ಶ್ರೀ ಆದಿಚುಂಚನಗಿರಿ ಮಠಕ್ಕೆ ದ.ಕ.ಜಿಲ್ಲಾ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಭೇಟಿ | ಆಶೀರ್ವಾದ ನೀಡಿದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ
ಮಂಗಳೂರು: ದ.ಕ.ಜಿಲ್ಲೆ ಒಕ್ಕಲಿಗರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿದರು. ಸಂಘದ ಪದಾಧಿಕಾರಿಗಳನ್ನು ಶ್ರೀಗಳು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಡಾ. ಧರ್ಮ ಪಾಲನಾಥ ಸ್ವಾಮೀಜಿಯವರು ಉಪಸ್ಥಿತರಿದ್ದರು.










