ಅರಣ್ಯ ಪ್ರದೇಶದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಬೆಳ್ತಂಗಡಿ: ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹವೊಂದು ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಬೋಳ್ಮಿನಾರು ಎಂಬಲ್ಲಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಮೃತದೇಹದ ಬಳಿ ಪತ್ತೆಯಾದ ಆಧಾರ್ ಕಾರ್ಡ್‍ ಆಧಾರದಲ್ಲಿ ಮೃತ ವ್ಯಕ್ತಿಯನ್ನು ಪತ್ತೆಹಚ್ಚಲಾಗಿದ್ದು, ಕಳೆಂಜ ಗ್ರಾಮದ ಕಾಯರ್ತಡ್ಕದ ರಾಜು ಜೋಸೆಫ್‍ ಎಂದು ಗುರುತಿಸಲಾಗಿದೆ. ಬುಧವಾರ ಅರಣ್ಯ ಪ್ರದೇಶದಿಂದ ಸೊಪ್ಪು ತರಲು ತೆರಳಿದ್ದ ಸ್ಥಳೀಯರಿಗೆ ಮೃತದೇಹ ಪತ್ತೆಯಾಗಿದ್ದು, ಈ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಾಜು ಜೋಸೆಫ್ ಅವರು ಕೆಲವು ವರ್ಷಗಳ ಹಿಂದೆ ಮನೆ […]

ಅರಣ್ಯ ಪ್ರದೇಶದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹ ಪತ್ತೆ Read More »

ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ | ವೈಭವದಿಂದ ನಡೆಯಿತು ದರ್ಶನ ಬಲಿ, ಬಟ್ಟಲು ಕಾಣಿಕೆ

ಕಡಬ: ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಉತ್ಸವ ಮಾ.14 ರಿಂದ ಆರಂಭಗೊಂಡಿದ್ದು, ವೈಭವದಿಂದ ನಡೆಯುತ್ತಿದೆ. ಜಾತ್ರೋತ್ಸವದ ಅಂಗವಾಗಿ ಮಾ.21 ಗುರುವಾರ ಬೆಳಿಗ್ಗೆ 8.30 ಕ್ಕೆ ಬಲಿ ಹೊರಟು ಉತ್ಸವ, ಮಧ್ಯಾಹ್ನ 12 ಕ್ಕೆ ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಪ್ರಸಾದ ವಿತರಣೆ, ಬಳಿಕ ಮಹಾ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಗೋಪಾಲ ಕೆ., ಭಕ್ತಾದಿಗಳು ಪಾಲ್ಗೊಂಡಿದ್ದರು. ನಾಳೆ ದೇವಸ್ಥಾನದಲ್ಲಿ : ಮಾ.22  ಶುಕ್ರವಾರ ಬೆಳಿಗ್ಗೆ ಬಲಿ ಹೊರಟು

ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ | ವೈಭವದಿಂದ ನಡೆಯಿತು ದರ್ಶನ ಬಲಿ, ಬಟ್ಟಲು ಕಾಣಿಕೆ Read More »

ಅಮಲು ಪದಾರ್ಥ ಸೇವಿಸಿ ಅನುಚಿತ ವರ್ತನೆ | ಇಬ್ಬರು ಪೊಲೀಸ್ ವಶಕ್ಕೆ

ಪುತ್ತೂರು: ನಗರದ ಕಿಲ್ಲೇ ಮೈದಾನದ ಬಳಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸಿದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಬಪ್ಪಳಿಗೆ ನಿವಾಸಿ ಉಮ್ಮರ್ ಫಾರೂಕ್, ಉಳ್ಳಾಲ ಮುಕ್ಕಚೇರಿ ನಿವಾಸಿ ಮೊಹಿದ್ದಿನಿ ಪೊಲೀಸ್ ವಶವಾದವರು. ಪುರಭವನದ ಬಳಿ ಇಬ್ಬರು ಯುವಕರು ಅನುಚಿತವಾಗಿ ವರ್ತಿಸಿರುವ ಕುರಿತು ಮಾಹಿತಿ ತಿಳಿಸಿದ ಪುತ್ತೂರು ನಗರ ಪೊಲೀಸರು ತೆರಳಿದಾಗ ಇಬ್ಬರು ಪರಾರಿಯಾಗಲು ಯತ್ನಿಸಿದ್ದರು. ತಕ್ಷಣ ಇಬ್ಬರನ್ನು ತಡೆದು ವಿಚಾರಿಸಿದಾಗ ಗಾಂಜಾ ನಶೆಯಲ್ಲಿರುವುದು ಕಂಡು ಬಂದಿದೆ. ತಕ್ಷಣ ಅವರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಅಮಲು ಪದಾರ್ಥ

ಅಮಲು ಪದಾರ್ಥ ಸೇವಿಸಿ ಅನುಚಿತ ವರ್ತನೆ | ಇಬ್ಬರು ಪೊಲೀಸ್ ವಶಕ್ಕೆ Read More »

ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಸೇರುವುದಿಲ್ಲ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಿ.ವಿ.ಎಸ್‍.

ಬೆಂಗಳೂರು: ಕಾಂಗ್ರೆಸ್ ಪಕ್ಷ ಸೇರುವಂತೆ ಕಾಂಗ್ರೆಸ್ ಪ್ರಮುಖರಿಂದ ಆಹ್ವಾನ ಬಂದದ್ದು ನಿಜ. ಆದರೆ ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್ ಸೇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. ಬೆಂಗಳೂರಿನ ತನ್ನ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ. ನನಗೆ ಟಿಕೇಟ್ ತಪ್ಪಿದ್ದರಿಂದ ಬಹಳ ನೋವಾಗಿರುವುದು ಸತ್ಯ. ಆದರೆ ನನ್ನ ಈ ಸ್ಥಿತಿಗೆ ಕಾರಣರಾದವರು ಮುಂದೆ ಪ್ರಶ್ಚಾತ್ತಾಪ ಅನುಭವಿಸುತ್ತಾರೆ ಎಂದು ತಿಳಿಸಿದ ಅವರು, ಮುಂದೆ ನಾನು ಪಕ್ಷ ಶುದ್ಧೀಕರಣ ಮಾಡುವತ್ತ ಗಮನ ಹರಿಸುತ್ತೇನೆ ಎಂದಿದ್ದಾರೆ.

ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಸೇರುವುದಿಲ್ಲ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಿ.ವಿ.ಎಸ್‍. Read More »

ಪುತ್ತೂರು ಶಾಸಕರು ಕೋಟಿ-ಕೋಟಿ ಅನುದಾನದ ಮಂತ್ರ ಜಪಿಸುವ ಮೂಲಕ ಜನರನ್ನು ದಾರಿತಪ್ಪಿಸುತ್ತಿದ್ದಾರೆ | ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ | ಅಂಕಿ-ಅಂಶಗಳ ಸಹಿತ ಜನತೆಗೆ ತಿಳಿಸುವ ಕೆಲಸ ಮಾಡಲಿ

ಪುತ್ತೂರು: ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆ ನಡೆದು 300 ದಿನಗಳು ಕಳೆದಿದ್ದು, ಒಂದೆಡೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗ್ಯಾರಂಟಿ ಯೋಜನೆಯಿಂದ ಮುಂದಿನ ಒಂದು ವರ್ಷಗಳ ಕಾಲ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುವುದಿಲ್ಲ ಎಂದು ಹೇಳಿಕೆ ನೀಡಿದ್ದು, ಇನ್ನೊಂದೆಡೆ ಪುತ್ತೂರು ಶಾಸಕರು ಕೋಟಿ ಕೋಟಿ ಅನುದಾನಕ್ಕೆ ಶಿಲಾನ್ಯಾಸ ನೆರವೇರಿಸು ಮೂಲಕ ಅಭಿವೃದ್ಧಿಯ ಮಂತ್ರ ಜಪಿಸುತ್ತಿದ್ದು, ಈ ಮೂಲಕ ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುತ್ತೂರು ವಿಧಾನಸಭಾ

ಪುತ್ತೂರು ಶಾಸಕರು ಕೋಟಿ-ಕೋಟಿ ಅನುದಾನದ ಮಂತ್ರ ಜಪಿಸುವ ಮೂಲಕ ಜನರನ್ನು ದಾರಿತಪ್ಪಿಸುತ್ತಿದ್ದಾರೆ | ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ | ಅಂಕಿ-ಅಂಶಗಳ ಸಹಿತ ಜನತೆಗೆ ತಿಳಿಸುವ ಕೆಲಸ ಮಾಡಲಿ Read More »

ಲೋಕಸಭಾ ಚುನಾವಣೆ | ಮೂರು ಕೋಟಿಗೂ ಅಧಿಕ ಮೌಲ್ಯದ ಮದ್ಯ, ಡ್ರಗ್ಸ್ ವಶ

ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ಬಳಿಕ ಮಾ.20 ರವರೆಗೆ 12,300 ರೂಪಾಯಿ ಮೌಲ್ಯದ 21.34 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 3,13,500 ರೂ.ಗಳ ಮೌಲ್ಯದ 1.65 ಕೆಜಿ ಡ್ರಗ್ಸ್ ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ನೀತಿ ಸಂತೆ ಜಾರಿಯಾದ ದಿನದಿಂದ ಮಾ.20ವರೆಗೆ ದೂರವಾಣಿ ಮೂಲಕ (1950) ಸಾರ್ವಜನಿಕರಿಂದ 75 ಕರೆಗಳನ್ನು ಸ್ವೀಕರಿಸಿ ಸ್ಪಂದಿಸಲಾಗಿದೆ ಸಿ-ಸಿಲ್ ಆಪ್ ಮೂಲಕ 11 ದೂರುಗಳು ಸ್ವೀಕೃತಗೊಂಡಿದೆ. ಈ ಎಲ್ಲಾ ದೂರುಗಳನ್ನು ವಿಲೇವಾರಿ ಮಾಡಲಾಗಿದೆ. ಎನ್.

ಲೋಕಸಭಾ ಚುನಾವಣೆ | ಮೂರು ಕೋಟಿಗೂ ಅಧಿಕ ಮೌಲ್ಯದ ಮದ್ಯ, ಡ್ರಗ್ಸ್ ವಶ Read More »

ಅಕ್ಷಯ ಕಾಲೇಜಿನಲ್ಲಿ ಇಂದು ಯುಜಿ ಮಟ್ಟದ ಇಂಟರ್ ಕೊಲೇಜಿಯೇಟ್ ಫೆಸ್ಟ್ ‘ಕೃತ್ವ-2024’ |ಮಾ.22-23: ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಇಂದು ಯುಜಿ ಮಟ್ಟದ ಇಂಟರ್ ಕೊಲೇಜಿಯೇಟ್ ಫೆಸ್ಟ್ ‘ಕೃತ್ವ-2024’ ನಡೆಯಲಿದೆ. ಇಂದು ಬೆಳಿಗ್ಗೆ ಕಾಲೇಜು ಚೇರ್ ಮ್ಯಾನ್ ಜಯಂತ ನಡುಬೈಲ್ ಅಧ್ಯಕ್ಷತೆಯಲ್ಲಿ ಸಮಾರಂಭ ಉದ್ಘಾಟನೆಗೊಳ್ಳಲಿದೆ. ಸಂಜೆ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಮಾ. 22. ಹಾಗೂ 23ರಂದು ಅಕ್ಷಯ ವೈಭವ ಕಾಲೇಜಿನ ವಾರ್ಷಿಕೋತ್ಸವ ಆಚರಣೆ ಜರುಗಲಿದೆ. ಸಂಜೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ನಿರ್ದೇಶಕಿ ಕಲಾವತಿ ಜಯಂತ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಆ್ಯಂಕರ್ ಬಡೆಕ್ಕಿಲ ಪ್ರದೀಪ್, ಸಾಲೂನ್ ಗ್ರೂಪ್ಸ್ ನ ಪ್ರಭಾಕರ

ಅಕ್ಷಯ ಕಾಲೇಜಿನಲ್ಲಿ ಇಂದು ಯುಜಿ ಮಟ್ಟದ ಇಂಟರ್ ಕೊಲೇಜಿಯೇಟ್ ಫೆಸ್ಟ್ ‘ಕೃತ್ವ-2024’ |ಮಾ.22-23: ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ Read More »

ಮರಳು ದಂಧೆಕೋರರ ಅಟ್ಟಹಾಸಕ್ಕೆ ಕಿಂಡಿ ಅಣೆಕಟ್ಟಿನ ನೀರು ಖಾಲಿ | ತಮ್ಮ ಸ್ವಾರ್ಥಕ್ಕಾಗಿ ಅಣೆಕಟ್ಟಿನ ಹಲಗೆ ಜಾರಿಸುತ್ತಿರುವವರು ಯಾರು ? ಸ್ಥಳೀಯರಿಂದ ಆಕ್ರೋಶ

ಆಲಂಕಾರು: ಕಡಬ ತಾಲೂಕಿನ ಆಲಂಕಾರು- ಸವಣೂರು ಸಂಪರ್ಕ ರಸ್ತೆಯಲ್ಲಿ ಬರುವ ಶಾಂತಿಮೊಗರು ಎಂಬಲ್ಲಿ ಕುಮಾರಧಾರ ನದಿಗೆ ಅಡ್ಡಲಾಗಿರುವ ಕಿಂಡಿ ಅಣೆಕಟ್ಟಿಗೆ ಕಳೆದ ಎರಡು ತಿಂಗಳ ಹಿಂದೆ ಹಲಗೆ ಜೋಡಣೆಯಾಗಿ ಭರಪೂರ ನೀರು ಸಂಗ್ರಹವಾಗಿದ್ದರೂ, ಮರಳು ದಂಧೆಕೋರರ ಅಟ್ಟಹಾಸಕ್ಕೆ ನೀರು ಕಡಿಮೆಯಾಗಿರುವುದು ಬೆಳಕಿಗೆ ಬಂದಿದೆ. ನೀರು ಏಕಾಏಕಿ ಕಡಿಮೆಯಾಗಿರುವುದರ ಕುರಿತು ಮಾಹಿತಿ ಕಲೆ ಹಾಕಲು ತೆರಳಿದಾಗ ಈ ಜಾಗದಲ್ಲಿ ಅಕ್ರಮ ಮರಳುಗಾರಿಕೆ ಮಾಡುವವರು ತಮ್ಮ ಸ್ವಾರ್ಥಕ್ಕಾಗಿ ನೀರು ಸೋರಿಕೆಯಾಗುವಂತೆ ಮಾಡುತ್ತಿರುವುದು ತಿಳಿದು ಬಂದಿದೆ. ನೀರು ವಿಪರೀತ ಸಂಗ್ರಹವಾಗಿರುವುದರಿಂದ ಮರಳು

ಮರಳು ದಂಧೆಕೋರರ ಅಟ್ಟಹಾಸಕ್ಕೆ ಕಿಂಡಿ ಅಣೆಕಟ್ಟಿನ ನೀರು ಖಾಲಿ | ತಮ್ಮ ಸ್ವಾರ್ಥಕ್ಕಾಗಿ ಅಣೆಕಟ್ಟಿನ ಹಲಗೆ ಜಾರಿಸುತ್ತಿರುವವರು ಯಾರು ? ಸ್ಥಳೀಯರಿಂದ ಆಕ್ರೋಶ Read More »

ಪ್ರವೀಣ್‍ ನೆಟ್ಟಾರು ಮನೆಗೆ ಕ್ಯಾ.ಬ್ರಿಜೇಶ್‍ ಚೌಟ ಭೇಟಿ

ಬೆಳ್ಳಾರೆ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ದಿ. ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಗುರುವಾರ ಭೇಟಿ ನೀಡಿದರು. ಭೇಟಿ ನೀಡಿದ ಸಂದರ್ಭ ನೆಟ್ಟಾರು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಅವರ ಕುಟುಂಬದ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರವೀಣ್‍ ನೆಟ್ಟಾರು ಮನೆಗೆ ಕ್ಯಾ.ಬ್ರಿಜೇಶ್‍ ಚೌಟ ಭೇಟಿ Read More »

ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ, ಸಹಸಂಚಾಲಕರ ಆಯ್ಕೆ | ಸುಳ್ಯ ನಿರ್ವಹಣಾ ಸಮಿತಿ ಸಂಚಾಲಕರಾಗಿ ಹರೀಶ್‍ ಕಂಜಿಪಿಲಿ, ಸಹಸಂಚಾಲಕರಾಗಿ ದಿನೇಶ್‍ ಮೆದು

ಸುಳ್ಯ: ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಹಾಗೂ ಸಹಸಂಚಾಲಕರನ್ನು ನೇಮಕ ಮಾಡಲಾಗಿದೆ. ಲೋಕಸಭೆ ಚುನಾವಣೆಗೆ ಸುಳ್ಯ ವಿಧಾನಸಭೆಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಸುಳ್ಯ ಮಂಡಲ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಹರೀಶ್ ಕಂಜಿಪಿಲಿ ಹಾಗೂ ಸಹಸಂಚಾಲಕರಾಗಿ ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‍ ಕುಂಪಲ ಈ ನೇಮಕ ಮಾಡಿದ್ದಾರೆ.

ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ, ಸಹಸಂಚಾಲಕರ ಆಯ್ಕೆ | ಸುಳ್ಯ ನಿರ್ವಹಣಾ ಸಮಿತಿ ಸಂಚಾಲಕರಾಗಿ ಹರೀಶ್‍ ಕಂಜಿಪಿಲಿ, ಸಹಸಂಚಾಲಕರಾಗಿ ದಿನೇಶ್‍ ಮೆದು Read More »

error: Content is protected !!
Scroll to Top