ಮಾ.14-24:  ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರೋತ್ಸವ | ಧ್ವಜಾರೋಹಣದ ಮೂಲಕ ಜಾತ್ರೋತ್ಸವಕ್ಕೆ ವೈಭವದ ಚಾಲನೆ

ಪುತ್ತೂರು: ಕಡಬ ತಾಲೂಕು ಆಲಂಕಾರು ಗ್ರಾಮದ ಶರವೂರು ಶ್ರೀ ದೇವಿಯ ವರ್ಷಾವಧಿ ಉತ್ಸವ ಮಾ.14 ರಿಂದ ಆರಂಭಗೊಂಡಿದ್ದು, ಮಾ. 23 ರ ವರೆಗೆ ನಡೆಯಲಿದೆ. ಮಾ.14 ಬೆಳಗ್ಗೆ 8 ರಿಂದ ಸ್ವಸ್ತಿ ಪುಣ್ಯಾಹ ವಾಚನ, ನವಕ ಪ್ರಧಾನ, ಗಣಹೋಮ ಕಲಶಾಭಿಶೇಕ, ಗೊನೆ ಮುಹೂರ್ತ, ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಿತು. ರಾತ್ರಿ 7 ಕ್ಕೆ ಧ್ವಜಾರೋಹಣ, ನಿತ್ಯಬಲಿ, ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ನಡೆಯಿತು. ಮಾ.15 ಮಧ್ಯಾಹ್ನ 12 ರಿಂದ ಮಹಾಪೂಜೆ, ನಿತ್ಯಬಲಿ ನಡೆದು ಪ್ರಸಾದ ವಿತರಣೆ. ರಾತ್ರಿ […]

ಮಾ.14-24:  ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರೋತ್ಸವ | ಧ್ವಜಾರೋಹಣದ ಮೂಲಕ ಜಾತ್ರೋತ್ಸವಕ್ಕೆ ವೈಭವದ ಚಾಲನೆ Read More »

ಕೆಲಸ ಕೊಡಿಸುವ ನೆಪದಲ್ಲಿ ಯುವತಿಯ ಅತ್ಯಾಚಾರ !

ಪುತ್ತೂರು: ಯುವತಿಯೋರ್ವಳನ್ನು ಇಬ್ಬರು ಯುವಕರು ಅತ್ಯಾಚಾರ ಮಾಡಿರುವ ಘಟನೆ ಕೆಮ್ಮಾಯಿಯ ಮನೆಯೊಂದರಲ್ಲಿ ನಡೆದಿದೆ. ವಾಮಂಜೂರು ಮೂಲಕ ಯುವತಿ ಎಂದು ಹೇಳಲಾಗಿದ್ದು, ಕರ್ವೇಲು ಹಾಗೂ ಕಡೇಶ್ವಾಲ್ಯದ ಇಬ್ಬರು ಯುವಕರು ಕೆಲಸ ಕೊಡಿಸುವ ನೆಪದಲ್ಲಿ ಅತ್ಯಾಚಾರ ಮಾಡಿರುವುದಾಗಿ ತಿಳಿದು ಬಂದಿದೆ. ಯುವಕರಿಬ್ಬರು ಪರಾರಿಯಾಗಿದ್ದು, ತಕ್ಷಣ ಶೋಧ ನಡೆಸಿದ ಪೊಲೀಸರ ವಶಕ್ಕೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಯುವತಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಕೆಲಸ ಕೊಡಿಸುವ ನೆಪದಲ್ಲಿ ಯುವತಿಯ ಅತ್ಯಾಚಾರ ! Read More »

ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸಂಘಟನೆಯ ಆಧಾರದಲ್ಲಿ ಚುನಾವಣೆ ಪ್ರಚಾರ : ಕ್ಯಾ.ಬ್ರಿಜೇಶ್ ಚೌಟ

ಪುತ್ತೂರು: ಹಿರಿಯರು ರಕ್ತ ಮತ್ತು ಬೆವರನ್ನು ಒಂದು ಮಾಡಿ ಕಟ್ಟಿದ ಅಂತ್ಯಂತ ದೊಡ್ಡ ರಾಷ್ಟ್ರೀಯ ಪಕ್ಷ ಬಿಜೆಪಿ. ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬ ಸಂಕಲ್ಪದಂತೆ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕೆಲಸ ಕಾರ್ಯಗಳನ್ನು ಮಾಡಲಿದ್ದೇನೆ ಎಂದು ಲೋಕಸಭೆ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಹೇಳಿದರು. ಅವರು ಗುರುವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಚ್ಯುತಿ ಬಾರದಂತೆ ಸಂಘಟನೆಯ ಆಧಾರದಲ್ಲಿ

ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸಂಘಟನೆಯ ಆಧಾರದಲ್ಲಿ ಚುನಾವಣೆ ಪ್ರಚಾರ : ಕ್ಯಾ.ಬ್ರಿಜೇಶ್ ಚೌಟ Read More »

ದ.ಕ.ಲೋಕಸಭೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಪುತ್ತೂರಿಗೆ ಭೇಟಿ | ಅಮರ ಜವಾನ್ ಸ್ಮಾರಕಕ್ಕೆ ಸೆಲ್ಯೂಟ್

ಪುತ್ತೂರು: ಲೋಕಸಭೆ ದಕ್ಷಿಣ ಕನ್ನಡ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಗುರುವಾರ ಸಂಜೆ ಪುತ್ತೂರಿಗೆ ಭೇಟಿ ನೀಡಿದರು. ಮೊದಲಿಗೆ ಪುತ್ತೂರಿನ ಆಡಳಿತ ಸೌಧದ ಬಳಿ ಇರುವ ಅಮರ ಜವಾನ್ ಸ್ಮಾರಕದ ಬಳಿ ತೆರಳಿ ಸ್ಮಾರಕಕ್ಕೆ ಹೂಗುಚ್ಛ ಅರ್ಪಿಸಿ ಸೆಲ್ಯೂಟ್ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರು, ಮಾಜಿ ಸೈನಿಕರು ಉಪಸ್ಥಿತರಿದ್ದರು.

ದ.ಕ.ಲೋಕಸಭೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಪುತ್ತೂರಿಗೆ ಭೇಟಿ | ಅಮರ ಜವಾನ್ ಸ್ಮಾರಕಕ್ಕೆ ಸೆಲ್ಯೂಟ್ Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ !

ಉಪ್ಪಿನಂಗಡಿ: ಗೋಳಿತೊಟ್ಟು ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಪಲ್ಟಿಯಾಗಿದ್ದು, ಕಾರು ಚಾಲಕ ಸಹಿತ ಮೂರು ಮಂದಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ! Read More »

ಎರಡು ಕಾರುಗಳ ನಡುವೆ ಡಿಕ್ಕಿ | ಹಲವರಿಗೆ ಗಾಯ

ಪುತ್ತೂರು: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸಂಟ್ಯಾರಿನಲ್ಲಿ ಇಂದು ನಡೆದಿದೆ. ಪೋರ್ಡ್‍ ಹಾಗೂ ಇನ್ನೋವಾ ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇನ್ನೋವಾ ಕಾರು ಚಾಲಕ ಸಹಿತ ಹಲವರಿಗೆ ಗಾಯಗಳಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸಂಭವಿಸಿದ ಪರಿಣಾಮ ಟ್ರಾಫಿಕ್‍ ಜ್ಯಾಮ್‍ ನಿಂದಾಗಿ ಸಂಚಾರಕ್ಕೆ ಸಮಸ್ಯೆ ಉಂಟಾಯಿತು.

ಎರಡು ಕಾರುಗಳ ನಡುವೆ ಡಿಕ್ಕಿ | ಹಲವರಿಗೆ ಗಾಯ Read More »

ಲಿಟ್ಲ್ ಫ್ಲವರ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಇನ್‌ಸ್ಪೈರ್‌ ಅವಾರ್ಡ್‌ ಗೆ ಆಯ್ಕೆ

ಪುತ್ತೂರು: ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಲ್ಲಿನ ವಿಜ್ಞಾನ ಪ್ರತಿಭೆ ಹೊರ ತರುವ ಉದ್ದೇಶದಿಂದ ಕೇಂದ್ರ ಸರಕಾರ ಆರಂಭಿಸಿರುವ ‘ ಇನ್‌ಸ್ಪೈರ್‌ ಅವಾರ್ಡ್’ ಕಾರ್ಯಕ್ರಮದಡಿ ದರ್ಬೆ ಲಿಟ್ಲ್ ಫ್ಲವರ್ ಶಾಲೆಯ 7 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ‘ಹೈ ವೋಲ್ಟೇಜ್ ಡಿಟೆಕ್ಟರ್’ ಎನ್ನುವ ಪರಿಕಲ್ಪನೆಯನ್ನು ಮಂಡಿಸಿದ ಭಾರವಿ ಕೆ. ಭಟ್ ಹಾಗೂ ‘ನೂಡಲ್ಸ್ ಮೇಕಿಂಗ್ ಮಷೀನ್’ ಎನ್ನುವ ಪರಿಕಲ್ಪನೆಯನ್ನು ಮಂಡಿಸಿದ ಗಗನ್ ಇನ್‌ಸ್ಪೈರ್‌ ಅವಾರ್ಡ್ ಗೆ ಆಯ್ಕೆಯಾಗಿದ್ದಾರೆ. ಈ ಕುರಿತು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ

ಲಿಟ್ಲ್ ಫ್ಲವರ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಇನ್‌ಸ್ಪೈರ್‌ ಅವಾರ್ಡ್‌ ಗೆ ಆಯ್ಕೆ Read More »

ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀ ದೇವಿಗೆ ಸೂರ್ಯರಶ್ಮಿಯ ಸ್ಪರ್ಶ, ದೇವಿಗೆ ವಿಶೇಷ ಪೂಜೆ

ಪುತ್ತೂರು: ಪುತ್ತೂರು ರೈಲು ನಿಲ್ದಾಣದ ಬಳಿಯ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಗುರುವಾರ ಮೀನ ಸಂಕ್ರಮಣದಂದು ಮುಂಜಾನೆ ಸೂರ್ಯನ ಕಿರಣಗಳು ಕ್ಷೇತ್ರದ ಮೂರು ಬಾಗಿಲುಗಳನ್ನು ದಾಟಿ ಗರ್ಭಗುಡಿಯಲ್ಲಿ ನೆಲೆಯಾಗಿರುವ ದೇವಿಯ ಬಿಂಬಕ್ಕೆ ಸ್ಪರ್ಶವಾಯಿತು. ಕ್ಷೇತ್ರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಮೀನ ಸಂಕ್ರಮಣದ ದಿನ ಗರ್ಭಗುಡಿಯಲ್ಲಿರುವ ಮಹಾಲಕ್ಷ್ಮೀ ದೇವಿಯ ಬಿಂಬಕ್ಕೆ ಮುಂಜಾನೆ ಸೂರ್ಯ ರಶ್ಮಿಯ ಸ್ಪರ್ಶವಾಯಿತು. ಪ್ರಾತಃಕಾಲ ಶ್ರೀಚಾಮುಂಡೇಶ್ವರಿ ಭಜನಾ ಮಂಡಳಿಯವರಿಂದ ಭಜನೆ, ಶ್ರೀಕೃಷ್ಣ ಉಪಾಧ್ಯಾಯರವರಿಂದ ವೇದ ಮಂತ್ರ ಘೋಷ ನೆರವೇರಿತು. ಬೆಳಿಗ್ಗೆ 7.30ರ ಸಮಯದಲ್ಲಿ ಕ್ಷೇತ್ರದ

ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀ ದೇವಿಗೆ ಸೂರ್ಯರಶ್ಮಿಯ ಸ್ಪರ್ಶ, ದೇವಿಗೆ ವಿಶೇಷ ಪೂಜೆ Read More »

ಪೌರತ್ವ ಕಾಯಿದೆ ಜಾರಿ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಪ್ರತಿಭಟನೆ

ಪುತ್ತೂರು: ಕೇಂದ್ರ ಸರಕಾರ ಅಸಾಂವಿಧಾನಿಕ ಸಿಎಎ ಜಾರಿ ಮಾಡಿರುವುದರ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದೇಶದಾದ್ಯಂತ ಕರೆ ನೀಡಿದ್ದ ಪ್ರತಿಭಟನೆಯ ಅಂಗವಾಗಿ ಪುತ್ತೂರು ಎಸ್‌ಡಿಪಿಐ ವತಿಯಿಂದ ಪುತ್ತೂರಿನ ದರ್ಬೆ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ  ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ರವರ ನೇತೃತ್ವದಲ್ಲಿ  ಬೃಹತ್ ಪ್ರತಿಭಟನೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕ್ಷೇತ್ರ ಸಮಿತಿ ಉಪಾಧ್ಯಕ್ಷ ಅಬ್ದುಲ್ ಹಮೀದ್ ಸಾಲ್ಮರ, ಸಿಎಎ ಕಾಯ್ದೆಯು ಈ ದೇಶದ ಜಾತ್ಯಾತೀತ ಪರಂಪರೆಗೆ ಮಾರಕ

ಪೌರತ್ವ ಕಾಯಿದೆ ಜಾರಿ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಪ್ರತಿಭಟನೆ Read More »

ದ್ವಿತೀಯ ಪಿಯುಸಿ ಪರೀಕ್ಷೆ ದ.ಕ. ಜಿಲ್ಲೆಯಿಂದ 220 ವಿದ್ಯಾರ್ಥಿಗಳು ಗೈರು | ರಾಜ್ಯದಲ್ಲಿ ಶೇ.96.88 ಹಾಜರಾತಿ

ಮಂಗಳೂರು: ಬುಧವಾರ ನಡೆದ ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪರೀಕ್ಷೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ 220 ವಿದ್ಯಾರ್ಥಿಗಳು ಗೈರಾಗಿದ್ದು, ರಾಜ್ಯದಿಂದ 20 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗೈರಾಗಿದ್ದಾರೆ. ದ.ಕ.ಜಿಲ್ಲೆಯಿಂದ ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿದ್ದ 35,753 ವಿದ್ಯಾರ್ಥಿಗಳ ಪೈಕಿ 35,533 ಮಂದಿ ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ರಾಜ್ಯದಿಂದ ಪರೀಕ್ಷೆಗೆ 6,64,395 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 6,43,659 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 20,736 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದು, ಶೇ.96.88ರಷ್ಟು ಹಾಜರಾತಿ ದಾಖಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ದ.ಕ. ಜಿಲ್ಲೆಯಿಂದ 220 ವಿದ್ಯಾರ್ಥಿಗಳು ಗೈರು | ರಾಜ್ಯದಲ್ಲಿ ಶೇ.96.88 ಹಾಜರಾತಿ Read More »

error: Content is protected !!
Scroll to Top