ಶತ್ರುದೇಶ ಪಾಕಿಸ್ಥಾನಕ್ಕೆ ಜಿಂದಾಬಾದ್ | ಬಜರಂಗದಳದಿಂದ ತೀವ್ರ ಖಂಡನೆ

ಬೆಂಗಳೂರು: ನಿನ್ನೆ ನಡೆದ ರಾಜ್ಯಸಭಾ ಚುಣಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಬೆಂಬಲಿಗರು ವಿಧಾನಸೌಧದ ಒಳಗೆ ಪಾಕಿಸ್ತಾನಕ್ಕೆ ಜೈಕಾರ ಕೂಗಿರುವುದು ಹಾಗೂ ಇದನ್ನು ಪ್ರಶ್ನಿಸಿದ ಪತ್ರಕರ್ತರಿಗೆ ನಿಂದಿಸಿರುವುದನ್ನು ವಿಶ್ವ ಹಿಂದೂ ಪರಿಷದ್ ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ. ಇಂತಹ ಬೆಳವಣಿಗೆಗಳು ದೇಶಕ್ಕೆ ಅಪಾಯಕಾರಿಯಾಗಿದ್ದು, ನಾಸೀರ್ ಹುಸೇನ್ ನ ರಾಜ್ಯಸಭಾ ಸದಸ್ಯತ್ವವನ್ನು ರದ್ದು ಮಾಡಬೇಕು. ಅಲ್ಲದೆ ಶತ್ರುದೇಶಕ್ಕೆ ಜೈಕಾರ ಕೂಗಿದವರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಆಗ್ರಹಿಸಿದೆ.

ಶತ್ರುದೇಶ ಪಾಕಿಸ್ಥಾನಕ್ಕೆ ಜಿಂದಾಬಾದ್ | ಬಜರಂಗದಳದಿಂದ ತೀವ್ರ ಖಂಡನೆ Read More »

‘ಎಸ್ ಡಿ ಪಿ ಕಲೋಪಾಸನಾ-2024’ ಸಾಂಸ್ಕೃತಿಕ ಸಂಭ್ರಮಕ್ಕೆ ತೆರೆ

ಪುತ್ತೂರು: ಪರ್ಲಡ್ಕ ಎಸ್ ಡಿ ಪಿ ರೆಮಿಡೀಸ್ ರಿಸರ್ಚ್ ಸೆಂಟರ್ ನ ಆವರಣದಲ್ಲಿ ಮೂರು ದಿನಗಳ ಕಾಲ ಸಂಭ್ರಮಿಸಿದ 20ನೇ ವರ್ಷದ ಎಸ್ ಡಿ ಪಿ ಕಲೋಪಾಸನಾ- 2024 ಸಾಂಸ್ಕೃತಿಕ ಕಲಾ ಸಂಭ್ರಮ ಹನುಮಗಿರಿ ಮೇಳದವರಿಂದ ಇಂದ್ರಪ್ರಸ್ಥ ಯಕ್ಷಗಾನ ಪ್ರದರ್ಶನದ ಮೂಲಕ ಸಂಪನ್ನಗೊಂಡಿತು. ಕೊನೆಯ ದಿನದ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಆರ್ ಎಸ್ ಎಸ್ ಹಿರಿಯ ಮುಖಂಡ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಮಾತನಾಡಿ, ಕೇವಲ ಪ್ರದರ್ಶನಕ್ಕಾಗಿ ಕಲೆ ಇರುವುದಲ್ಲ. ಅದರ ಉಪಾಸನೆಯಾಗಬೇಕು. ಕಲೆಯ ಉಪಾಸನೆಯ ಕೆಲಸವನ್ನು

‘ಎಸ್ ಡಿ ಪಿ ಕಲೋಪಾಸನಾ-2024’ ಸಾಂಸ್ಕೃತಿಕ ಸಂಭ್ರಮಕ್ಕೆ ತೆರೆ Read More »

ದ.ಕ.ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾಕ್ಕೆ ಪದಾಧಿಕಾರಿಗಳ ಆಯ್ಕೆ | ಕಾರ್ಯದರ್ಶಿಯಾಗಿ ಪುತ್ತೂರಿನ ಯಶಸ್ವಿನಿ ಶಾಸ್ತ್ರಿ

ಮಂಗಳೂರು: ದ.ಕ.ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಆದೇಶಿಸಲಾಗಿದೆ. ಅಧ್ಯಕ್ಷರಾಗಿ ಡಾ.ಮಂಜುಳಾ ಎ. ರಾವ್, ಉಪಾಧ್ಯಕ್ಷರುಗಳಾಗಿ ವಿಜಯಾ ಆರಂಬೋಡಿ, ಬಬಿತಾ ರವೀಂದ್ರ, ವಜ್ರಾಕ್ಷಿ ಶೆಟ್ಟಿ, ಗುಣಪತಿ ಕೊಳ್ಳಂತಡ್ಕ, ಕಮಲಾಕ್ಷಿ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಸಂದ್ಯಾ ವೆಂಕಟೇಶ್‍, ಲಖಿತಾ ಆರ್‍. ಶೆಟ್ಟಿ, ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಪುತ್ತೂರಿನ ಯಶಸ್ವಿನಿ ಶಾಸ್ತ್ರಿ, ಜಾಹ್ನವಿ ಕಾಂಚೋಡು, ಪೂರ್ಣಿಮಾ ಶೆಟ್ಟಿ, ಅಮಿತಾ ಕುಶಾಲಪ್ಪ ಗೌಡ, ಸುಮ ಶೆಟ್ಟಿ, ಕೋಶಾಧಿಕಾರಿಯಾಗಿ ಸುಮನ್ ಶರಣ್ ಅವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.

ದ.ಕ.ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾಕ್ಕೆ ಪದಾಧಿಕಾರಿಗಳ ಆಯ್ಕೆ | ಕಾರ್ಯದರ್ಶಿಯಾಗಿ ಪುತ್ತೂರಿನ ಯಶಸ್ವಿನಿ ಶಾಸ್ತ್ರಿ Read More »

ಮೇಲಿನ ಮುಕ್ಕೂರು : ಸ್ಥಳ ಸಾನಿಧ್ಯ ಅಭಿವೃದ್ಧಿ ಎರಡನೆ ದಿನದ ಅಷ್ಟಮಂಗಲ ಪ್ರಶ್ನಾ ಚಿಂತನೆ | ಪೆರುವೋಡಿ ಜಾತ್ರೆ ವೇಳೆ ಮೇಲಿನ ಮುಕ್ಕೂರಿನಿಂದ ದೈವಗಳ ಭಂಡಾರ ಬಂದು ಶ್ರೀ ರಕ್ತೇಶ್ವರಿ-ಶ್ರೀಉಳ್ಳಾಕುಲು ದೈವಕ್ಕೆ ನೇಮ ನೀಡಬೇಕು..! | ಅಷ್ಟಮಂಗಲ ಪ್ರಶ್ನಾಚಿಂತನೆಯಲ್ಲಿ ಬೆಳಕಿಗೆ ಬಂತು ಅನಾದಿ ಕಾಲದ ಆಚರಣೆ

ಮುಕ್ಕೂರು : ಅನಾದಿ ಕಾಲದಲ್ಲಿ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ಜಾತ್ರೆಯ ದಿನದಂದು ಮೇಲಿನ ಮುಕ್ಕೂರು ತರವಾಡಿನ ಭಂಡಾರದ ಮನೆಯಿಂದ ಅರಸು ದೈವಗಳಾದ ಶ್ರೀ ರಕ್ತೇಶ್ವರಿ, ಶ್ರೀ ಉಳ್ಳಾಕುಲು ದೈವ ಸಹಿತ ಪರಿವಾರ ದೈವದ ಭಂಡಾರವು ಪೆರುವೋಡಿ ಕ್ಷೇತ್ರಕ್ಕೆ ಬಂದು ದೈವ-ದೇವರ ಭೇಟಿ ನಂತರ ವಿಜೃಂಭಣೆಯ ನೇಮ ನಡೆಯುತಿತ್ತು ಎಂಬ ಅಂಶ ಮೇಲಿನ ಮುಕ್ಕೂರಿನಲ್ಲಿ ಅಷ್ಟಮಂಗಲ ಚಿಂತನೆಯಲ್ಲಿ ಕಂಡು ಬಂದಿದೆ. ಕಾರಣಿಕ ಶಕ್ತಿಯ ಐತಿಹ್ಯವುಳ್ಳ ದೇವಿ-ದೈವ ಶಕ್ತಿ ಸಾನಿಧ್ಯದ ನೆಲೆ ಮೇಲಿನ ಮುಕ್ಕೂರು ತರವಾಡು ಕ್ಷೇತ್ರದಲ್ಲಿ ಸ್ಥಳ

ಮೇಲಿನ ಮುಕ್ಕೂರು : ಸ್ಥಳ ಸಾನಿಧ್ಯ ಅಭಿವೃದ್ಧಿ ಎರಡನೆ ದಿನದ ಅಷ್ಟಮಂಗಲ ಪ್ರಶ್ನಾ ಚಿಂತನೆ | ಪೆರುವೋಡಿ ಜಾತ್ರೆ ವೇಳೆ ಮೇಲಿನ ಮುಕ್ಕೂರಿನಿಂದ ದೈವಗಳ ಭಂಡಾರ ಬಂದು ಶ್ರೀ ರಕ್ತೇಶ್ವರಿ-ಶ್ರೀಉಳ್ಳಾಕುಲು ದೈವಕ್ಕೆ ನೇಮ ನೀಡಬೇಕು..! | ಅಷ್ಟಮಂಗಲ ಪ್ರಶ್ನಾಚಿಂತನೆಯಲ್ಲಿ ಬೆಳಕಿಗೆ ಬಂತು ಅನಾದಿ ಕಾಲದ ಆಚರಣೆ Read More »

ಇಸ್ರೋ ಬಾಹ್ಯಾಕಾಶ ಯಾನಕ್ಕೆ ನಾಲ್ವರು ಗಗನಯಾತ್ರಿಗಳ ಹೆಸರು ಘೋಷಣೆ | ವಿಂಗ್‍ ಗಳನ್ನು ನೀಡಿ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ

ಇಸ್ರೋ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಯಾನಕ್ಕೆ ಆಯ್ಕೆಯಾದ ನಾಲ್ವರು ಗಗನಯಾತ್ರಿಗಳ ಹೆಸರು ಘೋಷಣೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಮಹತ್ವದ ಘೋಷಣೆಗೆ ಸಾಕ್ಷಿಯಾಗಿದ್ದಾರೆ. ಗ್ರೂಪ್ ಕ್ಯಾಪ್ಟನ್ ಗಳಾದ ಪ್ರಶಾಂತ್ ನಾಯರ್, ಅಜಿತ್ ಕೃಷ್ಣನ್, ಅಂಗದ್ ಪ್ರತಾಪ್ ಹಾಗೂ ವಿಂಗ್ ಕಮಾಂಡರ್ ಶುಭಾಂಶು ಶುಕ್ಲಾ ಆಯ್ಕೆಯಾಗಿದ್ದು, ಅವರಿಗೆ ಪ್ರಧಾನಿ ನರೇಂದ್ರ ಮೋದಿ ವಿಂಗ್‍ ಗಳನ್ನು ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಎಲ್ಲಾ ಮಹಿಳಾ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ, ಭಾರತ ಮತ್ತೆ ಚಂದ್ರಯಾನ ಕೈಗೊಳ್ಳಲಿದ್ದು, ಸದ್ಯದಲ್ಲೇ ತನ್ನದೇ

ಇಸ್ರೋ ಬಾಹ್ಯಾಕಾಶ ಯಾನಕ್ಕೆ ನಾಲ್ವರು ಗಗನಯಾತ್ರಿಗಳ ಹೆಸರು ಘೋಷಣೆ | ವಿಂಗ್‍ ಗಳನ್ನು ನೀಡಿ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ Read More »

ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ

ವಿಟ್ಲ: ತಾಲೂಕಿನ ಕಲ್ಲಡ್ಕ ವಲಯದ  ಗೋಳ್ತಮಜಲು ಕಾರ್ಯಾಕ್ಷೇತ್ರದಲ್ಲಿ ಮೂರು ತಿಂಗಳ ಕಾಲ ಜ್ಞಾನ ವಿಕಾಸ ಕಾರ್ಯಾಕ್ರಮದಡಿ ನಡೆದ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮದ  ಸಮಾರೋಪ ಸಮಾರಂಭ ಜರಗಿತು. ವಲಯ ಅಧ್ಯಕ್ಷೆ ತುಳಸಿ ದೀಪ ಬೆಳಗಿಸಿ ಕಾರ್ಯಾಕ್ರಮ ಉದ್ಘಾಟಿಸಿದರು. ಮೇಲ್ವಿಚಾರಕಿ ಸುಗುಣ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು  ವಿಟ್ಲ ತಾಲೂಕು ಯೋಜನಾಧಿಕಾರಿ ಚೆನ್ನಪ್ಪ ಗೌಡ ಜ್ಞಾನ ವಿಕಾಸ ಕಾರ್ಯಕ್ರಮದ ಉದ್ದೇಶ ಹಾಗೂ ಹೊಲಿಗೆ ಕಲಿಕೆಯಿಂದಾಗುವ  ಪ್ರಯೋಜನಗಳ ಬಗ್ಗೆ ತಿಳಿಸಿದರು. ಒಕ್ಕೂಟದ ಅಧ್ಯಕ್ಷ ಸೀತಾರಾಮ ಶೆಟ್ಟಿ ಹೊಲಿಗೆ ತರಬೇತಿಯಿಂದಾಗಿ ನೀವು ಇನ್ನಷ್ಟು

ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ Read More »

ಗ್ರಾಮ ಸಾಹಿತ್ಯ ಸಂಭ್ರಮ ಗ್ರಾಮೀಣ ಮಕ್ಕಳಲ್ಲಿ ಓದುವಿಕೆ ಮತ್ತು ಸಾಹಿತ್ಯದ ಕಡೆಗೆ ಒಲವು ಮೂಡಿಸುವ ಸ್ತುತ್ಯಾರ್ಹ ಕಾರ್ಯಕ್ರಮ : ಬಿ. ವೆಂಕಟರಮಣ ಬೋರ್ಕರ್ | ಸಾಹಿತ್ಯ ನಡಿಗೆ ಗ್ರಾಮದ ಕಡೆಗೆ ಸರಣಿ ಕಾರ್ಯಕ್ರಮ

ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಘಟಕದ ನೇತೃತ್ವದಲ್ಲಿ, ಶಿಕ್ಷಣಾಧಿಕಾರಿಗಳ ಕಛೇರಿ, ನಿಡ್ಪಳ್ಳಿ ಗ್ರಾಮ ಪಂಚಾಯಿತಿ ಸಹಕಾರದಲ್ಲಿ, ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಪೋಷಕತ್ವದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದಂಗವಾಗಿ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ  ಕಾರ್ಯಕ್ರಮ 13, ನಿಡ್ಪಳ್ಳಿ ಸಮುದಾಯ ಭವನದಲ್ಲಿ ನಡೆಯಿತು. ನಿಡ್ಪಳ್ಳಿ ಗ್ರಾಪಂ ಅಧ್ಯಕ್ಷ ಬಿ.ವೆಂಕಟರಮಣ ಬೋರ್ಕರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,  ಗ್ರಾಮೀಣ ಮಕ್ಕಳಲ್ಲಿ ಓದುವಿಕೆ ಮತ್ತು ಸಾಹಿತ್ಯದ ಒಲವು ಹೆಚ್ಚಾಗಲು  ಗ್ರಾಮ ಸಾಹಿತ್ಯ

ಗ್ರಾಮ ಸಾಹಿತ್ಯ ಸಂಭ್ರಮ ಗ್ರಾಮೀಣ ಮಕ್ಕಳಲ್ಲಿ ಓದುವಿಕೆ ಮತ್ತು ಸಾಹಿತ್ಯದ ಕಡೆಗೆ ಒಲವು ಮೂಡಿಸುವ ಸ್ತುತ್ಯಾರ್ಹ ಕಾರ್ಯಕ್ರಮ : ಬಿ. ವೆಂಕಟರಮಣ ಬೋರ್ಕರ್ | ಸಾಹಿತ್ಯ ನಡಿಗೆ ಗ್ರಾಮದ ಕಡೆಗೆ ಸರಣಿ ಕಾರ್ಯಕ್ರಮ Read More »

ಪರೀಕ್ಷೆ ಮುಗಿಸಿ ನಾಪತ್ತೆಯಾದ ನಾಲ್ವರು ವಿದ್ಯಾರ್ಥಿಗಳ ಶವ ನದಿಯಲ್ಲಿ ಪತ್ತೆ !

ಸುರತ್ಕಲ್: ಸುರತ್ಕಲ್ ಖಾಸಗಿ ಅನುದಾನಿತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ಮಂಗಳವಾರ ಎಸ್. ಎಸ್. ಎಲ್. ಸಿ. ಪರೀಕ್ಷೆ ಬರೆದ ಬಳಿಕ ಮನೆಗೆ ಮರಳದೆ ನಾಪತ್ತೆಯಾದ ಘಟನೆ ನಡೆದಿದ್ದು, ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿ ಕೊಪ್ಪಳ ಅಣೆಕಟ್ಟ ರೈಲ್ವೇ ಸೇತುವೆಯ ಕೆಳಭಾಗದ ನದಿಯಲ್ಲಿ ಪತ್ತೆಯಾಗಿದೆ. ಸುರತ್ಕಲ್ ಅಗರಮೇಲು ನಿವಾಸಿ ಯಶ್ವಿತ್ (15), ಹಳೆಯಂಗಡಿ ತೋಕೂರು ನಿವಾಸಿ ರಾಘವೇಂದ್ರ (15), ಗುಡ್ಡಕೊಪ್ಪ ನಿವಾಸಿ ನಿರೂಪ (15) ಮತ್ತು ಚಿತ್ರಾಪುರ ನಿವಾಸಿ ದೇವದಾಸ್ ಎಂಬವರ ಪುತ್ರ ಅನ್ವಿತ್ (15) ಮೃತಪಟ್ಟವರು. ಈ

ಪರೀಕ್ಷೆ ಮುಗಿಸಿ ನಾಪತ್ತೆಯಾದ ನಾಲ್ವರು ವಿದ್ಯಾರ್ಥಿಗಳ ಶವ ನದಿಯಲ್ಲಿ ಪತ್ತೆ ! Read More »

ಪಿಎಚ್‍ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ | ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಂದ ಠಾಣಾಧಿಕಾರಿ ಜೊತೆ ಮಾತುಕತೆ

ಪುತ್ತೂರು: ಪಿಎಚ್ ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಂಗಳವಾರ ಉಳ್ಳಾಲ ಠಾಣೆಗೆ ತೆರಳಿ ಠಾಣಾಧಿಕಾರಿಯವರಲ್ಲಿ ಮಾತುಕತೆ ನಡೆಸಿದರು. ಗಾಂಜಾ ಪ್ರಕರಣದ ಆರೋಪಿಯಾಗಿದ್ದ ಕುಖ್ಯಾತ ಡ್ರಗ್ಸ್ ಪೆಡ್ಲರ್ ಶಾರೂಕ್ ಶೇಕ್ ಎಂಬಾತ ಡ್ರಗ್ಸ್ ಹಾಗೂ ಇನ್ನಿತರ ಮೋಸದಾಟವಾಡಿ ಆಕೆಯನ್ನು ಅಪಹರಿಸಿರುವುದು ಪೊಲೀಸ್ ಇಲಾಖೆಯಲ್ಲಿ ಸ್ಪಷ್ಟವಾಗಿದೆ. ಎಂಎಸ್ಸಿ ಪೂರೈಸಿದ್ದ ಚೈತ್ರಾ ಹೆಬ್ಬಾರ್ ದೇರಳಕಟ್ಟೆಯ ಖಾಸಗಿ ಯುನಿವರ್ಸಿಟಿಯಲ್ಲಿ ಪಿಎಚ್ ಡಿ ಮಾಡುತ್ತಿದ್ದಳು. ಕೋಟೆಕಾರು ಬಳಿಯ ಮಾಡೂರಿನಲ್ಲಿ ಪಿಜಿ ಒಂದರಲ್ಲಿದ್ದ ಯುವತಿಯನ್ನು

ಪಿಎಚ್‍ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ | ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಂದ ಠಾಣಾಧಿಕಾರಿ ಜೊತೆ ಮಾತುಕತೆ Read More »

ಕಾಣಿಯೂರು ಜಾತ್ರೋತ್ಸವ | ಫೆ.26- ಮಾ.1 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಜಾತ್ರೋತ್ಸವ

ಕಾಣಿಯೂರು: ಕಡಬ ತಾಲೂಕಿನ ಶ್ರೀ ಜಗದ್ಗುರು ಶ್ರೀ ಮನ್ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನಮ್ ಉಡುಪಿ ಶ್ರೀ ಕಾಣಿಯೂರು ಮಠದ ‘ಕಾಣಿಯೂರು ಜಾತ್ರೆ’ ಫೆ.26 ರಿಂದ ಆರಂಭಗೊಂಡಿದ್ದು, ಮಾ.1 ರ ತನಕ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರ ಆದೇಶದಂತೆ ನಡೆಯುವ ಜಾತ್ರೋತ್ಸವದ ಅಂಗವಾಗಿ ಫೆ.28 ಬುಧವಾರ ಬೆಳಿಗ್ಗೆ 7 ರಿಂದ ಮಲ್ಲಾರ ನೇಮ, ದೈಯರ ನೇಮ, ರಾತ್ರಿ 8 ರಿಂದ ಬಯ್ಯದ ಬಲಿ ನಡೆಯಲಿದೆ. ಫೆ.29 ಗುರುವಾರ ಮಧ್ಯಾಹ್ನ 12 ರಿಂದ

ಕಾಣಿಯೂರು ಜಾತ್ರೋತ್ಸವ | ಫೆ.26- ಮಾ.1 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಜಾತ್ರೋತ್ಸವ Read More »

error: Content is protected !!
Scroll to Top