ಮೂರು ವರ್ಷದ ಮಗುವಿಗೆ ಆಟೋ ಡಿಕ್ಕಿ : ಮಗು ಮೃತ್ಯು

ಬೆಳ್ತಂಗಡಿ: ಮೂರು ವರ್ಷ ಮಗುವೊಂದು ಮನೆಯಿಂದ ರಸ್ತೆಗೆ ಬಂದಾಗ ಆಟೋ ರಿಕ್ಷಾ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಸೋಣಂದೂರಿನ ಪಣಕಜೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಣಕಜೆ ಮುಂಡಾಡಿ ನಿವಾಸಿ ಚಂದ್ರಶೇಖರ್ ಹಾಗೂ ಉಷಾ ದಂಪತಿ ಪುತ್ರ ಕೌಶಿಕ್‍ ಮೃತಪಟ್ಟ ಮಗು. ರಸ್ತೆ ಬದಿಯಲ್ಲೇ ಮನೆಯಿದ್ದು, ಯಾರೂ ಇಲ್ಲದ ವೇಳೆ ಮಗು ರಸ್ತೆಗೆ ಓಡಿಬಂದಿದೆ. ಈ ಸಂದರ್ಭ ಬಂದ ಆಟೋ ರಿಕ್ಷಾ ಮಗುವಿಗೆ ಡಿಕ್ಕಿ ಹೊಡದಿದೆ. ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗದೆ ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಬೆಳ್ತಂಗಡಿ […]

ಮೂರು ವರ್ಷದ ಮಗುವಿಗೆ ಆಟೋ ಡಿಕ್ಕಿ : ಮಗು ಮೃತ್ಯು Read More »

ಐದು ಗೋಣಿ ಸುಲಿದ ಅಡಿಕೆ ಕಳವು : ಪ್ರಕರಣ ದಾಖಲು

ಬೆಳ್ಳಾರೆ: ಸುಲಿದು ದಾಸ್ತಾನಿಟ್ಟಿದ್ದ ಐದು ಗೋಣಿ ಅಡಿಕೆ ಕಳವಾದ ಘಟನೆ ಸುಳ್ಯ ತಾಲೂಕಿನ ಕುಳ್ಳಂಪಾಡಿಯಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕಳವು ನಡೆದಿದ್ದು, ಕುಳ್ಳಂಪಾಡಿ ನಿವಾಸಿ ಹಿರಿಯಣ್ಣ ಗೌಡರು ಮೂರು ದಿನಗಳ ಹಿಂದೆ ಕುಟುಂಬ ಸಮೇತ ತನ್ನ ಅಕ್ಕನ ಮನೆಗೆ ಹೋದವರು ಮನೆಗೆ ಬಂದು ನೋಡಿದಾಗ ಸುಲಿದಿಟ್ಟಿದ್ದ ಅಡಿಕೆ ಐದು ಗೋಣಿ ಅಡಿಕೆ ಕಳವಾಗಿರುವುದು ಬೆಳಕಿ ಬಂದಿದೆ. ಕಳವಾದ ಅಡಿಕೆ ಮೌಲ್ಯ ಒಂದು ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಕುರಿತು ಬೆಳ್ಳಾರೆ ಠಾಣೆಗೆ ದೂರು

ಐದು ಗೋಣಿ ಸುಲಿದ ಅಡಿಕೆ ಕಳವು : ಪ್ರಕರಣ ದಾಖಲು Read More »

ಅರುಣ್ ಕುಮಾರ್ ಪುತ್ತಿಲ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ | ಆತ್ಮೀಯವಾಗಿ ಬರಮಾಡಿಕೊಂಡ ಬಿಜೆಪಿ ಪ್ರಮುಖರು

ಪುತ್ತೂರು: ಬಿಜೆಪಿ ಜತೆ ಪುತ್ತಿಲ ಪರಿವಾರ ವಿಲೀನಗೊಂಡ ಬೆನ್ನಲ್ಲೇ ಅರುಣ್ ಕುಮಾರ್ ಪುತ್ತಿಲ ಪುತ್ತೂರು ಬಿಜೆಪಿ ಕಚೇರಿಗೆ ಭಾನುವಾರ ಭೇಟಿ ನೀಡಿದರು. ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಪುತ್ತಿಲರನ್ನು ಸ್ವಾಗತಿಸಿದರು. ಪುತ್ತಿಲರ ಜತೆ ಪ್ರಸನ್ನ ಕುಮಾರ್ ಮಾರ್ತ, ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ ಸಹಿತ ಹಲವಾರು ಮಂದಿ ಇದ್ದರು. ಬಿಜೆಪಿ ಪ್ರಮುಖರಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ಹರಿಪ್ರಸಾದ್ ಯಾದವ್, ಜಿಲ್ಲಾ ಬಿಜೆಪಿ ಪ್ರಮುಖರಾದ ಬೂಡಿಯಾರ್ ರಾಧಾಕೃಷ್ಣ

ಅರುಣ್ ಕುಮಾರ್ ಪುತ್ತಿಲ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ | ಆತ್ಮೀಯವಾಗಿ ಬರಮಾಡಿಕೊಂಡ ಬಿಜೆಪಿ ಪ್ರಮುಖರು Read More »

ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರು-ಸದಸ್ಯರ ಅಧಿಕಾರ ಸ್ವೀಕಾರ

ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಕಚೇರಿಯೊಳಗೆ ಇನ್ನು ಮುಂದೆ ಭ್ರಷ್ಟಾಚಾರ ಸಹಿತ ಮಧ್ಯವರ್ತಿಗಳಿಗೆ  ಬ್ರೋಕರ್‌ಗಳಿಗಅವಕಾಶವಿಲ್ಲ. ಬಡವರ ಕೆಲಸವನ್ನು ದೇವರ ಕೆಲಸವೆಂದು ಭಾವಿಸಿ ಮಾಡಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು. ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ, ನ್ಯಾಯವಾದಿ ಭಾಸ್ಕರ ಗೌಡ ಕೋಡಿಂಬಾಳ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಶಾಸಕರು ಮಾತನಾಡಿದರು. ನಾನು ಶಾಸಕನಾದ ಮೇಲೆ ಎಲ್ಲ ಕಚೇರಿಗಳ ಕಾರ್ಯವೈಖರಿಯನ್ನು ಹತ್ತಿರದಿಂದ ಗಮನಿಸಿದ್ದೇನೆ. ಇದುವರೆಗೂ ಒಮ್ಮೆಯೂ ಪ್ರಾಧಿಕಾರದ ಕಚೇರಿಗೆ ಬಂದಿಲ್ಲ. ಇಲ್ಲಿನ ಕೆಲವೊಂದು ಕಾನೂನು,

ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರು-ಸದಸ್ಯರ ಅಧಿಕಾರ ಸ್ವೀಕಾರ Read More »

ಅರುಣ್ ಕುಮಾರ್ ಪುತ್ತಿಲ ಮಂಗಳೂರು ಬಿಜೆಪಿ ಕಚೇರಿಗೆ ಭೇಟಿ | ಸ್ವಾಗತಿಸಿದ ಕಾರ್ಯಕರ್ತರು

ಮಂಗಳೂರು: ಅರುಣ್ ಕುಮಾರ್ ಪುತ್ತಿಲ ಇಂದು ಸಂಜೆ ಮಂಗಳೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದಾಗ ಅವರನ್ನು ಶಾಲು ಹಾಕಿ ಸ್ವಾಗತಿಸಲಾಯಿತು. ಅರುಣ್ ಕುಮಾರ್ ಪುತ್ತಿಲ ಮಂಗಳೂರಿಗೆ ಭೇಟಿ ನೀಡುವ ಸುದ್ದಿ ತಿಳಿಯುತ್ತಿದ್ದಂತೆ ಹಲವಾರು ಕಾರ್ಯಕರ್ತರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಹಲವಾರು ಮಂದಿ ಬಿಜೆಪಿ ಕಚೇರಿ ಮುಂದೆ ಜಮಾಯಿಸಿದ್ದಾರೆ ಎನ್ನಲಾಗಿದೆ.

ಅರುಣ್ ಕುಮಾರ್ ಪುತ್ತಿಲ ಮಂಗಳೂರು ಬಿಜೆಪಿ ಕಚೇರಿಗೆ ಭೇಟಿ | ಸ್ವಾಗತಿಸಿದ ಕಾರ್ಯಕರ್ತರು Read More »

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ ವಿವಿಧ ಅಕಾಡೆಮಿ/ಪ್ರಾಧಿಕಾರಗಳಿಗೆ ಅಧ್ಯಕ್ಷ, ಸದಸ್ಯರ ನೇಮಕ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ ವಿವಿಧ ಅಕಾಡೆಮಿಗಳಿಗೆ/ಪ್ರಾಧಿಕಾರಗಳಿಗೆ ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸಿ ಆದೇಶಿಸಲಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರುಗಳಾಗಿ ಡಾ.ಪುರುಷೋತ್ತಮ (ನವದೆಹಲಿ), ಪ್ರೊ.ರಾಮಚಂದ್ರಪ್ಪ (ದಾವಣಗೆರೆ), ಡಾ.ವಿ.ಪಿ.ನಿರಂಜನಾರಾಧ್ಯ (ಬೆಂಗಳೂರು), ಟಿ.ಗುರುರಾಜ್ (ಮೈಸೂರು), ಡಾ.ರವಿಕುಮಾರ್ ನೀಹ (ತುಮಕೂರು), ದಾಕ್ಷಾಯಿಣಿ ಹುಡೇದ (ವಿಜಯಪುರ), ಯಾಕೂಬ್ ಖಾದರ್ (ಕುಂದಾಪುರ), ವಿರೂಪಣ್ಣ ಕಲ್ಲೂರು (ಕೊಪ್ಪಳ) ನೇಮಿಸಲಾಗಿದೆ. ಉಳಿದಂತೆ ಕುವೆಂಪು ಭಾಷಾ ಬಾರತಿ ಪ್ರಾಧಿಕಾರ, ಕನ್ನಡ ಪುಸ್ತಕ ಪ್ರಾಧಿಕಾರ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ ವಿವಿಧ ಅಕಾಡೆಮಿ/ಪ್ರಾಧಿಕಾರಗಳಿಗೆ ಅಧ್ಯಕ್ಷ, ಸದಸ್ಯರ ನೇಮಕ Read More »

ಕೇಂದ್ರ ಚುನಾವಣಾ ಆಯೋಗದಿಂದ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟ

ಬೆಂಗಳೂರು: ಲೋಕಸಭಾ ಚುನಾವಣೆ ದಿನಾಂಕ ಪ್ರಕಟವಾಗಿದ್ದು, ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ  ಏಪ್ರೀಲ್ 26 ಹಾಗು ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆದು ಜೂನ್ 4 ರಂದು ಸಾರ್ವತ್ರಿಕ ಚುನಾವಣೆಯ ಪಲಿತಾಂಶ ಘೋಷಣೆಯಾಗಲಿದೆ. ಇಂದು ದೆಹಲಿಯ ವಿಜ್ಞಾನ್ ಭವನದಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಟಿ ನಡೆಸಿದ್ದು, ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ಕುಮಾ‌ರ್ ಅವರ ನೇತೃತ್ವದ ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಿದೆ.

ಕೇಂದ್ರ ಚುನಾವಣಾ ಆಯೋಗದಿಂದ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟ Read More »

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಹಕಾರ ಸಂಘದ ಪುತ್ತೂರು ಶಾಖೆ ಶುಭಾರಂಭ

ಪುತ್ತೂರು: ಮುಂದಿನ ಅಧಿವೇಶನದಲ್ಲಿ ನನ್ನ ಮೊದಲ ಪ್ರಶ್ನೆ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಸಂಭಾವನೆ ಹೆಚ್ಚಳದ ಕುರಿತು. ಹೀಗೆಂದು ಹೇಳಿದರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ. ಅವರು ಶನಿವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಹಕಾರ ಸಂಘದ ಪುತ್ತೂರು ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ಈ ಹಿಂದೆ ಅಧಿವೇಶದನದಲ್ಲಿ ನಿಮ್ಮ ಸಂಭಾವನೆ ಕುರಿತು ಪ್ರಶ್ನಿಸಿದ್ದೆ ಎಂದ ಅವರು, ಇತ್ತೀಚೆಗೆ ನಡೆದ ನಡೆದ ಗ್ಯಾರಂಟಿ ಸಮಾವೇಶದಲ್ಲಿ ಮಹಿಳೆಯರನ್ನು

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಹಕಾರ ಸಂಘದ ಪುತ್ತೂರು ಶಾಖೆ ಶುಭಾರಂಭ Read More »

ಮಾ.30 : ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳ

ಪುತ್ತೂರು: 38ನೇ ವರ್ಷದ ವಿಜಯ-ವಿಕ್ರಮ ಜೋಡುಕರೆ ಕಂಬಳ ಉಬರ್ ಕಂಬಳ ಉತ್ಸವ ಮಾ. 30ರಂದು ಬೆಳಿಗ್ಗೆ 10.31ಕ್ಕೆ ಕೂಟೇಲು ನದಿ ಕಿನಾರೆಯಲ್ಲಿ ನಡೆಯಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಳಿಗ್ಗೆ 8.30ಕ್ಕೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಿಂದ ಹೊರಡುವ ಮೆರವಣಿಗೆಗೆ ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಚಾಲನೆ ನೀಡಲಿರುವರು.6ರಿಂದ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದು, ಸಭಾಪತಿ ಯು. ಟಿ. ಖಾದರ್,

ಮಾ.30 : ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳ Read More »

ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನ ವೈಭವದ ಜಾತ್ರೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ

ಪುತ್ತೂರು : ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಶನಿವಾರ ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ ಜರಗಿತು. 9 ಕ್ಕೆ  ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆದು ಬಳಿಕ ಪ್ರಸಾದ ವಿತರಣೆಯಾಯಿತು. ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯಂ.ಲೋಕಪ್ಪ ಗೌಡ ಕರೆಮನೆ, ಸದಸ್ಯರಾದ ರಮೇಶ

ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನ ವೈಭವದ ಜಾತ್ರೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ Read More »

error: Content is protected !!
Scroll to Top