ವರುಣಾ ಕ್ಷೇತ್ರದ ಕುರಿತು ಸಿದ್ದರಾಮಯ್ಯ ಹೇಳಿಕೆ ತಿರುಗುಬಾಣವಾಯಿತೇ?

ಬೆಂಗಳೂರು: ತಾನು ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರದಲ್ಲಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವ ಮಾತುಗಳು ನಾನಾ ರೀತಿಯ ಊಹಾಪೋಹಗಳಿಗೆ ಕಾರಣವಾಗಿ ಸಂಚಲನ ಸೃಷ್ಟಿಸಿದೆ. ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್‌ಗೆ ವರುಣ ಕ್ಷೇತ್ರದಲ್ಲಿ 60 ಸಾವಿರ ಲೀಡ್ ಬೇಕು. ಅಷ್ಟು ಲೀಡ್ ಬಂದದ್ದೇ ಆದರೆ ಯಾರೂ ನನ್ನನ್ನು ಮುಟ್ಟಲು ಸಾಧ್ಯವಿಲ್ಲ. ನಾನು ಇರಬೇಕೋ, ಬೇಡೋ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ವರುಣ ಕ್ಷೇತ್ರದಲ್ಲಿ ಭಾವನಾತ್ಮಕ ಅಸ್ತ್ರ ಪ್ರಯೋಗಿಸಿ ಮತಯಾಚಿಸಿದ್ದಾರೆ. ಆದರೆ ಅದು ಅವರಿಗೇ […]

ವರುಣಾ ಕ್ಷೇತ್ರದ ಕುರಿತು ಸಿದ್ದರಾಮಯ್ಯ ಹೇಳಿಕೆ ತಿರುಗುಬಾಣವಾಯಿತೇ? Read More »

ಹರ್ಷ ಶೋ ರೂಂನ ಗೋದಾಮಿನಲ್ಲಿ ಬೆಂಕಿ | ಕೋಟ್ಯಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿ

ಪುತ್ತೂರು: ದರ್ಬೇಯಲ್ಲಿ ಕಾರ್ಯಾಚರಿಸುತ್ತಿರುವ ಗೃಹೋಪಯೋಗಿ ಹಾಗೂ ಇಲೆಕ್ಟ್ರಾನಿಕ್ಸ್ ವಸ್ತುಗಳ ಮಳಿಗೆ  ಹರ್ಷ ಶೋ ರೂಂ, ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಕೋಟ್ಯಾಂತರ ರೂ. ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಇಂದು ಮುಂಜಾನೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಅವಘಡಕ್ಕೆ ಕಾರಣಗಳು ತಿಳಿದು ಬರಬೇಕಿದೆ.

ಹರ್ಷ ಶೋ ರೂಂನ ಗೋದಾಮಿನಲ್ಲಿ ಬೆಂಕಿ | ಕೋಟ್ಯಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿ Read More »

ನಿಷೇಧಿತ ಕೇರಳ ರಾಜ್ಯ ಲಾಟರಿ ಮಾರಾಟ | ಓರ್ವ ಪೊಲೀಸ್ ವಶಕ್ಕೆ

ಪುತ್ತೂರು: ನಿಷೇಧಿತ ಕೇರಳ ಲಾರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪಡ್ನೂರು ನಿವಾಸಿ ಲಕ್ಷ್ಮಣ ಬಂಧಿತ ವ್ಯಕ್ತಿ ಇಂದು ಮಧ್ಯಾಹ್ನ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಲಿನೆಟ್ ಜಂಕ್ಷನ್ ಬಳಿ ಪಾನ್‍ ಬೀಡ ಅಂಗಡಿಯಲ್ಲಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿದ ಪುತ್ತೂರು ನಗರ ಪೊಲೀಸ್ ಠಾಣಾ ಉಪನಿರೀಕ್ಷಕ ನಂದಕುಮಾರ್ ಎಂ.ಎಂ. ಹಾಗೂ ಸಿಬ್ಬಂದಿಗಳು ಲಕ್ಷ್ಮಣ ಎಂಬಾತನನ್ನು ವಿಚಾರಿಸಿ 1,550 ಮೌಲ್ಯದ 31 ಲಾಟರಿ ಹಾಗೂ ಮಾರಾಟ ಮಾಡಿದ ಹಣ 1100 ರೂ.

ನಿಷೇಧಿತ ಕೇರಳ ರಾಜ್ಯ ಲಾಟರಿ ಮಾರಾಟ | ಓರ್ವ ಪೊಲೀಸ್ ವಶಕ್ಕೆ Read More »

ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ | ವೈಭವದಿಂದ ನಡೆದ ಬ್ರಹ್ಮರಥೋತ್ಸವ

ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ನೂತನವಾಗಿ ಸಮರ್ಪಣೆಗೊಂಡ ಬ್ರಹ್ಮರಥದ ರಥೋತ್ಸವ ಸಾವಿರಾರು ಭಕ್ತಾದಿಗಳ ಜಯಘೋಷದೊಂದಿಗೆ ಭಾನುವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು. ಭಾನುವಾರ ಬೆಳಿಗ್ಗೆ ಜಾತ್ರೋತ್ಸವದ ಅಂಗವಾಗಿ ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ, ನವಕ ಕಲಶ ಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ಅಪ್ಪಂಗಾಯ, ನವಕ ಕಲಶಾಭಿಷೇಕ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ 7 ರಿಂದ ಶ್ರೀ ದೇವರ ಬಲಿ ಹೊರಟು

ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ | ವೈಭವದಿಂದ ನಡೆದ ಬ್ರಹ್ಮರಥೋತ್ಸವ Read More »

ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ

ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿ ದರ್ಬೆ ಬೈಪಾಸ್ ಜಂಕ್ಷನಿನ ಆರ್.ಸಿ.ಬಿ. ಎನ್’ಕ್ಲೇವ್’ನಲ್ಲಿ ಉದ್ಘಾಟನೆಗೊಂಡಿತು. ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಶಾಸಕ ಅಶೋಕ್ ಕುಮಾರ್ ರೈ, ಅಭ್ಯರ್ಥಿ ಪದ್ಮರಾಜ್ ಆರ್. ಕಚೇರಿಯನ್ನು ಉದ್ಘಾಟಿಸಿದರು. ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ನೈಋತ್ಯ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ. ವಿಶ್ವನಾಥ ರೈ, ಡಾ. ರಾಜಾರಾಮ್,  ಎಂ.ಎಸ್. ಮಹಮ್ಮದ್, ಮಹಮ್ಮದ್ ಆಲಿ, ಮಹಮ್ಮದ್ ಬಡಗನ್ನೂರು, ಸೇವಾದಳದ ಜಿಲ್ಲಾಧ್ಯಕ್ಷ

ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ Read More »

ರಜಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಶಿಬಿರ ಸ್ಪರ್ಧಾತ್ಮಕ ಮತ್ತು ಪ್ರವೇಶ ಪರೀಕ್ಷೆಗಳು |  ವಿದ್ಯಾರ್ಥಿವೇತನಗಳಿಗಾಗಿ ವಿದ್ಯಾಮಾತಾ ಅಕಾಡೆಮಿಯಲ್ಲಿ ವಿಶಿಷ್ಟ ತರಬೇತಿ ಶಿಬಿರ

ಪುತ್ತೂರು: ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು 5ನೇ ತರಗತಿ ವಿದ್ಯಾರ್ಥಿಗಳಿಂದ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯಕೊಂದು ಅಡಿಗಲ್ಲು ಹಾಕುವ ನಿಟ್ಟಿನಲ್ಲಿ ವಿಶಿಷ್ಟವಾದ ತರಬೇತಿ ಶಿಬಿರವನ್ನು ಆಯೋಜಿಸುತ್ತಿದೆ. ನವೋದಯ /ಸೈನಿಕ್ / ಆದರ್ಶ / ಮೊರಾರ್ಜಿ / ಒಲಂಪಿಯಾಡ್ ಪ್ರವೇಶ ಪರೀಕ್ಷೆಗಳು ಮತ್ತು ಜೆಇಇ / ನೀಟ್ / ಎನ್ ಡಿ ಎ / ಕ್ಲಾಟ್ / ಎನ್.ಎಂ.ಎಂ.ಎಸ್ / ಕೆ.ಎ.ಎಸ್ / ಐ.ಎ.ಎಸ್ ವರೆಗಿನ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ರಿಲಯನ್ಸ್

ರಜಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಶಿಬಿರ ಸ್ಪರ್ಧಾತ್ಮಕ ಮತ್ತು ಪ್ರವೇಶ ಪರೀಕ್ಷೆಗಳು |  ವಿದ್ಯಾರ್ಥಿವೇತನಗಳಿಗಾಗಿ ವಿದ್ಯಾಮಾತಾ ಅಕಾಡೆಮಿಯಲ್ಲಿ ವಿಶಿಷ್ಟ ತರಬೇತಿ ಶಿಬಿರ Read More »

ಈ ಬಾರಿ ದ.ಕ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 3.50 ಲಕ್ಷ ಮತಗಳ ಅಂತರದಿಂದ ಗೆಲುವು | ಪುತ್ತೂರು ಬಿಜೆಪಿ ಚುನಾವಣಾ ಕಚೇರಿ ಉದ್ಘಾಟಿಸಿ ಸಂಸದ ನಳಿನ್ ಕುಮಾರ್ ಕಟೀಲ್

ಪುತ್ತೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪುತ್ತೂರು ಚುನಾವಣಾ ಕಚೇರಿ ಪಕ್ಷದ ಕಚೇರಿ ಬಳಿ ಸೋಮವಾರ ಉದ್ಘಾಟನೆಗೊಂಡಿತು. ಸಂಸದ ಹಾಗೂ ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ದೀಪ ಬೆಳಗಿಸುವ ಮೂಲಕ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ಕಾರ್ಯಕರ್ತರೂ `ನನ್ನ ಮತಗಟ್ಟೆಯಲ್ಲಿ ಅತಿ ಹೆಚ್ಚು ಮತ ಗಳಿಸಿಕೊಡುತ್ತೇನೆ ಎಂಬ ಸಂಕಲ್ಪ ಮಾಡಬೇಕು. ದೇಶದ ದಿಕ್ಕಿನ ಬದಲಾವಣೆ, ಜಗದ್ವಂದ್ಯ ಭಾರತ ನಿರ್ಮಾಣಕ್ಕಾಗಿ ಈ ಚುನಾವಣೆ ನಡೆಯುತ್ತಿದೆ. ಸೇನೆಯಲ್ಲಿ ಕಾರ್ಯನಿರ್ವಹಿಸಿದ್ದ ಯುವ ನಾಯಕನನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. 34

ಈ ಬಾರಿ ದ.ಕ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 3.50 ಲಕ್ಷ ಮತಗಳ ಅಂತರದಿಂದ ಗೆಲುವು | ಪುತ್ತೂರು ಬಿಜೆಪಿ ಚುನಾವಣಾ ಕಚೇರಿ ಉದ್ಘಾಟಿಸಿ ಸಂಸದ ನಳಿನ್ ಕುಮಾರ್ ಕಟೀಲ್ Read More »

ಕುಂಜಾರಮ್ಮ ಕುಕ್ಕುಂದೂರು ನಿಧನ

ಸುಳ್ಯ: ಕುಂಜಾರಮ್ಮ ಕುಕ್ಕುಂದೂರು (79) ಇಂದು ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಅವರು ನಿಧನರಾಗಿದ್ದಾರೆ. ಮೃತರು ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಮೊಮ್ಮಕ್ಕಳು, ಮರಿ ಮೊಮ್ಮಕ್ಕಳು ಹಾಗೂ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

ಕುಂಜಾರಮ್ಮ ಕುಕ್ಕುಂದೂರು ನಿಧನ Read More »

ನೇಲ್ಯಡ್ಕ ಶಾಲೆಯಲ್ಲಿ ನಡೆದ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ 2024ನೇ ಸಾಲಿನ ಎನ್‍.ಎಸ್‍.ಎಸ್‍ ವಾರ್ಷಿಕ ಶಿಬಿರ

ಸವಣೂರು: ಸವಣೂರು ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2024ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಭಾನುವಾರ ಕಡಬ ತಾಲೂಕಿನ ನೇಲ್ಯಡ್ಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸುಬ್ರಹ್ಮಣ್ಯ ಕಣ್ಕಲ್ ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ನಿರಂಜನ್ ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಕೆ.ರಘುನಾಥ ರೈ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಗ್ರಾಮದಲ್ಲಿ ಬರುವ ಏಳು ಶಾಲೆಗಳ ಪೈಕಿ ಆರು ಶಾಲೆಗಳಲ್ಲಿ ಮಾತ್ರ

ನೇಲ್ಯಡ್ಕ ಶಾಲೆಯಲ್ಲಿ ನಡೆದ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ 2024ನೇ ಸಾಲಿನ ಎನ್‍.ಎಸ್‍.ಎಸ್‍ ವಾರ್ಷಿಕ ಶಿಬಿರ Read More »

ಮನೆಯ ಮಹಡಿಯಿಂದ ಬಿದ್ದು ಬಾಲಕ ಮೃತ್ಯು !

ಬಂಟ್ವಾಳ: ಬಾಲಕನೋರ್ವ ಮನೆಯ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಎಂಬವರ ಪುತ್ರ ಆದಿಶ್ (15) ಮೃತಪಟ್ಟ ಬಾಲಕ. ಆದಿಶ್ ತನ್ನ ಮನೆಯ ಮಹಡಿಯಲ್ಲಿ ಮಲಗಿದ್ದು, ಮುಂಜಾನೆ ಎದ್ದು ಮೊಬೈಲ್‍ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಮನೆಮಂದಿ ಬೆಳಗ್ಗೆ ಎದ್ದು ನೋಡಿದಾಗ ಮಹಡಿಯಿಂದ ಬಿದ್ದಿರುವುದು ಕಂಡು ಬಂದಿದೆ. ತಕ್ಷಣ ಆತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆತಂದಾಗ ಅದಾಗಲೇ ಆತ ಮೃತಪಟ್ಟಿದ್ದ ಎನ್ನಲಾಗಿದೆ.ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಯ ಮಹಡಿಯಿಂದ ಬಿದ್ದು ಬಾಲಕ ಮೃತ್ಯು ! Read More »

error: Content is protected !!
Scroll to Top