ವ್ಯಾಪಾರಿ ಶ್ರೀರಾಮ್ ಭಟ್ ಮೃತದೇಹ ಕೆರೆಯಲ್ಲಿ ಪತ್ತೆ !

ಪೆರ್ಲ: ಪೆರ್ಲ ಪೇಟೆಯ ವ್ಯಾಪಾರಿಯೊಬ್ಬರ ಮೃತದೇಹ ಮನೆ ಸಮೀಪದ ತೋಟದ ಕರೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ವಿನಾಯಕ ಸ್ಟೋರ್ಸ್ ಮಾಲಕ, ಪಳ್ಳತ್ತಮೂಲೆ ನಿವಾಸಿ ಶ್ರೀರಾಮ್ ಭಟ್‌ (52) ಎಂಬವರ ಮೃತದೇಹ ಮನೆ ಸಮೀಪದ ತೋಟದ ಕೆರೆಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದೆ. ಪೆರ್ಲ ಪೇಟೆಯಲ್ಲಿ ಕಳೆದ ಹಲವು ವರ್ಷಗಳಿಂದ ವ್ಯಾಪಾರ ನಡೆಸುತ್ತಿದ್ದ ಶ್ರೀರಾಮ್ ಭಟ್‍ ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಸದಸ್ಯರಾಗಿ, ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದರು. ತೀವ್ರ ಖಿನ್ನತೆಯಿಂದ ಬಳಲುತ್ತಿದ್ದ ಅವರು ಅಂಗಡಿಯ‌ನ್ನು ಸರಿಯಾಗಿ ತೆರಯುತ್ತಿರಲಿಲ್ಲ. ಎರಡು […]

ವ್ಯಾಪಾರಿ ಶ್ರೀರಾಮ್ ಭಟ್ ಮೃತದೇಹ ಕೆರೆಯಲ್ಲಿ ಪತ್ತೆ ! Read More »

ಹಾರೂನ್ ಪುರುಷರಕಟ್ಟೆ ನಿಧನ

ಪುತ್ತೂರು: ಪುರುಷರಕಟ್ಟೆ ಹಿಮಾಯತ್ತುಲ್ ಇಸ್ಲಾಂ ಮದ್ರಸದ ಸ್ಥಾಪಕ ಅಧ್ಯಕ್ಷ ಹಾರೂನ್ ಪುರುಷರಕಟ್ಟೆ (65) ಅಲ್ಪ ಕಾಲದ ಅಸೌಖ್ಯದಿಂದ ಫೆ.29 ರಂದು ನಿಧನರಾದರು. ಪುರುಷರಕಟ್ಟೆ ಹಿಮಾಯತ್ತುಲ್ ಇಸ್ಮಾಂ ಮದ್ರಸದಲ್ಲಿ 20 ವರ್ಷಕ್ಕಿಂತ ಅಧಿಕ ವರ್ಷ ಅಧ್ಯಕ್ಷರಾಗಿ, ಮುಕ್ವೆ ರೆಹ್ಮನಿಯ ಜುಮಾ ಮಸೀದಿಯ ಕಾರ್ಯದರ್ಶಿಯಾಗಿ, ಮುಕ್ವೆ ದರ್ಗಾ ಶರೀಫ್‍ ನ ಉರೂಸ್ ಕಮಿಟಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಮೃತರು ಪತ್ನಿ, ಪುತ್ರಿ, ಸಹೋದರರನ್ನು ಅಗಲಿದ್ದಾರೆ.

ಹಾರೂನ್ ಪುರುಷರಕಟ್ಟೆ ನಿಧನ Read More »

ಹಲವಾರು ಸವಾಲುಗಳನ್ನು ಎದುರಿಸಿ ಬಿಜೆಪಿ ಗೆಲುವು ಸಾಧಿಸಿದೆ | ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಲಿದೆ : ನಳಿನ್ ಕುಮಾರ್ ಕಟೀಲ್‍

ಮಂಗಳೂರು: ಪ್ರಜಾಪ್ರಭುತ್ವ ದೇಶವಾಗಿರುವುದರಿಂದ ಚುನಾವಣೆಗೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಪ್ರತೀ ಚುನಾವಣೆ ಬಂದಾಗ ಹಲವಾರು ಸಮಸ್ಯೆಗಳು ಎದುರಾಗುತ್ತಿದ್ದು, ಎಲ್ಲಾ ಸವಾಲುಗಳನ್ನು ಎದುರಿಸಿ ಬಿಜೆಪಿ ಗೆಲುವು ಸಾಧಿಸಿದೆ. ಹಾಗೆಯೇ ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಗೆಲುವಿ ಸಾಧಿಸಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಪುತ್ತಿಲ ಪರಿವಾರ ಅಧಿಕೃತ ಘೋಷಣೆ ಮಾಡಿದ್ದು, ಈ ನಿಟ್ಟಿನಲ್ಲಿ ಪ್ರತಿಕ್ರಿಯಿಸಿದ ಅವರು, ಪುತ್ತಿಲ ಪರಿವಾರ ಸ್ವತಂತ್ರ ಸಂಸ್ಥೆಯಾಗಿದ್ದು, ತೀರ್ಮಾನ

ಹಲವಾರು ಸವಾಲುಗಳನ್ನು ಎದುರಿಸಿ ಬಿಜೆಪಿ ಗೆಲುವು ಸಾಧಿಸಿದೆ | ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಲಿದೆ : ನಳಿನ್ ಕುಮಾರ್ ಕಟೀಲ್‍ Read More »

ಪುತ್ತೂರು ಪೇಟೆಯಲ್ಲಿನ ಅಪಾಯಕಾರಿ ರಸ್ತೆಗಳನ್ನು ದುರಸ್ತಿಗೊಳಿಸುವಂತೆ ಒತ್ತಾಯ | ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ನಗರಸಭೆಗೆ ಮನವಿ

ಪುತ್ತೂರು: ಪುತ್ತೂರು ಪೇಟೆಯಲ್ಲಿ ಹಲವಾರು ಕಡೆಗಳಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ರಸ್ತೆಗಳನ್ನು ದುರಸ್ತಿಗೊಳಿಸುವಂತೆ ಒತ್ತಾಯಿಸಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ನಗರಸಭೆ ಪೌರಾಯುಕ್ತ ಮಧು ಎಸ್‍.ಮನೋಹರ್ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು. ನಗರದ ಗಾಂಧಿಕಟ್ಟೆ, ಅರುಣಾ ಕಲಾ ಮಂದಿರ, ಸಚಿನ್ ಟ್ರೇಡಿಂಗ್ ಮುಂಭಾಗದ ರಸ್ತೆ, ತೆಂಕಿಲ ವಿವೇಕಾನಂದ ಶಾಲೆಗೆ ತೆರಳುವ ಇಳಿಜಾರಿನಲ್ಲಿ ಮುಂತಾದ ಹಲವು ಕಡೆಗಳಲ್ಲಿ ರಸ್ತೆಗಳನ್ನು ಅಗೆದು ದುರಸ್ತಿ ಮಾಡಲಾಗದೆ ಹಾಗೇ ಬಿಡಲಾಗಿದೆ. ಪರಿಣಾಮ ಅಪಘಾತಗಳಾಗುವ ಸಂಭವವಿದ್ದು, ತಕ್ಷಣ ರಸ್ತೆಗಳನ್ನು ಪರಿಶೀಲಿಸಿ ದುರಸ್ತಿ ಕಾರ್ಯ

ಪುತ್ತೂರು ಪೇಟೆಯಲ್ಲಿನ ಅಪಾಯಕಾರಿ ರಸ್ತೆಗಳನ್ನು ದುರಸ್ತಿಗೊಳಿಸುವಂತೆ ಒತ್ತಾಯ | ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ನಗರಸಭೆಗೆ ಮನವಿ Read More »

ಮುಂದಿನ ಲೋಕಸಭಾ ಚುನಾವಣೆ ಸಹಿತ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ! | ಸ್ಪರ್ಧೆಯ ಕುರಿತು ಪುತ್ತಿಲ ಪರಿವಾರದ ಅಧ್ಯಕ್ಷರು ಹೇಳಿದ್ದೇನು ?

ಪುತ್ತೂರು: ಮುಂದಿನ ಲೋಕಸಭಾ ಚುನಾವಣೆ ಸೇರಿದಂತೆ ದ.ಕ.ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಪುತ್ತಿಲ ಪರಿವಾರದ ನಾಯಕ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಮಾಡಲಿದ್ದು, ಕಾರ್ಯಕರ್ತರು, ಹಿತೈಷಿಗಳ, ಮತದಾರರ ನಿರ್ಧಾರದಂತೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ತಿಳಿಸಿದ್ದಾರೆ. ಪುತ್ತಿಲ ಪರಿವಾರದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಪಕ್ಷೇತರವಾಗಿ ನಿಂತು 60 ಸಾವಿರಕ್ಕೂ ಅಧಿಕ ಮತಗಳನ್ನು ಪಡೆಯುವ ಮೂಲಕ ಸಂಚಲನ ಮೂಡಿಸಿತ್ತು. ಬಳಿಕದ

ಮುಂದಿನ ಲೋಕಸಭಾ ಚುನಾವಣೆ ಸಹಿತ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ! | ಸ್ಪರ್ಧೆಯ ಕುರಿತು ಪುತ್ತಿಲ ಪರಿವಾರದ ಅಧ್ಯಕ್ಷರು ಹೇಳಿದ್ದೇನು ? Read More »

ಮಾ.1-2 : ಆಲಡ್ಕ ಶ್ರೀ ಸದಾಶಿವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ | ನವೀಕೃತ ರಂಗ ಮಂಟಪ ಉದ್ಘಾಟನೆ

ಪುತ್ತೂರು: ಮೂಂಡೂರು ಗ್ರಾಮದ ಆಲಡ್ಕ ಶ್ರೀ ಸದಾಶಿವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ದೈವಗಳ ನೇಮೋತ್ಸವ ಹಾಗೂ ನವೀಕೃತ ರಂಗ ಮಂಟಪದ ಉದ್ಘಾಟನೆ ಮಾ.1 ಹಾಗೂ 2 ರಂದು ವಿವಿಧ ವೈದಿಕ, ಧಾರ್ಮಿಕ ಸಭಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಜಾತ್ರೋತ್ಸವ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮುಖ್ಯವಾಗಿ ಮುಂಡೂರು ಹಾಗೂ ಕೆದಂಬಾಡಿ ಗ್ರಾಮಕ್ಕೊಳಪಟ್ಟ ದೇವಸ್ಥಾನ ಎರಡು ವರ್ಷಗಳ ಹಿಂದೆ ಸುಮಾರು 1.50 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡು ಬಳಿಕದ ಜಾತ್ರೋತ್ಸವದಲ್ಲಿ

ಮಾ.1-2 : ಆಲಡ್ಕ ಶ್ರೀ ಸದಾಶಿವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ | ನವೀಕೃತ ರಂಗ ಮಂಟಪ ಉದ್ಘಾಟನೆ Read More »

ಪಾಕಿಸ್ತಾನ ಬಿಜೆಪಿ ಗೆ ಶತ್ರುದೇಶ, ನಮಗಲ್ಲ : ಬಿ.ಕೆ.ಹರಿಪ್ರಸಾದ್

ಬೆಂಗಳೂರು : ಬಿಜೆಪಿಗೆ ಪಾಕಿಸ್ತಾನವು ಶತ್ರು ದೇಶ ಆಗಿರಬಹುದು, ಆದರೆ ಕಾಂಗ್ರೆಸ್ ಅದನ್ನು ನೆರೆಯ ರಾಷ್ಟ್ರವೆಂದು ಪರಿಗಣಿಸುತ್ತದೆ ರಾಜ್ಯ ವಿಧಾನಪರಿಷತ್‌ ಸದಸ್ಯ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ವಿಧಾನ ಪರಿಷತ್‌ ಕಪಾಲದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲಿನ ಚರ್ಚೆಯ ವೇಳೆ ಮಾತನಾಡಿರುವ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪರಿಷತ್ತಿನಲ್ಲಿ ನಡೆದ ಚರ್ಚೆಯ ವೇಳೆ ಹರಿಪ್ರಸಾದ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಶತ್ರು ದೇಶ ಎಂದರೆ ಬಿಜೆಪಿ ಪ್ರಕಾರ

ಪಾಕಿಸ್ತಾನ ಬಿಜೆಪಿ ಗೆ ಶತ್ರುದೇಶ, ನಮಗಲ್ಲ : ಬಿ.ಕೆ.ಹರಿಪ್ರಸಾದ್ Read More »

ಜಾತಿ ಗಣತಿ ವರದಿ ಇಂದು ಸಲ್ಲಿಕೆ | ರಾಜಕೀಯ ಬಿರುಗಾಳಿ ಎಬ್ಬಿಸುವ ನಿರೀಕ್ಷೆ

ಬೆಂಗಳೂರು : ಬಹುಕಾಲದಿಂದ ನಿರೀಕ್ಷಿಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಜಾತಿ ಗಣತಿ ವರದಿ ಇಂದು ಸರಕಾರಕ್ಕೆ ಸಲ್ಲಿಕೆಯಾಗಲಿದೆ. ವರದಿಯನ್ನು ಗುರುವಾರ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ತಿಳಿಸಿದ್ದಾರೆ. ಈ ವರದಿಗೆ ಒಕ್ಕಲಿಗ, ಲಿಂಗಾಯತ ಸೇರಿ ಕೆಲವು ಸಮುದಾಯದ ವಿರೋಧ ಇರುವುದರಿಂದ ವರದಿ ರಾಜಕೀಯ ಬಿರುಗಾಳಿ ಎಬ್ಬಿಸಬಹುದು ಎಂಬ ನಿರೀಕ್ಷೆ ಇದೆ. ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರೇ ವರದಿಗೆ ಅಪಸ್ವರ ಎತ್ತಿದ್ದಾರೆ. ಹೀಗಾಗಿ ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಬಿಡುಗಡೆಯಾಗುವ

ಜಾತಿ ಗಣತಿ ವರದಿ ಇಂದು ಸಲ್ಲಿಕೆ | ರಾಜಕೀಯ ಬಿರುಗಾಳಿ ಎಬ್ಬಿಸುವ ನಿರೀಕ್ಷೆ Read More »

ಐ ಎ ಎಸ್ ಪರೀಕ್ಷೆಯನ್ನು ಕನ್ನಡದಲ್ಲೇ ಬರೆದು ಉತ್ತೀರ್ಣರಾದ ಮೊದಲ ಕನ್ನಡಿಗನಿಗೆ ಹೃದಯಾಘಾತ – ಆಸ್ಪತ್ರೆಗೆ ದಾಖಲು

ಖ್ಯಾತ ನಟ, ಮಾಜಿ ಐಎಎಸ್‌ ಅಧಿಕಾರಿ ಹಾಗೂ ರಾಜಕಾರಣಿ ಕೆ. ಶಿವರಾಂ ಅವರಿಗೆ ಹೃದಯಾಘಾತ ಸಂಭವಿಸಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವರಾಂ ಅವರ ಸ್ಥಿತಿ ಚಿಂತಾಜನಕವಾಗಿದ್ದು ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಗರದ ಎಚ್ ಸಿ ಜಿ ಆಸ್ಪತ್ರೆ ಯಲ್ಲಿ ನುರಿತ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಶಿವರಾಂ ಅವರಿಗೆ ಕಾರ್ಡಿಯಕ್ ಅರೆಸ್ಟ್ ಹಾಗೂ ಬ್ರೈನ್ ಡೆಡ್ ಆಗಿದೆ ಅನ್ನೋ ಮಾಹಿತಿ ಇದೆ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಅವರು 20 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಶಿವರಾಂ ಅಳಿಯ

ಐ ಎ ಎಸ್ ಪರೀಕ್ಷೆಯನ್ನು ಕನ್ನಡದಲ್ಲೇ ಬರೆದು ಉತ್ತೀರ್ಣರಾದ ಮೊದಲ ಕನ್ನಡಿಗನಿಗೆ ಹೃದಯಾಘಾತ – ಆಸ್ಪತ್ರೆಗೆ ದಾಖಲು Read More »

ಶ್ರೀ ಕ್ಷೇತ್ರ ದೈಪಿಲ ಕ್ರೀಡಾ ಸೇವಾ ಸಂಘದ ನೇತೃತ್ವದಲ್ಲಿ ಮಹಾ ಹಗ್ಗಜಗ್ಗಾಟ, ಮನೋರಂಜನಾ ಕ್ರೀಡೆ | ದೈಪಿಲ ಕ್ರೀಡಾಂಗಣದಲ್ಲಿ ಮೇಳೈಸಲಿದೆ ಅಂತರರಾಜ್ಯ ಮತ್ತು ಕಾಲೇಜು ವಿಭಾಗ ಹಾಗೂ ವಲಯ ಮಟ್ಟದ ಹೊನಲು ಬೆಳಕಿನ ಮಹಾ ಹಗ್ಗಜಗ್ಗಾಟ | ಅಂತರರಾಜ್ಯ ಮಟ್ಟದ ನಿರೂಪಕರ ನಿರೂಪಣೆಯಲ್ಲಿ ಕ್ರೀಡಾಕೂಟ

ಪುತ್ತೂರು: ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಶ್ರೀ ಕ್ಷೇತ್ರ ದೈಪಿಲ ಕ್ರೀಡಾ ಸೇವಾ ಸಂಘದ ನೇತೃತ್ವದಲ್ಲಿ ಪುತ್ತೂರು ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಕಾರದೊಂದಿಗೆ 4ನೇ ವರ್ಷದ ಅಂತರರಾಜ್ಯ ಮತ್ತು ಕಾಲೇಜು ವಿಭಾಗ ಹಾಗೂ ವಲಯ ಮಟ್ಟದ ಹೊನಲು ಬೆಳಕಿನ ಮಹಾ ಹಗ್ಗಜಗ್ಗಾಟ ಮತ್ತು ಮನೋರಂಜನಾ ಕ್ರೀಡೆ ಮಾ.2 ಶನಿವಾರ ಬೆಳಿಗ್ಗೆ 10 ರಿಂದ ದೈಪಿಲ ಕ್ರೀಡಾಂಗಣದಲ್ಲಿ ನಡೆಯಲಿದೆ. ಲೆವೆಲ್, ಸಿಂಗಲ್ ಗ್ರಿಪ್ ಹಾಗೂ ಪುಲ್ ಗ್ರಿಪ್ ಮಾದರಿಯಲ್ಲಿ 11 ವಿಧದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ

ಶ್ರೀ ಕ್ಷೇತ್ರ ದೈಪಿಲ ಕ್ರೀಡಾ ಸೇವಾ ಸಂಘದ ನೇತೃತ್ವದಲ್ಲಿ ಮಹಾ ಹಗ್ಗಜಗ್ಗಾಟ, ಮನೋರಂಜನಾ ಕ್ರೀಡೆ | ದೈಪಿಲ ಕ್ರೀಡಾಂಗಣದಲ್ಲಿ ಮೇಳೈಸಲಿದೆ ಅಂತರರಾಜ್ಯ ಮತ್ತು ಕಾಲೇಜು ವಿಭಾಗ ಹಾಗೂ ವಲಯ ಮಟ್ಟದ ಹೊನಲು ಬೆಳಕಿನ ಮಹಾ ಹಗ್ಗಜಗ್ಗಾಟ | ಅಂತರರಾಜ್ಯ ಮಟ್ಟದ ನಿರೂಪಕರ ನಿರೂಪಣೆಯಲ್ಲಿ ಕ್ರೀಡಾಕೂಟ Read More »

error: Content is protected !!
Scroll to Top