ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ದರೋಡೆ | ಪ್ರಮುಖ ಆರೋಪಿಗಳ ಬಂಧನ

ಅಡ್ಯನಡ್ಕ: ಕರ್ನಾಟಕ ಬ್ಯಾಂಕ್‍ ಕಳವು ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ತನಿಖೆ ವೇಗ ಪಡೆದುಕೊಂಡಿದೆ. ಇದೀಗ ಪ್ರಮುಖ ಆರೋಪಿಯ ವಿಚಾರಣೆ ನಡೆಯುತ್ತಿದೆ. ತಾಂತ್ರಿಕ ತನಿಖೆ ಮೂಲಕ ಪ್ರಮುಖ ಮಾಹಿತಿಗಳನ್ನು ಸಂಗ್ರಹಿಸಿದ ಪೊಲೀಸರು ಪ್ರಮುಖ ಆರೋಪಿಗಳನ್ನು ಎರಡು ದಿನಗಳ ಹಿಂದೆ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಫೆ.7 ರಂದು ಬ್ಯಾಂಕ್ ಕಟ್ಟಡದ ಹಿಂಬಾಗಿಲಿನ ಕಿಟಕಿಯನ್ನು ತುಂಡರಿಸಿ ಒಳನುಗ್ಗಿದ ಕಳ್ಳರು ಭಾರೀ ಪ್ರಮಾಣದ ನಗ-ನಗದನ್ನು ದೋಚಿದ್ದರು. ಈ ಸಂದರ್ಭ ಕಾರ್ಯಪ್ರವೃತ್ತರಾದ ಪೊಲೀಸರು ಅನುಮಾನದ ಮೇಲೆ […]

ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ದರೋಡೆ | ಪ್ರಮುಖ ಆರೋಪಿಗಳ ಬಂಧನ Read More »

ಐದು ಮನೆ ನಿವೇಶನಗಳು ದುರುಪಯೋಗ | ಸೂಕ್ತ ತನಿಖೆಗೆ ಇಸಾಕ್ ಸಾಲ್ಮರ ಆಗ್ರಹ

ಪುತ್ತೂರು: ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಮಹಮ್ಮದ್ ಆಲಿ ಯವರು ಬಡ ಜನರಿಗೆ ನೀಡಲಾಗುವ 5 ಮನೆ ನಿವೇಶನಗಳ ದುರುಪಯೋಗ ಹಾಗೂ ಕಂದಾಯ ಇಲಾಖೆಯ ಹಾಗೂ ನಗರ ಸಭಾ ಕಾಯ್ದೆಯನ್ನು ಉಲ್ಲಂಘಿಸಿರುತ್ತಾರೆ ಇವರ ಮೇಲೆ ಸದರಿ ಪ್ರಕರಣವನ್ನು ತನಿಖೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಜನಸ್ಪಂದನ ಕಾರ್ಯಕ್ರಮದಲ್ಲಿ ಮನವಿ ಮಾಡಿದ್ದು, ಈ ಕುರಿತು ತನಿಖೆ ಮಾಡಲು ಅಧಿಕಾರಿಗಳಿಗೆ ಸೂಚನೆಯು ಬಂದಿದೆ ಎಂದು ಸಾಮಾಜಿಕ ಕಾರ್ಯಕರ್ತ ಇಸಾಕ್ ಸಾಲ್ಮರ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕೆಮ್ಮಿಂಜೆ ಗ್ರಾಮದ ಸಿಂಹವನ

ಐದು ಮನೆ ನಿವೇಶನಗಳು ದುರುಪಯೋಗ | ಸೂಕ್ತ ತನಿಖೆಗೆ ಇಸಾಕ್ ಸಾಲ್ಮರ ಆಗ್ರಹ Read More »

ಬಸ್-ಬೈಕ್ ಡಿಕ್ಕಿ | ವಿದ್ಯಾರ್ಥಿ ಸಿನಾನ್ ಮೃತ್ಯು

ಮಂಗಳೂರು: ಬೈಕ್ ಹಾಗೂ ಬಸ್ ನಡುವೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳೂರಿನ ಕಂಕನಾಡಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಸಮೀಪದ ಜಲಾಲಿಯಾ ನಗರದ ನಿವಾಸಿ ಸಿನಾನ್ (21) ಮೃತಪಟ್ಟ ವಿದ್ಯಾರ್ಥಿ. ಸಿನಾನ್ ಮಂಗಳೂರಿನ ಯೆನಪೋಯ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಪಾರ್ಟ್ ಟೈಮ್ ನಲ್ಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದು, ಈ ಮೂಲಕ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ ಎನ್ನಲಾಗಿದೆ. ನಿನ್ನೆ ರಾತ್ರಿ ಫುಡ್ ಡೆಲಿವರಿ ಮಾಡಲು ತನ್ನ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಖಾಸಗಿ

ಬಸ್-ಬೈಕ್ ಡಿಕ್ಕಿ | ವಿದ್ಯಾರ್ಥಿ ಸಿನಾನ್ ಮೃತ್ಯು Read More »

ಬಿಜೆಪಿ ಪಕ್ಷದಿಂದ ತುರ್ತು ಕೋರ್ ಕಮಿಟಿ ಸಭೆ

ಪುತ್ತೂರು: ಬಿಜೆಪಿ ವತಿಯಿಂದ ಕೋರ್ ಕಮಿಟಿ ಸಭೆ ನಡೆಯಿತು. ಸಭೆಯಲ್ಲಿ ಮುಂದಿನ ಲೋಕಸಭಾ ಚುನಾವಣೆಯ ಪೂರ್ವ ತಯಾರಿ ಹಿನ್ನಲೆಯಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಮತ್ತಿತರ ಪ್ರಮುಖರು ಭಾಗವಹಿಸಿದ್ದರು.

ಬಿಜೆಪಿ ಪಕ್ಷದಿಂದ ತುರ್ತು ಕೋರ್ ಕಮಿಟಿ ಸಭೆ Read More »

ಪ್ರಭು ಚರುಂಬುರಿ ಅಂಗಡಿಯಲ್ಲಿ ಅಗ್ನಿ ಅವಘಡ

ಪುತ್ತೂರು: ಕೊಂಬೆಟ್ಟು ಬಂಟರ ಭವನದ ಬಳಿ ಕಾರ್ಯಾಚರಿಸುತ್ತಿರುವ ಪ್ರಭು ಚರುಂಬುರಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿ ಅವಘಡಕ್ಕೆ ಅಂಗಡಿಯಲ್ಲಿರುವ ಕೆಲವು ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ. ವಿಷಯ ತಿಳಿದ ಅಗ್ನಿಶಾಮಕ ದಳದವರು ಆಗಮಿಸಿ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ.

ಪ್ರಭು ಚರುಂಬುರಿ ಅಂಗಡಿಯಲ್ಲಿ ಅಗ್ನಿ ಅವಘಡ Read More »

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನ್ನಛತ್ರದ ಅಭಿವೃದ್ಧಿಗೆ 10 ಲಕ್ಷ ರೂ. ದೇಣಿಗೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನ್ನಚತ್ರದ ಅಭಿವೃದ್ಧಿ ಕಾರ್ಯಗಳಿಗೆ ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರದಿಂದ ಮಂಜೂರು ಮಾಡಿದ 10 ಲಕ್ಷ ರೂ. ಡಿಡಿ ಯನ್ನು ದೇವಸ್ಥಾನಕ್ಕೆ ಶುಕ್ರವಾರ ಹಸ್ತಾಂತರಿಸಲಾಯಿತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ದೇವಸ್ಥಾನದ ಆಡಳಿತ ಅಧಿಕಾರಿ ಹನುಮ ರೆಡ್ಡಿ ಅವರಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ತಾಲೂಕ ಅಧ್ಯಕ್ಷ ಲೋಕೇಶ್ ಹೆಗ್ಡೆ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ,

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನ್ನಛತ್ರದ ಅಭಿವೃದ್ಧಿಗೆ 10 ಲಕ್ಷ ರೂ. ದೇಣಿಗೆ Read More »

ಸವಣೂರಿನ ಮೂರು ಮಂದಿಗೆ ಬಿಜೆಪಿಯ ಉನ್ನತ ಹುದ್ದೆ

ಪುತ್ತೂರು: ಸವಣೂರು ಮಹಾ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ ಆಯ್ಕೆಯಾಗಿದ್ದಾರೆ. ಸುಳ್ಯ ಮಂಡಲದ ಮಹಿಳಾ ಮೋರ್ಚಾದ ನೂತನ ಅಧ್ಯಕ್ಷರಾಗಿ ಸವಣೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಇಂದಿರಾ ಬಿ.ಕೆ ಆಯ್ಕೆಯಾಗಿದ್ದು, ಸುಳ್ಯ ಮಂಡಲ ಎಸ್ ಟಿ ಮೋರ್ಚಾದ ಅಧ್ಯಕ್ಷರಾಗಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಗಂಗಾಧರ ಪೆರಿಯಡ್ಕ ಆಯ್ಕೆಯಾಗಿದ್ದಾರೆ. ಈ ಮೂಲಕ ಸವಣೂರಿನ ಮೂವರಿಗೆ ಬಿಜೆಪಿ ಪಕ್ಷದಲ್ಲಿ ಉನ್ನತ ಜವಾಬ್ದಾರಿ ಲಭಿಸಿದಂತಾಗಿದೆ.

ಸವಣೂರಿನ ಮೂರು ಮಂದಿಗೆ ಬಿಜೆಪಿಯ ಉನ್ನತ ಹುದ್ದೆ Read More »

ಮೊಡಪ್ಪಾಡಿ ದೈವ ನರ್ತಕ ಬೊಳಿಯ ಅಜಿಲ ನಿಧನ

ಪುತ್ತೂರು: ತಾಲೂಕಿನ ಒಳಮೊಗ್ರು ಗ್ರಾಮದ ಮೊಡಪ್ಪಾಡಿ ದೈವ ನರ್ತಕ ಬೊಳಿಯ ಅಜಿಲ (52) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೊಡಪ್ಪಾಡಿಗುತ್ತು ತರವಾಡಿನ ಪ್ರಧಾನ ಜಠಾಧಾರಿ ದೈವದ ನರ್ತಕರಾಗಿದ್ದು ಒಳಮೊಗ್ರು ಗ್ರಾಮದ ಅನೇಕ ಕಡೆ ದೈವ ಚಾಕರಿಯಲ್ಲಿ ತನ್ನನ್ನು ಸಮರ್ಪಿಸಿಕೊಂಡಿದ್ದರು. ಇವರನ್ನು ಕಳೆದ ವರ್ಷ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ವತಿಯಿಂದ ಗೌರವಿಸಲಾಗಿತ್ತು. ಒಳಮೊಗ್ರು ಗ್ರಾಮ ಪಂಚಾಯಿತಿ ಕೂಡ ಅವರನ್ನು ಗೌರವಿಸಿತ್ತು.  ಸ್ಥಳೀಯ ಶ್ರೀ ವೀರಕೇಸರಿ ಸ್ಪೋರ್ಟ್ಸ್ ಕ್ಲಬ್ ನ ವತಿಯಿಂದ ದೈವ ನರ್ತನದಲ್ಲಿ ಅವರ ಸೇವೆಯನ್ನು ಪರಿಗಣಿಸಿ ಗೌರವಿಸಲಾಗಿತ್ತು.

ಮೊಡಪ್ಪಾಡಿ ದೈವ ನರ್ತಕ ಬೊಳಿಯ ಅಜಿಲ ನಿಧನ Read More »

ಮತದಾನ ಪ್ರಜಾಪ್ರಭುತ್ವದ ಬುನಾದಿ | ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಡಾ. ಕೆ. ಚಂದ್ರಶೇಖರ್

ಪುತ್ತೂರು: ಮತದಾನ ಪ್ರಜಾಪ್ರಭುತ್ವ ವ್ಯವಸ್ಥೆಯ ಬುನಾದಿ. ಮತದಾನ ನಮ್ಮೆಲ್ಲರ ಹಕ್ಕು ಜತೆಗೆ ಕರ್ತವ್ಯವೂ ಆಗಿದೆ. ಎಲ್ಲರೂ ತಮ್ಮ ಜವಾಬ್ದಾರಿಯನ್ನು ಅರಿತು ಮತದಾನದಲ್ಲಿ ಪಾಲ್ಗೊಂಡಾಗ ಮಾತ್ರವೇ ಯೋಗ್ಯ ಸರಕಾರವನ್ನು ಪಡೆಯಲು ಸಾಧ್ಯ ಎಂದು ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಕೆ.ಚಂದ್ರಶೇಖರ್‌ ಅಭಿಪ್ರಾಯಪಟ್ಟರು. ಅವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಆಯೋಜಿಸಲಾದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಪ್ರಜಾಪ್ರಭುತ್ವಕ್ಕೆ ತನ್ನದೇ ಆದ ಇತಿಹಾಸ ಹಾಗೂ ಪ್ರಾಮುಖ್ಯತೆ ಇದೆ. ಭಾರತವು ಸ್ವತಂತ್ರವಾಗುವುದಕ್ಕೂ ಹಿಂದೆ

ಮತದಾನ ಪ್ರಜಾಪ್ರಭುತ್ವದ ಬುನಾದಿ | ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಡಾ. ಕೆ. ಚಂದ್ರಶೇಖರ್ Read More »

ಸೋಜಾ ಮೆಟಲ್ ಮರ್ಚೆಂಟ್ ಮಾಲಕ ವಲೇರಿಯನ್ ಡಿ’ಸೋಜಾ ನಿಧನ

ಪುತ್ತೂರು: ಪುತ್ತೂರಿನ ಸೋಜಾ ಮೆಟಲ್ ಮರ್ಚೆಂಟ್ ಮಾಲಕ ಸಾಮೆತ್ತಡ್ಕ ನಿವಾಸಿ ವಲೇರಿಯನ್ ಡಿ’ಸೋಜಾ (87) ಶುಕ್ರವಾರ ನಿಧನರಾದರು. ಸಾಮೆತ್ತಡ್ಕದಲ್ಲಿ ವಾಸಿಸುತ್ತಿದ್ದ ಅವರು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಅವರ ಓರ್ವ ಪುತ್ರಿ ಲಂಡನ್‍ ನಲ್ಲಿ ಉದ್ಯೋಗದಲ್ಲಿದ್ದಾರೆ. ಮೃತರು ಪತ್ನಿ, ಹಾಗೂ ಆರು ಮಂದಿ ಮಕ್ಕಳನ್ನು ಅಗಲಿದ್ದಾರೆ.

ಸೋಜಾ ಮೆಟಲ್ ಮರ್ಚೆಂಟ್ ಮಾಲಕ ವಲೇರಿಯನ್ ಡಿ’ಸೋಜಾ ನಿಧನ Read More »

error: Content is protected !!
Scroll to Top