ಕಂಟೈನರ್-ಖಾಸಗಿ ಬಸ್ ಡಿಕ್ಕಿ | 20 ಮಂದಿಗೆ ಗಾಯ

ನೆಲ್ಯಾಡಿ: ಕಂಟೈನರ್ ಹಾಗೂ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪ ಇಂದು ನಡೆದಿದೆ. ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಫತ್ರೆಗೆ ದಾಖಲಿಸಲಾಗಿದೆ ವರನ ಮದುವೆ ದಿಬ್ಬಣದ ಖಾಸಗಿ ಬಸ್ಸು ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ತೆರಳುತಿತ್ತು ಎನ್ನಲಾಗಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 20 ಮಂದಿ ಗಾಯಗೊಂಡು ಅವರನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. […]

ಕಂಟೈನರ್-ಖಾಸಗಿ ಬಸ್ ಡಿಕ್ಕಿ | 20 ಮಂದಿಗೆ ಗಾಯ Read More »

ಬಜರಂಗದಳ ಮುಖಂಡ ಭರತ್ ಕುಮಾರ್ ಕುಮ್ಡೇಲು ಗಡಿಪಾರಿಗೆ ನೋಟೀಸ್ | ವಿಹಿಂಪ ಖಂಡನೆ

ಪುತ್ತೂರು: ಜಿಲ್ಲಾ ಬಜರಂಗದಳ ಸಂಚಾಲಕ ಭರತ್ ಕುಮ್ಡೇಲು ಅವರನ್ನು ಬೀದರ್ ಜಿಲ್ಲೆಗೆ ಗಡಿಪಾರು ಮಾಡಿ ನೋಟೀಸ್ ನೀಡಿರುವುದನ್ನು ವಿಶ್ವ ಹಿಂದೂ ಪರಿಷತ್ ಖಂಡಿಸಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಸರಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಹಿಂದೂ ಕಾರ್ಯಕರ್ತರನ್ನು ಗುರಿಮಾಡಿ ಗಡಿಪಾರು ಮಾಡುತ್ತಿದೆ. ಗಡಿಪಾರು ಆದೇಶದ ಕುರಿತು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸನ್ನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಜರಂಗದಳ ಮುಖಂಡ ಭರತ್ ಕುಮಾರ್ ಕುಮ್ಡೇಲು ಗಡಿಪಾರಿಗೆ ನೋಟೀಸ್ | ವಿಹಿಂಪ ಖಂಡನೆ Read More »

ಬಿಜೆಪಿ ಸೇರ್ಪಡೆ ನಿರ್ಧಾರ ಪ್ರಕಟಿಸಿದ ಸುಮಲತಾ ಅಂಬರೀಶ್ | ಏ.6 ಕ್ಕೆ ಬಿಜೆಪಿ ಸೇರ್ಪಡೆಗೆ ಮುಹೂರ್ತ ಘೋಷಿಸಿದ ಸುಮಲತಾ

ಮಂಡ್ಯ: ನಾನು ಈ ಬಾರಿ ಪಕ್ಷೇತರಳಾಗಿ ಸ್ಪರ್ಧೆ‍ ಮಾಡುವುದಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ನಾನು ಬೆಂಬಲ ನೀಡುತ್ತೇನೆ. ಆದರೆ ಕಾಂಗ್ರೆಸ್ ಪಕ್ಷ ಸೇರುವುದಿಲ್ಲ, ರಾಜಕೀಯ ಬಿಟ್ಟು ಹೋಗುವುದಿಲ್ಲ ಎಂದು ಸುಮಲತಾ ಅಂಬರೀಶ್ ತಿಳಿಸಿದ್ದಾರೆ. ಮಂಡ್ಯದಲ್ಲಿ ಇಂದು ನಡೆದ ಬೆಂಬಲಿಗರ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಪ್ರಸ್ತುತ ದಿನಗಳಲ್ಲಿ ಮೋದಿ ಅವರು ದೇಶದ ಬಗ್ಗೆ ಹೊಂದಿರುವ ಕನಸಿಗೆ ನಾವು ಬೆಂಬಲವಾಗಿ ನಿಲ್ಲಬೇಕು. ನನ್ನ ಎಂಪಿ ಸ್ಥಾನವನ್ನು ಬಿಟ್ಟು ಕೊಟ್ಟು ಬಿಜೆಪಿ ಸೇರುವ ನಿರ್ಧಾರ ಮಾಡಿದ್ದೀನಿ ಎಂದು ಘೋಷಿಸಿದರು.

ಬಿಜೆಪಿ ಸೇರ್ಪಡೆ ನಿರ್ಧಾರ ಪ್ರಕಟಿಸಿದ ಸುಮಲತಾ ಅಂಬರೀಶ್ | ಏ.6 ಕ್ಕೆ ಬಿಜೆಪಿ ಸೇರ್ಪಡೆಗೆ ಮುಹೂರ್ತ ಘೋಷಿಸಿದ ಸುಮಲತಾ Read More »

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ನಾಮಪತ್ರ ಸಲ್ಲಿಕೆ

ಮಂಗಳೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಇಂದು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಮೊದಲು ಹಮ್ಮಿಕೊಂಡ ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು. ಬುಧವಾರ ಬೆಳಿಗ್ಗೆ ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರೋಡಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಅರ್ಚನೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ನಾಮಪತ್ರ ಸಲ್ಲಿಕೆ Read More »

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ನಡೆದ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಟಿ. ರವಿ, ಶಾಸಕರಾದ ಸುರೇಶ್ ಶೆಟ್ಟಿ, ಯಶ್ ಪಾಲ್‍ ಸುವರ್ಣ, ಜೆಡಿಎಸ್ ಮಖಂಡ, ವಿಧಾನಪರಿಷತ್ ಸದಸ್ಯ ಭೋಜೆಗೌಡ ಮತ್ತಿತರರು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ Read More »

ಕರ್ನಾಟಕದ ಐದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಸ್ತುತ ಬಿಸಿಲ ಧಗೆಯಿಂದ ಬಳಲುತ್ತಿದ್ದು, ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಯಪುರದಲ್ಲಿ ಭಾರೀ ಮಳೆಯಾಗಲಿದ್ದು, ಎಲ್ಲೋ ಅಲರ್ಟ್‍ ಘೋಷಿಸಲಾಗಿದೆ. ದ.ಕ., ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರುಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಐದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆಯಿಂದ ಮುನ್ಸೂಚನೆ Read More »

ಅಡ್ಯನಡ್ಕದಲ್ಲಿ ಹಲ್ಲೆ ಪ್ರಕರಣ: ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು

ವಿಟ್ಲ: ಅಡ್ಯನಡ್ಕದಲ್ಲಿ ಇತ್ತೀಚೆಗೆ ನಡೆದ ಯುವಕನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಠಾಣೆಯಲ್ಲಿ ಇತ್ತಂಡಗಳ ವಿರುದ್ಧ ದೂರು ದಾಖಲಾಗಿದೆ. ಅಡ್ಯನಡ್ಕ ನಿವಾಸಿ ಮಹಮ್ಮದಾಲಿ ಎ. (36) ಎಂಬವರು ನೀಡಿದ ದೂರಿನಂತೆ ಗಣೇಶ್ ಎಂಬವರು ಮನೆಯ ಬಳಿ ಬಂದು ಹಣದ ವಿಚಾರದಲ್ಲಿ ತಕರಾರು ತೆಗೆದು ಅವ್ಯಾಚವಾಗಿ ನಿಂದಿಸಿ, ಕತ್ತಿಯಿಂದ ಹಲ್ಲೆ ನಡೆಸಲು ಮುಂದಾಗಿದ್ದು, ಸ್ಥಳೀಯರು ಬಂದಾಗ ಪರಾರಿಯಾಗಿರುತ್ತಾನೆ ಎಂದು ಪ್ರಕರಣ ದಾಖಲಾಗಿದೆ. ಈ ನಡುವೆ ಗಣೇಶ್ ಅವರು ಮಹಮ್ಮದಾಲಿ ಕತ್ತಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆಂದು

ಅಡ್ಯನಡ್ಕದಲ್ಲಿ ಹಲ್ಲೆ ಪ್ರಕರಣ: ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು Read More »

ಏ.9 ರಂದು ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ | ಬಿಜೆಪಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ

ಪುತ್ತೂರು: ಮಹಿಳಾ ಮೋರ್ಚದ ವತಿಯಿಂದ ಏ.9 ರಂದು ಪುತ್ತೂರಿನಲ್ಲಿ ನಡೆಯುವ ಮಹಿಳಾ ಸಮಾವೇಶದ ಪೂರ್ವಭಾವಿ ಸಭೆ ಬಿಜೆಪಿ ಕಛೇರಿಯಲ್ಲಿ ಇಂದು ನಡೆಯಿತು. ಪುತ್ತೂರು ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಸುಲೋಚನಾ ಜಿ.ಕೆ. ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದ.ಕ. ಜಿಲ್ಲಾ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಗೆಲ್ಲಿಸಿಕೊಡುವ ಜತೆಗೆ ಮಹಿಳಾ ಸಮಾವೇಶ ಯಶಸ್ವಿಯಾಗಿ ನಡೆಸುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ,

ಏ.9 ರಂದು ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ | ಬಿಜೆಪಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ Read More »

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮತದಾರರ ಜಾಗೃತಿ ಅಭಿಯಾನ

ಕುಂತೂರು: ಚುನಾವಣಾ ಆಯೋಗವು ಸಮಾಜದ ಪ್ರತಿಯೊಂದು ವರ್ಗವು ಮತ ಚಲಾಯಿಸಬೇಕು ಎಂಬ ಗುರಿಯನ್ನು ಹೊಂದಿದೆ. ಶೇ.100ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳುವಂತಾಗಬೇಕು. ಭಾರತದ ಬೆನ್ನೆಲುಬಾಗಿರುವ ಯುವ ಜನಾಂಗವು ಕಡ್ಡಾಯವಾಗಿ ಮತದಾನ ಮಾಡುವ ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವನ್ನು ನಿರ್ಮಿಸಬೇಕು ಎಂದು ಪುತ್ತೂರು ತಾಲೂಕು ಮಟ್ಟದ ಸ್ವೀಪ್ ಸಮಿತಿ ತರಬೇತುದಾರ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಲಕ್ಷ್ಮೀಕಾಂತ ರೈ ಅನಿಕೂಟೇಲು ಹೇಳಿದರು. ಕಡಬ ತಾಲೂಕಿನ ಕುಂತೂರಿನಲ್ಲಿರುವ

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮತದಾರರ ಜಾಗೃತಿ ಅಭಿಯಾನ Read More »

ಪುತ್ತಿಲ ಭೇಟಿ ಬಳಿಕ ಅವರ ಮೇಲಿನ ಗೌರವ ಹೆಚ್ಚಾಗಿದೆ, ಅವರನ್ನು ವಿಧಾನಸೌಧದಲ್ಲಿ ಕಾಣಲು ಬಯಸುತ್ತೇನೆ | ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪ್ರತಾಪಸಿಂಹ

ಪುತ್ತೂರು: ಮಂಗಳವಾರ ಸ್ವಾಮಿ ಕಲಾ ಮಂದಿರದಲ್ಲಿ ನಡೆದ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಗೆ ಮೈಸೂರು ಕೊಡಗು ಸಂಸದ ಪ್ರತಾಪಸಿಂಹ ಅವರು ಅರುಣ್ ಕುಮಾರ್ ಪುತ್ತಿಲರನ್ನು ಕರೆದು ಬಳಿಯಲ್ಲಿ ಕೂರಿಸಿಕೊಂಡ ವೀಡಿಯೋ ವೈರಲ್ ಆಗಿತ್ತು. ಭಾಷಣದಲ್ಲೂ 2023ರ ವಿಧಾನಸಭಾ ಚುನಾವಣೆಯಲ್ಲಿ ಅರುಣ್ ಪುತ್ತಿಲರ ಪಕ್ಷೇತರ ಸ್ಪರ್ಧೆ ಬಗ್ಗೆ ಮಾತನಾಡಿದ ಪ್ರತಾಪ ಸಿಂಹ , ಒಬ್ಬ ವ್ಯಕ್ತಿಯ ಪರವಾಗಿ ನಿಂತು ನ್ಯಾಯ ಕೊಡಬೇಕು. ಕೇಳಿದ ಕ್ಷೇತ್ರ ಇದ್ದರೆ ಪುತ್ತೂರು ಎಂಬ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಇದೀಗ

ಪುತ್ತಿಲ ಭೇಟಿ ಬಳಿಕ ಅವರ ಮೇಲಿನ ಗೌರವ ಹೆಚ್ಚಾಗಿದೆ, ಅವರನ್ನು ವಿಧಾನಸೌಧದಲ್ಲಿ ಕಾಣಲು ಬಯಸುತ್ತೇನೆ | ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪ್ರತಾಪಸಿಂಹ Read More »

error: Content is protected !!
Scroll to Top