ಏ.8 ರಿಂದ ದಿ ಪುತ್ತೂರು ಕ್ಲಬ್ ಈಜು ತರಬೇತಿ ಶಿಬಿರ

ಪುತ್ತೂರು: ಬೇಸಿಗೆ ಶಿಬಿರದ ಅಂಗವಾಗಿ ಮರೀಲ್  ದಿ ಪುತ್ತೂರು  ಕ್ಲಬ್ ನಲ್ಲಿ ಮಕ್ಕಳಿಗೆ ಮತ್ತು ಸ್ತ್ರೀಯರಿಗೆ ನುರಿತ ತರಬೇತುದಾರರಿಂದ ಈಜು ಶಿಬಿರ  ಏ.8 ರಿಂದ 24 ರ ತನಕ ನಡೆಯಲಿದೆ.  ಸ್ತ್ರೀಯರಿಗೆ ಸ್ತ್ರೀಯರೇ ಈಜು ತರಬೇತಿ ನೀಡಲಿದ್ದು, ಬೆಳಿಗ್ಗೆ 10 ರಿಂದ 10.45, ಸಂಜೆ 6 ರಿಂದ 6.45 ,7 ರಿಂದ 7.45  ಮತ್ತು 8 ರಿಂದ 8.45 ರ ಬ್ಯಾಚ್ ಗಳಲ್ಲಿ ಈಜು ತರಬೇತಿ ನೀಡಲಾಗುತ್ತದೆ. ಇತರ ಸಮಯದಲ್ಲೂ 8 ಮಂದಿಯ ಪ್ರತ್ಯೇಕ ಬ್ಯಾಚ್ ಮಾಡಿ […]

ಏ.8 ರಿಂದ ದಿ ಪುತ್ತೂರು ಕ್ಲಬ್ ಈಜು ತರಬೇತಿ ಶಿಬಿರ Read More »

ನೆಲ್ಯಾಡಿ ಉಪ ಅಂಚೆ ಕಚೇರಿಯ ಅಂಚೆ ಪಾಲಕ ಡಿ.ರಾಮಣ್ಣ ಶೆಟ್ಟಿ ನಾಳೆ ಸೇವೆಯಿಂದ ನಿವೃತ್ತಿ

ನೆಲ್ಯಾಡಿ: ಅಂಚೆ ಇಲಾಖೆಯಲ್ಲಿ 41 ವರ್ಷ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ನೆಲ್ಯಾಡಿ ಉಪ ಅಂಚೆ ಕಚೇರಿಯಲ್ಲಿ ಅಂಚೆ ಪಾಲಕರಾಗಿರುವ ಡಿ. ರಾಮಣ್ಣ ಶೆಟ್ಟಿ ಅವರು ಮಾ.31 ರಂದು ನಿವೃತ್ತಿಯಾಗಲಿದ್ದಾರೆ. 1983, ಮಾ.14 ರಂದು ಕೊಕ್ಕಡ ಅಂಚೆ ಕಚೇರಿಯಲ್ಲಿ ಇಲಾಖೇತರ ನೌಕರರಾಗಿ ಸೇವೆ ಆರಂಭಿಸಿದ ರಾಮಣ್ಣ ಶೆಟ್ಟಿಯವರು ಬಳಿಕ ಇಲಾಖಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 1991, ನ.16 ರಂದು ಕಾರ್ಕಳ ಪ್ರಧಾನ ಅಂಚೆ ಕಚೇರಿಯಲ್ಲಿ ಅಂಚೆ ನೌಕರರಾಗಿ ಸೇವೆಗೆ ಸೇರ್ಪಡೆಗೊಂಡಿದ್ದರು. 1997, ಏ.26ರಂದು ಗ್ರೂಫ್ ಸಿ ನೌಕರರಾಗಿ

ನೆಲ್ಯಾಡಿ ಉಪ ಅಂಚೆ ಕಚೇರಿಯ ಅಂಚೆ ಪಾಲಕ ಡಿ.ರಾಮಣ್ಣ ಶೆಟ್ಟಿ ನಾಳೆ ಸೇವೆಯಿಂದ ನಿವೃತ್ತಿ Read More »

ಕಾಪು ಠಾಣಾ ಮಹಿಳಾ ಪೇದೆ ಆತ್ಮಹತ್ಯೆ !

ಕಾಪು : ಮಹಿಳಾ ಪೇದೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾವು ಠಾಣೆಯ ಪೇದೆ ಜ್ಯೋತಿ (29) ಆತ್ಮಹತ್ಯೆ ಮಾಡಿಕೊಂಡವರು. ಮೂಲತಃ ಬಾಗಲಕೋಟೆಯವರಾಗಿರುವ ಜ್ಯೋತಿ ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಶನಿವಾರ ಬೆಳಿಗ್ಗೆ ಕ್ವಾಟ್ರಸ್‍ ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎನ್ನಲಾಗಿದೆ. ಮೃತ ಪೊಲೀಸ್ ಸಿಬಂದಿಯ ಪತಿ ಕೆ.ಎಸ್.ಆರ್.ಟಿ.ಸಿ ಸಿಬಂದಿಯಾಗಿದ್ದು ಪತಿ ಬೆಳಿಗ್ಗೆ ಕರ್ತವ್ಯಕ್ಕೆ ಹೋಗಿದ್ದರು.

ಕಾಪು ಠಾಣಾ ಮಹಿಳಾ ಪೇದೆ ಆತ್ಮಹತ್ಯೆ ! Read More »

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

ಸುಳ್ಯ: ಚುನಾವಣಾ ಪ್ರಚಾರಕ್ಕಾಗಿ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಮಾ. 30ರಂದು ಸುಳ್ಯಕ್ಕೆ ಭೇಟಿ ನೀಡಿದರು. ಬೆಳಿಗ್ಗೆ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ಪ್ರಚಾರ ಆರಂಭಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಸುಳ್ಯ ಕ್ಷೇತ್ರದ ಡಿಸಿಸಿ ಉಸ್ತುವಾರಿ ಎನ್.ಜಯಪ್ರಕಾಶ್ ರೈ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಪ್ರಮುಖರಾದ ರಾಧಾಕೃಷ್ಣ ಬೊಳ್ಳೂರು, ಕಿರಣ್ ಬುಡ್ಲೆಗುತ್ತು, ವಿಜಯ ಕುಮಾರ್ ಸೊರಕೆ, ಡಾ. ಎನ್.ಎ.

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ Read More »

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ  ಪ್ರಶಸ್ತಿ  ಪ್ರದಾನ

ಸುಳ್ಯ: ಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು ಕೊಡ ಮಾಡುವ ಪ್ರಶಸ್ತಿಯನ್ನು ಮಾ.29 ರಂದು ಬೆಂಗಳೂರಿನ ಬಾಗಲಕುಂಟೆ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ  ನಡೆದ ವಿಶ್ವ ಕನ್ನಡ ರಾಜ್ಯ ಮಟ್ಟದ  ಪ್ರಥಮ ಮಹಿಳಾ ಸಮ್ಮೇಳನದಲ್ಲಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷೆ ಕಮಲ ರಾಜೇಶ್, ಸಮಾಜ ಸೇವಕಿ, ಸೂರಜ್ ಫೌಂಡೇಷನ್ ಸಂಸ್ಥಾಪಕಿ ಸುಜಾತ ಎಸ್ ಮುನಿರಾಜು,

ಡಾ. ಅನುರಾಧಾ ಕುರುಂಜಿಯವರಿಗೆ ಶಿವಶರಣೆ ನೀಲಾಂಬಿಕೆ  ಪ್ರಶಸ್ತಿ  ಪ್ರದಾನ Read More »

ಏ.2 : ಬಿಜೆಪಿ ಕಾರ್ಯಕರ್ತರ ಸಮಾವೇಶ | ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳನ್ನು ಮನೆ ಮನೆ ತಲುಪಿಸುವ ಕಾರ್ಯ ಪುತ್ತೂರು ವಿಧಾನಸಭಾ ಕ್ಷೇತ್ರದಾದ್ಯಂತ ನಡೆಯಲಿದೆ : ಪತ್ರಿಕಾಗೋಷ್ಠಿಯಲ್ಲಿ ಚನಿಲ ತಿಮ್ಮಪ್ಪ ಶೆಟ್ಟಿ

ಪುತ್ತೂರು: ಲೋಕಸಭಾ ಚುನಾವಣೆ ಅಂಗವಾಗಿ ಪುತ್ತೂರು ಬಿಜೆಪಿ ವತಿಯಿಂದ ಕಾರ್ಯಕರ್ತರ ಸಮಾವೇಶ ಏ.2ರಂದು ಬೈಪಾಸ್ ರಸ್ತೆಯ ಸ್ವಾಮಿ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಪಾಲ್ಗೊಳ್ಳಲಿದ್ದಾರೆ. ಸಮಾವೇಶಕ್ಕೆ ಮೈಸೂರು ಸಂಸದ ಪ್ರತಾಪ್

ಏ.2 : ಬಿಜೆಪಿ ಕಾರ್ಯಕರ್ತರ ಸಮಾವೇಶ | ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳನ್ನು ಮನೆ ಮನೆ ತಲುಪಿಸುವ ಕಾರ್ಯ ಪುತ್ತೂರು ವಿಧಾನಸಭಾ ಕ್ಷೇತ್ರದಾದ್ಯಂತ ನಡೆಯಲಿದೆ : ಪತ್ರಿಕಾಗೋಷ್ಠಿಯಲ್ಲಿ ಚನಿಲ ತಿಮ್ಮಪ್ಪ ಶೆಟ್ಟಿ Read More »

ಆನೆ ದಾಳಿ | ತೆಂಗು, ಅಡಿಕೆ, ಬಾಳೆಗಿಡಗಳ ನಾಶ

ಸುಳ್ಯ: ತಾಲೂಕಿನ ಪೇರಲ್‍ ಗುತ್ತು ಎಂಬಲ್ಲಿ ಆನೆ ದಾಳಿ ಮಾಡಿ ಕೃಷಿ ನಾಶಗೊಳಿಸಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಪೇರಲ್‍ ಗುತ್ತು ದಿ.ಬಾಲಕೃಷ್ಣ ಭಂಡಾರಿ ಅವರ ಮನೆಗೆ ಆನೆ ದಾಳಿ ಮಾಡಿದ್ದು,  10 ರಿಂದ 15 ತೆಂಗಿನ ಮರ, ಅಡಿಕೆ ಮರ, ಬಾಳೆ ಗಿಡ ಸಹಿತ ಇತರ ಕೃಷಿಗಳಿಗೆ ಹಾನಿಯಾಗಿದೆ. ಇಂದು ಮುಂಜಾನೆ ಹಠಾತ್ ಆನೆಯೊಂದು ದಾಳಿ ಮಾಡಿದ್ದು, ಕೃಷಿಗೆ ಹಾನಿ ಮಾಡಿ ಬಳಿಕ ಅಲ್ಲಿಂದ ಕಾಲ್ಕಿತ್ತಿದೆ.

ಆನೆ ದಾಳಿ | ತೆಂಗು, ಅಡಿಕೆ, ಬಾಳೆಗಿಡಗಳ ನಾಶ Read More »

ಆನ್ಲೈನ್ ಮೂಲಕ ವೈದ್ಯರಿಗೆ ಲಕ್ಷಾಂತರ ರೂ. ವಂಚನೆ | ದೂರು ದಾಖಲು

ಪುತ್ತೂರು: ಆನ್ಲೈನ್ ಮೂಲಕ ವೈದ್ಯರೊಬ್ಬರಿಗೆ ಕರೆ ಮಾಡಿ ಲಕ್ಷಾಂತರ ರೂ. ದೋಚಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬೊಳ್ವಾರು ನಿವಾಸಿ ಡಾ.ಚಿದಂಬರ ಅಡಿಗ ವಂಚನೆಗೊಳಗಾದವರು. ಈ ಕುರಿತು ಅವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ. ಮಾ.28 ರಂದು ಅಡಿಗ ಅವರಿಗೆ ದೂರವಾಣಿ ಮೂಲಕ ಫೋನ್ ಕರೆ ಬಂದಿದ್ದು, ಫೋನ್ ಸ್ವೀಕರಿಸಿ ಮಾತನಾಡಿದಾಗ, ನಾನು ದೆಹಲಿಯಿಂದ ಪೊಲೀಸ್ ಮಾತನಾಡುತ್ತಿರುವುದು. ನಿಮ್ಮ ಮೇಲೆ ಅಕ್ರಮ ಮಾದಕ ವಸ್ತು ಸಹಿತ ಹಣ ಹೊಂದಿರುವ ಕುರಿತು ಪ್ರಕರಣ ದಾಖಲಾಗಿದೆ. ಅರೆಸ್ಟ್ ಮಾಡಲು ಕೋರ್ಟ್‍

ಆನ್ಲೈನ್ ಮೂಲಕ ವೈದ್ಯರಿಗೆ ಲಕ್ಷಾಂತರ ರೂ. ವಂಚನೆ | ದೂರು ದಾಖಲು Read More »

ತಾಯಿ ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ

ಪುತ್ತೂರು: ತಾಯಿ ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಡ್ಯಾರ್ ಪದವು ನಿವಾಸಿ ಚೈತ್ರ, ಹಾಗೂ ಒಂದು ವರ್ಷದ ಮಗು ದಿಯಾಂಶ್‍ ಎಂಬವರ ಮೃತದೇಹ ಹರೇಕಳ ಸೇತುವೆ ಬಳಿ ಪತ್ತೆಯಾಗಿದೆ. ಶುಕ್ರವಾರ ಮಧ್ಯಾಹ್ನ ತಾಯಿ-ಮಗು ನಾಪತ್ತೆಯಾಗಿದ್ದ ಹಿನ್ನಲೆಯಲ್ಲಿ ಹುಡುಕಾಟಕ್ಕೆ ಸಂಬಂಧಿಕರು ಮನವಿ ಮಾಡಿದ್ದರು. ಈ ನಡುವೆ ಶುಕ್ರವಾರವೇ ಮಗುವಿನ ಪ್ರಥಮ ವರ್ಷದ ಹುಟ್ಟುಹಬ್ಬವನ್ನು ದೇರಳಕಟ್ಟೆ ಸೇವಾಶ್ರಮದಲ್ಲಿ ಆಚರಿಸಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ.

ತಾಯಿ ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ Read More »

ಏ.2 : ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ಏ.2 ಮಂಗಳವಾರ ಬೈಪಾಸ್ ರಸ್ತೆಯ ಸ್ವಾಮಿ ಕಲಾ ಮಂದಿರದಲ್ಲಿ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ನಡೆಯುವ ಸಮಾವೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ನಿಕಟಪೂರ್ವ ಸಂಸದ ನಳೀನ್‍ ಕುಮಾರ್ ಕಟೀಲ್‍ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳುವಂತೆ ಬಿಜೆಪಿ ಪ್ರಕಟಣೆ ತಿಳಿಸಿದೆ.

ಏ.2 : ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ Read More »

error: Content is protected !!
Scroll to Top