ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿಯಾಗಿ ನಿವೃತ್ತ ಸೇನಾಧಿಕಾರಿ, ಯುವ ನಾಯಕ ಬ್ರಿಜೇಶ್‍ ಚೌಟ | ರಾಜ್ಯದಿಂದ ಇದೇ ಮೊದಲ ಬಾರಿಗೆ ಸೇನೆಯಲ್ಲಿ ದುಡಿದ ವ್ಯಕ್ತಿಗೆ ಸಂಸತ್ ಸ್ಪರ್ಧೆಗೆ ಟಿಕೇಟ್

ಮಂಗಳೂರು: ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಯುವ ನಾಯಕನನ್ನು ಬಿಜೆಪಿ ಸಂಸತ್ತಿಗೆ ಆಯ್ದುಕೊಂಡಿದೆ. ರಾಜ್ಯದಿಂದ ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಸೇನೆಯಲ್ಲಿ ದೇಶಕ್ಕಾಗಿ ದುಡಿದು ಬಂದ ವ್ಯಕ್ತಿಯೊಬ್ಬರಿಗೆ ಸಂಸತ್ ಸ್ಪರ್ಧೆಯ ಟಿಕೆಟ್ ಕೊಡಲಾಗಿದೆ. ಮಂಗಳೂರಿನ ರಥಬೀದಿಯಲ್ಲಿ […]

ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿಯಾಗಿ ನಿವೃತ್ತ ಸೇನಾಧಿಕಾರಿ, ಯುವ ನಾಯಕ ಬ್ರಿಜೇಶ್‍ ಚೌಟ | ರಾಜ್ಯದಿಂದ ಇದೇ ಮೊದಲ ಬಾರಿಗೆ ಸೇನೆಯಲ್ಲಿ ದುಡಿದ ವ್ಯಕ್ತಿಗೆ ಸಂಸತ್ ಸ್ಪರ್ಧೆಗೆ ಟಿಕೇಟ್ Read More »

ಬೈಕ್ ಸವಾರನಿಗೆ ಎದುರಾದ ಕಾಡಾನೆ

ಬೆಳ್ತಂಗಡಿ: ಬೈಕ್ ಸವಾರರೊಬ್ಬರಿಗೆ ಕಾಡಾನೆ ಎದುರಾಗಿದ್ದು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ಬುಧವಾರ ನಡೆದಿದೆ. ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬೊಳ್ಳೂರು ಬೈಲು ಎಂಬಲ್ಲಿ ಇಲ್ಲಿನ ಕೃಷಿಕ ಜಾರ್ಜ್ ಕೆ.ಜೆ. ಎಂಬವರು ತನ್ನ ಮಕ್ಕಳನ್ನು ರಾತ್ರಿ 8 ಗಂಟೆ ಸುಮಾರಿಗೆ ಬೆದ್ರಬೆಟ್ಟು ಕಡೆಯಿಂದ ಟ್ಯೂಷನ್ ಮುಗಿಸಿ ಬೈಕ್ ನಲ್ಲಿ ಕರೆದುಕೊಂಡು ಬರುವ ವೇಳೆ ರಸ್ತೆ ಮಧ್ಯದಲ್ಲಿ ಕಾಡಾನೆ ಎದುರಾಗಿದೆ. ರಸ್ತೆಯ ತಿರುವಿನಲ್ಲಿ ಬೈಕ್ ಸವಾರನಿಗೆ ಸುಮಾರು 5 ಅಡಿ ಅಂತರದಲ್ಲಿ ಕಾಡಾನೆ ಕಂಡುಬಂದಿದ್ದು

ಬೈಕ್ ಸವಾರನಿಗೆ ಎದುರಾದ ಕಾಡಾನೆ Read More »

ಡಾ.ವಿದುಷಿ ಪವಿತ್ರ ರೂಪೇಶ್ ರಿಗೆ ನ್ಯಾಷನಲ್ ಅಚೀವ್ ಮೆಂಟ್ ಅವಾರ್ಡ್

ಪುತ್ತೂರು: ಡಾ.ವಿದುಷಿ ಪವಿತ್ರಾ ರೂಪೇಶ್ ಬೆಳಕು ಸಾಹಿತ್ಯ ಶೈಕ್ಷಣಿಕ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ನೀಡಲಾಗುವ ನ್ಯಾಷನಲ್ ಅಚೀವ್ ಮೆಂಟ್  ಅವಾರ್ಡ್ ಗೆ ಪುತ್ತೂರಿನ ವಿದುಷಿ ಪವಿತ್ರ ರೂಪೇಶ್ ಬಾಜನರಾಗಿದ್ದಾರೆ. ರಾಯಚೂರಿನಲ್ಲಿ ನಡೆದ ಕಾರ್ಯಕ್ರಮ ಇವರಿಗೆ ನ್ಯಾಷನಲ್ ಅಚೀವ್ ಮೆಂಟ್ ಅವಾರ್ಡ್ ನೀಡಲಾಗಿದೆ. ಹಲವು ವರ್ಷಗಳ ಬೋಧನಾ ಅನುಭವ ಹೊಂದಿರುವ ನಿಪುಣ ಗುರು. ಸಂಗೀತ ಪರಿಷತ್ತು, ಮಾರ್ನಿಂಗ್ ರಾಗ, ಕರಾವಳಿ ಉತ್ಸವ, ಕನ್ನಡ ಸಾಂಸ್ಕೃತಿಕ ಸಭಾ, ಮಣಿಪಾಲ ವಿಶ್ವವಿದ್ಯಾಲಯ ಮತ್ತು ರಾಜ್ಯಾದ್ಯಂತ ವಿವಿಧ ದೇವಾಲಯಗಳಲ್ಲಿ ಅವರ ಸಂಗೀತ ಕಚೇರಿಗಳು

ಡಾ.ವಿದುಷಿ ಪವಿತ್ರ ರೂಪೇಶ್ ರಿಗೆ ನ್ಯಾಷನಲ್ ಅಚೀವ್ ಮೆಂಟ್ ಅವಾರ್ಡ್ Read More »

ಹಾವೇರಿ ಕ್ಷೇತ್ರ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೆ.ಎಸ್‍.ಈಶ್ವರಪ್ಪ ಭಾರೀ ಆಕ್ರೋಶ | ಶಿವಮೊಗ್ಗದಿಂದ ಬಂಡಾಯ ಸಾಧ್ಯತೆ ?

ಶಿವಮೊಗ್ಗ: ಬಸವರಾಜ್ ಬೊಮ್ಮಾಯಿ ಅವರ ಹೆಸರು ಹಾವೇರಿ ಕ್ಷೇತ್ರಕ್ಕೆ ಘೋಷಣೆಯಾಗುತ್ತಿದ್ದಂತೆ ಮಾಜಿ ಸಿಎಂ ಕೆ.ಎಸ್‍.ಈಶ್ವರಪ್ಪ ಅವರು ಭಾರೀ ಆಕ್ರೋಶಿತರಾಗಿದ್ದಾರೆ. ಈ ಕುರಿತು ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಅವರು ಮಾತನಾಡಿ ನಾನು 40 ವರ್ಷ ಪಕ್ಷದಲ್ಲಿ ನಿಷ್ಠೆಯಿಂದ ದುಡಿದಿದ್ದು, ಅದನ್ನು ಗುರುತಿಸಿ ನನ್ನ ಮಗನಿಗೆ ಟಿಕೇಟ್ ನೀಡಬಹುದಿತ್ತು ಎಂದು ಹೇಳಿರುವ ಅವರು, ಶುಕ್ರವಾರ ಶಿವಮೊಗ್ಗದಲ್ಲಿ ಬೆಂಬಲಿಗರ ಸಭೆ ಕರೆದು ತೀರ್ಮಾನ ಕೈಗೊಳ್ಳಲಿದ್ದೇನೆ ಎಂದು ತಿಳಿಸಿದ್ದಾರೆ. ನಾನು 40 ವರ್ಷ ಪಕ್ಷಕ್ಕೆ ನಿಷ್ಠನಾಗಿದ್ದೇನೆ. ಅದನ್ನು ಗುರುತಿಸಿ ನನ್ನ

ಹಾವೇರಿ ಕ್ಷೇತ್ರ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೆ.ಎಸ್‍.ಈಶ್ವರಪ್ಪ ಭಾರೀ ಆಕ್ರೋಶ | ಶಿವಮೊಗ್ಗದಿಂದ ಬಂಡಾಯ ಸಾಧ್ಯತೆ ? Read More »

ಲೋಕಸಭಾ ಚುನಾವಣೆ | ಬಿಜೆಪಿಯ ಎರಡಣೆ ಪಟ್ಟಿ ಬಿಡುಗಡೆ | ದ.ಕ.ಜಿಲ್ಲೆಯಿಂದ ಕ್ಯಾ.ಬ್ರಿಜೇಶ್ ಚೌಟರಿಗೆ ಟಿಕೇಟ್

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿದ ಕ್ಯಾ.ಬ್ರಿಜೇಶ್ ಚೌಟ ಅವರಿಗೆ ಟಿಕೇಟ್ ನೀಡಲಾಗಿದೆ. ದ.ಕ.ದಿಂದ ನಳಿನ್ ಕುಮಾರ್ ಕಟೀಲ್‍ ಅವರಿಗೆ ಅವಕಾಶ ಕೈತಪ್ಪಿದ್ದು,  ಉಡುಪಿಯಿಂದ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಣಕ್ಕೆ ಇಳಿಯಲಿದ್ದಾರೆ. ಬೆಂಗಳೂರು ಉತ್ತರದಿಂದ ಡಿ.ವಿ.ಸದಾನಂದ ಗೌಡರಿಗೆ ಟಿಕೇಟ್ ಕೈತಪ್ಪಿದ್ದು ಈ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅವರಿಗೆ ಅವಕಾಶ ನೀಡಲಾಗಿದೆ. ಮೈಸೂರಿನಿಂದ ಯದುವೀರ್ ಅವರಿಗೆ ಅವಕಾಶ ನೀಡಲಾಗಿದ್ದು, ಪ್ರತಾಪ್ ಸಿಂಹ ಅವರಿಗೆ ಟಿಕೇಟ್ ನೀಡಿಲ್ಲ.

ಲೋಕಸಭಾ ಚುನಾವಣೆ | ಬಿಜೆಪಿಯ ಎರಡಣೆ ಪಟ್ಟಿ ಬಿಡುಗಡೆ | ದ.ಕ.ಜಿಲ್ಲೆಯಿಂದ ಕ್ಯಾ.ಬ್ರಿಜೇಶ್ ಚೌಟರಿಗೆ ಟಿಕೇಟ್ Read More »

ಲೋಕಸಭೆ ಚುನಾವಣೆ | ಜಿಲ್ಲಾಧಿಕಾರಿಯಿಂದ ದ.ಕ. ಜಿಲ್ಲಾ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳ ಪರಿಶೀಲನೆ

ಮಂಗಳೂರು : ಲೋಕಸಭೆ ಚುನಾವಣೆ ಇನ್ನೇನು ಹತ್ತಿರ ಬರಲಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್  ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳನ್ನು ಪರಿಶೀಲನೆ ಮಾಡಿದರು. ಸುರತ್ಕಲ್ ಎನ್‍.ಐ.ಟಿ.ಕೆ. ಇಂಜಿನಿಯರಿಂಗ್‍ ಕಾಲೇಜಿಗೆ ತೆರಳಿ ದಕ್ಷಿಣ ಕನ್ನಡ ಜಿಲ್ಲೆಯ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಮತ್ತಿತರರು ಉಪಸ್ಥಿತರಿದ್ದರು.

ಲೋಕಸಭೆ ಚುನಾವಣೆ | ಜಿಲ್ಲಾಧಿಕಾರಿಯಿಂದ ದ.ಕ. ಜಿಲ್ಲಾ ಇವಿಎಂ ಭದ್ರತಾ ಕೇಂದ್ರದ ಪೂರ್ವಸಿದ್ಧತೆಗಳ ಪರಿಶೀಲನೆ Read More »

ಕಟ್ಟಡ ಕಾರ್ಮಿಕರಿಗೆ ಕಾರ್ಪೆಂಟರ್ ಕಿಟ್ ವಿತರಣೆ

ಪುತ್ತೂರು: ಸರಕಾರ ಪ್ರತೀ ಕುಟುಂಬಕ್ಕೆ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿದ್ದರೂ ಕಾರ್ಮಿಕ ವರ್ಗಕ್ಕೆ ನೀಡುವ ಸೌಲಭ್ಯವನ್ನು ಕಡಿತ ಮಾಡಿಲ್ಲ. ಕಾರ್ಮಿಕರಿಗೆ ವಿವಿಧ ಸೌಲಭ್ಯವನ್ನು ನೀಡುವ ಮೂಲಕ ಕಾರ್ಮಿಕ ಕುಟುಂಬಕ್ಕೆ ದಾರಿ ದೀಪವಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ‌ಶಾಸಕರ ಕಚೇರಿಯಲ್ಲಿ ಕಾರ್ಪೆಂಟರ್ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಿಸಿ ಮಾತನಾಡಿದರು. ಕಾರ್ಮಿಕ ವರ್ಗವನ್ನು ಸರಕಾರ ಎಂದೂ ಕಡೆಗಣಿಸುವುದಿಲ್ಲ, ಅವರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಮಗಳ ಮದುವೆಗೆ ಸಹಾಯಧನ, ಆರೋಗ್ಯ ಸೇವೆ ಸೇರಿದಂತೆ ಎಲ್ಲಾ ವಿಧ ಸೌಲಭ್ಯಗಳು

ಕಟ್ಟಡ ಕಾರ್ಮಿಕರಿಗೆ ಕಾರ್ಪೆಂಟರ್ ಕಿಟ್ ವಿತರಣೆ Read More »

ನಾಳೆ ವಿದ್ಯುತ್ ನಿಲುಗಡೆ | ಎಲ್ಲೆಲ್ಲಿ | ಇಲ್ಲಿದೆ ಡಿಟೈಲ್ಸ್

ಪುತ್ತೂರು: ಉಪ್ಪಿನಂಗಡಿ-ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ಹಿನ್ನಲೆಯಲ್ಲಿ ಮಾ.14 ಗುರುವಾರ ವಿದ್ಯುತ್ ನಿಲುಗಡೆ ಮಾಡಲಾಗುವುದು. 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್ ಪ್ರೆಸ್, ಕಾಂಚನ, ವಾಟರ್ ಸಪ್ಲೈ ಫೀಡರ್ ಮತ್ತು 110/33/11 ಕೆವಿ ಕಲ್ಲೇರಿ ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಮತ್ತು ಕೆಮ್ಮಾರ ಫೀಡರ್‍ ನಲ್ಲಿ ಮಾ.14 ಬೆಳಿಗ್ಗೆ 10 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಮತ್ತು

ನಾಳೆ ವಿದ್ಯುತ್ ನಿಲುಗಡೆ | ಎಲ್ಲೆಲ್ಲಿ | ಇಲ್ಲಿದೆ ಡಿಟೈಲ್ಸ್ Read More »

ಅಯೋಧ್ಯೆ ರಾಮ ಮಂದಿರದ ಶ್ರೀರಾಮ ಲಲ್ಲಾ ಮೂರ್ತಿ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಬಿಜೆಪಿ ಹೈಕಮಾಂಡ್ ಬುಲಾವ್ | ಮೈಸೂರಿನಿಂದ ಟಿಕೇಟ್ ನೀಡುವ ಚಿಂತನೆ

ಲೋಕಸಭೆ ಚುನಾವಣೆ ಇನ್ನೇನು ಹತ್ತಿರ ಬರುತ್ತಿದ್ದು, ಈ ನಡುವೆ ಮೈಸೂರಿನಿಂದ ಹಾಲಿ ಸಂಸದ ಪ್ರತಾಪ್ ಸಿಂಹರಿಗೆ ಟಿಕೇಟ್ ಮಿಸ್ ಆಗಲಿದೆ ಎನ್ನಲಾಗಿದ್ದು, ಪ್ರಖ್ಯಾತ ಶಿಲ್ಪಿ, ಅಯೋಧ್ಯೆ ರಾಮಮಂದಿರದ ಶ್ರೀರಾಮ ಲಲ್ಲಾ ವಿಗ್ರಹ ನಿರ್ಮಿಸಿರುವ ಅರುಣ್ ಯೋಗಿರಾಜ್‌ಗೆ ಟಿಕೆಟ್ ನೀಡುವ ಬಗ್ಗೆ ಬಿಜೆಪಿ ಚಿಂತನೆ ನಡೆಸಿದೆ. ಈಗಾಗಲೇ ಯೋಗಿರಾಜ್‍ಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ. ಬಿಜೆಪಿ ಪಕ್ಷದ ಹಳಬರನ್ನು ಈ ಬಾರಿ ದೂರ ಇಟ್ಟಿದ್ದಾರೆ ಎನ್ನಲಾಗಿದ್ದು, ಮೈಸೂರಿನಿಂದ ಪ್ರತಾಪಸಿಂಹ ಬದಲು ಈ

ಅಯೋಧ್ಯೆ ರಾಮ ಮಂದಿರದ ಶ್ರೀರಾಮ ಲಲ್ಲಾ ಮೂರ್ತಿ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಬಿಜೆಪಿ ಹೈಕಮಾಂಡ್ ಬುಲಾವ್ | ಮೈಸೂರಿನಿಂದ ಟಿಕೇಟ್ ನೀಡುವ ಚಿಂತನೆ Read More »

ಕಾಂಗ್ರೆಸ್ ಸೇರಲಿದ್ದಾರೆಯೇ ಡಿ.ವಿ.ಸದಾನಂದ ಗೌಡ | ಅಚ್ಚರಿ ಹೇಳಿಕೆ ನೀಡಿದ ಡಿ.ಕೆ.ಶಿ.

ಬೆಂಗಳೂರು: ಮಾಜಿ ಸಿ.ಎಂ. ಡಿ.ವಿ.ಸದಾನಂದ ಗೌಡರಿಗೆ ಈ ಬಾರಿ ಲೋಕಸಭೆ ಬಿಜೆಪಿ ಟಿಕೇಟ್ ಸಿಗಲಿದೆಯೇ ಅನುಮಾನ ಒಂದೆಡೆ ಇದ್ದರೆ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷಕ್ಕೆ ಸೇರುವ ವದಂತಿಯಿದೆ. ಈ ವಿಚಾರಕ್ಕೆ ಪೂರಕ ಎಂಬಂತೆ ಡಿ.ವಿ.ಸದಾನಂದ ಗೌಡರ ಕುರಿತು ಡಿ.ಕೆ.ಶಿವಕುಮಾರ್ ಅಚ್ಚರಿಯ ಹೇಳಿಕೆ ನೀಡಿರುವುದು. ಕಾಂಗ್ರೆಸ್ ಪಕ್ಷಕ್ಕೆ ಸೇರುವ ಕುರಿತು ಹಲವಾರು ಮಂದಿ ನಮ್ಮನ್ನು ಭೇಟಿ ಮಾಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಅನೇಕ ಜನ ಪಕ್ಷ ಸೇರ್ಪಡೆ ಕುರಿತು ಈಗಾಗಲೇ ನನ್ನ ಜತೆ ಮಾತನಾಡಿದ್ದಾರೆ. ನಿನ್ನೆ

ಕಾಂಗ್ರೆಸ್ ಸೇರಲಿದ್ದಾರೆಯೇ ಡಿ.ವಿ.ಸದಾನಂದ ಗೌಡ | ಅಚ್ಚರಿ ಹೇಳಿಕೆ ನೀಡಿದ ಡಿ.ಕೆ.ಶಿ. Read More »

error: Content is protected !!
Scroll to Top