ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ | ಓರ್ವ ಮೃತ್ಯು, ಇಬ್ಬರಿಗೆ ಗಾಯ

ಬೆಳ್ತಂಗಡಿ: ಕಾರು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾದ ಪರಿಣಾಮ ಕಾರು ಪಲ್ಟಿಯಾಗಿ ಓರ್ವರು ಮೃತಪಟ್ಟು,, ಇಬ್ಬರು ಗಾಯಗೊಂಡ  ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ನಡೆದಿದೆ. ಲಾಯಿಲ ಮೋರ್ನಿಂಗ್ ಸ್ಟಾರ್ ನಿವಾಸಿ ವಿವಿ ಮ್ಯಾಥ್ಯೂ ಅವರ ಪುತ್ರ ಕಾರು ಚಾಲಕ ಪ್ರೈಸ್ ಮ್ಯಾಥ್ಯೂ (32) ಮೃತಪಟ್ಟವರು. ಇಬ್ಬರು ಗಾಯಗೊಂಡಿದ್ದಾರೆ. ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ | ಓರ್ವ ಮೃತ್ಯು, ಇಬ್ಬರಿಗೆ ಗಾಯ Read More »

ಪುತ್ತೂರು ಮಾಯಿದೆ ದೇವುಸ್ ಚರ್ಚ್ ನಲ್ಲಿ ಯೇಸುವಿನ ಕೊನೆಯ ಭೋಜನದ ನೆನಪಿನ ಪವಿತ್ರ ಗುರುವಾರ ಆಚರಣೆ

ಪುತ್ತೂರು: ಪ್ರಪಂಚದಾದ್ಯಂತದ ಕ್ರಿಶ್ಚಿಯನ್ನರು ಈ ವಾರವನ್ನು ಪವಿತ್ರ ವಾರವನ್ನಾಗಿ ಆಚರಿಸುತ್ತಿದ್ದಾರೆ, ಮಾ.24 ರಂದು ಈಸ್ಟರ್ ಮೊದಲು ಗರಿಗಳ ಭಾನುವಾರದಿಂದ  ಪ್ರಾರಂಭವಾಗುತ್ತದೆ. ಮಾ.29 ರಂದು ಶುಭ ಶುಕ್ರವಾರ ಮತ್ತು ಈಸ್ಟರ್ ಮೊದಲು ಬರುವ ಪವಿತ್ರ ಗುರುವಾರವನ್ನು ಆಚರಿಸುತ್ತಾರೆ. ಯೇಸು ಕ್ರಿಸ್ತನು ತನ್ನ ಶಿಷ್ಯರೊಂದಿಗೆ ಕೊನೆಯ ಭೋಜನವನ್ನು ಮಾಡಿದ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಯೇಸು ತನ್ನ ಶಿಷ್ಯರೊಂದಿಗೆ ಊಟ ಮಾಡಿದ ಕೊನೆಯ ಭೋಜನವನ್ನು ಈ ದಿನವು ಗುರುತಿಸುತ್ತದೆ. ನಾವೆಲ್ಲರೂ ಸಮಾನರು ಎಂಬುದರ ಸಂಕೇತವಾಗಿ ನಾವು ವಿನಮ್ರರಾಗಿರಬೇಕು ಮತ್ತು ಪರಸ್ಪರರ

ಪುತ್ತೂರು ಮಾಯಿದೆ ದೇವುಸ್ ಚರ್ಚ್ ನಲ್ಲಿ ಯೇಸುವಿನ ಕೊನೆಯ ಭೋಜನದ ನೆನಪಿನ ಪವಿತ್ರ ಗುರುವಾರ ಆಚರಣೆ Read More »

ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್ ಜಾಹೀರಾತಿನಲ್ಲಿ ಪ್ರಾಧ್ಯಾಪಕ ದೀಕ್ಷಿತ್ ಕುಮಾರ್

ಪುತ್ತೂರು: ಪ್ರತಿಷ್ಠಿತ ಇನ್ಫೋಸಿಸ್ ಸಂಸ್ಥೆಯು ಪ್ರಾಯೋಜಿಸಿರುವ ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್ ವಿಭಾಗ ಇತ್ತೀಚಿಗೆ ತಮ್ಮ ಸಾಮಾಜಿಕ ಜಾಲತಾಣಗಳ ಮುಖಾಂತರ ಬಿಡುಗಡೆಗೊಳಿಸಿರುವ ಜಾಹೀರಾತಿನಲ್ಲಿ ಪುತ್ತೂರಿನ ಬನ್ನೂರು ನಿವಾಸಿಯಾಗಿರುವ ಪ್ರಸ್ತುತ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಚಿಕ್ಕಮಗಳೂರು ಇಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ದೀಕ್ಷಿತ್ ಕುಮಾರ್ ರವರು ಕಾಣಿಸಿಕೊಂಡಿದ್ದಾರೆ. ಇನ್ಫೋಸಿಸ್ ಸಂಸ್ಥೆಯಿಂದ ಕೊಡ ಮಾಡುವ ಉಚಿತ ಕಲಿಕಾ ವೇದಿಕೆಯಾದ ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್ ದೇಶಾದ್ಯಂತ ಈ ವೇದಿಕೆಗೆ ಕೊಡುಗೆ ನೀಡಿದ ನಾಲ್ಕು ಜನರನ್ನು ಆಯ್ಕೆ ಮಾಡಿ ತನ್ನ

ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್ ಜಾಹೀರಾತಿನಲ್ಲಿ ಪ್ರಾಧ್ಯಾಪಕ ದೀಕ್ಷಿತ್ ಕುಮಾರ್ Read More »

ಏರಿದ ತಾಪಮಾನ : ಉತ್ತರ ಕರ್ನಾಟಕ ನಾಲ್ಕು ಜಿಲ್ಲೆಗಳಲ್ಲಿ ಉಷ್ಣ ಅಲೆ ಏರಿಕೆ | ಹವಾಮಾನ ಇಲಾಖೆ ಎಚ್ಚರಿಕೆ

ಉತ್ತರ ಕರ್ನಾಟಕ ಭಾಗದ ನಾಲ್ಕು ಜಿಲ್ಲೆಗಳಾದ ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಕಲಬುರಗಿಗಳಲ್ಲಿ ಉಷ್ಣ ಅಲೆಯ ಮುನ್ನೆಚ್ಚರಿಕೆ ನೀಡಲಾಗಿದ್ದು, ಎರಡರಿಂದ ಮೂರು ಡಿಗ್ರಿಯಷ್ಟು ಉಷ್ಣಾಂಶ ಏರಿಕೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ವರುಣನ ಆಗಮನಕ್ಕೆ ತಡವಾದ ಕಾರಣ ನೆಲದ ಕಾವು ಏರುತ್ತಿದ್ದು ಈ ನಾಲ್ಕು ಜಿಲ್ಲೆಗಳಲ್ಲಿ ಉಷ್ಣಾಂಶ ಮಿತಿಮೀರಿದೆ. ಆದರಿಂದ ಉಷ್ಣದ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ವಾತಾವರಣದಲ್ಲಿ ತೇವಾಂಶ ಕಡಿಮೆಯಾಗಿ ಗರಿಷ್ಠ ಉಷ್ಣಾಂಶ ಏರಿಕೆಯಾಗಿದೆ ಎಂದು ಹೇಳಲಾಗಿದೆ. ಅಲ್ಲದೇ ಉಷ್ಣಾಂಶ ಇನ್ನೂ

ಏರಿದ ತಾಪಮಾನ : ಉತ್ತರ ಕರ್ನಾಟಕ ನಾಲ್ಕು ಜಿಲ್ಲೆಗಳಲ್ಲಿ ಉಷ್ಣ ಅಲೆ ಏರಿಕೆ | ಹವಾಮಾನ ಇಲಾಖೆ ಎಚ್ಚರಿಕೆ Read More »

ಕೊಕ್ಕೊ ಧಾರಣೆ ಏರಿಕೆ : ರೈತರ ಮುಖದಲ್ಲಿ ಸಂತಸ

ಸುಳ್ಯ: ರೈತರ ಪಾಲಿನ ಆಶಾದಾಯಕ ಬೆಳೆ ಎನಿಸಿರುವ ಕೊಕ್ಕೊ ದರ ಇತಿಹಾಸದಲ್ಲೇ ಕೆ.ಜಿಗೆ ಡಬಲ್ ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿದ್ದು, ಸಾರ್ವಕಾಲಿಕ ದಾಖಲೆ ಬರೆದಿದೆ. ಅತೀ ಹೆಚ್ಚು ಕೊಕ್ಕೊ ಬೆಳೆಯುವ ಪ್ರದೇಶಗಳಲ್ಲಿ ಸುಳ್ಯವೂ ಒಂದು. ರೈತರ ಪಾಲಿಗಿಂದು ಆಶಾದಾಯಕ ಬೆಳೆಯಾಗಿ ಆದಾಯ ಒದಗಿಸುತ್ತಿದೆ. ಈ ಮೊದಲು ಅಡಕೆ ದರ ಏರುತ್ತಾ ಹೋದಾಗ ಕೊಕ್ಕೊ ದರ ಕುಂಟುತ್ತಲೇ ಸಾಗಿತ್ತು. ಮಾ.27ರಂದು ಸುಳ್ಯದಲ್ಲಿ ಕೆಜಿಗೆ 215 ರೂ.ಗೆ ಖರೀದಿಸಲಾಗುತ್ತಿದೆ. ಉತ್ತಮ ದರ ಇದ್ದರೂ ಕೊಕ್ಕೊ ಬೆಳೆ ಫಸಲು ಕಡಿಮೆ ಆಗಿರುವ ಕಾರಣ

ಕೊಕ್ಕೊ ಧಾರಣೆ ಏರಿಕೆ : ರೈತರ ಮುಖದಲ್ಲಿ ಸಂತಸ Read More »

ಪುತ್ತೂರು ವಿಧಾನಸಭಾ ಕ್ಷೇತ್ರ ಚುನಾವಣಾ ನಿರ್ವಹಣಾ ಸಮಿತಿ ಸಭೆ

ಪುತ್ತೂರು: ಲೋಕಸಭಾ ಚುನಾವಣೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆಯಿತು. ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ವಿಭಾಗಗಳ ಪ್ರಮುಖರಿಂದ ಒಟ್ಟು ಕ್ಷೇತ್ರದ ಚುನಾವಣೆಯ ಕೆಲಸಗಳ ಪ್ರಗತಿಯ ವಿವರಣೆಯನ್ನು ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಚನಿಲ ತಿಮ್ಮಪ್ಪ ಶೆಟ್ಟಿಯವರು ಅವಲೋಕಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಪುತ್ತೂರು ಚುನಾವಣೆಯ ಪ್ರಭಾರಿ ಸುಲೋಚನ

ಪುತ್ತೂರು ವಿಧಾನಸಭಾ ಕ್ಷೇತ್ರ ಚುನಾವಣಾ ನಿರ್ವಹಣಾ ಸಮಿತಿ ಸಭೆ Read More »

ಕಡಬದಲ್ಲಿ ಅಕ್ರಮ ಗೋ ವಧೆ ಮಾಡಿ ಮಾಂಸ ತಯಾರಿಕೆ | ಪೊಲೀಸರಿಂದ ದಾಳಿ

ಕಡಬ : ಅಕ್ರಮವಾಗಿ ಗೋವಧೆ ಮಾಡಿ ಮಾಂಸ ಮಾಡುತ್ತಿದ್ದ ಮನೆಯೊಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಕಡಬ ತಾಲೂಕಿನ ಕೊಯಿಲಾ ಕೆಮ್ಮಾರ ಆಕೀರ ಎಂಬಲ್ಲಿ ನಡೆದಿದೆ. ಕಡಬ ತಾಲೂಕು ಕೊಯಿಲಾ ಗ್ರಾಮದ ಕೆಮ್ಮಾರ ಆಕೀರ ಎಂಬಲ್ಲಿ, ಇಲ್ಯಾಸ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ದನವನ್ನು ವಧೆ ಮಾಡಿ ಮಾಂಸ ಮಾಡುತ್ತಿರುವ ಕುರಿತು ಮಾಹಿತಿ ತಿಳಿಸಿದ ಕಡಬ ಪೊಲೀಸ್ ಠಾಣಾ ಪಿ.ಎಸ್.ಐ ಅಭಿನಂಧನ್ ಎಂ.ಎಸ್ ಹಾಗೂ ಸಿಬ್ಬಂದಿಗಳು ಮಾ.28 ರಂದು ಬೆಳಿಗ್ಗೆ ದಾಳಿ ಮಾಡಿದ್ದು, ಕೊಯಿಲ ಗ್ರಾಮದ ಇಲ್ಯಾಸ್ ಮತ್ತು

ಕಡಬದಲ್ಲಿ ಅಕ್ರಮ ಗೋ ವಧೆ ಮಾಡಿ ಮಾಂಸ ತಯಾರಿಕೆ | ಪೊಲೀಸರಿಂದ ದಾಳಿ Read More »

ಪುತ್ತೂರಿನಲ್ಲಿ ಶ್ರೀ ಭಗವತೀ ಸಹಕಾರ ಬ್ಯಾಂಕ್ ನ 8ನೇ ಶಾಖೆ ಶುಭಾರಂಭ

ಪುತ್ತೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ 45 ವರ್ಷಗಳ ಇತಿಹಾಸವಿರುವ, ಮಂಗಳೂರಿನ ಮೊರ್ಗನ್ಸ್ ಗೇಟ್ ಜಪ್ಪುನಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀ ಭಗವತೀ ಸಹಕಾರ ಬ್ಯಾಂಕ್ 8ನೇ ಶಾಖೆ ಮಾ.28 ಗುರುವಾರ ಏಳ್ಮುಡಿ ಮಹಾದೇವಿ ಸಂಕೀರ್ಣದ ಪ್ರಥಮ ಮಹಡಿಯಲ್ಲಿ ಶುಭಾರಂಭಗೊಂಡಿತು. ಮುಖ್ಯ ಅತಿಥಿಯಾಗಿದ್ದ ನ್ಯಾಯವಾದಿ ಪಿ .ಕೆ ಸತೀಶನ್ ಮಾತನಾಡಿ, ಸಹಕಾರ ಸಂಘಗಳಿಗೂ ಸಹಕಾರ ಬ್ಯಾಂಕ್ ಗಳಿಗೂ ವ್ಯತ್ಯಾಸಗಳಿವೆ. ನಗರ ಸಹಕಾರಿ ಬ್ಯಾಂಕ್ ಗಳು ಆರ್ ಬಿ ಐ ಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ಜನರಿಗೆ ಬ್ಯಾಂಕ್ನಿಂದ ಯಾವುದೇ ಸಮಸ್ಯೆ ಉಂಟಾಗಲು

ಪುತ್ತೂರಿನಲ್ಲಿ ಶ್ರೀ ಭಗವತೀ ಸಹಕಾರ ಬ್ಯಾಂಕ್ ನ 8ನೇ ಶಾಖೆ ಶುಭಾರಂಭ Read More »

ರಾಮೇಶ್ವರಂ ಕೆಫೆ : ಪ್ರಮುಖ ಆರೋಪಿ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಬಾಂಬ್ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್ ಶರೀಫ್ ಬಂಧಿತ ಆರೋಪಿ. ಎನ್ ಐ ಎ ಅಧಿಕಾರಿಗಳು ಮೂರು ರಾಜ್ಯಗಳ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಇದೀಗ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಜ್ಯದ 12 ಸ್ಥಳಗಳಲ್ಲಿ, ತಮಿಳುನಾಡಿನ 5, ಉತ್ತರಪ್ರದೇಶದ 1 ಕಡೆ ಸೇರಿದಂತೆ 18 ಕಡೆಗಳಲ್ಲಿ ಎನ್ ಐ ಎ ತಂಡಗಳು ದಾಳಿ ನಡೆಸಿತ್ತು. ಈ ಹಿಂದೆ

ರಾಮೇಶ್ವರಂ ಕೆಫೆ : ಪ್ರಮುಖ ಆರೋಪಿ ಬಂಧನ Read More »

ದ್ವಿಚಕ್ರ ವಾಹನ ಡಿಕ್ಕಿ : ವ್ಯಕ್ತಿ  ಮೃತ್ಯು

ಬೆಳ್ತಂಗಡಿ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಮೃತ ಪಟ್ಟ ಘಟನೆ ಬೆಳ್ತಂಗಡಿ ಸಂತೆಕಟ್ಟೆ ಬಳಿ ಗುರುವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ತೋಟಗಾರಿಕೆ ಇಲಾಖೆ ಸಮೀಪದ ನಿವಾಸಿ, ವಿಜಯ ಬ್ಯಾಂಕ್ ನಿವೃತ್ತ ಉದ್ಯೋಗಿ ಹೇರಾಜೆ ಶೇಖರ‌ ಬಂಗೇರ (66) ಮೃತಪಟ್ಟವರು. ಸ್ಥಳೀಯ ಹೋಟೆಲ್ ಒಂದರಿಂದ ಪಾರ್ಸೆಲ್ ಪಡೆದು ರಸ್ತೆ ದಾಟುತ್ತಿದ್ದ ಸಂದರ್ಭ ದ್ವಿಚಕ್ರ ವಾಹನ ಬಡಿದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಾಗ ದಾರಿಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ದ್ವಿಚಕ್ರ ಸವಾರರು ಕೂಡಾ  ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ

ದ್ವಿಚಕ್ರ ವಾಹನ ಡಿಕ್ಕಿ : ವ್ಯಕ್ತಿ  ಮೃತ್ಯು Read More »

error: Content is protected !!
Scroll to Top