಿಕಾಡ್ ನಿವಾಸಿ ಸುಶೀಲಾ (60) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸುಶೀಲಾ ಅವರ ಪತಿ ಮೂರು ತಿಂಗಳ ಹಿಂದೆಯಷ್ಟೇ ಹೃದಯಾಘಾತದಿಂದ ಮೃತಪಟ್ಟಿದ್ದರು. ಇದಾದ ಬಳಿಕ ಸುಶೀಲಾ ಅವರು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದು, ತನ್ನ ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆ ನೇಣು ಬಿಗಿದು ಆತ್ಮಹತ್ಯೆ  ! Read More »

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್’ಗೆ ‘ಜ್ಞಾನ ಭಂಡಾರ’ದ ಉಡುಗೊರೆ ನೀಡಿದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ

ಮಂಗಳೂರು: ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರನ್ನು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ಆಶೀರ್ವಾದ ಪಡೆದರು. ಇದೇ ಸಂದರ್ಭ ಸ್ವಾಮೀಜಿ ಅವರು ಪದ್ಮರಾಜ್ ಅವರನ್ನು ಸನ್ಮಾನಿಸಿ, ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಕಿರಣ್ ಬುಡ್ಲೆಗುತ್ತು, ಗಿರೀಶ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್’ಗೆ ‘ಜ್ಞಾನ ಭಂಡಾರ’ದ ಉಡುಗೊರೆ ನೀಡಿದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ Read More »

error: Content is protected !!
Scroll to Top