ಶಿರಾಡಿ ಘಾಟ್‍ ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ | ರಸ್ತೆ ಸಂಚಾರ ಬಂದ್ | ಬದಲಿ ರಸ್ತೆಯಲ್ಲಿ ಚಲಿಸುವಂತೆ ವಾಹನ ಸವಾರರಿಗೆ ಸೂಚನೆ

ಶಿರಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಭಾರೀ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗಿ ಶಿರಾಡಿ ಘಾಟ್ ಎನ್‍ಎಚ್‍ -75 ರಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಶಿರಾಡಿ ಘಾಟ್‍ ರಸ್ತೆಯ ಡಬಲ್ ರಸ್ತೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬುಧವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ನೂರಾರು ವಾಹನಗಳು ನಿಂತಲ್ಲೇ ನಿಂತಿವೆ. ಘಟನೆಯಿಂದಾಗಿ ಮಂಗಳೂರು-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಪೊಲೀಸರು ಬದಲಿ ಮಾರ್ಗದಲ್ಲಿ ಕಳುಹಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿದ್ದು, ಮಂಗಳೂರಿನ ಎಂ.ಆರ್‍.ಪಿ.ಎಲ್‍ ನಿಂದ ತಜ್ಞರ ತಂಡ […]

ಶಿರಾಡಿ ಘಾಟ್‍ ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ | ರಸ್ತೆ ಸಂಚಾರ ಬಂದ್ | ಬದಲಿ ರಸ್ತೆಯಲ್ಲಿ ಚಲಿಸುವಂತೆ ವಾಹನ ಸವಾರರಿಗೆ ಸೂಚನೆ Read More »

ಲೋಕಸಭೆ ಚುನಾವಣೆ | ಕಾಂಗ್ರೆಸ್ ನಿಂದ ವಿವಿಧ ರಾಜ್ಯಗಳ 43 ಅಭ್ಯರ್ಥಿಗಳ ಹೆಸರು ಘೊಷಣೆ

ನವದೆಹಲಿ: ಲೋಕಸಭಾ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ವಿವಿಧ ರಾಜ್ಯಗಳ 43 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಳಿಸಿದೆ. ಅಸ್ಸಾಂ, ಗುಜರಾತ್, ಮಧ್ಯಪ್ರದೇಶ, ಉತ್ತರಾಖಂಡ್, ರಾಜಸ್ಥಾನ ಮತ್ತು ಕೇಂದ್ರಾಡಳಿತ ಪ್ರದೇಶವಾದ ದಿಯು ಮತ್ತು ದಮನ್ ಸೇರಿದಂತೆ ವಿವಿಧ ರಾಜ್ಯಗಳ 43 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಹಂತ ಹಂತವಾಗಿ ಬಿಡುಗಡೆಗೊಳಿಸುತ್ತಿದೆ. ಈ ಪಟ್ಟಿಯಲ್ಲಿ ಮಧ್ಯಪ್ರದೇಶದ

ಲೋಕಸಭೆ ಚುನಾವಣೆ | ಕಾಂಗ್ರೆಸ್ ನಿಂದ ವಿವಿಧ ರಾಜ್ಯಗಳ 43 ಅಭ್ಯರ್ಥಿಗಳ ಹೆಸರು ಘೊಷಣೆ Read More »

ವಿವೇಕಾನಂದ ಕಾನೂನು ಕಾಲೇಜು ಬಳಿ ಝೀಬ್ರಾ ಪಟ್ಟಿ ಅಳವಡಿಸುವಂತೆ ನಗರಸಭೆಗೆ ಮನವಿ

ಪುತ್ತೂರು: ವಿವೇಕಾನಂದ ಕಾನೂನು ಕಾಲೇಜಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಘಟಕದ ವತಿಯಿಂದ ಝೀಬ್ರಾ ಪಟ್ಟಿ ಅಳವಡಿಸುವಂತೆ ನಗರಸಭೆ ಪೌರಾಯುಕ್ತ ಮಧು ಎಸ್‍. ಮನೋಹರ್ ಅವರಿಗೆ ಮನವಿ ನೀಡಲಾಯಿತು. ಕಾಲೇಜಿನ ಎದುರುಗಡೆಯ ರಸ್ತೆಯಲ್ಲಿ ದಾಟಲು ಝೀಬ್ರಾ ಪಟ್ಟಿ ಇಲ್ಲದೆ ಆಗುತ್ತಿರುವ ಸಮಸ್ಯೆ ಹಾಗೂ ರಸ್ತೆಯಲ್ಲಿ ಝೀಬ್ರಾ ಪಟ್ಟಿ ಹಾಕುವಂತೆ, ರಸ್ತೆಯ ಬದಿಯಲ್ಲಿ ವಾಹನಗಳಿಗೆ ನಿಧಾನವಾಗಿ ಚಲಿಸಲು ಫಲಕ ಹಾಕುವ ಬಗ್ಗೆ ಪುತ್ತೂರು ನಗರಸಭೆಯ ಪೌರಾಯುಕ್ತರಿಗೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕಾನೂನು

ವಿವೇಕಾನಂದ ಕಾನೂನು ಕಾಲೇಜು ಬಳಿ ಝೀಬ್ರಾ ಪಟ್ಟಿ ಅಳವಡಿಸುವಂತೆ ನಗರಸಭೆಗೆ ಮನವಿ Read More »

ಆ್ಯಸಿಡ್ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ

ಬೆಳ್ಳಾರೆ: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಹಿಳೆಯೋರ್ವರು ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬೆಳ್ಳಾರೆ ನಿವಾಸಿ ಲಕ್ಷ್ಮೀಕಾಂತ ಹೆಗ್ಡೆಯವರ ಪತ್ನಿ ವೀಣಾ ಆತ್ಮಹತ್ಯೆಗೆ ಯತ್ನಿಸಿದವರು. ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮಹಿಳೆಯು ಆ್ಯಸಿಡ್ ಸೇವಿಸಿ ತನ್ನ ಸಹೋದ್ಯೋಗಿಗೆ ಕರೆಮಾಡಿ ತಿಳಿಸಿದ್ದರು. ತಕ್ಷಣ ಮನೆಯವರಿಗೆ ವಿಚಾರ ತಿಳಿಸಿ ಆಟೋ ರಿಕ್ಷದ ಮೂಲಕ ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮಹಿಳೆಯು ವಾಂತಿ ಮಾಡಲು ಪ್ರಾರಂಭಿಸಿದ್ದಾರೆ. ಬಳಿಕ ಬೆಳ್ಳಾರೆಯ ಆಸ್ಪತ್ರೆಯ ವೈದ್ಯರ ಸಲಹೆ

ಆ್ಯಸಿಡ್ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ Read More »

ವಿವೇಕಾನಂದ ಪಾಲಿಟೆಕ್ನಿಕ್ ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ನಿಧನ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ (60) ಬುಧವಾರ ನಸುಕಿನ ವೇಳೆ ನಿಧನ ಹೊಂದಿದ್ದಾರೆ. ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದರು. ಈ ಸಂದರ್ಭದಲ್ಲಿ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಕೆಲವೇ ಕ್ಷಣಗಳಲ್ಲಿ ಅವರು ನಿಧನರಾದರು. ಹೃದಯಾಘಾತದಿಂದ ನಿಧನರಾಗಿರಬೇಕೆಂದು ಶಂಕಿಸಲಾಗಿದೆ. 1987 ರಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾಗಿ ಗೋಪಿನಾಥ ಶೆಟ್ಟಿ ನೇಮಕಗೊಂಡಿದ್ದು, ಸುದೀರ್ಘ 35 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 2022 ರಲ್ಲಿ ನಿವೃತ್ತರಾಗಿದ್ದರು. ಪಾಲಿಟೆಕ್ನಿಕ್ ನ್ನು ಉತ್ತಮ ಶಿಕ್ಷಣ ಸಂಸ್ಥೆಯಾಗಿ

ವಿವೇಕಾನಂದ ಪಾಲಿಟೆಕ್ನಿಕ್ ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ನಿಧನ Read More »

ವಿಶ್ವಗುರುವಾಗುವತ್ತ ಭಾರತದ ಚಿತ್ತ – ಪ್ರೊ ವಿಷ್ಣುಕಾಂತ್ ಚಟ್ಟಪಲ್ಲಿ| ವಿವೇಕಾನಂದದಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ

ಪುತ್ತೂರು: ವಿಕಸಿತ ಭಾರತದ ಮುನ್ನೋಟಗಳು ಜಗತ್ತಿಗೆ ಕಾಣಲಾರಂಭಿಸಿವೆ. ವಿಜ್ಞಾನ, ಸಂಶೋಧನೆ, ಕ್ರೀಡೆ, ಆರ್ಥಿಕತೆ, ಕೃಷಿ, ವ್ಯವಹಾರ ನಿರ್ವಹಣೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಮರ್ಥವಾಗಿ ಭಾರತವು ವಿಶ್ವಗುರುವಾಗುವುದರತ್ತ ಮುನ್ನಡೆಯುತ್ತಿದೆ ಎಂಬುದು ಹೆಮ್ಮೆಯ ವಿಷಯ. ಈ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರು ವಿಶೇಷವಾಗಿ ಮುಂಚೂಣಿಯಲ್ಲಿ ನಿಂತು ದುಡಿಯುತ್ತಿದ್ದಾರೆ. ಆದ್ದರಿಂದ ಇದನ್ನು ನಾರೀಶಕ್ತಿ ಯುಗ ಎಂದು ಗದಗ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಷ್ಣುಕಾಂತ್ ಚಟ್ಟಪಲ್ಲಿ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ

ವಿಶ್ವಗುರುವಾಗುವತ್ತ ಭಾರತದ ಚಿತ್ತ – ಪ್ರೊ ವಿಷ್ಣುಕಾಂತ್ ಚಟ್ಟಪಲ್ಲಿ| ವಿವೇಕಾನಂದದಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ Read More »

5,8 ಹಾಗೂ 9 ಮೌಲ್ಯಾಂಕನ ಪರೀಕ್ಷೆಗೆ ಸುಪ್ರೀಂ ಕೋರ್ಟ್‍ ತಡೆ

ನವದೆಹಲಿ: 5,8 ಹಾಗೂ 9ನೇ  ತರಗತಿ ಮೌಲ್ಯಾಂಕನ ಪರೀಕ್ಷೆ ರದ್ದುಪಡಿಸಬೇಕೆಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ ಮೇಲ್ಮವಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‍ ತಡೆ ನೀಡಿರುವುದಾಗಿ ವರದಿಯಾಗಿದೆ. ರಾಜ್ಯಾದ್ಯಂತ ಸೋಮವಾರ ಹಾಗೂ ಮಂಗಳವಾರ ಮೌಲ್ಯಾಂಕನ ಪರೀಕ್ಷೆ ಯಶಸ್ವಿಯಾಗಿ ನಡೆದಿತ್ತು. ಇಂದು ನಡೆದಿ ವಿಚಾರಣೆಯಲ್ಲಿ ಕರ್ನಾಟಕ ಸರಕಾರ ನಡೆಸುತ್ತಿರುವ ಬೋರ್ಡ್‍ ಪರೀಕ್ಷೆಗಳನ್ನು ನಡೆಸದಂತೆ ನ್ಯಾಯಮೂರ್ತಿಗಳಾದ ಬೆಲಾ ಎಂ.ತ್ರಿವೇದಿ ಹಾಗೂ ಪಂಕಜ್ ಮಿಥಾಲ್ ಅವರನ್ನೊಳಗೊಂಡ ಪೀಠ ತಡೆ ನೀಡಿದೆ. ಹೈಕೋರ್ಟ್‌ ನ ದ್ವಿಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು

5,8 ಹಾಗೂ 9 ಮೌಲ್ಯಾಂಕನ ಪರೀಕ್ಷೆಗೆ ಸುಪ್ರೀಂ ಕೋರ್ಟ್‍ ತಡೆ Read More »

ಇನ್ನು ಮುಂದೆ ಭಾನುವಾರವೂ ಕೆಲಸ ಕಾರ್ಯ ನಡೆಸಲಿದೆ ಉಪನೋಂದಣಾ ಕಚೇರಿ

ಬೆಂಗಳೂರು: ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇನ್ನು ಮುಂದೆ ಭಾನುವಾರವೂ ಉಪ ನೋಂದಣಾ ಕಚೇರಿ ತೆರೆಯಲಿದೆ. ಸಾರ್ವಜನಿಕರಿಗೆ ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿ ಇನ್ನಿತರ ಕೆಲಸಗಳಿಗಾಗಿ ಅನುಕೂಲವಾಗಲೆಂದು ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮೊದಲಿಗೆ ಬೆಂಗಳೂರಿನಲ್ಲಿ ಜಾರಿ ಮಾಡಲಾಗುವುದು. ಬಳಿಕ ಮಹಾನಗರಗಳಲ್ಲಿ ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಕಾಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೆಲಸಕ್ಕೆ ರಜೆ ಹಾಕಿ ಬರಬೇಕಾದ ಪರಿಸ್ಥಿತಿ ಇರುವುದರಿಂದ ಜನರ ಅನುಕೂಲಕ್ಕಾಗಿಯೇ ಪ್ರತಿ ಜಿಲ್ಲೆಯಲ್ಲೂ ಉಪನೋಂದಣಾ ಕಚೇರಿಯನ್ನು ಭಾನುವಾರವೂ ತೆರೆಯಲು ನಿರ್ಧಾರ

ಇನ್ನು ಮುಂದೆ ಭಾನುವಾರವೂ ಕೆಲಸ ಕಾರ್ಯ ನಡೆಸಲಿದೆ ಉಪನೋಂದಣಾ ಕಚೇರಿ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಶ್ರೀ ಕ್ಷೇತ್ರ ಮಾಣಿಲದ ಮೋಹನದಾಸ ಸ್ವಾಮೀಜಿ ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಕಾರ್ಯ ವೀಕ್ಷಿಸಿ ದೇವಳದ ಅಭಿವೃದ್ದಿಗೆ ಮಾರ್ಗದರ್ಶನ ಮಾಡಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಗೌರವಾಧ್ಯಕ್ಷ ಡಾ. ಸುರೇಶ್ ಪುತ್ತೂರಾಯ, ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಸಂಚಾಲಕ ಹಾಗೂ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್ ಆರ್ಯಾಪು, ಸಮಿತಿಯ ಪ್ರಮುಖರಾದ ವಿಜಯ ಬಿಎಸ್ ಸಂಪ್ಯ, ದೇವಯ್ಯ ಗೌಡ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ Read More »

ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

ಬಂಟ್ವಾಳ : ಮರವೊಂದಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಇಂದು ನಡೆದಿದೆ. ಅಮ್ಟಾಡಿ ನಿವಾಸಿ ಅಕ್ಷಿತ್ (25) ಮೃತಪಟ್ಟ ಯುವಕ. ಇಂದು ಮುಂಜಾನೆ 4.30 ರ ಹೊತ್ತಿಗೆ ರಾತ್ರಿ ಪಾಳಿ ಮುಗಿಸಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‍ನಲ್ಲಿ ತೆರಳುತ್ತಿದ್ದಾಗ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಯುವಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಅಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೆಲ್ಕಾರ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು Read More »

error: Content is protected !!
Scroll to Top