ಲೋಕಾಯುಕ್ತ ಅಧಿಕಾರಿಗಳಿಂದ 60 ಕಡೆ ದಾಳಿ | ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ, ಆದಾಯ ಮೀರಿದ ಸಂಪತ್ತು ಗಳಿಸಿರುವ ಮಾಹಿತಿಯಂತೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 13 ಜಿಲ್ಲೆಗಳಲ್ಲಿ 60 ಕಡೆಗಳಲ್ಲಿ ಏಕಕಾಲದಲ್ಲಿ ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಬಿಬಿಎಂಪಿ ಚೀಫ್ ಇಂಜಿನಿಯರ್ ರಂಗನಾಥ್ ಮನೆ ಸೇರಿ ಹಲವು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಮುಂಜಾನೆಯೇ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ರಂಗನಾಥ್ ಅವರಿಗೆ ಸೇರಿದ ಸದಾಶಿವನಗರ ಹಾಗೂ ಯಲಹಂಕ ಮನೆ ಮೇಲೆ ದಾಳಿ ನಡೆದಿದ್ದು, ಅಧಿಕಾರಿಗಳು ಮಹತ್ವದ ದಾಖಲೆಗಳನ್ನು […]

ಲೋಕಾಯುಕ್ತ ಅಧಿಕಾರಿಗಳಿಂದ 60 ಕಡೆ ದಾಳಿ | ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ Read More »

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

ಬೆಳ್ತಂಗಡಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಬುಧವಾರ ಬೆಳಿಗ್ಗೆ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀ ದೇವಸ್ಥಾನದಲ್ಲಿ ಶ್ರೀ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ  ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. Read More »

ಕೋಟ ಶ್ರೀನಿವಾಸ ಪೂಜಾರಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಕ್ಕೆ ಭೇಟಿ

ಬೆಂಗಳೂರು: ಉಡುಪಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಕ್ಕೆ ಭೇಟಿ ನೀಡಿದರು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ.ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿದರು. ಶ್ರೀಗಳು ಅವರನ್ನು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಮಠದ ಇತರ ಸ್ವಾಮೀಜಿಗಳು, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಕೋಟ ಶ್ರೀನಿವಾಸ ಪೂಜಾರಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಕ್ಕೆ ಭೇಟಿ Read More »

ದೇವರಲ್ಲಿ ದೃಢವಾದ ಭಕ್ತಿಯಿಂದ ಮುಕ್ತಿ ಸಾಧ್ಯ : ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ | ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಪುತ್ತೂರು: ನಾವು ತಾದಾತ್ಮ್ಯದಿಂದ ದೇವರನ್ನು ನಂಬಿಕೊಂಡು ಹೋದರೆ ಯಾವುದೇ ಸಂದರ್ಭದಲ್ಲಿ ದೇವರು ಅನುಗ್ರಹ ಮಾಡುತ್ತಾನೆ ಎಂದು ಎಡನೀರು ಮಠಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳು ನುಡಿದರು. ಅವರು ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ನೂತನ ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮದ ಅಂಗವಾಗಿ ಸೋಮವಾರ ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಜನರಿಗೆ ಬಹಳ ಹತ್ತಿರವಾದ ಸ್ವಾಮಿ ಜನಾರ್ದನ ಸ್ವಾಮಿ. ಪ್ರಸ್ತುತ ದೇವಸ್ಥಾನದ ಕಾರ್ಯಕ್ರಮಗಳಲ್ಲಿ ಮಧ್ಯ ವಯಸ್ಸಿನ

ದೇವರಲ್ಲಿ ದೃಢವಾದ ಭಕ್ತಿಯಿಂದ ಮುಕ್ತಿ ಸಾಧ್ಯ : ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ | ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ Read More »

ಮತದಾನದ ದಿನ ದುಡಿಯುವ ಕಾರ್ಮಿಕರಿಗೆ ರಜೆ ಘೋಷಣೆ | ಚುನಾವಣಾ ಆಯೋಗದಿಂದ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯಾದಂತ ಮತದಾನ ನಡೆಯುವ ದಿನವಾದ ಏ.26 ಹಾಗೂ ಮೇ 7 ರಂದು ಮತದಾನ ಮಾಡಲು ನೌಕರರಿಗೆ ಅನುಕೂಲವಾಗುವಂತೆ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ವೇತನ ಸಹಿತ ನೀಡಬೇಕು ಎಂದು ಚುನಾವಣಾ ಆಯೋಗ ಸೂಚನೆ ನೀಡಿದೆ. ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳು ಹಾಗೂ ಏ.26 ರಂದು ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಮತದಾನದ ದಿನ ಕಾರ್ಮಿಕರಿಗೆ 1963 ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳಡಿಯಲ್ಲಿ ವೇತನ ಸಹಿತ

ಮತದಾನದ ದಿನ ದುಡಿಯುವ ಕಾರ್ಮಿಕರಿಗೆ ರಜೆ ಘೋಷಣೆ | ಚುನಾವಣಾ ಆಯೋಗದಿಂದ ಆದೇಶ Read More »

ಮಾಜಿ ಪವರ್ ಮ್ಯಾನ್‍ ಗಣೇಶ್ ಪೂಜಾರಿ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ !

ಪುತ್ತೂರು: ಮಾಜಿ ಪವರ್ ಮ್ಯಾನ್ ಒಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೊಡಿಪಾಡಿ ರಸ್ತೆಯ ಕುಂದ್ರುಕೋಟೆ ಎಂಬಲ್ಲಿ ನಡೆದಿದೆ. ಮಾಜಿ ಪವರ್ ಮ್ಯಾನ್‍ ಗಣೇಶ್ ಪೂಜಾರಿ (55) ಎಂಬವರ ಮೃತದೇಹ ಪತ್ತೆಯಾದದ್ದು. ಗಣೇಶ್ ಪೂಜಾರಿ ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದು, ಮಾ.25 ರಂದು ಸಂಜೆ ವೇಳೆ ಮನೆ ಸುತ್ತ ವಾಸನೆ ಬರುತ್ತಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದಾಗ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.

ಮಾಜಿ ಪವರ್ ಮ್ಯಾನ್‍ ಗಣೇಶ್ ಪೂಜಾರಿ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ! Read More »

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಚುನಾವಣಾ ಕಚೇರಿ ಉದ್ಘಾಟನೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ಮಂಗಳೂರು ಲಾಲ್’ಭಾಗ್’ನಲ್ಲಿ ಇಂದು ಉದ್ಘಾಟನೆಗೊಂಡಿತು. ಮಂಗಳೂರು ಮಹಾನಗರ ಪಾಲಿಕೆ ಬಳಿಯಲ್ಲಿರುವ ಕಚೇರಿಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ, ಕೆಪಿಸಿಸಿ

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಚುನಾವಣಾ ಕಚೇರಿ ಉದ್ಘಾಟನೆ Read More »

ಡಿ.ಕೆ.ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

ಧರ್ಮಸ್ಥಳ: ಇನ್ನೇನು ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣಾ ಯುದ್ಧ ಆರಂಭಿಸುವ ಮೊದಲು ಶ್ರೀ ಮಂಜುನಾಥ, ಅಣ್ಣಪ್ಪ ಸ್ವಾಮಿಯ ದರ್ಶನ ಪಡೆದುಕೊಳ್ಳುವ ಪದ್ಧತಿ ಇಟ್ಟುಕೊಂಡಿದ್ದೇನೆ ಎಂದು ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಇಂದು ಧರ್ಮಸ್ಥಳ ಭೇಟಿ ನೀಡಿ ಶ್ರೀ ಮಂಜುನಾಥ ದೇವರ ದರ್ಶನ ಪಡೆದ ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಈ ವಿಚಾರ ಹೇಳಿದರು. ಈ ಸಂದರ್ಭದಲ್ಲಿ ಹಲವಾರು ಮಂದಿ ಉಪಸ್ಥಿತರಿದ್ದರು.

ಡಿ.ಕೆ.ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ Read More »

ಕೃಷಿಕ ಶಿವಣ್ಣ ಗೌಡ ಆತ್ಮಹತ್ಯೆ !

ಕಡಬ: ಕೃಷಿಕರೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಬುಡಲೂರಿನಲ್ಲಿ ನಡೆದಿದೆ. ಬುಡಲೂರು ನಿವಾಸಿ ಶಿವಣ್ಣ ಗೌಡ (61) ಆತ್ಮಹತ್ಯೆ ಮಾಡಿಕೊಂಡವರು. ಶಿವಣ್ಣ ಅವರು ಸ್ಥಳೀಯ ಕೃಷಿ ಪತ್ತಿನ ಸಹಕಾರಿ ಸಂಘ ಸೇರಿದಂತೆ ಇನ್ನಿತರ ಸಹಕಾರಿ ಸಂಘದಿಂದ ಸಾಲ ಪಡೆದಿದ್ದು, ವಿಪರೀತ ಸಾಲ ಮಾಡಿ ಮರುಪಾವತಿ ಮಾಡಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮೃತರ ಪುತ್ರ ಹೇಮಂತ್ ಕಡಬ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೃಷಿಕ ಶಿವಣ್ಣ ಗೌಡ ಆತ್ಮಹತ್ಯೆ ! Read More »

ದ್ವಿಚಕ್ರ ವಾಹನಕ್ಕೆ ಜೀಪು ಡಿಕ್ಕಿ : ಇಬ್ಬರು ಮೃತ್ಯು

ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಜೀಪು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರರಿಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಸುರತ್ಕಲ್ ಹೆದ್ದಾರಿ 66 ರಲ್ಲಿ ನಡೆದಿದೆ. ಸುರತ್ಕಲ್ ಕಾನ ನಿವಾಸಿ ನಿಯಾಝ್‍ (47) ಹಾಗೂ ಕುಳಾಯಿ ವಿದ್ಯಾನಗರ ನಿವಾಸಿ ನೋನಯ್ಯ ಮೃತಪಟ್ಟ ದ್ವಿಚಕ್ರ ವಾಹನ ಸವಾರರು. ಇಬ್ಬರೂ ಬೀಡಿ ಕಂಟ್ರಾಕ್ಟ್ ರ್ ಕೆಲಸ ಮಾಡುತ್ತಿದ್ದು, ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದಾಗ ಜೀಪ್‍ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ದ್ವಿಚಕ್ರ ವಾಹನಕ್ಕೆ ಜೀಪು ಡಿಕ್ಕಿ : ಇಬ್ಬರು ಮೃತ್ಯು Read More »

error: Content is protected !!
Scroll to Top